BigTv News
November 9, 2024
Breaking News, ಬಳ್ಳಾರಿ
ಬಳ್ಳಾರಿ: ಸಂಡೂರು ತಾಲ್ಲೂಕಿನ ನಾರಿಹಳ್ಳ ಜಲಾಶಯದ ಬಳಿಯಿರುವ 104 ಎಕರೆ ದಟ್ಟ ಅರಣ್ಯ ಪ್ರದೇಶದಲ್ಲಿ ಜೆಎಸ್‌ಡಬ್ಲ್ಯು ಎನರ್ಜಿ ಲಿಮಿಟೆಡ್ ಸಂಸ್ಥೆಯು 300 ಮೆಗಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಇದರಿಂದ ಒಂದೆಡೆ ಅರಣ್ಯ ನಾಶದ ಆತಂಕವಿದ್ದರೆ, ಇನ್ನೊಂದೆಡೆ ಸರ್ಕಾರಿ ಸಂಸ್ಥೆಗೆ ಸಿಗಬೇಕಿದ್ದ ಯೋಜನೆಯನ್ನು ಹಿಂದಿನ ಸರ್ಕಾರವು ಮುಂದೆ ನಿಂತು ಖಾಸಗಿ ಸಂಸ್ಥೆಗೆ ನೀಡಿದ್ದು ಬಹಿರಂಗವಾಗಿದೆ. ಸಂಡೂರಿನ ತಾರಾನಗರದ ಬಳಿ ಇರುವ ನಾರಿಹಳ್ಳ ಜಲಾಶಯಕ್ಕೆ ಹೊಂದಿಕೊಂಡಿರುವ 412.41 ಎಕರೆ ಪ್ರದೇಶದಲ್ಲಿ …
Read More »
Shaikh BigTv
November 8, 2024
Breaking News, ಬಳ್ಳಾರಿ
ಸಂಡೂರು: ಬಳ್ಳಾರಿ ಜಿಲ್ಲೆಯ ಸಂಡೂರಿನ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಜೋರಾಗಿದೆ. ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಅದ್ದೂರಿಯಾಗಿ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರಿಗೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಬೊಮ್ಮಘಟ್ಟಿ, ಚೋರನೂರು, ಬಂಡ್ರಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿಲಾಗಿದೆ. ಕ್ಷೇತ್ರದಲ್ಲಿ ಮಿಂಚಿನಿ ಸಂಚಾರ ಮೂಡಿಸುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್, ಸಿಎಂ …
Read More »
BigTv News
November 7, 2024
Breaking News, ಬಳ್ಳಾರಿ
ಸಂಡೂರು : ರಾಜ್ಯದಲ್ಲಿ ಐದಕ್ಕೆ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗಲಾಗುತ್ತಿದ್ದು. ಗೃಹ ಲಕ್ಷ್ಮೀ ಯೋಜನೆಯ ಕಂತಿನ ಬಾಕಿ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಂಡೂರಿನಲ್ಲಿ ಇಂದು ತಮ್ಮ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನಗಳು ಸ್ಥಗಿತಗೊಳ್ಳುವುದಿಲ್ಲ, ಕಾಂಗ್ರೆಸ್ ಸರ್ಕಾರ ಇರುವವರಗೆ ಮುಂದುವರೆಸಿಕೊಂಡು ಹೋಗಲಾಗುವುದು ಎಂದು ಸ್ಪಷ್ಟಪಡಿಸಿದರು. ಬಿಜೆಪಿಯವರು ಸಂಪೂರ್ಣ …
Read More »
BigTv News
November 7, 2024
Breaking News, ಬಳ್ಳಾರಿ
ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ …
Read More »
BigTv News
November 5, 2024
Breaking News, ಬಳ್ಳಾರಿ
ಬಳ್ಳಾರಿ: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಪಕ್ಷದ ರಾಜ್ಯಾಧ್ಯಕ್ಷರಿಗೆ ನಗರದಲ್ಲಿ ವರದಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, …
Read More »
BigTv News
November 4, 2024
Breaking News, ಬಳ್ಳಾರಿ
