Breaking News

ಸುದ್ದಿ

ಮಾರುಕಟ್ಟೆಗೆ ಹೋಗಿದ್ದ ಬಾಲಕಿಯ ಮೇಲೆ ಗ್ಯಾಂಗ್‌ರೇಪ್

ಕೋಲ್ಕತ್ತಾ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಪರಿಚಯಸ್ತ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ನಂತರ ದಾರಿಯಲ್ಲಿ ಆಟೋದ …

Read More »

ದೇಶದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಡೋಸ್ ವ್ಯರ್ಥ

ನವದೆಹಲಿ: ಭಾರತದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ವ್ಯರ್ಥವಾಗಿದೆ. ಅದರಲ್ಲಿ ಅರ್ಧದಷ್ಟು ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳೆಂದು ಎಂದು ವರದಿಯಾಗಿದೆ. ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು 16.48 ಲಕ್ಷ, ಉತ್ತರ ಪ್ರದೇಶದಲ್ಲಿ 12.60 ಲಕ್ಷ ಮತ್ತು ರಾಜಸ್ಥಾನದಲ್ಲಿ 6.86 ಲಕ್ಷ ಕೋವಿಡ್ ಡೋಸ್ ವ್ಯರ್ಥವಾಗಿದೆ. ಈ ಮೂರು ರಾಜ್ಯಗಳನ್ನು ತೆಗೆದುಕೊಂಡರೆ ಒಟ್ಟಾರೆಯಾಗಿ 36 ಲಕ್ಷದಷ್ಟು ನಷ್ಟವಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ …

Read More »

ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ರೈಲು ಪ್ರಯಾಣ ಆರಾಮದಾಯಕ ಪ್ರಯಾಣಗಳಲ್ಲಿ ಒಂದು. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸೇವೆಗಳನ್ನು ಶುರು ಮಾಡ್ತಿರುತ್ತದೆ. ಈಗ ಮಹಿಳಾ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಹಿಳೆಯರು ರೈಲಿನಲ್ಲಿ ಸೀಟಿನ ಬಗ್ಗೆ ಚಿಂತಿಸಬೇಕಾಗಿಲ್ಲ. ಬಸ್ ಮತ್ತು ಮೆಟ್ರೋ ರೈಲುಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಸೀಟುಗಳ ವ್ಯವಸ್ಥೆ ಇರುವಂತೆ ಭಾರತೀಯ ರೈಲ್ವೇ ಕೂಡ ಮಹಿಳೆಯರಿಗೆ ಸೀಟುಗಳನ್ನು ಮೀಸಲಿಡಲಿದೆ. ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಬರ್ತ್‌ಗಳನ್ನು ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. …

Read More »
Featured Video Play Icon

ಖಡಕ್ ಖಾಕಿಯೊಳಗಿರೋ ಮೃದು ಹೃದಯದ ನೋವಿ, ಕಥೆ..!

Read More »

ರಾಷ್ಟೀಯ ಜಾನುವಾರು ರೋಗನಿಯಂತ್ರಣ ಕಾರ್ಯಕ್ರಮಕ್ಕೆ ಶಾಸಕಿ ಕುಸುಮಾ ಶಿವಳ್ಳಿ ಚಾಲನೆ

ಹುಬ್ಬಳ್ಳಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮಕ್ಕೆ ಇಂದು ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಗೋವಿಗೆ ಪೂಜೆ ಮಾಡುವ ಮೂಲಕ ಶಾಸಕಿ ಕುಸುಮಾ ಶಿವಳ್ಳಿ ಚಾಲನೆ ನೀಡಿದರು. ಕಾಲುಬಾಯಿ ರೋಗ ಲಸಿಕಾ‌ ಅಭಿಯಾನದಲ್ಲಿ ಪಶು ಪ್ರಾಣಿಗಳಿಗೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಪಶು ಆಸ್ಪತ್ರೆ ಸಹಾಯಕ ನಿರ್ದಶಕರಾದ ಡಾ.ಅವಾರಿ ಸೇರಿದಂತೆ‌ ಗ್ರಾಮದ ಪ್ರಗತಿ ಪರ ರೈತರು‌ ಗ್ರಾಮಸ್ಥರು ಉಪಸ್ಥಿತರಿದ್ದರು.

