Breaking News

ಬೀದರ್

ಬೆಂಗಳೂರು-ಬೀದರ್ ಮಧ್ಯೆ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸಲು ಕೇಂದ್ರ ಸಚಿವರಿಗೆ ಮನವಿ

ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್ …

Read More »

ಬೀದರ್ ನ ಕಾರಂಜಾ ಯೋಜನೆಯ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೀದರ್:‌ ಜಿಲ್ಲೆಯ ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಳಗಾವಿ ಸುವರ್ಣಸೌಧದ ಸಮಿತಿ ಕೊಠಡಿಯಲ್ಲಿ ಇಂದು (ಡಿ.19) ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ಸಂತ್ರಸ್ತರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದು ಹಲವು ವರ್ಷಗಳ ಹಿಂದಿನ ಸಮಸ್ಯೆಯಾಗಿದ್ದು ಈ ಬಗ್ಗೆ …

Read More »

ಬೀದರ್: ಸೇವೆಗೆ ಖಾಯಂಗೊಳಿಸಲು ಆಗ್ರಹಿಸಿ ಅಂಗನವಾಡಿ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ

ಬೀದರ್‌: ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರ್ಕಾರಿ ನೌಕರರಾಗಿ ನೇಮಕ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸುವ ಸಂಬಂಧ ಈಗಾಗಲೇ ಗುಜರಾತ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪ್ರವರ್ಗ-3 ಹಾಗೂ ಪ್ರವರ್ಗ-4ರ ಅಡಿ ಸೇವೆ …

Read More »

ಬೀದರ್ ನಲ್ಲಿ ರಾಷ್ಟ್ರೀಯ ಲೋಕ ಅದಾಲತ್: 73 ಸಾವಿರ ಪ್ರಕರಣಗಳ ಇತ್ಯರ್ಥ

ಬೀದರ್‌: ಜಿಲ್ಲೆಯಲ್ಲಿ ಡಿ. 14ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಬೀದರ್‌ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಕ್ಷಿದಾರರಿಗೆ ಒಟ್ಟು ₹23.43 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು. ಒಟ್ಟು 10,191 ಪೆಂಡಿಂಗ್‌ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹13.16 ಕೋಟಿ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. …

Read More »

ಬೀದರ್ ನಲ್ಲಿ ಡಿಸಿಸಿ ಬ್ಯಾಂಕ್ ನಿಂದ ಸಕ್ಕರೆ ಕಾರ್ಖಾನೆ ಹರಾಜು: ರಾಜ್ಯ ರೈತ ಸಂಘದಿಂದ ಪ್ರತಿಭಟನೆ

ಬೀದರ್ : ಜಿಲ್ಲೆಯಲ್ಲಿರುವ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಡಿಸಿಸಿ ಬ್ಯಾಂಕ್ ಹರಾಜಿಗೆ ಇಟ್ಟಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಡಿಸಿಸಿ ಬ್ಯಾಂಕ್ ಎದುರುಗಡೆ ಪ್ರತಿಭಟನೆ ನಡೆಸಿದರು. ಸಾಲದ ಸುಳಿಗೆ ಸಿಲುಕಿ ಬಂದ್ ಆಗಿರುವ ಬಿ.ಎಸ್.ಎಸ್.ಕೆ.ಕಾರ್ಖಾನೆಯ ವಸ್ತುಗಳನ್ನು ಸೋಮವಾರ ಡಿಸಿಸಿ ಬ್ಯಾಂಕಿನ ಒಳಗೆ ಹರಾಜು ಪ್ರಕ್ರಿಯೆ ನಡೆಯುತ್ತಿದ್ದರೆ ಹೊರಗೆ ರೈತರು ಘೋಷಣೆ ಕೂಗುತ್ತ ಪ್ರತಿಭಟಿಸಿದರು. ಬ್ಯಾಂಕಿನ ಒಳಗೆ ನುಗ್ಗಲು ಪ್ರಯತ್ನಿಸಿದ ರೈತರನ್ನು ಮೊದಲೇ …

Read More »

ಬೀದರ್: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳುವಳಿ

ಬೀದರ್‌: ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ನಗರದಲ್ಲಿ ತಮಟೆ ಚಳವಳಿ ನಡೆಸಿದರು. ನಗರದಲ್ಲಿನ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಮನೆಯ ಎದುರು ತಮಟೆ ಬಾರಿಸಿ, ಪ್ರತಿಭಟನೆ ನಡೆಸಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು. ಒಳಮೀಸಲು ಜಾರಿಗೆ ತರಬೇಕೆನ್ನುವುದು ಮಾದಿಗ ಸಮುದಾಯದ ಮೂರು ದಶಕಗಳ ಬೇಡಿಕೆಯಾಗಿದೆ. ಸುಪ್ರೀಂಕೋರ್ಟ್‌ ಕೂಡ …

