Breaking News

ಬೀದರ್

ವಿದ್ಯಾರ್ಥಿಗಳು ಆನ್ ಲೈನ್ ಗೇಮ್, ಸಾಮಾಜಿಕ ಜಾಲತಾಣದಿಂದ ದೂರವಿದ್ದು ಸಾಧನೆಯ ಗುರಿಯೆಡೆಗೆ ಸಾಗಬೇಕು: ಸೋನು ಸೂದ್

ಬೀದರ್ : ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸಂದರ್ಭದಲ್ಲಿ ಆನ್ ಲೈನ್ ಗೇಮ್ ಮತ್ತು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಸಾಧನೆಯ ಗುರಿಯೆಡೆಗೆ ಸಾಗಬೇಕು ಎಂದು ಖ್ಯಾತ ಚಿತ್ರನಟ ಹಾಗೂ ನಿರ್ಮಾಪಕ ಸೋನು ಸೂದ್ ತಿಳಿಸಿದರು. ನಗರದ ನೆಹರೂ ಮೈದಾನದಲ್ಲಿ ಗುರುನಾನಕ್ ದೇವ್ ಶಾಲೆಯು ಐವತ್ತನೇ ವರ್ಷ ಪೂರೈಸಿರುವ ಪ್ರಯುಕ್ತ ಶಾಲೆ ವತಿಯಿಂದ ಆಯೋಜಿಸಿದ ಬೀದರ್ ಮ್ಯಾರಥಾನ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಾಧನೆ ಮಾಡಬೇಕು ಎನಿಸಿದರೆ ಇಂದೇ ಉತ್ಸಾಹದಿಂದ ಪ್ರಾರಂಭ …

Read More »

ಎರಡ್ಮೂರು ತಿಂಗಳಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ: ಸಚಿವ ಈಶ್ವರ್ ಖಂಡ್ರೆ

ಬೀದರ್‌: ಜಿಲ್ಲಾಡಳಿತವು ಲಕ್ಷಾಂತರ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಪ್ರಕ್ರಿಯೇ ಪ್ರಾರಂಭಿಸಿದ್ದು ಎರಡ್ಮೂರು ತಿಂಗಳೊಳಗಾಗಿ ಭೂ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಅವರು ಭಾಲ್ಕಿ ತಹಸೀಲ್‌ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಭೂ ಸುರಕ್ಷಾ ಇ-ಖಜಾನೆ (ತಾಲೂಕು ಕಛೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ) ಉದ್ಘಾಟನೆ ಮಾಡಿ ಮಾತನಾಡಿದರು. ಕಚೇರಿಗಳಲ್ಲಿ ದಾಖಲೆಗಳು …

Read More »

ಬೀದರ್-ಕಮಲನಗರ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

ಔರಾದ್: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೀದರ್-ಕಮಲನಗರ ಹೆದ್ದಾರಿ ಕಾಮಗಾರಿ ವೀಕ್ಷಣೆ ಮಾಡಿದರು. ಕಮಲನಗರ, ಡಿಗ್ಗಿ, ಸಂಗಮ ಬಳಿ ರಸ್ತೆ ವೀಕ್ಷಿಸಿದ ಸಚಿವರು ಅಲ್ಲಲ್ಲಿ ರಸ್ತೆ ಬಿರುಕು ಬಿಟ್ಟಿದ ಕುರಿತು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೆತ್ತನೆ ಹಾಗೂ ಕಪ್ಪು ಮಣ್ಣು ಇರುವುದರಿಂದ ರಸ್ತೆಯಲ್ಲಿ ಬಿರುಕು ಬಿಡುತ್ತಿದೆ ಎಂದು ಅಧಿಕಾರಿಗಳು ಸಮಜಾಯಿಸಿ ನೀಡಲು ಯತ್ನಿಸಿದರು. ಇದಕ್ಕೆ ಆಕ್ಷೇಪಿಸಿದ ಶಾಸಕ ಪ್ರಭು ಚವಾಣ್ ಇವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. …