Read More »

ಅತಿವೃಷ್ಠಿ ( ಮಳೆ ಹಾನಿ) ಹಾನಿ ಕುರಿತು ಪೋಟೊ ಗ್ಯಾಲರಿ ಹಾಗೂ ಪ್ರಾತ್ಯಕ್ಷೀಕೆ ಮೂಲಕ ವಿವರಿಸಿದ ಧಾರವಾಡ ಡಿಸಿ…

ಹುಬ್ಬಳ್ಳಿ: ಕಳೆದ ನವಂಬರ್ ತಿಂಗಳಿನ‌ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿ‌ಸಂಭವಿಸಿದೆ. ಹೀಗಾಗಿಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ನವೆಂಬರ್‌ನಲ್ಲಿ ಉಂಟಾದ ಮಳೆ ಹಾನಿ ಪರಿಶೀಲನೆ ನಡೆಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ‌. ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಕೇಂದ್ರ ನೆರೆ ಅಧ್ಯಯನ ತಂಡದ ಪರಿಶೀಲನೆಗೂ ಮುನ್ನ ಧಾರವಾಡ ಡಿಸಿ …

Read More »

ಲವ್ ಜಿಹಾದ್ ಕುರಿತು ಸಮಗ್ರ ತನಿಖೆ ಆಗಲಿ- ಧಾರವಾಡದಲ್ಲ ಹಿಂದೂ ಪರಿಷತ್ ವತಿಯಿಂದ ಮನವಿ

ಹುಬ್ಬಳ್ಳಿ :ಧಾರವಾಡದಲ್ಲಿ ನೆಡೆದ ಲವ್ ಜಿಹಾದ್ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿ ಇಂದು ಹಿಂದೂ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು. ಹಿಂದೂ ಯುವತಿಯಾದ ಪ್ರೀಯಾ ಪವಾರ ಎಂಬ ಯುವತಿಯನ್ನು ಹಜೀಮ್ ನದಾಫ್ ಎಂಬ ಮುಸ್ಲಿಂ ಯುವಕನು ಮದುವೆಯಾಗಿ ನಂತರ ಇಸ್ಲಾಂ‌ ಧರ್ಮಕ್ಕೆ ಮತಾಂತರ ಮಾಡಿದ್ದಾನೆ.ಜಿಲ್ಲೆಯಲ್ಲಿ ಅನೇಕ ಹಿಂದೂ ಯುವತಿಯರು ಲವ್ ಜಿಹಾದ್ ಮತಾಂತರಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ.ಈ ಮತಾಂತರ ಚಟುವಟಿಕೆಯಲ್ಲಿ ಒಂದು ಸಂಘ ಕಾರ್ಯ ಮಾಡುತ್ತಿರುವುದ ನಮ್ಮ ಗಮನಕ್ಕೆ ಬಂದಿದ್ದು …

Read More »

1 ರೂ. ಪ್ಲಾನ್ ಪರಿಚಯಿಸಿದ ಜಿಯೋ

ಮುಂಬೈ: ಜಿಯೋ ತನ್ನ 1 ರೂ. ಪ್ರಿ ಪೇಯ್ಡ್ ಪ್ಲಾನ್ ಅನ್ನು ಸದ್ದಿಲ್ಲದೇ ಆರಂಭಿಸಿದೆ. ಇದರ ಮೂಲಕ ಬಳಕೆದಾರರು ಅತೀ ಅಗ್ಗದ ಪ್ರಿಪೇಯ್ಡ್ ಯೋಜನೆಯನ್ನು ಬಳಸಬಹುದು. ಈ ಅಗ್ಗದ ಪ್ರಿಪೇಯ್ಡ್ ಯೋಜನೆ ಅತೀ ಹೆಚ್ಚು ಇಂಟರ್‌ನೆಟ್ ಬಳಕೆ ಮಾಡದೇ ಇರುವ ಜನರಿಗೆ ಉಪಯೋಗವಾಗಲಿದೆ. ಈ 1 ರೂ.ಯ ಯೋಜನೆ 100ಜಿಬಿ ಡೇಟಾದೊಂದಿಗೆ 30 ದಿನಗಳ ಮಾನ್ಯತೆಯನ್ನು ಹೊಂದಿರುತ್ತದೆ. ಈ ಯೋಜನೆ ಮೈಜಿಯೋ ಅಪ್ಲಿಕೇಶನ್‌ನಲ್ಲಿ ಗೋಚರವಾಗುತ್ತಿದ್ದು, ಸದ್ಯ ಯಾವುದೇ ವೆಬ್‌ಸೈಟ್‌ನಲ್ಲಿ ತೋರಿಸುತ್ತಿಲ್ಲ. …

Read More »

ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ …

Read More »

‌ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ನಗರದ ಹೊರವಲಯದ ರಂಗ್ರೆತ್ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಶೋಧಕಾರ್ಯ ನಡೆಯಿತು. ಕಾರ್ಯಾಚರಣೆ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಭದ್ರತಾ ಪಡೆಗಳಿಂದ ಪ್ರತಿದಾಳಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ …

Read More »