Welcome to bigtvnews   Click to listen highlighted text! Welcome to bigtvnews
Breaking News

ಕರ್ನಾಟಕ

ತವರಿನಲ್ಲಿ ಕೈ ಜಾರಿದ್ದ ಸ್ಥಾನವನ್ನು ದಕ್ಕಿಸಿಕೊಳ್ಳೊಕೆ ಪರಿಷತ್‌ ಚುನಾವಣಾ ಮೂಲಕ ಬಿಎಸ್‌ ವೈ ರಣತಂತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ. ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್​ವೈ ಪ್ರಚಾರದ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಪರಿಷತ್​​ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ …

Read More »

ಮೊದಲ ಮತ ಲಖನ್​ಗೋ? ಕವಟಗಿಮಠಗೋ? ರಮೇಶ ಜಾರಕಿಹೊಳಿ ಸಸ್ಪೇನ್ಸ್

ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್​ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್​ಗೋ? …

Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಅರೆಸ್ಟ್‌

ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ. ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮಂಗಳೂರಿನ ಕೆ.ಸಿ ರೋಡ್​​​ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ …

Read More »

ವಿದ್ಯಾರ್ಥಿಗೆ ಸೋಂಕು-ಶಾಲಾ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ಆರಂಭ

ಹುಬ್ಬಳ್ಳಿ : ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು …

Read More »

ಟಿಪ್ಪರ್-ಬಸ್‌ ಮುಖಾಮುಖಿ ಡಿಕ್ಕಿ-6 ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ …

Read More »

ಅಪ್ಪು ಕುಟುಂಬಕ್ಕೆ ಆದಿಚುಂಚನಗಿರಿ ಶ್ರೀಗಳಿಂದ ಸಾಂತ್ವನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಕುಟುಂಬವನ್ನು ಭೇಟಿಯಾಗಿ ಆದಿಚುಂಚನಗಿರಿ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಆಗಮಿಸಿದ ಆದಿಚುಂಚನಗಿರಿ ಶ್ರೀಗಳು ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಕನ್ನಡ ಕಲಾ ಕ್ಷೇತ್ರಕ್ಕೆ ಪುನೀತ್ ರಾಜ್‍ಕುಮಾರ್ ಅವರು ನೀಡಿದ ಕೊಡುಗೆ ಅಪಾರ. ಮೊದೊಲಿನಿಂದಲೂ ರಾಜ್‍ಕುಮಾರ್ ಕುಟುಂಬಕ್ಕೆ ಮತ್ತು ಮಠಕ್ಕೆ ಅವಿನಾಭಾವ ಸಂಬಂಧ ಇದೆ ಎಂದರು. ರಾಜ್‍ಕುಮಾರ್ ಕುಟುಂಬದ ಕುಡಿ …

Read More »

ಕಾಂಗ್ರೆಸ್ ಮುಖಂಡ ರಾಮೋಜಿ ಗೌಡಗೆ ಐಟಿ ಶಾಕ್

ಆನೇಕಲ್(ಬೆಂ.ನಗರ ಜಿಲ್ಲೆ): ರಾಮೋಜಿ ಗೌಡ ಅವರಿಗೆ ಸೇರಿದ ಬಿಎಸ್‌ಆರ್‌ ಡೆವಲಪರ್ಸ್ ಹಾಗೂ ಟುಟೋರಿಯಲ್‌ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ಹೆಚ್‌ಎಸ್‌ಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮೋಜಿ ಗೌಡ ಹಿರಿಯ ಕಾಂಗ್ರೆಸ್ ನಾಯಕರ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಾರೆ.

Read More »

ಹೆತ್ತ ಮಗುವಿಗೆ ವಿಷ ಹಾಕಿ ಕೊಂದ ತಾಯಿ ಆತ್ಮಹತ್ಯೆಗೆ ಯತ್ನ-ಕೋಟೆ ನಾಡಲ್ಲೋಂದು ಅಮಾನವೀಯ ಕೃತ್ಯ

ಚಿತ್ರದುರ್ಗ: ಅಪ್ಪ, ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ತಾಯಿಯೊಬ್ಬಳು ಮಗುವಿಗೆ ವಿಷವುಣಿಸಿ ತಾನು ಸಹ ಆತ್ಮಹತ್ಯೆಗೆ ಯತ್ನಿಸಿರುವ ಅಮಾನವೀಯ ಕೃತ್ಯ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ತುಮಕೂರು ನಗರದ ಲೋಕೇಶ್ ಎಂಬ ವ್ಯಕ್ತಿಯು ತನ್ನ ಪತ್ನಿಯಾದ ವನಿತಗೆ ಭಾರೀ ಕಿರುಕುಳ ನೀಡುತ್ತಿದ್ದರೆಂಬ ಆರೋಪ ಪತ್ನಿಯ ಸಂಬಂಧಿಗಳಿಂದ ಕೇಳಿಬಂದಿದೆ. ನಿರಂತರವಾಗಿ ಪತಿಯ ಅವಾಚ್ಯ ಮಾತುಗಳು ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದ ವನಿತ ತನ್ನ ಮಗ ಚಾರ್ವಿತ್(4)ಗೆ ವಿಷವುಣಿಸಿದ ಬಳಿಕ ತಾನು ಕೂಡ ವಿಷ …

Read More »

ಗೌರಿ ಲಂಕೇಶ್‌ ಹತ್ಯೆ ಪ್ರಕರಣ-ಇಂದು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್‌ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ …

Read More »
Featured Video Play Icon

ಧಾರವಾಡದ ಡಿಸಿ ಕಚೇರಿ ಎದುರೇ ಡಿಶುಂ ಡಿಶುಂ…

ಧಾರವಾಡ: ಬಡ್ಡಿ ಹಣಕ್ಕಾಗಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಪೊಲೀಸರು ಮೂಕ ಪ್ರೇಕ್ಷಕರಾಗಿ ನೋಡುತ್ತ ನಿಂತಿದ್ದರು. ಜಿಲ್ಲಾಧಿಕಾರಿ ಬಳಿ ಬಂದ ಏಳೆಂಟು ಜನ ಹಣದ ವ್ಯವಹಾರಕ್ಕಾಗಿ ವಾಗ್ವಾದ ನಡೆಸಿದರು. ಈ ವೇಳೆ ಪೊಲೀಸ್ ಪೇದೆಯೊಬ್ಬರು ಬಂದು ಇಲ್ಲಿಂದ ಆಕಡೆ ಹೋಗಿ ಇದು ಡಿಸಿ ಕಚೇರಿ ಎಂದು ಹೇಳಿದರೂ ಕೇಳದ ಆ ಗುಂಪು ಅಲ್ಲೇ ವಾಗ್ವಾದ ನಡೆಸಿತು. ನಂತರ ಮಾತಿಗೆ ಮಾತು ಬೆಳೆದು ಎರಡೂ …

Read More »
You cannot copy content of this page
Click to listen highlighted text!