BigTv News
September 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಿಸಿದಂತೆ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದೇ ವೇಳೆ ಅವರು, ಕಾನೂನು ತಜ್ಞರ ಸಲಹೆ ಪಡೆದುಕೊಳ್ಳುವವರೆಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ನೀರು ಹರಿಸುತ್ತೇವೆ. ಈ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ವಿಚಾರವಾಗಿ ಇಂದು ಕರೆಯಲಾಗಿರುವ …
Read More »
BigTv News
September 11, 2023
ಕರ್ನಾಟಕ, ಚಿತ್ರದುರ್ಗ, ಸುದ್ದಿ
ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಸೇರಿ ಐವರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಜೊತೆಗೆ ಕೆಲವರು ಗಾಯಗೊಂಡಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45) , ರಾಯಚೂರಿನ ಮಸ್ಕಿ ಮೂಲದ …
Read More »
Shaikh BigTv
September 8, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅಂತರ ರಾಜ್ಯ ಕಳ್ಳರು ಲಿಕ್ವೀಡ್ ಚಿನ್ನವನ್ನು ಕದ್ದು ಪರಾರಿ ಯಾಗಿದ್ದರು ಅವರನ್ನು ಬಂಧಿಸಿದ ಸೂಪರ್ ಪೊಲೀಸ್.. ಹುಬ್ಬಳ್ಳಿಯ ಮರಾಠ ಗಲ್ಲಿಯಲ್ಲಿ ನಡೆದಿದ್ದ ಘಟನೆ ಬಂಗಾರ ಅಂಗಡಿ ಶೆಟರ್ ಮುರಿದು ಮಷಿನ್ ನಲ್ಲಿ ಕರಗಿ ಅದರಲ್ಲಿ ಇದ್ದ 61.80ಲಕ್ಷ ರೂ ಮೌಲ್ಯದ ಗಟ್ಟಿ ಬಂಗಾರವನ್ನು ಕಳುವು ಮಾಡಿ ಪರಾರಿಯಾಗಿದ್ದರು..ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ, ಪ್ರಕರಣದ ಪತ್ತೆಗಾಗಿ ಶಹರ ಪೊಲೀಸ್ ಠಾಣೆಯ PSI ವಿನೋದ ದೊಡ್ಡಲಿಂಗಪ್ಪವರ, ಇನ್ಸ್ಪೆಕ್ಟರ್ ಎ. ಎಮ್. …
Read More »
Shaikh BigTv
September 7, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಳ್ಳತನ ಹಾವಳಿ ಹೆಚ್ಚುತ್ತಲೇ ಇದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೂಡ ಹಾವಳಿ ಹೆಚ್ಚಾಗಿದ್ದು, ಮನೆಗಳ್ಳನನ್ನು ಬಂಧಿಸುವಲ್ಲಿ ಧಾರವಾಡ ಪೊಲೀಸರು ಯಶಸ್ವಿಯಾಗಿದ್ದಾರೆ.ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮಲ್ಲಯ್ಯ ಮಠಪತಿ ಬಂಧಿತ ಆರೋಪಿಯಾಗಿದ್ದು, ಮೂರು ಪ್ರಕರಣಗಳಲ್ಲಿ ಒಟ್ಟು 123.8 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.ಅಂದಾಜು 5 ಲಕ್ಷ 56 ಸಾವಿರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು,ಕೀಲಿ ಹಾಕಿದ ಮನೆಗಳನ್ನು ಟಾರ್ಗೆಟ್ …
Read More »
BigTv News
September 6, 2023
Breaking News, ಕರ್ನಾಟಕ
ಹಾಸನ: ಆಲೂರು ತಾಲೂಕಿನ ಹಳ್ಳಿಯೂರಿನಲ್ಲಿ ಭೀಮ ಎಂಬ ಕಾಡಾನೆ ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಶಾರ್ಪ್ ಶೂಟರ್ ಹೆಚ್. ವೆಂಕಟೇಶ್ ಅವರ ಕುಟುಂಬಕ್ಕೆ ಪ್ರತಿಷ್ಠಾನದಿಂದ 10 ಲಕ್ಷ ರೂ. ವಿಶೇಷ ಪರಿಹಾರ ಸೇರಿ ಒಟ್ಟು 25 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ಹೊನ್ನವಳ್ಳಿಯಲ್ಲಿರುವ ವೆಂಕಟೇಶ್ ಅವರ ಮನೆಗೆ ಗುರುವಾರ ಭೇಟಿ ನೀಡಿದ ಸಚಿವರು, ಮೃತ ವೆಂಕಟೇಶ್ ಅವರ …
Read More »
Shaikh BigTv
