Breaking News

ಬಳ್ಳಾರಿ

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ: ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆ

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆಯಾಗಿವೆ, ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಇಡೀ ರಾತ್ರಿ ಚಾಲಕರು ಪರದಾಡಿದ್ದಾರೆ. ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಮಳೆ ಅವಾಂತರಕ್ಕೆ ಲಾರಿ ಚಾಲಕರು ನಲುಗಿ ಹೋಗಿದ್ದಾರೆ. ಕುಮಾರಸ್ವಾಮಿ ಬೆಟ್ಟದಲ್ಲಿ ಸುರಿದ ಮಳೆಯಿಂದ ಅವಾಂತರ …

Read More »

ಜನಾರ್ಧನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಬಳ್ಳಾರಿ: ಬಳ್ಳಾರಿ ಗಣಿ ಧಣಿ ಜನಾರ್ದನ ರೆಡ್ಡಿ ಅಕ್ರಮಗಣಿಗಾರಿಕೆ ಪ್ರಕರಣದಡಿ 2011 ರಲ್ಲಿ ಜೈಲು ಸೇರಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ ರೆಡ್ಡಿ, ಬಳಿಕ ಷರತ್ತುಬದ್ಧ ಜಾಮೀನು ಪಡೆದಿದ್ದರು. 2011 ರಿಂದ ಈವರಗೆ ತನ್ನೂರು ಬಳ್ಳಾರಿಗೆ ಮುಕ್ತ ಪ್ರವೇಶಕ್ಕೆ ರೆಡ್ಡಿಗೆ ಅವಕಾಶ ಇರಲಿಲ್ಲ. ಕೋರ್ಟ್ ಅನುಮತಿ ಪಡದೇ ರೆಡ್ಡಿ ಬಳ್ಳಾರಿಗೆ ಬರಬೇಕಿತ್ತು. ಸುಮಾರು 14 ವರ್ಷಗಳ ಕಾಲ ರೆಡ್ಡಿ ತನ್ನೂರನ್ನ ಬಿಟ್ಟು, ಹೈದರಾಬಾದ್, ಬೆಂಗಳೂರು, ಗಂಗಾವತಿಯಲ್ಲಿ ಜೀವನ …

Read More »

ಕಳ್ಳರ ಜೊತೆ ಕೈಜೋಡಿಸಿ ಖದೀಮನಾದ ಪೊಲೀಸ್

ಬಳ್ಳಾರಿ: ಪೊಲೀಸಪ್ಪನೇ ಕಳ್ಳರ ಜೊತೆ ಕೈ ಜೋಡಿಸಿ ಖದೀಮನಾದ ಕತೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೆಹಬೂಬ್ ಪಾಷಾ ಎಂಬುವವರು ಕಳ್ಳರ ಜೊತೆ ಕೈ ಜೋಡಿಸಿ ಲಕ್ಷ ಲಕ್ಷ ನುಂಗಿದ್ದಾರೆ. ಈ ಖದೀಮ ಕಳ್ಳರು ಕದ್ದ ಮಾಲಲ್ಲೇ ತನಗೂ ಪಾಲು ಪಡೆದು ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸ್ ಯತ್ನಿಸುತ್ತಿದ್ದ. ಸೆ.12ರಂದು ಬೆಳಗಿನ ಜಾವ ರಾಯದುರ್ಗಾ ಬಸ್ ನಿಲ್ದಾಣದ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರದ ಪುಡಿ …

Read More »

ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಲು ರಾಜ್ಯ ಸರ್ಕಾರ ಆದೇಶ

ಬಳ್ಳಾರಿ : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ಮಾಹಿತಿ ಪಡೆದುಕೊಳ್ಳಬಹುದು. ನಗರಾಭಿವೃದ್ಧಿ ಇಲಾಖೆಯು ಬಳ್ಳಾರಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ.23 ರಿಂದ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ …

Read More »

ಮೊಬೈಲ್​ ನಿಂದ ಹಣ ದೋಚಿ ಬಳ್ಳಾರಿ ಕಂಪನಿಗೆ ಪಂಗನಾಮ ಹಾಕಿದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

