Breaking News

ಬೀದರ್

ಬೀದರ್ ನಲ್ಲಿ ಕಲಾ ಬಿದರಿ ಸಂಗಮ-2024 ಕ್ಕೆ ಚಾಲನೆ

ಬೀದರ್:‌ ತೋಟಗಾರಿಕೆ ವಿಜ್ಞಾನ ಗಳ ವಿಶ್ವವಿದ್ಯಾಲಯ ವತಿಯಿಂದ ನಗರದಲ್ಲಿ ಆಯೋಜಿಸಿರುವ ಮೂರು ದಿನಗಳ ಕಲಾ ಬಿದರಿ ಸಂಗಮ-2024 (ಯುವ ಜನೋತ್ಸವ) ನಿಮಿತ್ತ ಇಂದು (ನ.07) ನಗರದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ಅವರು ಚಾಲನೆ ನೀಡಿದರು. ಶಿವಾಜಿ ವೃತ್ತ, ಹರಳಯ್ಯ ವೃತ್ತ ಮೂಲಕ ಸಾಗಿ ರಂಗ ಮಂದಿರ ಮೈದಾನದಲ್ಲಿ‌ ಕೊನೆಗೊಂಡಿತು. ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು. ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯ …

Read More »

ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಬೀದರ್ ನಲ್ಲಿ ನಾಳೆ(ನ.6) ರಂದು ಅರೆಬೆತ್ತಲೆ ಮೆರವಣಿಗೆ

ಬೀದರ: ಕೇಂದ್ರ ಬಿಜೆಪಿ ಸರಕಾರ ಸಂವಿಧಾನ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಮುಡಾ ಹಗರಣ ಆರೋಪವನ್ನು ಹೊರೆಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರಕಾರವನ್ನು ದುರ್ಬಲಗೊಳಿಸಲು ನಡೆಸಿರುವ ಷಡ್ಯಂತ್ರ ಖಂಡಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಜಿಲ್ಲಾ ಸಮಿತಿ ವತಿಯಿಂದ ನಾಳೆ (ನ.6 ರಂದು) ಅರೆ ಬೆತ್ತಲೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 11:30 ಗಂಟೆಗೆ …

Read More »

ಬೀದರ್ ನಲ್ಲಿ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ: 73 ಜನರ ವಿರುದ್ದ ಎಫ್ಐಆರ್‌ ದಾಖಲು

ಬೀದರ್ : ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಎಸ್/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೌದು ಕಟಕ ಚಿಂಚೋಳಿ ಠಾಣೆಯಲ್ಲಿ 73 ಜನರ ವಿರುದ್ಧ ದಾಖಲಾಗಿದೆ. ಬೀದರ್ …

Read More »

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಕ್ರಮ: ಸಚಿವ ಶರಣಪ್ರಕಾಶ ಪಾಟೀಲ್‌

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್) ಸಮಗ್ರ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಆಶ್ವಾಸನೆ ನೀಡಿದರು. ನಗರದ ಬ್ರಿಮ್ಸ್ ನಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರವೇಶಾತಿಗೆ ತಕ್ಕಂತೆ ಬೋಧಕರ ನೇಮಕಾತಿ, ಹೊರಗುತ್ತಿಗೆ ವೈದ್ಯರ ಹಾಗೂ ಸಿಬ್ಬಂದಿ ವೇತನ ಪಾವತಿ, ಕಟ್ಟಡ ದುರಸ್ತಿ, ಸುರಕ್ಷತೆ ಹಾಗೂ ಭದ್ರತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು …

Read More »

ಬೀದರ್ ವಿಮಾನಯಾನ ಪುನರಾರಂಭಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ: ಸಚಿವ ಈಶ್ವರ ಖಂಡ್ರೆ

ಬೀದರ್: ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ಬಳಿಕ ವಿವರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ …

Read More »

ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಟಿಸಲು ಹೆಚ್ಚಿನ ಒತ್ತು ನೀಡಬೇಕು: ಸಚಿವ ಎಚ್.ಕೆ.ಪಾಟೀಲ್

