Breaking News

ಕರ್ನಾಟಕ

ಹುಬ್ಬಳ್ಳಿಯಲ್ಲಿ ಕಾಟೇರ್ ಎಲ್ಲ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ…..

ಹುಬ್ಬಳ್ಳಿ: ಈಗ ಎಲ್ಲಿ ಕೇಳಿದರೂ ಎಲ್ಲಿ ನೋಡಿದರೂ ಒಂದೇ ಸೌಂಡು ಅದು ಕಾಟೇರ. ಹೌದು, ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಸಿ ಬೊಬ್ಬರಿಯುತ್ತಿದೆ. ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಟ ದರ್ಶನ ಅಭಿಮಾನಿಗಳು ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸಿನಿಮಾ ನೋಡಿದ ಪ್ರತಿಯೊಬ್ಬರಿಗೆ ಇಷ್ಟವಾಗುತ್ತಿದೆ. ಎಲ್ಲೆಡೆ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗ್ತಿದೆ. ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟಿದ್ದಾರೆ. ಅಲ್ದೇ ನಟ ದರ್ಶನ …

Read More »

ಈ ಸುತ್ತೋಲೆ ಅಪಘಾತ ಪರಿಹಾರ ನಿಧಿಯ ಪರಿಹಾರ ಮೊತ್ತವನ್ನು ಹೆಚ್ಚಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ……

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಆದೇಶ 1/1/2024ರಿಂದ ಜಾರಿಗೆ ಬರುತ್ತದೆ. ಈ ಕುರಿತು ಕರಾರಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ. ವಿ. ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ/ ಅಧ್ಯಕ್ಷರು ಕರಾರಸಾ ನಿಗಮ ಪ್ರಯಾಣಿಕರ ಅಪನಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಅಪಘಾತ ಪರಿಹಾರ …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ….

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖಾ ಆಯೋಗವು ಈ ಪ್ರಕರಣದಲ್ಲಿ ದೂರುದಾರರ ಮನವಿಯ ಹಿನ್ನಲೆಯಲ್ಲಿ ರಾಜಕೀಯ ನಾಯಕರಾದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗದ ಮುಂದೆ ದೂರುದಾರರರು ರಾಜಕೀಯ ನಾಯಕರು ತಮ್ಮ …

Read More »

ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ನೀಡಿರುವ ಹೇಳಿಕೆಗೆ ಹೆಚ್‌ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ…..

ಬೆಂಗಳೂರು: ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ನೀಡಿರುವ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವ ಶ್ರೀ …

Read More »

ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್‌ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ….

ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್‌ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ ಬಿದ್ದಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿ ಕನ್ನಡ ಚಲನಚಿತ್ರ ಕಪ್ ಗೆದ್ದು ಬೀಗಿದೆ. ಡಿಸೆಂಬರ್ 24 ರಿಂದ ಡಿಸೆಂಬರ್ 26 ರವರೆಗೆ ನಡೆದ ಅದ್ದೂರಿ ಕನ್ನಡ ಚಲನಚಿತ್ರ ಕಪ್‌ಗೆ ತೆರೆ ಬಿದ್ದಿದೆ. ಶಿವರಾಜ್‌ ಕುಮಾರ್, ಸುದೀಪ್, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ …

Read More »

ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023….

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ಅರಮನೆ ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನ ನವರು ಉದ್ಘಾಟಿಸಿ, ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತ ಪಡಿಸಿದರು. ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ …

Read More »

ಪ್ರಧಾನಿ ಅಭ್ಯರ್ಥಿಗಳು ಆಗುವವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ: ರಾಜ್ಯ ಬಿಜೆಪಿ.

