BigTv News
October 27, 2024
Breaking News, ಬಳ್ಳಾರಿ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2024ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್ ಹೆಚ್. ಡಿ. …
Read More »
BigTv News
October 22, 2024
Breaking News, ಬಳ್ಳಾರಿ
ಸಂಡೂರು: ಉಪಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಎನ್.ವೆಂಕಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು 2008ರಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದೇನೆ ಇ.ತುಕರಾಂ ಅವರ ಪ್ರತಿ ಚುನಾವಣೆಯಲ್ಲೂ ಬೆಂಬಲಿಸಿ ಕೆಲಸ ಮಾಡಿದ್ದೇನೆ. ಎಸ್ಟಿ ಮೀಸಲು ಕ್ಷೇತ್ರವಾದ್ದರಿಂದ ಇದೀಗ ನಮಗೂ ಒಂದು ಅವಕಾಶ ಕೊಡಿ ಎಂದು ಎಐಸಿಸಿ, ಕೆಪಿಸಿಸಿ ವೀಕ್ಷಕರಿಗೆ ಮನವಿ ಸಲ್ಲಿಸಿದ್ದರೂ ವರಿಷ್ಠರಾಗಲೀ, ಸಂಸದ ತುಕರಾಂ ಅಥವಾ ಕಾರ್ಮಿಕ ಸಚಿವ ಸಂತೋಷ್ ಲಾಡ್ ಈವರೆಗೆ …
Read More »
BigTv News
October 21, 2024
Breaking News, ಬಳ್ಳಾರಿ
ಬಳ್ಳಾರಿ: ಜಿಲ್ಲೆಯ ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆ 2024ರ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿವಿಧ ರಾಜಕೀಯ ಪಕ್ಷಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿ, ಚುನಾವಣಾ ಪ್ರಚಾರದ ಕುರಿತು ಪಕ್ಷಗಳಿಗೆ ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಸಭೆ …
Read More »
BigTv News
October 20, 2024
Breaking News, ಬಳ್ಳಾರಿ
ಬಳ್ಳಾರಿ: ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಂಗಾರು ಹನುಮಂತು ಮೂಲತಃ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯವರು. ಬಿಎ,ಬಿಇಡ್ ಪದವೀಧರ. ಇವರ ತಂದೆ ಸೋಮಣ್ಣ ಅವರು ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದರು. ಕೂಡ್ಲಿಗಿಯಲ್ಲಿ ನಿವೃತ್ತಿಯಾದರು. ಹೀಗಾಗಿ ಬಂಗಾರು ಹನುಮಂತು ಕುಟುಂಬ ಕೂಡ್ಲಿಗಿಯಲ್ಲಿ ನೆಲೆಸಿದೆ. ಹನುಮಂತು ಅವರ ತಾಯಿ ಹುಲಿಗೆಮ್ಮ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಬಿಜೆಪಿಯ ಹಾಲಿ ಸದಸ್ಯರಾಗಿದ್ದಾರೆ. ಬಂಗಾರು ಹನುಮಂತು ರಿಯಲ್ ಎಸ್ಟೇಟ್, ಟ್ರಾನ್ಸ್‌ಪೋರ್ಟ್, ಕ್ರಷರ್, ಸಿವಿಲ್ ವರ್ಕ್ಸ್, ಉದ್ಯಮ ನಡೆಸುತ್ತಿದ್ದಾರೆ. ಕೃಷಿಯಲ್ಲೂ ತೊಡಗಿಸಿಕೊಂಡಿದ್ದಾರೆ. ಸದ್ಯ …
Read More »
BigTv News
October 17, 2024
Breaking News, ಬಳ್ಳಾರಿ
ಬಳ್ಳಾರಿ: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆ-2024ರ ದಿನಾಂಕ ಘೋಷಣೆ ಮಾಡಿದ್ದು, ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನವೆಂಬರ್ 13ರಂದು ಮತದಾನ ಮತ್ತು ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಬಳ್ಳಾರಿ ಜಿಲ್ಲಾಡಳಿತ ಉಪ ಚುನಾವಣೆಯ ಕುರಿತು ಮಾಹಿತಿಯನ್ನು ನೀಡಿದೆ. ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಂಡೂರು ಉಪ ಚುನಾವಣೆ ಕುರಿತು ಮಾಹಿತಿ ನೀಡಿದರು. …