September 5, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಮತ್ತೇ ನೆತ್ತರು ಹರಿದಿದ್ದು ಸ್ಮಾರ್ಟ್ ವಾಚ್ ವಿಚಾರಕ್ಕೇ ಸಂಬಂಧಿಸಿದಂತೆ ಯುವಕನಿಗೆ ಚಾಕು ಇರಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟೇಶ್ವರ ಕಾಲೋನಿಯಲ್ಲಿ ಈಗಷ್ಟೇ ನಡೆದಿದೆ.ವೆಂಕಟೇಶ್ವರ ಕಾಲೋನಿಯಲ್ಲಿ ಇಂದು ರಾತ್ರಿ 8 30ಕ್ಕೇ ಸ್ಮಾರ್ಟ್ ವಾಚ್ ವಿಚಾರಕ್ಕೇ ಮಂಜು ಹಾಗೂ ಅಸ್ಲಂ ಮಧ್ಯ ಜಗಳ ಆರಂಭವಾಗಿದೆ. ಜಗಳ ಅತಿರೇಕಕ್ಕೆ ಹೋದ ಪರಿಣಾಮ ಅಸ್ಲಂನ …
Read More »
Shaikh BigTv
August 30, 2023
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಈ ಹಿಂದೆ 2021 ರಲ್ಲಿ ಪೊಲೀಸ್ ಇಲಾಖೆಯಲ್ಲಿ ಹಿಂದಿನ ಆಯುಕ್ತರು ಲಂಚ ಪಡೆದ ಪ್ರಕರಣದಲ್ಲಿ ಮೂರು ಪೊಲೀಸರಿಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.ಹುಬ್ಬಳ್ಳಿಯ ದುರ್ಗಬೈಲ್ ಬಳ್ಳಿ ಆಟೋ ಚಾಲಕನನ್ನನು ಹಿಡಿದು ಕುಡಿದಿದ್ದಕ್ಕೆ ಅವನ ಮೇಲೆ ಕೇಸು ಹಾಕದೆ ಲಂಚ ಪಡೆದು ಬಿಟ್ಟಿದ್ದರು ಹಾಗಾಗಿ ಆ ಪರಕರಣದಲ್ಲಿ ಆರೋಪ ರವಿ ವಡ್ಡರ ಹಾಗೂ ಇನಿಬ್ಬರ ಪೊಲೀಸ್ ರ ಮೇಲೆ ಸಾಬೀತ್ತು ಆಗಿದ್ದಕ್ಕೆ ಅಮಾನತು ಮಾಡಿ ಆದೇಶ ಹೊರಡಿಸಿದರು.ಈ ಆದೇಶವು ಮೇ 10 …
Read More »
BigTv News
August 28, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಭಾರತೀಯ ಬ್ಯಾಟರ್ ಕರುಣ್ ನಾಯರ್ ಎರಡು ದಶಕಗಳ ಕಾಲ ರಾಜ್ಯವನ್ನು ಪ್ರತಿನಿಧಿಸಿದ ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ದಿಂದ ಬೇರ್ಪಟ್ಟಿದ್ದಾರೆ. ಬಲಗೈ ಬ್ಯಾಟರ್ ಮುಂಬರುವ ದೇಶೀಯ ಋತುವಿನಲ್ಲಿ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ (ವಿಸಿಎ) ನೊಂದಿಗೆ ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಾರೆ, ಅವರು ಭಾರತೀಯ ಡ್ರೆಸ್ಸಿಂಗ್ ಕೋಣೆಗೆ ಹಿಂದಿರುಗುವ ಮಾರ್ಗವನ್ನು ಹುಡುಕುತ್ತಿದ್ದಾರೆ.
Read More »
BigTv News
August 26, 2023
ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: ಧಾರವಾಡ ಜಿಲ್ಲೆಯ ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಗಣೇಶೋತ್ಸವದ ನಿಮಿತ್ತ ಅವಳಿ ನಗರ ಹಾಗೂ ಜಿಲ್ಲೆಯಲ್ಲಿ ಗಣೇಶ ವಿಗ್ರಹಗಳನ್ನು ತಯಾರಿಸುವ ತಯಾರಕರ, ಮಾರಾಟಗಾರರ, ಪರಿಸರವಾದಿಗಳ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು. ಗಣೇಶ ಚತುರ್ಥಿಯಂದು …
Read More »
BigTv News
August 24, 2023
ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಬೈಕ್ನಲ್ಲಿ ಬಂದ ಯುವಕನೋರ್ವ ಯುವತಿಯೋರ್ವಳನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ (18) ಕೊಲೆಗೀಡಾದ ಯುವತಿ. ಕೃತ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು, ಈತನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗೌರಿ ಪುತ್ತೂರಿನ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಪದ್ಮರಾಜ್ ಮತ್ತು ಗೌರಿ ಪರಿಚಯದವರಾಗಿದ್ದರು. ಅಲ್ಲದೇ ಈ …
Read More »