Breaking News

ಕರ್ನಾಟಕ

ದಲಿತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸುನೀಲ್ ಕುಮಾರ ಆರೋಪ..

ಬೆಂಗಳೂರು: ಎಸ್​​ಸಿಎಸ್​ಪಿ, ಟಿಎಸ್​ಪಿ(Scheduled Caste Sub Plan and Tribal Sub Plan)ಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂಬ ನಿಯಮ ಇದ್ದರೂ ಕೂಡ ಅದನ್ನು ಉಲ್ಲಂಘಿಸಿ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಮೂಲಕ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ …

Read More »

ಗಾಂಜಾ ಲೇಪಿತ ಚಾಕೊಲೇಟ್ ಮಾರಾಟ ಮಾಡುತಿದ್ದ ಮನೆ ಮೇಲೆ ಧಾಳಿ…

ರಾಯಚೂರು:ನಗರದಲ್ಲಿ ಗಾಂಜಾ ಲೇಪಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಚಯ್ಯ ಸ್ವಾಮಿ ಹಾಗೂ ಅಂಬರಯ್ಯ ಬಂಧಿತರು. ನಗರದ ಎಲ್.ಬಿ.ಎಸ್ ನಗರ ಮತ್ತು ಇಂಡಸ್ಟ್ರೀಯಲ್ ಏರಿಯಾ ಸೇರಿದಂತೆ ನಗರದ ನಾನಾ ಕಡೆಗಳಲ್ಲಿ ಗಾಂಜಾ ಲೇಪಿತ ಚಾಕೊಲೇಟ್ ಮಾರಾಟ ಮಾಡಲಾಗುತ್ತಿತ್ತು. ಇದರ ಖಚಿತ ಮಾಹಿತಿ ಮೇರೆೆಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮಾಲು ಜಪ್ತಿ ಮಾಡಿದ್ದಾರೆ. 6 ಗ್ರಾಂ ತೂಕದ …

Read More »

ಪತ್ನಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ…

ಆನೇಕಲ್:ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ನಂತರ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೊನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (47) ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆ. ವೆಂಕಟಸ್ವಾಮಿ(53) ಪತ್ನಿಯನ್ನ ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಪತಿ. ಇನ್ನೂ ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಅಷ್ಟೇ ಅಲ್ಲ ಈ ದಂಪತಿ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದರು. ರಾತ್ರಿ ಕ್ಷುಲ್ಲಕ …

Read More »

50ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಪಕ್ಷದ ನಾಯಕರ ಭೇಟಿ :ಡಿಕೆ ಶಿವಕುಮಾರ್

ನವದೆಹಲಿ:2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸುಮಾರು 50 ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಇಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೆಂಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ಭಾಗವಹಿಸುವ ಸಾಧ್ಯತೆಯಿದೆ. ಕರ್ನಾಟಕ ಡಿಸಿಎಂ …

Read More »

ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈವಿರುದ್ಧ ಎಫ್ಐಆರ್ ದಾಖಲು…

ಬೆಂಗಳೂರು: ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸೇರಿ ನಾಲ್ವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ರಿಯಲ್‌ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ, ಸಹಚರರಾದ ತಾರಿಕ್ ರೆಹಾನ್, ಫರ್ಹಾನ್ …

Read More »

ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರಕ್ಕೆಪತ್ರಬರೆದ ವಾಯವ್ಯ ಸಾರಿಗೆ ಸಂಸ್ಥೆ…

ಹುಬ್ಬಳ್ಳಿ:ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಶಕ್ತಿ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದರ ಯಶಸ್ಸಿನ ಹಿಂದೆ ಸಾರಿಗೆ ಇಲಾಖೆ ಸಿಬ್ಬಂದಿಯ ಪರಿಶ್ರಮವೂ ಕಾರಣವಾಗಿದೆ. ಆದ್ರೆ ಈಗ ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ಇಲಾಖೆ ತನ್ನ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ.ಅದರಲ್ಲೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ. ತನ್ನ ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರಕ್ಕೆ 65 ಕೋಟಿ ಹಣಕಾಸು ನೆರವು ಬೇಕಿದೆ. …

Read More »

