BigTv News
March 16, 2025
Breaking News, Crime, ಬೀದರ್
ಬೀದರ್ನಲ್ಲಿ ಎಟಿಎಂ ದರೋಡೆ ಪ್ರಕರಣ 60 ದಿನ ಕಳೆದರೂ ಆರೋಪಿಗಳನ್ನು ಬಂಧಿಸಲಾಗಿಲ್ಲ ಆರೋಪಿಗಳ ಪ್ರತಿಜಾಡಿನಲ್ಲಿ ಸಿಸಿಟಿವಿ ಇದೆ ಕಳ್ಳರನ್ನು ಹಿಡಿತವೆ ಎಂದು ಗೃಹ ಸಚಿವ ಪರಮೇಶ್ವರವರು ಹೇಳಿದ್ದರು ಇದುವರೆಗೂ ದರೋಡೆಕೋರರನ್ನು ಬಂಧಿಸಲಾಗದ ಬೀದರ್ ನ ಪೊಲೀಸ್ ಪಡೆ. ಆರೋಪಿಗಳ ಮಾಹಿತಿಗಳಿದ್ದರೂ ಕೂಡ ಪೊಲೀಸರ ಹಿಂದೇಟು ತಂತ್ರಜ್ಞಾನ ಇದ್ದರೂ ಕಂಡುಹಿಡಿಯಲಾಗುತ್ತಿಲ್ಲ. ವಾಂಟೆಡ್ ಬೋರ್ಡನ್ನು ಕೂಡ ಲಗತ್ತಿಸಿ ಐದು ಲಕ್ಷ ರೂಪಾಯಿ ಕಳ್ಳರನ್ನು ಪತ್ತೆ ಹಚ್ಚಿದವರಿಗೆ ನೀಡುತ್ತೇವೆ ಎಂದು ಹೇಳಿದ್ದಾರೆ.
Read More »
BigTv News
January 31, 2025
Breaking News, ಬೀದರ್
ಬೀದರ್: ಜಿಲ್ಲಾ ಕೇಂದ್ರ ಬೀದರ್‌ನ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿಸುವ ಪ್ರಸ್ತಾಪಕ್ಕೆ ಸರ್ಕಾರದ ಅಂತಿಮ ಮೊಹರು ಬಿದ್ದಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 16 ಗ್ರಾಮಗಳನ್ನು ನಗರಕ್ಕೆ ಸೇರ್ಪಡೆಗೊಳಿಸಿ ಮೇಲ್ದರ್ಜೆಗೇರಿಸುವ ನಿರ್ಧಾರಕ್ಕೆ ಬರಲಾಗಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮತ್ತು ಹಲವು ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ, ಸಂಪುಟ ಸಭೆಗಳಲ್ಲಿ ಚರ್ಚೆಗೆ ಬಂದು ಘೋಷಣೆಯಾಗಿತ್ತಾದರೆ ನಗರಸಭೆ ವ್ಯಾಪ್ತಿಗೆ 16 ಗ್ರಾಮಗಳನ್ನು ಸೇರಿಸಿ ಮಹಾನಗರ ಪಾಲಿಕೆಯನ್ನಾಗಿಸುವ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ …
Read More »
BigTv News
January 27, 2025
Breaking News, ಬೀದರ್
ಬೀದರ್ : ಜಾತಿ ಜನಗಣತಿ ಮಾಡಿದ ನಂತರವೇ ಒಳಮಿಸಲಾತಿ ಜಾರಿಗೆ ತರಬೇಕು ಎಂದು ಗೋರ್ ಸೇನಾ ರಾಷ್ಟ್ರೀಯ ಸಂಘಟನೆಯು ಒತ್ತಾಯ ಮಾಡಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋರ್ ಸೇನಾ ಮಹಿಳಾ ಅಧ್ಯಕ್ಷ ಸವಿತಾ ರಾಠೋಡ್ ಅವರು, ಜಾತಿ ಜನಗಣತಿಯು 2011ರ ನಂತರ ನಡೆದಿಲ್ಲ. 2011ರಲ್ಲಿಯೂ ನಮ್ಮ ಸಮುದಾಯದ ಜನಗಣತಿ ಸರಿಯಾಗಿ ನಡೆದಿಲ್ಲ. ಹಾಗಾಗಿ ನಮ್ಮ ಜನಸಂಖ್ಯೆ ಹೆಚ್ಚಾಗಿದ್ದು, ಒಳಮಿಸಲಾತಿಯಲ್ಲಿ ನಮ್ಮ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಒದಗಿಸುತ್ತಿಲ್ಲ. ನಾಗಮೋಹನ್ ದಾಸ್ ಅವರಿಗೆ …
Read More »
BigTv News
January 24, 2025
Breaking News, ಬೀದರ್
ಬೀದರ್: ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಲೈನ್ ಮೆನ್ ಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ 3 ಸಾವಿರ …
Read More »
BigTv News
January 21, 2025
Breaking News, ಬೀದರ್
ಬೀದರ್ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ. ಅಂದಿನ ದಿನ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ನಿಮಿತ್ತ ಜ.25 ಮತ್ತು 26 ರಂದು ಸಂಘ ಸಂಸ್ಥೆಗಳು, ಸರಕಾರಿ ಕಚೇರಿಗಳು ಎಲ್ಲಾ ಮಹನಿಯರ …
Read More »
BigTv News
January 21, 2025
