Breaking News

ಸುದ್ದಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ವಿ. ಸದಾನಂದಗೌಡ.

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೆÇಲೀಸರು ಇಲ್ಲಿ …

Read More »

ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ…

ಹುಬ್ಬಳ್ಳಿ: ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ.ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ ಮತ್ತು ಟೀಮ್ ಈ ಒಂದು ದಾಳಿಯನ್ನು ಮಾಡಿದೆ.ಎಲೆ ತಟ್ಟುತ್ತಿದ್ದ 6 ಜನರನ್ನು ಪೊಲೀಸರು ಬಂಧನ ಮಾಡಿದ್ದು 27800 ರೂಪಾಯಿ ಹಣವನ್ನು …

Read More »

ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ….

ಬೆಂಗಳೂರು: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಎಂದು ಎಎಪಿ ಪ್ರಶ್ನಿಸಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್‌ ಶಾ …

Read More »

ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಹದಿನೈದು ದಿನಗಳ ಜೈಲು ಶಿಕ್ಷೆ…

ಚೆನ್ನೈ: ಕ್ರಿಕೆಟಿಗ ಎಂಎಸ್ ಧೋನಿ ಸಲ್ಲಿಸಿದ್ದ ಕ್ರಿಮಿನಲ್ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಹದಿನೈದು ದಿನಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದರು. ನ್ಯಾಯಮೂರ್ತಿಗಳಾದ ಎಸ್.ಎಸ್.ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ವಿಭಾಗೀಯ …

Read More »

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ…

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …

Read More »

ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ….

ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಅಸಮಾಧಾನ ಹೊರಹಾಕಿದ್ದರು. ಸಚಿಕ್ಕಾಗಿ ಈಗಾಗಲೇ ಹಲವು ನಾಯಕರು ಬೇಡಿಕೆ ಇಟ್ಟಿದ್ದು, ಸದನದಲ್ಲಿಯೇ ಕಾಂಗ್ರೆಸ್‌ ಶಾಸಕ ಬಹಿರಂಗವಾಗಿ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನನ್ನೂ ಮಂತ್ರಿ ಮಾಡಿ, ಮಂತ್ರಿಯಾದರೆ ಜನರಿಗೆ ಎಲ್ಲ ಅನುಕೂಲ ಮಾಡಿಕೊಡಬಹುದು ಎಂದು ಸದನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳಿಗೆ …

Read More »

ವಿ ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಆಹ್ವಾನ……

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದನೀಡಿದೆ. ಆದರೆ, ವಿ ಸೋಮಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಹ ದೆಹಲಿಗೆ ಕರೆಸಿ ಮುಖಾಮುಖಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ವರುಣಾ ಹಾಗೂ ಚಾಮರಾಜನಗರ ಎರಡರಲ್ಲೂ ವೀರಶೈವ ಲಿಂಗಾಯತ ಸೋಮಣ್ಣ ಸೋಲಿಗೆ ಕಾರಣಗಳು ಸೇರಿದಂತೆ ಕೆಲವು ಅಂಶಗಳನ್ನು ಬಹಿರಂಗಪಡಿಸಲು …

Read More »

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿ……

ಬೆಳಗಾವಿ:‌ ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ ಅವರು ಅವರು ಭಾಗಿಯಾಗಿದ್ದು, ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇತರೇ ಪಕ್ಷದವರು ಊಟಕ್ಕೆ ಬಂದಿದ್ದರೇ ಎಂದು ಮಾಧ್ಯಮಗಳು ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ವಿಶ್ವನಾಥ್ ಅವರು ಸೇರಿದಂತೆ ಅನ್ಯ ಪಕ್ಷದ 10 ಶಾಸಕರು …

Read More »

ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ….

ಬೆಳಗಾವಿ: ಸಿಲಿಕಾನ್‌ ಸಿಟಿ ಬೆಂಗಳೂರು ದಿನಿದಿಂದ ದಿನಕ್ಕೆ ಬೃಹದ್ಧಾಕಾರವಾಗಿ ಬೆಳೆಯುತ್ತಲಿದ್ದು, ಅಷ್ಟೇ ಪ್ರಮಾಣದಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದರಿಂದ ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ. ಇನ್ನು ಸರ್ಕಾರ ರಸ್ತೆಗಳಿಗೆ ವೈಟ್‌ ಟಾಪಿಂಗ್‌ ಹಾಕುವ ಮೂಲಕ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿದೆ. ಹಾಗಾದರೆ ಇದಕ್ಕೆ ಮೀಸಲಿಟ್ಟ ಅನುದಾನ ಎಷ್ಟು…? ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ …

Read More »

ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ…

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ವಿಪಕ್ಷಗಳು ಸದನದ ಹೊರಗೆ ಹಾಗೂ ಸದನದ ಒಳಗೆ ಸರ್ಕಾರದ ಕಿಡಿಕಾರಿವೆ. ಮಂಗಳವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದು, ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ …

Read More »