Breaking News

ಬೀದರ್

ಬಸವಕಲ್ಯಾಣದಲ್ಲಿ ಅ. 19,20 ರಂದು ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜನೆ

ಬೀದರ್:‌ ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅ. 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗುವುದು ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು. ನಗರದದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಶರಣ ಶರಣೆಯರು ಪಾಲ್ಗೊಳ್ಳುತಿದ್ದಾರೆ. ಬಸವ …

Read More »

ಬೆಳೆಹಾನಿ ಪ್ರದೇಶವನ್ನು ವೀಕ್ಷಿಸಿದ ಸಚಿವ ರಹೀಂಖಾನ್

ಬೀದರ್: ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಪೌರಾಡಳಿತ ಸಚಿವ ರಹೀಂಖಾನ್ ಅವರು ಗುರುವಾರ ಭೇಟಿ ನೀಡಿದರು. ಮಾಳೆಗಾಂವ್, ವಿಳಾಸಪುರ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನಿಂತು ಹೆಸರು, ಉದ್ದು, ತೊಗರಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು. ಬೆಳೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು, ಹಾನಿ ವಾಸ್ತವ ವರದಿ ಸಲ್ಲಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡವರಿಗೂ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಾಳೆಗಾಂವ್ …

Read More »

ಯುವನಿಧಿ ಯೋಜನೆಯಲ್ಲಿ ಬೀದರ್ ಕಳಪೆ ಸಾಧನೆ

ಬೀದರ್‌: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯಲ್ಲಿ ಬೀದರ್‌ ಜಿಲ್ಲೆಯ ಸಾಧನೆ ಬಹಳ ಕಳಪೆಯಾಗಿದೆ, ಯುವನಿಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಡುತ್ತಿರುವ ಕೆಲಸ ತೃಪ್ತಿ ತಂದಿಲ್ಲ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಬೇಸರ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ‌ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೀದರ್‌ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಬೆಲ್ದಾಳೆ

ಬೀದರ್: ಕಾರಂಜಾ ನೀರಾವರಿ ಯೋಜನೆ ಪುನರ್ವಸತಿ ಗ್ರಾಮಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ₹20 ಕೋಟಿ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು. ಬೀದರ್ ತಾಲ್ಲೂಕಿನ ನೆಲವಾಡ ಗ್ರಾಮದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತಾವಕ್ಕೆ ಸರ್ಕಾರದಿಂದ ಆದಷ್ಟು ಬೇಗ ಮಂಜೂರಾತಿ ಪಡೆದು, ಕಾಮಗಾರಿ ಆರಂಭಿಸುವ ದಿಸೆಯಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಬೀದರ್ ದಕ್ಷಿಣ ಕ್ಷೇತ್ರದಲ್ಲಿ …

Read More »

ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೀದರ್: ಕಾಮಗಾರಿಯ ಬಿಲ್ ಗಾಗಿ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದ ಘಟನೆ ಸೆ.10ರ ಮಂಗಳವಾರ ನಡೆದಿದೆ. ತಾಲೂಕಿನ ಕೋಸಂ ಗ್ರಾ.ಪಂ. ಪಿಡಿಒ ರಾಹುಲ್ ದಂಡೆ ಹಾಗೂ ತಾ.ಪಂ. ತಾಂತ್ರಿಕ ಸಹಾಯಕ (ನರೇಗಾ) ಸಿದ್ರಾಮೇಶ್ವರ ಬಂಧಿತರು. ಕೋಸಂ ಗ್ರಾ.ಪಂ. ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರ ಸುನೀಲ ಸಕಾರಾಮ ಪಡೆದಿದ್ದರು. ಅನ್ಯ ಕೆಲಸದಲ್ಲಿ ನಿರತರಾಗಿದ್ದರಿಂದ ಸುನೀಲ ಸೂಚನೆ ಮೇರೆಗೆ 15 ಕಾಮಗಾರಿಗಳನ್ನು ಗುತ್ತಿಗೆದಾರ ಅರವಿಂದ ಮಾಧವರಾವ …

Read More »

