BigTv News
October 17, 2024
Breaking News, ಬೀದರ್
ಬಸವಕಲ್ಯಾಣ: ನಗರದ ಸಸ್ತಾಪುರ ರಸ್ತೆಯಲ್ಲಿನ 108 ಅಡಿ ಎತ್ತರದ ಬಸವಣ್ಣನವರ ಬೃಹತ್ ಪುತ್ಥಳಿಯ ಎದುರಲ್ಲಿನ ಬಸವ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದಿಂದ ಮೂರು ದಿನ ಹಮ್ಮಿಕೊಂಡಿರುವ 23ನೇ ಕಲ್ಯಾಣ ಪರ್ವಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಅಕ್ಟೋಬರ್ 18ರಿಂದ ಮೂರು ದಿನಗಳವರೆಗೆ ವಿವಿಧ ಗೋಷ್ಠಿ ಹಾಗೂ ಇತರೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಇದಕ್ಕಾಗಿ ಇಲ್ಲಿ ಬೃಹತ್ ಸಭಾ ಮಂಟಪ ನಿರ್ಮಿಸಿದ್ದು ವೇದಿಕೆ ಸಿದ್ಧಪಡಿಸಲಾಗಿದೆ. ಮಂಟಪಕ್ಕೆ ಆಕರ್ಷಕ ಮಹಾದ್ವಾರ …
Read More »
BigTv News
October 5, 2024
Breaking News, ಬೀದರ್
ಔರಾದ್: ತಾಲ್ಲೂಕಿನ ನಾಗೂರ(ಬಿ) ಗ್ರಾಮದ ಬಳಿ ₹118 ಕೋಟಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಕಳಪೆಯಾಗಿದ್ದು, ಈ ಸಂಬಂಧ ತನಿಖೆ ನಡೆಸಬೇಕು ಎಂದು ಶಾಸಕ ಪ್ರಭು ಚವಾಣ್ ಆಗ್ರಹಿಸಿದ್ದಾರೆ. ನಂಜುಂಡಪ್ಪ ವರದಿಯಂತೆ ಹಿಂದುಳಿದ ಪ್ರದೇಶವಾದ ಇಲ್ಲಿ ರೈತರಿಗೆ ನಿಯಮಿತ ವಿದ್ಯುತ್ ಪೂರೈಕೆ ಹಾಗೂ ಸಣ್ಣಪುಟ್ಟ ಕಾರ್ಖಾನೆ ಸ್ಥಾಪಿಸಿ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಬಹಳ ಪ್ರಯತ್ನಗಳ ನಂತರ ವಿದ್ಯುತ್ ಉಪಕೇಂದ್ರಕ್ಕೆ ಮಂಜೂರಾತಿ ಸಿಕ್ಕಿದೆ. ಆದರೆ, …
Read More »
BigTv News
October 5, 2024
Breaking News, ಬೀದರ್
ಬೀದರ್: ತಮ್ಮ ಸತ್ಯಮಾರ್ಗದಿಂದ ಇಡೀ ವಿಶ್ವಕ್ಕೆ ಚಿರಪರಿಚಿತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ರಾಜ್ಯ ಸರ್ಕಾರ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಆದ್ರೆ, ಬೀದರ್ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ಸರ್ಕಾರಕ್ಕೆ ಚಳ್ಳೆ ಹಣ್ಣು ತಿನ್ನಿಸಿ, ಗಾಂಧೀಜಿ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದೆ. ಹೌದು, ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಬೀದರ್ …
Read More »
BigTv News
September 28, 2024
Breaking News, ಬೀದರ್
ಬೀದರ್ : ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು. ರಾಜ್ಯ ಪೌರ ನೌಕರರ ಸಂಘದಿಂದ ನಗರದ ಜನವಾಡ ರಸ್ತೆಯಲ್ಲಿರುವ ಝೀರಾ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ …
Read More »
BigTv News
September 27, 2024
Breaking News, ಬೀದರ್
ಹುಲಸೂರ: ಸತತ ಸುರಿಯುತ್ತಿರುವ ಮಳೆಯಿಂದ ಮಾಂಜ್ರಾ ತೀರದ ಎರೆ ಜಮೀನುಗಳಲ್ಲಿ ನೀರು ಸಂಗ್ರಹಗೊಂಡಿದ್ದು, ಬಿತ್ತನೆ ಮಾಡಿದ ತೊಗರಿ ಬೆಳೆ ನೆಟೆ ರೋಗಕ್ಕೆ ತುತ್ತಾಗುವ ಭೀತಿಯಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಪಟ್ಟಣದ ಸೇರಿದಂತೆ ಮಾಂಜ್ರಾ ತೀರದ ಗ್ರಾಮಗಳಾದ ಹಲಸಿ ತುಗಾಂವ, ಕೊಂಗಳಿ, ವಾಂಜರಖೇಡ, ಮೆಹಕರ, ಬೋಳೆಗಾಂವ ನಾರದಾ ಸಂಗಮ, ಅಟ್ಟರಗಾ, ಸಾಯಗಾಂವ, ಹುಲಸೂರ ಜಮೀನುಗಳಲ್ಲಿ ತೊಗರಿ ಬೆಳೆಗಳ ಮಧ್ಯೆ ನಿಂತ ನೀರು ನೆಟೆ ರೋಗಕ್ಕೆ ಆಹ್ವಾನ ನೀಡುತ್ತಿದೆ. ತೊಗರಿ ಗಿಡಗಳಿಗೆ ಅಲ್ಲಲ್ಲಿ …
Read More »
BigTv News
September 21, 2024