Read More »

ಮೃತ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಮನೆಗೆ ಸಿಐಡಿ ಡಿಐಜಿಪಿ ಭೇಟಿ

ಬೀದರ್: ಮೃತ ಯುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅವರಿಗೆ ಸೇರಿದ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮಕ್ಕೆ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರು ಇಂದು ಭೇಟಿ ನೀಡಿದರು. ಸಚಿನ್‌ ಆತ್ಮಹತ್ಯೆಗೂ ಮುನ್ನ ಬರೆದ ಡೆತ್‌ನೋಟ್‌, ಪೊಲೀಸರಿಗೆ ದೂರು ಕೊಡಲು ಹೋದಾಗ ನಡೆದುಕೊಂಡ ರೀತಿಯನ್ನು ವಿಚಾರಿಸಿ ಮಾಹಿತಿ ಪಡೆದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಕುಟುಂಬದವರನ್ನು ವಿಚಾರಿಸಿದರು ಎಂದು ಗೊತ್ತಾಗಿದೆ. ಇದಕ್ಕೂ ಮುನ್ನ ಅವರು ಸಚಿನ್‌ ಆತ್ಮಹತ್ಯೆ ಮಾಡಿಕೊಂಡ ಬೀದರ್‌-ಹೈದರಾಬಾದ್‌ …

Read More »

ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿಯೆ ಕಾರಣ, ಗ್ಯಾರಂಟಿ ಯೋಜನೆಗಳ ಜಾರಿಯಿಂದಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೀದರ್:‌ ಬಿಜೆಪಿ ಸರ್ಕಾರದ ಕೊನೆಯ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಆರ್ಥಿಕ ನೆರವಿಲ್ಲದೆ ಕಾಮಗಾರಿ ಮಾಡಿರುವುದೇ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಕಾರಣವೇ ಹೊರತು ಗ್ಯಾರಂಟಿ ಯೋಜನೆಗಳ ಜಾರಿಯಿಂದಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುತ್ತಿಗೆದಾರರ ಬಿಲ್ ಬಾಕಿ ಸಮಸ್ಯೆ ಪ್ರತಿ ಜಿಲ್ಲೆಗಳಲ್ಲಿಯೂ ಇದೆ. ಅವರು ಕೆಲಸ ಮಾಡಿದ್ದು, ಬಿಲ್ ಪಾವತಿಸಬೇಕಿರುವುದು ನಿಜ. ಈ ಸಮಸ್ಯೆಗೆ ಮೂಲ ಕಾರಣವನ್ನು …

Read More »

ಬೀದರ್: ಪ್ರತಿ ಕ್ವಿಂಟಾಲ್ ತೊಗರಿಗೆ ₹12 ಸಾವಿರ ನೀಡಿ; ರಾಜ್ಯ ರೈತ ಸಂಘದಿಂದ ಮನವಿ

ಬೀದರ್‌: ‘ಪ್ರತಿ ಕ್ವಿಂಟಲ್‌ ತೊಗರಿಗೆ ಕೇಂದ್ರ ಸರ್ಕಾರ ₹7,550 ನೀಡುತ್ತಿದೆ. ರಾಜ್ಯ ಸರ್ಕಾರ ಅದಕ್ಕೆ ₹4,500 ಸಹಾಯ ಧನ ಸೇರಿಸಿ, ಒಟ್ಟು ₹12,050 ನೀಡಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಸಂಘದ ಮುಖಂಡರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು. ಜಿಲ್ಲೆಯಲ್ಲಿ ಮಳೆಗೆ ತೊಗರಿ ಬೆಳೆ ಸಂಪೂರ್ಣ ಹಾಳಾಗಿದೆ. …

Read More »

ಬೀದರ್: ಪಿಎಂಎವೈ-ಜಿ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಿಸಿದ ಸಂಸದ ಸಾಗರ್ ಖಂಡ್ರೆ

