Breaking News

ಕರ್ನಾಟಕ

ಪ್ರಧಾನಿ ಮೋದಿಯವರನ್ನ ಸೋಲಿಸಬೇಕೆಂದು ಪ್ರತಿಪಕ್ಷಗಳು ಒಗ್ಗಟ್ಟಾಗುತ್ತಿವೆ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುಯವಾಗಿಲ್ಲ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದ ತಮ್ಮ‌ ನಿವಾಸದ ಬಳಿ ಮಾತನಾಡಿದ ಅವರು, ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, …

Read More »

ಬಿಗ್ ಟಿವಿ ನ್ಯೂಸ್ ಬಿಗ್ ಇಂಪ್ಯಾಕ್ಟ್.. ಮಟ್ಕಾ ದಂಧೆ ನಡೆಸುತ್ತಿದ್ದ ದಂಧೆಕೋರರು ಅರೆಸ್ಟ್…?

ಮೊನ್ನೆ ತಾನೆ ಪ್ರಸಾರವಾದ ಬಿಗ್ ಟಿವಿ ನ್ಯೂಸ್ ಸುದ್ದಿಗೆ ಎಚ್ಚೆತ್ತುಕೊಂಡ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.ಎಗ್ಗಿಲ್ಲದೆ ಹಾಡು ಹಗಲೇ ಮಟ್ಕಾ ದಂದೆ ನಡೆದರು ಅದು ಪೊಲೀಸರ ಗಮನಕ್ಕೆ ಬಂದಿದ್ಯೋ ಇಲ್ವೋ ಗೊತ್ತಿಲ್ಲಾ. ಆದ್ರೆ ಬಿಗ್ ಟಿವಿ ನ್ಯೂಸ್ ಪ್ರಸಾರ ಮಾಡಿರುವ ಸುದ್ದಿಯಿಂದ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಮಟ್ಕಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿ, ಅವರಿಂದ 5700 ನಗದು ವಶಪಡಿಸಿಕೊಂಡಿದ್ದಾರೆ. ಕಾನೂನು ಭಾಹಿರ ಚಟುವಟಿಕೆಯಲ್ಲಿ ಯಾರೇ ಬಾಗಿಯಾಗಿದ್ದರು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದಾಗಿ …

Read More »

ದಿಲ್ಲಿಯಲ್ಲಿ ರಸ್ತೆಗೆ ನುಗ್ಗಿದ ನೀರು: ವಿದ್ಯುತ್ ಹರಿದು ಹಲವು ನಾಗರಿಕರಿಗೆ ವಿದ್ಯುದಾಘಾತ.

ಹೊಸದಿಲ್ಲಿ: ಯಮುನಾ ನದಿ ಉಕ್ಕೇರಿ ರಸ್ತೆಗಳಿಗೆ ಹರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಮನೆಗಳು, ಮಳಿಗೆಗಳು ಹಾಗೂ ಕಾರುಗಳು ಮುಳುಗಿ, ದಿಲ್ಲಿ ನಿವಾಸಿಗಳು ಅದರಿಂದ ಪಾರಾಗಲು ಹರಸಾಹಸ ಪಡುತ್ತಿದ್ದಾರೆ. ಈ ಸಂಕಷ್ಟದ ನಡುವೆಯೇ, ರಸ್ತೆಯಲ್ಲಿ ಹರಿಯುತ್ತಿರುವ ನೀರಿನಲ್ಲಿ ವಿದ್ಯುತ್ ಕಂಬಗಳಿಂದ ವಿದ್ಯುತ್ ಪ್ರವಹಿಸುತ್ತಿದ್ದು, ದಿಲ್ಲಿ ನಿವಾಸಿಗಳ ಗೋಳು ಮತ್ತಷ್ಟು ಹೆಚ್ಚಾಗಿದೆ. ಯಮುನಾ ನದಿಯ ಬದಿ ರಸ್ತೆಯಲ್ಲಿ ಓಡಾಡಬೇಕಾದ ಅನಿವಾರ್ಯಕ್ಕೆ ಈಡಾಗಿರುವ ದಿಲ್ಲಿ ನಾಗರಿಕರು ದಿಲ್ಲಿಯ ಐಟಿಒ ಬಳಿ ಬರಿಗಾಲಲ್ಲಿ ನಡೆಯುವಾಗ ವಿದ್ಯುತ್‌ …

Read More »

ಎಸ್ಸಿ ಎಸ್ಟಿ ಗುತ್ತಿಗೆದಾರರಿಗೆ ಟೆಂಡರನಲ್ಲಿ ವಿನಾಯಿತಿ 1 ಕೋಟಿಗೆ ರೂ.ಗೆ ಹೆಚ್ಚಳ : ಬಸವರಾಜ ಬೊಮ್ಮಾಯಿ ಸ್ವಾಗತ

ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ಪ್ರಕ್ರಿಯೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಗಳಲ್ಲಿನ ಪಾರದರ್ಶಕತೆ ಕಾಯ್ದೆ ತಿದ್ದುಪಡಿ ಮಾಡಿ 50 ಲಕ್ಷ‌ದಿಂದ 1 ಕೋಟಿಗೆ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧೇಯಕದ ಪರ್ಯಾಲೋಚನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ ಸಿಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ಟೆಂಡರ್ ವಿನಾಯತಿಯಲ್ಲಿ ಐವತ್ತು ಲಕ್ಷದಿಂದ ಒಂದು ಕೋಟಿ ರೂ. ಗೆ ಹೆಚ್ಚಳ ಮಾಡುವ ತಿದ್ದುಪಡಿ ಮಾಡಿರುವುದು …

Read More »