ಬೆಂಗಳೂರು: I.N.D.I. ಮೈತ್ರಿಕೂಟದಲ್ಲಿ ಕಿಚಡಿ ಪಕ್ಷಗಳು ಲೋಕಸಭಾ ಚುನಾವಣೆಗೂ ಮುನ್ನವೇ ಛಿದ್ರವಾಗಿವೆ. ಇದರಲ್ಲಿ ಪ್ರಧಾನಿ ಅಭ್ಯರ್ಥಿಗಳು ಆಗುವವರಿಗೆ ಸ್ಪರ್ಧೆ ಮಾಡಲು ಕ್ಷೇತ್ರವೇ ಇಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ. ಇಂಡಿ ಕೂಟದಲ್ಲಿ ಒಗ್ಗಟ್ಟು ಇಲ್ಲ, ಪ್ರಧಾನಿ ಅಭ್ಯರ್ಥಿಯೂ ಇಲ್ಲ.ನಿಗಮ ಮಂಡಳಿ ವಿಚಾರ ಕಾಂಗ್ರೆಸ್‌ ಕ್ಕೆ ಕಲೆಕ್ಷನ್‌ನ ಹೊಸ ಮಾರ್ಗ ತೆರೆದಿದೆ. ಬಿಕ್ಕಟ್ಟಿನ ನಡುವೆ ಶಾಸಕರಿಂದಲೂ ಕಾರ್ಯಕರ್ತರಿಂದಲೂ ಇಡುಗಂಟು ಮಾತ್ರ ಬಿಡದೇ ಬರುತ್ತಿರುವ ಕಾರಣ ಬಿಕ್ಕಟ್ಟು ಬಿಕ್ಕಟ್ಟಾಗಿಯೇ ಇರಲಿ ಎಂಬುದು ಕಾಂಗ್ರೆಸ್ …

Read More »

ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ: ಸಿದ್ದರಾಮಯ್ಯ.

ಮೈಸೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23 ರಂದು ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ …

Read More »

ಕಮಲ ಅರಳಲಿದೆ, ಕಾಂಗ್ರೆಸ್‌ ಮುಳಗಲಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಭವಿಷ್ಯ…

ಬೆಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದಾಖಲೆಯ ಬಹುಮತದೊಂದಿಗೆ ಮಗದೊಮ್ಮೆ ವಿರಾಜಮಾನರಾಗಿ ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ದುಡಿಯುವುದು ಶತಸಿದ್ಧ. ಕಮಲ ಅರಳಲಿದೆ, ಕಾಂಗ್ರೆಸ್‌ ಮುಳಗಲಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಭವಿಷ್ಯ ನುಡಿದಿದೆ. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ರಾಜ್ಯದ ಅಭಿವೃದ್ಧಿಯನ್ನೇ ಯೋಚಿಸದೆ ಅರಾಜಕತೆ ಸೃಷ್ಟಿಸಿ ಸಮಸ್ಯೆಗಳ ಸಾಗರವನ್ನೇ ಹುಟ್ಟು ಹಾಕಿ ಎಲ್ಲಾ ವರ್ಗದ ಜನರಿಂದ ಜನಾಕ್ರೋಶ ಎದುರಿಸುತ್ತಿದೆ. ಜನರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಸಿದ್ದರಾಮಯ್ಯರವರಿಗೆ ತಮ್ಮ ದುರಾಡಳಿತದಿಂದಾಗಿ ಲೋಕಸಭಾ …

Read More »

ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ವಿರೋಧ ಕಟ್ಟಿಕೊಂಡು ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ: ರಾಜ್ಯ ಬಿಜೆಪಿ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸರ್ವ ಜನಾಂಗದ ವಿರೋಧ ಕಟ್ಟಿಕೊಂಡು ಕರ್ನಾಟಕವನ್ನು ದಿವಾಳಿ ಮಾಡುತ್ತಿದೆ. ಇದಕ್ಕೆ ಪರಿಹಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತದಾರರು ತಕ್ಕ ಪಾಠ ಶೀಘ್ರದಲ್ಲೇ ಕಲಿಸಿಕೊಡುತ್ತಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್‌ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕರ್ನಾಟಕದಲ್ಲಿ ಶೈಕ್ಷಣಿಕ ಮೂಲಸೌಕರ್ಯ ಸಂಪೂರ್ಣ ಕುಸಿದಿದೆ. ಅದರಲ್ಲೂ ಪರಿಶಿಷ್ಟ ಜಾತಿ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ವಸತಿ ಶಾಲೆಗಳ ಸ್ಥಿತಿಯಂತೂ ದಯನೀಯವಾಗಿದೆ. ವಿಧಾನ ಮಂಡಲ …

Read More »