ಧರ್ಮಸ್ಥಳದ ಕುರಿತು ತೇಜೋವಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು:ಗುರುನಾಥ್ ಉಳ್ಳಿಕಾಶಿ

ಹುಬ್ಬಳ್ಳಿ: ಸೌಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳದ ಕುರಿತು ತೇಜೋವಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಮುಖ್ಯಸ್ಥ ಗುರುನಾಥ್ ಉಳ್ಳಿಕಾಶಿ ಆಗ್ರಹಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧರ್ಮದ ಹೆಸರಲ್ಲಿ ಧರ್ಮಸ್ಥಳವಾಗಿದೆ. ಈಗ ಅದರ ಹೆಸರು ಕೆಡಿಸುವ ಕೆಲಸವಾಗುತ್ತಿದೆ. ಸಿಬಿಐ ನ್ಯಾಯಾಲಯ ಸಂತೋಷ ರಾವ್ ನಿರಪರಾಧಿ ಎಂಬ ಆದೇಶ ನೀಡಿತು. ಆದರೆ ಆರೋಪಿ ಯಾರು …

Read More »

ಹ್ಯಾಟ್ರಿಕ್‌ ಹೀರೋ ಡಾ. ಶಿವರಾಜ್‌ ಕುಮಾರ್ ಅವರು ಇನ್ಮುಂದೆ ನಂದಿನಿ ರಾಯಭಾರಿ…!

ಬೆಂಗಳೂರು: ಹ್ಯಾಟ್ರಿಕ್‌ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್ ಅವರು ಇನ್ಮುಂದೆ ನಮ್ಮ ಹೆಮ್ಮೆ ನಂದಿನಿಯ ಪ್ರಚಾರ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ.ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್ ಅವರೇ ಖುದ್ದು ಶಿವರಾಜ್‌ಕುಮಾರ್ ಅವರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಭೀಮಾ ನಾಯ್ಕ್ ಅವರು, ಕರುನಾಡ ಚಕ್ರವರ್ತಿ, ಹೀರೋ ಶಿವರಾಜ್ ಕುಮಾರ್ “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಅವರಿಗೆ ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ …

Read More »

ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧಾರ…

ಬೆಂಗಳೂರು: ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ರಾಜ್ಯ ವಿಧಾನ ಸಭೆ ಚುನಾವಣೆ ನಡೆದು 2.5 ತಿಂಗಳು ಕಳೆಯುತ್ತಾ ಬಂದರೂ ಪ್ರತಿಪಕ್ಷ ನಾಯಕ ಯಾರು ಎಂಬುದನ್ನು ಬಿಜೆಪಿ ನಿರ್ಧರಿಸಿಲ್ಲ. ಇದು ಕಾಂಗ್ರೆಸ್​​​​​ನವರ ಟೀಕೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್​​, ಪ್ರತಿಪಕ್ಷ ಸ್ಥಾನ ಸೇರಿದಂತೆ ರಾಜ್ಯಾಧ್ಯಕ್ಷ ಹಾಗೂ ಇನ್ನಿತರ ಪ್ರಮುಖ ಹುದ್ದೆಗಳನ್ನು ತುಂಬಲು ನಿರ್ಧರಿಸಿದೆ. ಈಗಾಗಲೇ ಹೈಕಮಾಂಡ್, ರಾಷ್ಟ್ರೀಯ ಮಾಜಿ ಪ್ರಧಾನ …

Read More »

ಡಾ.ಬಿ.ಎಚ್ ಮೋರೆ ಅವರಿಗೆ ಬೀಳ್ಕೊಡುಗೆ ಸಮಾರಂಭ

ಧಾರವಾಡ : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಭೀಮರಾವ್ ಎಚ್ ಮೋರೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಹಾಗೂ ಭೀಮರಾವ್ ಎಚ್ ಮೋರೆ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ನಳಿನಿ ಬೆಂಗೇರಿ ಮಾತನಾಡಿ, ಕಳೆದ 30 ವರ್ಷಗಳಿಂದ ಇತಿಹಾಸ ಪ್ರಾಧ್ಯಾಪಕರಾಗಿ ಬಿ.ಎಚ್. ಮೋರೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶ್ರಮವಹಿಸಿ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದರು. ಉತ್ತಮ …

Read More »