ಬೀದರ್‌: ಸಹಕಾರಿ ಬ್ಯಾಂಕುಗಳು ಉದ್ಯೋಗ ಸೃಷ್ಟಿಸಲು ಹೆಚ್ಚಿನ ಒತ್ತು ಕೊಡಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು. ನಗರದ ಸಿಂದೋಲ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ದಿ ಗಾಂಧಿ ಗಂಜ್‌ ಕೋ ಆಪರೇಟಿವ್‌ ಬ್ಯಾಂಕಿನ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಕಾರು ಖರೀದಿ, ನಿವೇಶನ ಮತ್ತು ಮನೆ ನಿರ್ಮಾಣಕ್ಕೆ, ಲಗ್ನಕ್ಕೆ ಸಹಕಾರಿ ಬ್ಯಾಂಕುಗಳು ಸಾಲ ಕೊಡುತ್ತವೆ ಆದರೆ, ಕೈಗಾರಿಕೆಗಳ ಸ್ಥಾಪನೆಗೆ ಸಾಲ ಕೊಡುವುದಿಲ್ಲ. …

Read More »

ಗ್ಯಾರಂಟಿ ಯೋಜನೆಗಳ ಲಾಭ ಶೇ.95 ರಷ್ಟು ಜನರಿಗೆ ಲಭಿಸಿದೆ: ಸಂಸದ ಸಾಗರ್‌ ಖಂಡ್ರೆ

ಔರಾದ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಶೇ 95ರಷ್ಟು ಜನರಿಗೆ ತಲುಪಿದೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಯಿಂದ ಮಹಿಳೆಯರು ತುಂಬಾ ಖುಷಿಯಲ್ಲಿದ್ದಾರೆ ಇದು ಅವರ ಸ್ವಾವಲಂಬಿ ಬದುಕಿಗೆ ಪೂರಕವಾಗಿದೆ ಇಡೀ ದೇಶದಲ್ಲೇ ಈ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು …

Read More »

ಬೀದರ್ ನಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆಗೆ ಶರಣಾದ ಇಬ್ಬರು ರೈತರು

ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಬೀದರ ತಾಲೂಕಿನಲ್ಲಿ ನಡೆದಿದೆ. ಕಪಲಾಪುರ ಗ್ರಾಮದ‌ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್‌ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ‌ …

Read More »

ಬೀದರ್ ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸೇವೆ ಪ್ರಾರಂಭಿಸಲು ಸಂಸದ ಸಾಗರ್ ಖಂಡ್ರೆ ಆಗ್ರಹ

ಬೀದರ್‌: ಬೀದರ್‌-ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸೇವೆ ಪ್ರಾರಂಭಿಸಬೇಕು ಎಂದು ಸಂಸದ ಸಾಗರ್‌ ಖಂಡ್ರೆ ಆಗ್ರಹಿಸಿದರು. ತೆಲಂಗಾಣದ ಸಿಕಿಂದ್ರಾಬಾದ್‌ನಲ್ಲಿ ನಡೆದ ದಕ್ಷಿಣ ಮಧ್ಯ ರೈಲ್ವೆಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬೀದರ್ ಮತ್ತು ಇತರ ಪ್ರಮುಖ ನಗರಗಳ ನಡುವಿನ ರೈಲು ಸಂಚಾರವನ್ನು ಹೆಚ್ಚಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕು. ಬೀದರ್-ಯಶವಂತಪುರ ರೈಲು ವಾರದಲ್ಲಿ ನಾಲ್ಕು ಬಾರಿ ಬೀದರ್‌ನಿಂದ ಹಾಗೂ ಮೂರು ಬಾರಿ ಲಾತೂರಿನಿಂದ ಸಂಚರಿಸುತ್ತಿದೆ. ನಿತ್ಯ ಸಾವಿರಾರು ಜನ …

Read More »

ಬೀದರ್ ನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಡಿಸಿ ಶಿಲ್ಪಾ ಶರ್ಮಾ

ಬೀದರ್‌: ನವೆಂಬರ್‌ 1ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಕನ್ನಡ ರಾಜ್ಯೋತ್ಸವದ ವ್ಯವಸ್ಥಿತ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ರಾಜ್ಯೋತ್ಸವದ ಹಿಂದಿನ ದಿನ ಎಲ್ಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆ ಕೈಗೊಂಡು, ವಿದ್ಯುತ್‌ ದೀಪಾಲಂಕಾರ ಮಾಡಬೇಕು …

Read More »