Breaking News, ಬೀದರ್
ಭಾಲ್ಕಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗ್ಯಾರಂಟಿಗಳ ಅನುಷ್ಠಾನಕ್ಕೆ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು’ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಸೇರಿ ಪಂಚ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ …
Read More »
BigTv News
January 21, 2025
Breaking News, ಬೀದರ್
ಔರಾದ್: ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿದರು. ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು. ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂ ಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು …
Read More »
BigTv News
January 17, 2025
Breaking News, ಬೀದರ್
ಬೀದರ್: ದರೋಡೆ ಪ್ರಕರಣದ ಆರೋಪಿಗಳ ಗುರುತು ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಲು ಬೀದರ್ ಜಿಲ್ಲಾ ಪೊಲೀಸರ ತಂಡವನ್ನು ಹೈದರಾಬಾದ್‌ಗೆ ಕಳಿಸಲಾಗಿದೆ ಎಂದು ರಾಜ್ಯ ಅಪರಾಧ ವಿಭಾಗದ ಎಡಿಜಿಪಿ ಪಿ. ಹರಿಶೇಖರನ್ ತಿಳಿಸಿದರು. ನಗರದ ಛತ್ರಪತಿ ಶಿವಾಜಿ ವೃತ್ತದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಕಚೇರಿ ಎದುರು ಗುರುವಾರ (ಜ.16) ನಡೆದ ದರೋಡೆಯ ಘಟನಾ ಸ್ಥಳವನ್ನು ಇಂದು ಪರಿಶೀಲಿಸಿದ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ನಮ್ಮ ಅಪರಾಧ …
Read More »
BigTv News
January 17, 2025
Breaking News, ಬೀದರ್
ಬೀದರ್ : ಬೀದರ್ ಹಾಡು ಹಗಲೇ ಶೂಟೌಟ್ ಮಾಡಿ 83 ಲಕ್ಷ ದರೋಡೆ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯಲ್ಲಿ ಇಬ್ಬರೂ ಸಿಬ್ಬಂದಿಗಳು ಗಾಯಗೊಂಡಿದ್ದು ಇದರಲ್ಲಿ ನಿನ್ನೆ ಗಿರಿ ವೆಂಕಟೇಶ್ ಎನ್ನುವ ಸಿಬ್ಬಂದಿ ನಿನ್ನೆ ಸಾವನಪ್ಪಿದ್ದಾನೆ. ಇನ್ನೋರ್ವ ಗಾಯಗೊಂಡಂತಹ ಸಿಬ್ಬಂದಿ ಶಿವಕುಮಾರ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ರಾತ್ರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಬೀದರ್ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೈದ್ರಾಬಾದ್ …
Read More »
BigTv News
January 17, 2025
Breaking News, ಬೀದರ್
ಬೀದರ್ : ಬೀದರ್ ನಲ್ಲಿ ಹಾಡ ಹಗಲೇ ನಡೆದ ಶೂಟೌಟ್ ನಲ್ಲಿ ಗಾಯಗೊಂಡಿದ್ದ ಮತ್ತೋರ್ವ ಎಸ್ ಬಿ ಐ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಕುಮಾರ್ ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಇನ್ನು, ದುಷ್ಕರ್ಮಿಗಳ ಗುಂಡಿನ ದಾಳಿಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ರಾಜಾರೋಷವಾಗಿ ಬೈಕ್ ನಲ್ಲಿ ಬರುವ ಹಂತಕರು ಏಕಾಏಕಿ ಗುಂಡಿನ ಸುರಿಮಳೆಗೈದು ಹಣದೋಚಿ ಪರಾರಿಯಾಗಿದ್ದಾರೆ. ಸರಿ ಸುಮಾರು 93 ಲಕ್ಷ ಹಣ ಎಗರಿಸಿ ಎಸ್ಕೇಪ್ ಆಗಿದ್ದಾರೆ. …
Read More »