ಬಳ್ಳಾರಿ: ವಿವೋ ಕಂಪನಿಯ ಮೊಬೈಲ್ ಮೂಲಕ 23 ವರ್ಷದ ಯುವಕನೊಬ್ಬ ಬಳ್ಳಾರಿಯ ಕಂಪನಿಗೆ ಪಂಗನಾಮ ಹಾಕಿದ್ದ, ಸೈಬರ್ ಕ್ರೈಂನ ತನಿಖೆ ಕೈಗೊಂಡ ಪೊಲೀಸರು ಹಣವನ್ನು ಜಪ್ತಿ ಮಾಡಿದ್ದಾರೆ. ದೊಡ್ಡ ಕಂಪನಿಯಿಂದ ಯುವಕ ತನ್ನ ಖಾತೆಗೆ ಹಾಕಿಸಿಕೊಂಡಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೂರದಲ್ಲಿ ಕುಳಿತು ಕಂಪನಿ ಯಾಮಾರಿಸಿದ ಯುವಕನ ತಂತ್ರವನ್ನು ನೋಡಿ ಪೊಲೀಸರು ಅಚ್ಚರಿಗೊಂಡಿದ್ದಾರೆ. ಬಳ್ಳಾರಿಯ ಎಸ್‌ಪಿ ಶೋಭಾರಾಣಿ ಈ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ಸೈಬರ್, ಆರ್ಥಿಕ, ಮಾದಕ ದ್ರವ್ಯ …

Read More »

ಚರಂಡಿ ನೀರಿಗೆ ಬಿದ್ದು ಬಾಲಕ ಸಾವು

ಬಳ್ಳಾರಿ: ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ. ವಿರಾಟ್.ಜೆ (4) ಮೃತ ಬಾಲಕ. ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಬಾಲಕನ ಕುಟುಂಬಸ್ಥರ …

Read More »

ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಬಳ್ಳಾರಿ : ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ಇರುವ ಮುನಿರಾಬಾದ್ ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ತುಂಗಭದ್ರ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವುದಕ್ಕೆ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದ್ದಾರೆ. ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಉಪಸ್ಥಿತರಿದ್ದರು. ಜಲಾಶಯದಲ್ಲಿ ಕೊಚ್ಚಿ ಹೋಗಿರುವ ಗೇಟ್ ಸರಿಪಡಿಸುವ …

Read More »

ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿ…..

ಬಳ್ಳಾರಿ: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಬಳ್ಳಾರಿಯಲ್ಲಿ ನಡೆದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನೂರಾರು ರೈತರು ಪ್ರದರ್ಶನದಲ್ಲಿ ಪಾಲ್ಗೊಂಡರು.ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್- ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಈ ಪ್ರದರ್ಶನ …

Read More »

ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ….

ಬಳ್ಳಾರಿ: ಬಳ್ಳಾರಿ ಬಿಜೆಪಿ ಸಂಸದನ ಪುತ್ರನ ಮೇಲೆ ಪ್ರೇಮ ವಂಚನೆ ಆರೋಪ ಕೇಳಿ ಬಂದಿದೆ. ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ಅವರ ಮೇಲೆ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕದ ಬಳಿಕ ಮೋಸ ಮಾಡಿದ ಆರೋಪ ಕೇಳಿ ಬಂದಿದೆ.ರಂಗನಾಥ್ ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಸ್ವತ ಯುವತಿ ದೂರು ದಾಖಲಿಸಿದ್ದಾಳೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ …

Read More »

ಡಾ. ವಿನಯಕುಮಾರ ಅವರಿಗೆ ಒಲಿದ ಗಡಿನಾಡು ರತ್ನ ಪ್ರಶಸ್ತಿ

ಬಳ್ಳಾರಿ ; ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಶ್ರೀ ಸರ್ವೇಜನಾ: ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನೀಡುವ 22-20203 ರ ಸಾಲಿನ ರಾಷ್ಟೀಯ ಗಡಿ ನಾಡ ರತ್ನ ಪ್ರಶಸ್ತಿಯನ್ನು ಡಾ ವಿನಯಕುಮಾರ ರವರಿಗೆ ನೀಡಲಾಯಿತು.ಅವರು ತಮ್ಮ ಜೀವನದಲ್ಲಿ ಮಾಡಿದ ಪತ್ರಿಕೋದ್ಯಮ ಹಾಗು ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಇಂದು ಈ ಪ್ರಶಸ್ತಿಯನ್ನು ಗಡಿನಾಡ ಜಿಲ್ಲೆ ಬಳ್ಳಾರಿಯಲ್ಲಿ ಪ್ರಧಾನ ಮಾಡಲಾಯಿತು.

Read More »