Read More »

ಬೀದರ್ ನಲ್ಲಿ ಕಾರಂಜಾ ಸಂತ್ರಸ್ತರನ್ನು ಭೇಟಿಯಾದ ಬಿಜೆಪಿ ನಿಯೋಗ

ಬೀದರ್‌: ವಿಷ ಸೇವಿಸಿ ಅಸ್ವಸ್ಥರಾಗಿ ನಗರದ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಂಜಾ ಸಂತ್ರಸ್ತರನ್ನು ಜಿಲ್ಲಾ ಬಿಜೆಪಿ ನಿಯೋಗ ಶುಕ್ರವಾರ ಭೇಟಿ ಮಾಡಿತು. ಕಾರಂಜಾ ನೀರಾವರಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮೂವರು ರೈತರು ಗುರುವಾರ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಕಾರಂಜಾ ಸಂತ್ರಸ್ತರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ, ರಾಜಪ್ಪ ಕಮಲಾಪುರ ಹಾಗೂ ರಾಜಶೇಖರ್‌ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿ ಆರೋಗ್ಯ …

Read More »

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ

ಬೀದರ್ : ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡವರಿಗೆ ವೈಜ್ಞಾನಿಕ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ರೈತರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಡ ರಾತ್ರಿ ಭೇಟಿ ಮಾಡಿದರು. ಬೆಳಗಾವಿಯಿಂದ ಹೊರಟು ರಾತ್ರಿ ಬೀದರ ನಗರದ ಬ್ರಿಮ್ಸ್‌ಗೆ ಬಂದ ಸಚಿವ ಖಂಡ್ರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ,ರೈತರಾದ ರಾಜಪ್ಪ ಕೋಸಂ …

Read More »

ಬೀದರ್ ನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿ ಕೇಂದ್ರ ಪ್ರಾರಂಭ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಭತ್ತ (ಸಾಮಾನ್ಯ ಪ್ರತಿ ಕ್ವಿಂಟಾಲ್‌ಗೆ 2,300 ರೂ.) ಹಾಗೂ ಭತ್ತ (ಗ್ರೇಡ್-ಎ ಪ್ರತಿ ಕ್ವಿಂಟಾಲ್‌ಗೆ 2,320 ರೂ.) ರಂತೆ ಖರೀದಿಸಲು ಹಾಗೂ ಬಿಳಿಜೋಳ (ಹೈಬ್ರಿಡ್ ಪ್ರತಿ ಕ್ವಿಂಟಾಲ್‌ಗೆ 3371 …

Read More »

ಬೀದರ್ ನಲ್ಲಿ ಬೀದಿ ದೀಪಗಳಿಲ್ಲದೇ ಬಡವಾದ ಮಹಾನಗರದ ಪ್ರಮುಖ ರಸ್ತೆಗಳು

ಬೀದರ್‌: ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕವಾಗಿ ಮಹತ್ವ ಪಡೆದಿರುವ ಬೀದರ್‌ ಮಹಾನಗರದ ಪ್ರಮುಖ ರಸ್ತೆಗಳು ಬೀದಿ ದೀಪಗಳಿಲ್ಲದೆ ಬಡವಾಗಿವೆ. ಬೀದರ್‌ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್‌ ಅವರ ತವರಿನ ರಸ್ತೆಗಳೇ ಅಂಧಕಾರದಲ್ಲಿ ಮುಳುಗಿವೆ. ಜನ ವಾಹನಗಳ ಬೆಳಕಿನ ಆಸರೆಯಲ್ಲಿ ಓಡಾಡುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ. ನಗರದ ನೌಬಾದ್‌ ಬಸವೇಶ್ವರ ವೃತ್ತದಿಂದ ಆರ್‌ಟಿಒ ಕಚೇರಿ ವರೆಗಿನ ಬೀದರ್‌-ನಾಂದೇಡ್‌ ಮುಖ್ಯರಸ್ತೆಯ ಬೀದಿದೀಪಗಳು ಹಾಳಾಗಿ ಅನೇಕ ತಿಂಗಳುಗಳಾಗಿವೆ. ಇಡೀ ಭಾಗ ಅಂಧಕಾರದಲ್ಲಿ ಮುಳುಗಿದೆ. …

Read More »