BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಇದನ್ನು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಅನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಅನ್ನಬೇಕೋ ಗೊತ್ತಿಲ್ಲ. ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಚಪ್ಪಲಿ ಕಳೆದು ಹೋಗಿದೆ. ಹುಡುಕಿಕೊಡಿ ಎಂದು ದೂರು ನೀಡಿರುವ ವಿಚಿತ್ರ ಘಟನೆ ತಡರಾತ್ರಿ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ನೇತೃತ್ವದಲ್ಲಿ ರಾಷ್ಟ್ರೀಯ ಪ್ರತಿಪಕ್ಷಗಳ ಎರಡನೇ ಹಂತದ ಸಭೆ ನಡೆಯಲಿದೆ. ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ಯಾರೆಲ್ಲ ಭಾಗಿ?: ಕಾಂಗ್ರೆಸ್, ಎಎಪಿ, ಟಿಎಂಸಿ, ಡಿಎಂಕೆ, …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಷ್ಟ್ರೀಯ ಮಟ್ಟದ ಮಹಾಘಟ್ ಬಂಧನ್ ನಾಯಕರು ಸೋಮವಾರದಿಂದ ಎರಡು ದಿನ ನಗರದಲ್ಲಿ ಮಹತ್ವದ ಸಭೆ ನಡೆಸಲಿದ್ದು, ಇದಕ್ಕಾಗಿ ಅಳವಡಿಸಿದ್ದ ಸ್ವಾಗತ ಕೋರುವ ಫ್ಲಾಗ್ ಹಾಗೂ ಬ್ಯಾನರ್ಗಳನ್ನ ಕನ್ನಡ ಪರ ಸಂಘಟನೆಗಳು ಹರಿದು ಹಾಕಿವೆ. ದೇಶದ ವಿವಿಧ ರಾಜ್ಯಗಳ ಬಿಜೆಪಿಯೇತರ ಪಕ್ಷಗಳು ನಾಳಿನ ಸಭೆಯಲ್ಲಿ ಭಾಗಿಯಾಗಲಿದ್ದು, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಕರೆಗೆ ಬೆಂಬಲಿಸಿ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿವಿದ ರಾಜ್ಯಗಳ ಹಾಲಿ ಹಾಗೂ ಮಾಜಿ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆ್ಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. …
Read More »
BigTv News
July 17, 2023
News, ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಚಿಕನ್ ಊಟ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆ ಬೀದರ್ನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು …
Read More »
BigTv News
July 17, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಸಿಂಧನೂರು ತಾಲೂಕಿನ ಬೆಂಗಾಲಿ ಕ್ಯಾಂಪ್-2ರಲ್ಲಿ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಗುಂಪು ಧಾರ್ಮಿಕ ವಿಚಾರವಾಗಿ ಪೋಸ್ಟ್ ಮಾಡಿತ್ತು. ಇದನ್ನು ಮತ್ತೊಂದು ಕೋಮಿನವರು ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಂಧನೂರು ಗ್ರಾಮೀಣ …
Read More »
bigtvnews22
July 17, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಮಹಾ ನಗರದಲ್ಲಿ 26 ಪ್ರತಿಪಕ್ಷ ನಾಯಕರು ಸೇರುತ್ತಿದ್ದೇವೆ. 2ನೇ ಸಭೆ ಇದಾಗಿದೆ ಎಂದು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು “ನಾವು ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಇದೊಂದು ಗೇಮ್ ಚೇಂಜರ್ ಸಭೆಯಾಗಲಿದೆ. ಇಲ್ಲಿ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ. ರಾಷ್ಟ್ರೀಯ ಪ್ರತಿಪಕ್ಷ ನಾಯಕರೆಲ್ಲ ಭಾಗವಹಿಸುತ್ತಿದ್ದು, ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದೇವೆ” ಎಂದು ತಿಳಿಸಿದರು.ಪಕ್ಷಗಳು ಒಂದೇ ಸಾಮಾನ್ಯ …
Read More »
bigtvnews22
July 17, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಇಲ್ಲಿನ ರೇಲ್ವೆ ನಿಲ್ದಾಣ ರಸ್ತೆಯಲ್ಲಿನ ಪ್ರಧಾನ ಅಂಚೆ ಕಚೇರಿ ಬಳಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ದುರ್ಗೆಶ ಹನಮಂತಪ್ಪ ಮಂಗೋಡಿ (40) ಎಂಬುವನ ಶವ ಎಂದು ಗೊತ್ತಾಗಿದೆ. ನಗರದಲ್ಲಿ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಈತನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.ಶವದ ಮೇಲೆ ಕೆಲವು ರಕ್ತದ ಕಲೆಗಳು ಕಂಡು ಬಂದಿವೆ. ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ ದಿಡಿಗಿನಾಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು …
Read More »
bigtvnews22
July 16, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ 6 ತಿಂಗಳಿನಿಂದ ಕರ್ನಾಟಕ ರಾಜ್ಯ ಸ ಅಭಿವೃದ್ಧಿ ಸಂಘ ಸ್ಥಾಪನೆಯಾಗಿದೆ.ಈ ಸಂಘದಲ್ಲಿ ನಿವೃತ್ತಿಯಾದ ನೌಕರರು ಒಗ್ಗೂಡಿಸಿ ಈ ಸಂಘ ಪ್ರಾರಂಭಿಸಿದಿರಿ, ಸಂಘಕ್ಕೆ ಶುಭ ಹಾರೈಸುತ್ತೇನೆಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸ ಅಭಿವೃದ್ಧಿ ಸಂಘ ವತಿಯಿಂದ ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲರು ನಿವೃತ್ತಯಾದ ಮೇಲೂ …
Read More »
BigTv News
July 16, 2023
News, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ :ಶ್ರೀ ಮಹದೇವಪ್ಪ ಬಸಲಿಂಗಪ್ಪ ಹಳ್ಳಿ ಪ್ರಥಮ ದರ್ಜೆ ಕಾಲೇಜು, ಅಣ್ಣಿಗೇರಿ , ಮಹಿಳಾ ಘಟಕದ ವತಿಯಿಂದ ವಿದ್ಯಾರ್ಥಿನಿಯರಿಗೆ ವಿವಿಧ ಆಟಗಳನ್ನು ಏರ್ಪಡಿಸಲಾಗಿತ್ತು. ಜೊತೆಗೆ ನೈಲ್ ಆರ್ಟ್, ಮೆಹಂದಿ, ಕೇಶ್ ವಿನ್ಯಾಸ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ಸುಕತೆಯಿಂದ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಸಂಯೋಜಕರಾದ ವಿಜಯಲಕ್ಷ್ಮಿ ಪಾಟೀಲ ಅವರು, ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಲ್ಲಿ ಹೆಚ್ಚು ಆತ್ಮವಿಶ್ವಾಸ ತುಂಬುತ್ತವೆ ಮತ್ತು ತಮ್ಮ ಪ್ರತಿಭೆ ಗುರುತಿಸಿಕೊಳ್ಳಲು ನೆರವಾಗುತ್ತವೆ ಎಂದರು. ಶ್ರೀಮತಿ ದಿಲ್ಲಶದ …
Read More »