Read More »
BigTv News
October 14, 2024
Breaking News, ಬಳ್ಳಾರಿ
ಬಳ್ಳಾರಿ: ಸಂಡೂರಿನಲ್ಲಿರುವ ನಾರಿಹಳ್ಳ ಕಿರು ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಕಿರು ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. 0.810 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಜಲಾಶಯವನ್ನು 1972 ರಲ್ಲಿ ಲೋಕಾರ್ಪಣೆ ಮಾಡಲಾಗಿತ್ತು. ಆಗಿನ ಸಿಎಂ ದೇವರಾಜು ಅರಸು ಅವರು ಜಲಾಶಯವನ್ನು ಉದ್ಘಾಟಿಸಿದ್ದರು. 615 ಕಿಮೀ ವಿಸ್ತೀರ್ಣ ಹೊಂದಿರುವ ಕಿರು ಜಲಾಶಯ ಸಂಡೂರು ಪಟ್ಟಣ ಸೇರಿ ವಿವಿಧ ಗ್ರಾಮಗಳ ಕುಡಿಯುವ ನೀರಿಗೆ ಆಧಾರವಾಗಿದೆ ಇದು ಐದು ಕ್ರಸ್ಟ್ ಗೇಟ್‌ಗಳನ್ನ ಹೊಂದಿದೆ. …
Read More »
BigTv News
October 14, 2024
Breaking News, ಬಳ್ಳಾರಿ
ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು. ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ …
Read More »
BigTv News
October 10, 2024
Breaking News, ಬಳ್ಳಾರಿ
ತೋರಣಗಲ್ಲು: ಗ್ರಾಮೀಣ ಪ್ರದೇಶದ ಬಡ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಸಂಸದ ಇ.ತುಕಾರಾಂ ಹೇಳಿದರು. ಗ್ರಾಮದ ನಾಡಕಾರ್ಯಾಲಯದ ಬಳಿ ಜಿಲ್ಲಾ ಖನಿಜ ನಿಧಿಯ ಅನುದಾನದಲ್ಲಿ ₹50 ಲಕ್ಷ ವೆಚ್ಚದ ರೈತ ಸಂಪರ್ಕ ಕೇಂದ್ರದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಬಡ ಮಕ್ಕಳ ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ …
Read More »
BigTv News
October 9, 2024
Breaking News, ಬಳ್ಳಾರಿ
ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಸರ್ಕಾರಿ ಅನುದಾನದ ನೆರವಿನ ಅಡಿಯಲ್ಲಿ ಹೆಚ್ಚುವರಿ ಕೋರ್ಸ್‍ಗಳನ್ನು ಪ್ರಾರಂಭಿಸಲು ಸೂಕ್ತ ಸಹಕಾರ ನೀಡುವುದಾಗಿ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಭರವಸೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ಚೇಂಬರ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‍ನ ಚೇರ್ಮೆನ್ ನಾಗಳ್ಳಿ ರಮೇಶ್ ಅವರು ಸಚಿವರ ಬೆಂಗಳೂರಿನ ಮನೆಯಲ್ಲಿ …
Read More »
BigTv News
October 7, 2024
Breaking News, ಬಳ್ಳಾರಿ
ಬಳ್ಳಾರಿ: ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ ಹೊಸಪೇಟೆ ಭಾಗದಲ್ಲಿ ರೈಲ್ವೆ ಅಭಿವೃದ್ಧಿಗಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಜೊತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ, ಸುದ್ದಿಗಾರರಿಗೆ ಈ ಮಾಹಿತಿ …
Read More »