BigTv News
January 11, 2024
Breaking News, ಕರ್ನಾಟಕ, ರಾಜಕೀಯ
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರಿನ ರಿಸಲ್ಟ್ ನಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ನಾಯಕರುಗಳೊಂದಿಗೆ ಸಮಾಲೋಚನೆ ನಡೆಸಿದ್ದು ಇದೀಗ ಇಂದು ಬೆಳಿಗ್ಗೆ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಚಿಕ್ಕಮಗಳೂರಿನ ಹನಿಡೈಯೋ ಹೋಟೆಲ್ ರೆಸಾರ್ಟ್ ನಲ್ಲಿ ಎಚ್. ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈಗಾಗಲೇ ಮಂಡ್ಯ ಮೈಸೂರು ಜೆಡಿಎಸ್ ನಾಯಕರ ಜೊತೆ ಎಚ್ ಡಿ ಕುಮಾರಸ್ವಾಮಿ …
Read More »
BigTv News
January 10, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಕನ್ನಡದಲ್ಲಿ ಇಂಧನ ಬೆಲೆಯನ್ನು ಪ್ರದರ್ಶಿಸಲು ಪ್ರಾರಂಭಿಸಲಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ. ನಾನು ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸಭೆಯೊಂದರಲ್ಲಿ ಭಾಗವಹಿಸುತ್ತಿದ್ದಾಗ ಬೆಲೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪ್ರದರ್ಶಿಸಲಾಗುತ್ತದೆ ಎಂದು ಸ್ನೇಹಿತರೊಬ್ಬರು ಸೂಚಿಸಿದರು. ಕೂಡಲೇ ತೈಲ ಕಂಪನಿಗಳಿಗೆ ಬೆಲೆಗಳನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನ ನೀಡುವಂತೆ ನನ್ನ ಸಚಿವಾಲದ ಸಿಬ್ಬಂದಿಗೆ …
Read More »
BigTv News
January 10, 2024
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕರ್ನಾಟಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿ ಬಂದಿದ್ದ ಗುತ್ತಿಗೆದಾರರ ಆರೋಪಗಳು ಇದೀಗ ಮತ್ತೆ ಮುನ್ನೆಲೆಗೆ ಬರುತ್ತಿವೆ. ಉತ್ತರ ಕರ್ನಾಟಕ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುಭಾಷ ಪಾಟೀಲ್ ಅವರು ಧಾರವಾಡ ಪಾಲಿಕೆ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿ ಸಂಬಂಧ ಬಿಲ್ ಕೇಳಲು ಹೋದರೆ ಮೊದಲು ಲಂಚ ಕೊಡುವಂತೆ ಮಹಾನಗರ ಪಾಲಿಕೆಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಳುತ್ತಿದ್ದಾರೆ ಎಂದು ಅವರು ಬುಧವಾರ …
Read More »
BigTv News
January 10, 2024
ಕರ್ನಾಟಕ, ಸುದ್ದಿ, ಹಾಸನ
ಇಡಿ ದೇಶವೇ ಕಾತುರದಿಂದ ಕಾಯುತ್ತಿರುವ ದೊಡ್ಡ ದಿನ ಜನವರಿ 22. ಈ ಬಾರಿಯ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ.ಈಗಾಗಲೇ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದಕ್ಷಿಣದ ಕೆಲವೇ ಕೆಲವು ನಟರಿಗೆ ಆಹ್ವಾನ ಸಿಕ್ಕಿದೆ. ಕನ್ನಡದ ನಟ ರಿಷಬ್ ಶೆಟ್ಟಿ ಮತ್ತು ಯಶ್ ಅವರಿಗೆ ಆಹ್ವಾನ ಬಂದಿದೆ. ಇದರ ಜೊತೆಗೆ ನಟ ರಜನಿಕಾಂತ್, ಪ್ರಣಾಸ್ ಸೇರಿದಂತೆ …
Read More »
BigTv News
January 8, 2024