ಸಂಡೂರು: ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಇಂದು ಪ್ರಚಾರ ಕೈಗೊಂಡರು. ಓ ಮೇಘ ಬಿಲಿವರ್ಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ …
Read More »
BigTv News
November 2, 2024
Breaking News, ಬಳ್ಳಾರಿ
ಸಂಡೂರು: ಸಂಡೂರು ಕ್ಷೇತ್ರದ ವಿಧಾನ ಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು, ಇಂದು ಕ್ಷೇತ್ರದ ವಿವಿಧೆಡೆ ಪ್ರಚಾರ ಆರಂಭಿಸಿದರು. ಪತಿ ಇ ತುಕಾರಾಂ ಅವರೊಂದಿಗೆ ಯಶವಂತ ನಗರ, ಸೋಮಲಾಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ ಮಾತನಾಡಿದ ಅನ್ನಪೂರ್ಣ ಅವರು, ಯಶವಂತ ನಗರದಲ್ಲಿ ನಾವು ಬದುಕು ಕಟ್ಟಿಕೊಂಡಿದ್ದು ಇಲ್ಲಿನ ಜನ ಪ್ರತಿ ಬಾರಿಯೂ ನಮಗೆ ಹೆಚ್ಚಿನ ಮತ ನೀಡಿ ಗೆಲುವಿನಲ್ಲಿ ಪ್ರಮುಖ …
Read More »
BigTv News
November 1, 2024
Breaking News, ಬಳ್ಳಾರಿ
ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮೊದಲಿಗೆ ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ, ಬಳಿಕ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆಯಿಂದ ಗೌರವಂದನೆ ಸ್ವೀಕರಿಸಿದರು. ಹಂಪಿಯಿಂದ ಕನ್ನಡ ಸಂಘಟನೆಗಳು ತಂದಿದ್ದ ಕನ್ನಡ ಜ್ಯೋತಿ ಹಸ್ತಾಂತರ ಮಾಡಲಾಯಿತು. ಬಳಿಕ ಸಚಿವ ಬೈರೇಗೌಡ ರಾಜ್ಯೋತ್ಸವದ ಶುಭಾಶಯ ಕೋರಿದರು. ನಾನು ಕೋಲಾರ ಮೂಲದವನು ಬಳ್ಳಾರಿಗೆ ಬಂದು …
Read More »
BigTv News
October 29, 2024
Breaking News, ಬಳ್ಳಾರಿ
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಶಾಸಕ ಬಿ ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಎಂಎಲ್ ಸಿ ಸಿ ಟಿ ರವಿ ಅವರು ರಾಜ್ಯದಲ್ಲಿ ರಾವಣನ ದರ್ಬಾರು ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕುಡುತೀನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ …
Read More »
BigTv News
October 28, 2024
Breaking News, ಬಳ್ಳಾರಿ
ಬಳ್ಳಾರಿ: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಮೂಲಕ ಜಿಲ್ಲೆಯ ತೋರಣಗಲ್‌ನ ಜಿಂದಾಲ್ ಸಂಸ್ಥೆಗೆ 35 ಟನ್ ನಂದಿನಿ ಮೈಸೂರು ಪಾಕ್ ಅನ್ನು ಪೂರೈಕೆ ಮಾಡಲಾಗಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟದ (ರಾಬಕೊವಿ) ಮಧ್ಯಸ್ಥಿಕೆಯಲ್ಲಿ ಈ ವ್ಯಾಪಾರ ನಡೆದಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಪೀರ್ಯ ನಾಯಕ್ ಅವರು ತಿಳಿಸಿದರು. ಅರ್ಧ ಕೆ.ಜಿ ತೂಕದ ಒಟ್ಟು 70 ಸಾವಿರ ಪ್ಯಾಕೆಟ್‌ಗಳಲ್ಲಿ ಸಿಹಿ ಉತ್ಪನ್ನವನ್ನು ಪೂರೈಕೆ ಮಾಡಲಾಗಿದೆ. …
Read More »