Breaking News, ಬೀದರ್
ಬೀದರ್: ಇಲ್ಲಿನ ಭಾರತೀಯ ವಾಯುಪಡೆ ತರಬೇತಿ ಕೇಂದ್ರಕ್ಕೆ ಸೇರಿದ ಒಂಬತ್ತು ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ ಎಲ್ಲರ ಮನಸೂರೆಗೊಳಿಸಿತು. ಶನಿವಾರ ಸಂಜೆ ನಗರದ ಬಹಮನಿ ಕೋಟೆಯ ಆಗಸದ ಮೇಲೆ ಲೋಹದ ಹಕ್ಕಿಗಳ ಕರಾಮತ್ತು ನೋಡಿ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಿಸಿದರು. ಕೋಟೆಯ ಆವರಣದಲ್ಲಿ ದೇಶಭಕ್ತಿ ಗೀತೆಗಳನ್ನು ಹಾಕಲಾಗಿತ್ತು. ಅದರ ನಡುವೆ ಸೂರ್ಯಕಿರಣ ವಿಮಾನಗಳ ಮೈನವಿರೇಳಿಸುವ ಕಸರತ್ತು ಜನರನ್ನು ಮಂತ್ರ ಮುಗ್ಧಗೊಳಿಸಿತು. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಹೊಗೆ …
Read More »
BigTv News
September 19, 2024
Breaking News, ಬೀದರ್
ಬೀದರ್: ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ ಒಟ್ಟು 80 ಖರೀದಿ ಕೇಂದ್ರಗಳಲ್ಲಿ ಉದ್ದು ಮತ್ತು ಸೋಯಾಬೀನ್ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಕೇಂದ್ರದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಉದ್ದು ಮತ್ತು ಸೋಯಾಬೀನ್ ಕಾಳುಗಳನ್ನು ಎಂಎಸ್‌ಪಿ ದರದಲ್ಲಿ ರೈತರಿಂದ ಖರೀದಿಸಲಾಗುವುದು. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರತಿ ಕ್ವಿಂಟಲ್ ಉದ್ದು ₹7,400, ಸೋಯಾಬೀನ್ ಪ್ರತಿ ಕ್ವಿಂಟಲ್ ₹4,892 ದರದಲ್ಲಿ …
Read More »
BigTv News
September 18, 2024
Breaking News, ಬೀದರ್
ಹೆಡಗಾಪೂರ: ರಾಜ್ಯದ ಎರಡನೇ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಇಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ.ಖಂಡ್ರೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿ, ಬೀದರ್ ಜಿಲ್ಲೆ ಎಲ್ಲ ರೀತಿಯಿಂದಲೂ ಸಮೃದ್ಧವಾಗಿದೆ ಉತ್ತಮ ಹವಾಮಾನ, ಫಲವತ್ತಾದ ಭೂಮಿ, ಪಶು ಸಂಪತ್ತು ಇದೆ. ಕಾರಂಜಾ, ಮಾಂಜ್ರಾ ನದಿಗಳಿವೆ ಪಶು ಸಂಗೋಪನೆಗೆ ಉತ್ತಮ ವಾತಾವರಣ ಇದೆ. ಪಶು ಸಂಪತ್ತು ಉಳಿಸಿ, ಬೆಳೆಸಬೇಕು. ಅದರಲ್ಲೂ ಹೈಬ್ರಿಡ್‌ಗಿಂತ …
Read More »
BigTv News
September 17, 2024
Breaking News, ಬೀದರ್
ಬೀದರ್: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2024-25ನೇ ಸಾಲಿಗೆ ಕೇಂದ್ರ ಸರ್ಕಾರದಿಂದ ಔರಾದ್ ಹಾಗೂ ಕಮಲಗರ ತಾಲ್ಲೂಕು ಒಳಗೊಂಡು ಔರಾದ್ ವಿಧಾನಸಭಾ ಕ್ಷೇತ್ರಕ್ಕೆ 3923 ಮನೆಗಳು ಮಂಜೂರಾಗಿವೆ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ್ ತಿಳಿಸಿದ್ದಾರೆ. ಔರಾದ್ ಹಾಗೂ ಕಮಲಗರ ತಾಲ್ಲೂಕಿನಲ್ಲಿ ವಸತಿ ರಹಿತ ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಮನೆಗಳನ್ನು ಕಟ್ಟಿಸಿಕೊಡುವಂತಾಗಲು ಮನೆಗಳನ್ನು ಮಂಜೂರು ಮಾಡಬೇಕೆಂದು ಈ ಹಿಂದೆ ಹಲವಾರು ಬಾರಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು …
Read More »
BigTv News
September 14, 2024
Breaking News, ಬೀದರ್
ಬೀದರ್: ಹಿಂದಿ ದಿನಾಚರಣೆ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರದ ಸೌಮ್ಯದ ಕಚೇರಿ ಮತ್ತು ಸಂಸ್ಥೆಗಳಲ್ಲಿ ಕಳೆದ 25 ವರ್ಷಗಳಿಂದ ಸೆ. 14 ರಂದು …
Read More »