ಬೀದರ್ : ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಯೋಗದ 2024-25 ವರ್ಷದ ಪಿ.ಎಂ.ಎ.ವೈ (ಜಿ) ಮನೆ ಮಂಜೂರಾತಿ ಪಡೆದ ಫಲಾನುಭವಿಗಳಿಗೆ ಸಂಸದ ಸಾಗರ್ ಖಂಡ್ರೆ ಅವರು ಭಾಲ್ಕಿಯಲ್ಲಿ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಿಸಿದರು. ತಿಳುವಳಿಕೆ ಪತ್ರ ವಿತರಿಸಿ ಮಾತನಾಡಿದ ಅವರು, ನಾವು ಫಲಾನುಭವಿಗಳಿಗೆ ಮನೆ ಮಂಜೂರಾತಿ ತಿಳುವಳಿಕೆ ಪತ್ರ ವಿತರಿಸುತ್ತಿದ್ದೇವೆ. ಪಿ.ಎಂ.ಎ.ವೈ (ಜಿ) ಯೋಜನೆಯ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ಫಲಾನುಭವಿಗಳಿಗೆ ಯಾವುದೇ ರೀತಿಯ ವಂಚನೆಯಾಗಬಾರದು …

Read More »

ಬೀದರ್: ನೂತನ ತೋಟಗಾರಿಕಾ ಇಲಾಖೆಯ ಕಚೇರಿ ಕಟ್ಟಡ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ

ಬೀದರ್ : ಭಾಲ್ಕಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತೋಟಗಾರಿಕೆ ಇಲಾಖೆಯ ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ ರೈತರ ಆರ್ಥಿಕ ಪ್ರಗತಿಗೆ ಮಹತ್ವದ ಕಾರಣವಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ತೋಟಗಾರಿಕೆ ಮಾದರಿ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆಹಾಕಬೇಕು. ಸರ್ಕಾರ ಈ ಮೂಲಕ ರೈತರ ಕೈಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡುತ್ತಿದೆ …

Read More »

ಡಾ.ಅಂಬೇಡ್ಕರ್ ಗೆ ಅಪಮಾನಿಸಿದ ಅಮಿತ್ ಶಾ ಗೆ ಸಚಿವ ಸಂಪುಟದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಂಸದ ಸಾಗರ್ ಖಂಡ್ರೆ

ಬೀದರ್: ಸಂವಿಧಾನದ ಮೂಲಕ ವಂಚಿತರಿಗೆ, ಶೋಷಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಬೀದರ್ ಸಂಸದ ಸಾಗರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶತ ಶತಮಾನಗಳಿಂದ ಅಸ್ಪೃಶ್ಯತೆಯ ನೋವುಂಡು, ಸಾಮಾಜಿಕ ನ್ಯಾಯ, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತಿತರ ಮೂಲಭೂತ …

Read More »

ಬೀದರ್ ನಲ್ಲಿ 20 ಲಕ್ಷ ರೂ. ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

ಬೀದರ್ : ಭಾಲ್ಕಿ ತಾಲ್ಲೂಕಿನ ಗಣೇಶಪುರ್ ವಾಡಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಸಂಸದ ಸಾಗರ್ ಖಂಡ್ರೆ ಅವರು ಅಡಿಗಲ್ಲು ಹಾಕಿದರು. ಗ್ರಾಮದ ಶಂಕರರಾವ್ ಭೂಸುಂಡೆ ಅವರ ಮನೆಯಿಂದ ಲೋಕೇಶ್ ಭೂರೆ ಅವರ ಮನೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದ ಅಡಿಯಲ್ಲಿ 20 ಲಕ್ಷ ರೂ.ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಪುರಸಭೆ ಉಪಾಧ್ಯಕ್ಷ ಅಶೋಕ್ ಗಾವಕವಾಡ್, ಪ್ರಶಾಂತ್ ಕೋಟಗೇರಾ, ಯಾದವರಾವ್ …

Read More »