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಧಾರವಾಡದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದರು.ಶಕ್ತಿ ಯೋಜನೆಯಿಂದ ಜನ ದಟ್ಟಣೆ ಹೆಚ್ಚಾಗುತ್ತಿರುವ ವಿಚಾರ ನಾಲ್ಕು ವರ್ಷದಿಂದ ಹೊಸ ಬಸ್ ಖರೀದಿ ಆಗಿರಲಿಲ್ಲ. ಸಿಬ್ಬಂದಿ ನೇಮಕವೂ ಆಗಿರಲಿಲ್ಲ. ಪ್ರತಿದಿನ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಶಕ್ತಿ ಯೋಜನೆ ಆರಂಬ ಆಯ್ತು ಇದರಿಂದಾಗಿ ಆಗ ನಿತ್ಯ ಓಡಾಡುವವರ ಸಂಖ್ಯೆ 1 ಕೋಟಿ ಮೇಲಾಯ್ತು, ಹೀಗಾಗಿ ಸ್ವಲ್ಪ ಶಾಲಾ ಮಕ್ಕಳಿಗೆ ತೊಂದರೆ ಆಗಿದೆ. ಅವರಿಗೆ ಓಡಾಡಲು ಕಷ್ಟ ಆಗಿದೆ.ಈಗ …
Read More »
BigTv News
January 8, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ರಾಕಿಂಗ್ ಸ್ಟಾರ್ ಯಶ್ 38ನೇ ಹುಟ್ಟುಹಬ್ಬ. ಹೀಗಾಗಿ ದೇಶ ಮೂಲೆ ಮೂಲೆಯಲ್ಲಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಯುವಕರು ಮಧ್ಯರಾತ್ರಿ ಯಶ್ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಮೃತಪಟ್ಟಿದ್ದಾರೆ. ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ಈ ಮೂವರು ಮೃತ ಅಭಿಮಾನಿಗಳು. ಇನ್ನು ಮೂವರು ಯುವಕರು ಗಂಭೀರವಾಗಿ …
Read More »
BigTv News
January 8, 2024
ಕರ್ನಾಟಕ, ಸಿನಿಮಾ, ಸುದ್ದಿ
ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಆದರೆ, ಹುಟ್ಟುಹಬ್ಬದ ಸಂಭ್ರಮದಲ್ಲಿರಬೇಕಾದ ಯಶ್ ಅಭಿಮಾನಿಗಳಿಗೆ ಸೂತಕದ ಛಾಯೆ ಆವರಿಸಿದೆ. ಇದಕ್ಕೆ ಕಾರಣ ನೆಚ್ಚಿನ ನಟನ ಜನ್ಮದಿನದ ಆಚರಣೆಗೆ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ.ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ರಾಕಿಂಗ್ ಸ್ಟಾರ್ ಯಶ್ ಬರ್ತ್‌ಡೇ ಪ್ರಯುಕ್ತ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಯಶ್ ಅಭಿಮಾನಿಗಳು ದುರಂತ ಅಂತ್ಯ …
Read More »
BigTv News
January 8, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವ ಸಚಿವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಲಿ ಎಂದು ಹೇಳಿದರು. ಈ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ …
Read More »
BigTv News
January 3, 2024
ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ.ಇದೇ ಜನವರಿ 22 ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಿದ್ದವಾಗಿದ್ದರೆ. ಇತ್ತ ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಅರೆಸ್ಟ್ ಮಾಡ್ತಿದ್ದಾರೆಂದು, ಬಿಜೆಪಿ ಕಾರ್ಯಕರ್ತರು ಶ್ರೀರಾಮ ಜಯರಾಮ ಎಂದು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡ್ತಿದ್ದಾರೆ. ಇನ್ನು ಸಿದ್ದರಾಮಯ್ಯ …
Read More »
BigTv News
January 3, 2024
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರು ನಗರದಲ್ಲಿ ಮೂರು ದಿನಗಳ ಕಾಲ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಆಯೋಜನೆ ಮಾಡಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗೂ ರಫ್ತುದಾರರ ಸಮಾವೇಶಕ್ಕೆ ಚಾಲನೆ ಸಿಕ್ಕಿದೆ.ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ನಡೆಯಲಿದೆ. ಜನವರಿ 5 ರಿಂದ 7ರ ತನಕ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ …
Read More »