ಜಲಾಶಯಕ್ಕೆ ಬಾಗಿನ ಸಮಯದಲ್ಲಿ ಆಯತಪ್ಪಿದ ಸಚಿವರು: ಸ್ವಲ್ಪದರಲ್ಲೇ ಬಚಾವ್

ಬೀದರ್ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿ ಮುಗ್ಗರಿಸಿ ಸ್ವಲ್ಪದರಲ್ಲೇ ಜಲಾಶಯಕ್ಕೆ ಬಿಳುವುದರಲ್ಲಿ ಬಚಾವ್ ಆಗಿದ್ದಾರೆ. 7.69 ಸಾಮರ್ಥ್ಯದ ಕಾರಂಜಾ ಜಲಾಶಯ ಈಗಾಗಲೇ ಸುಮಾರು 93ರಷ್ಟು ಭರ್ತಿಯಾಗಿದೆ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕಾರಂಜಾ ಜಲಾಶಯಕ್ಕೆ ಸಚಿವ ಈಶ್ವರ್ ಖಂಡ್ರೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಜಲಾಶಯಕ್ಕೆ ಪೂಜೆ …

Read More »

ಕಸದ ತೊಟ್ಟಿಯಲ್ಲಿ ಪತ್ತೆಯಾದ ನವಜಾತ ಶಿಶುಗಳು

ಬೀದ‌ರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯ (ಬ್ರಿಮ್ಸ್) ಕಸದ ತೊಟ್ಟಿಯಲ್ಲಿ ಬಿಟ್ಟು ಹೋಗಿದ್ದ ಎರಡು ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದೆ. ಬ್ರಿಮ್ಸ್ ಸಿಬ್ಬಂದಿ ಗಮನಿಸಿ, ನವಜಾತ ಶಿಶುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಉಪಚರಿಸಿದ್ದಾರೆ. ಒಂದು ಮಗು ಎರಡು ದಿನಗಳ ಹಿಂದೆ ಹುಟ್ಟಿದರೆ, ಇನ್ನೊಂದು ಮಗು ಎರಡು ತಿಂಗಳದ್ದು ಇರಬಹುದು ಎಂದು ಅಂದಾಜಿಸಲಾಗಿದೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ …

Read More »

ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ…..

ಬೀದರ್‌: ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂಬ ಕೂಗಿನ ನಡುವೆಯೇ ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಹೌದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮೋದಿ ಬೀದರ್‌ಗೆ ಆಗಮಿಸಲಿದ್ದಾರೆ. ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರಕ್ಕೆ ಮಂಗಳವಾರ ಮಧ್ಯಾಹ್ನ 1.50ಕ್ಕೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೀದರ್ ಜಿಲ್ಲಾಡಳಿತ ಡ್ರೋನ್ ಹಾರಾಟ ನಿಷೇಧಿಸಿದೆ. ನರೇಂದ್ರ ಮೋದಿ ಭದ್ರತೆಯ ಶಿಷ್ಟಾಚಾರದಂತೆ ಬೀದರ್‌ನ ವಾಯುಸೇನೆ …

Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ…

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ ಪತ್ನಿಯನ್ನೇ ಥಳಿಸಿ …

Read More »

ಬೀದರ್ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹಳದಿ ನಂಜು ರೋಗ….

ಬೀದರ್: ಬೀದರ್ ತಾಲ್ಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಹೆಸರು, ಸೋಯಾ ಹಾಗೂ ಅವರೆಯಲ್ಲಿ ಹಳದಿ ನಂಜು ರೋಗಭಾದೆ ಕಂಡು ಬಂದಿದೆ.ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳು ಜಿಲ್ಲೆಯಲ್ಲಿ ನಡೆಸಿದ ಸಮೀಕ್ಷೆ ವೇಳೆ ರೋಗ ಪತ್ತೆಯಾಗಿದೆ.ಹುಮನಾಬಾದ್ ತಾಲ್ಲೂಕಿನ ಕೆಲ ಹೊಲಗಳಲ್ಲಿ ಹೆಸರು ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಕಾಣಿಸಿದೆ.ಹಳದಿ ನಂಜು ರೋಗ ಪಸರಿಸಲು ಬಿಳಿ ನೊಣ ಕಾರಣವಾಗಿದೆ. ಪ್ರೌಢ ಹಾಗೂ ಮರಿಕೀಟ ಎಲೆ ಹಾಗೂ ಇತರ ಭಾಗಗಳಿಂದ …

Read More »