ಗ್ರಾ.ಪಂ. ಚುನಾವಣೆಯಲ್ಲಿ ಪುತ್ತಿಲ ಬೆಂಬಲಿಗರ ಸ್ಪರ್ಧೆ ವಿಚಾರ: ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರು ಸ್ಪರ್ಧಿಸುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪುತ್ತಿಲ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ಈಗಾಗಲೇ ಚರ್ಚೆ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕೂಡಾ ಚುನಾವಣೆಗೆ ಸ್ಪರ್ಧಿಸಬಹುದು. ಅರುಣ್ ಪುತ್ತಿಲ ಪರಿವಾರ ಚುನಾವಣೆಗೆ ಸ್ಪರ್ಧಿಸಲು ಕೂಡಾ ಪ್ರಜಾಪ್ರಭುತ್ವದಲ್ಲಿ ಇರುವ …

Read More »

ರೋಟರಿ ಕ್ಲಬ್ ವತಿಯಿಂದ ಪರಿಸರ ರಕ್ಷಣೆ ಬಗ್ಗೆ ಜಾಗ್ರತಿ.

ಧಾರವಾಡ: ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ವತಿಯಿಂದ ಇವರ ನೇತೃತ್ವದಲ್ಲಿ ನಡೆದ ಪರಿಸರ ರಕ್ಷಣೆ ಕಾಯ೯ಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ರೋಟರಿಯನ್ ನಜೀರ್‌ ಬೋಸರ್ಡವಾಲಾ ಗಿಡ ನೆಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಅವರು ಪರಿಸರ ರಕ್ಷಣೆ ಕುರಿತು ಮಾತನಾಡಿದರು . ಮಾಜಿ ಜಿಲ್ಲಾ ಗವರ್ನರ್ ಆದ ರೋಟರಿಯನ್ ಗಣೇಶ್ ಭಟ್ ಅಸಿಸ್ಟೆಂಟ್ ಗವರ್ನರ್ ಬಸವರಾಜ ಕನದಾಳೆ ಹಾಗೂ ಡಿಪೋಟಿ ರೇಂಜ್ ಫಾರೆಸ್ಟ್ ಆಫೀಸರ್ ಎಲ್. ನಾಯಕ್ …

Read More »

ಮಾಡಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಅನ್ವರ್ ನದಾಫ್ ಆಯ್ಕೆ.

ಧಾರವಾಡ: ಧಾರವಾಡಧ ಉತ್ಸಾಹಿ ಯುವಕ , ವೇದಿಕೆಯ ಜಿಲ್ಲಾ ಮುಖಂಡರಾದ ಅನ್ವರ್ ನದಾಫ್ ಮಾಡ್ಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಆಯ್ಕೆಯಾಗಿದ್ದಕ್ಕೆ ನಮ್ಮೆಲ್ಲರಿಗೂ ಹೆಮ್ಮೆಯ ಸಂತೋಷದ ವಿಷಯ ಆದಕಾರಣ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಇಂದು ಅಭಿನಂದಿಸಲಾಯಿತ. ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಮಲ್ಲಿಕಾರ್ಜನ್ ಅಸುಂಡಿ, ಮಂಜುನಾಥ್ ಅಂಗಡಿ, ಗುರು ಸುಣಗದ, ಅರುಣ್ ಸುತಾರೆ, ಪ್ರಮೋದ್ ಶೆಟ್ಟಿ, ಮುಸ್ತಾಕ್ ಜಮಖಂಡಿ, ಹರ್ಷದ ಪಠಾಣ, ಮಾಜಿ ಸೈನಿಕರಾದ …

Read More »

ಹಳೆಯ ಎಪಿಎಂಸಿ ಕಾಯಿದೆ ಜಾರಿಗೊಳಿಸಿ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚ ಪ್ರತಿಭಟನೆ ಉಪಾಧ್ಯಕ್ಷ ಷಣ್ಮುಗ ಗುರಿಕಾರ ಅಗ್ರಹ

ಹುಬ್ಭಳ್ಳಿ: ಬಜೆಟ್ ಈಗ ಸದ್ಯ ಜಾರಿಯಲ್ಲಿರುವ ಕೃಷಿ ಕಾನೂನನ್ನು ವಾಪಸ್ ಪಡೆದು, ಹಳೆಯ ಎಪಿಎಂಸಿ ಕಾನೂನು ಜಾರಿಗೆ ತರುತ್ತೇವೆ ಹೇಳಿಕೆ ಕೊಟ್ಟಿದ್ದರು. ಅದು ರೈತ ವಿರೋಧಿ ಆಗಿರುವ ಕ್ರಮವಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಕೃಷಿ ಕಾನೂನು ರೈತರಿಗೆ ಪೂರಕವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ರದ್ದು ಮಾಡಬಾರದೆಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಆಗ್ರಹಿಸುತ್ತದೆ ಎಂದು ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ …

Read More »

ಟೊಮೇಟೊ ಬೆಳೆಗೆ ಬೆಂಕಿ ರೋಗ: ಚಿಂತಾ ಕ್ರಾಂತನಾದ ರೈತ.

ಹುಬ್ಬಳ್ಳಿ: ರಾಜ್ಯಾದ್ಯಂತ ಟೊಮೊಟೋ ಬೆಳೆ ಬೆಲೆ ಗಗನಕ್ಕೇರಿದೆ. ಇತಿಹಾಸದಲ್ಲಿಯೇ ಇಷ್ಟೊಂದು ಬೆಲೆ ಬಂದಿರಲಿಲ್ಲ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಅನ್ನದಾತರಿಗೆ ಚಿನ್ನದ ಬೆಲೆ. ಒಂದೆಡೆ ಬೆಳೆಗಾರರು ಲಾಭದಲ್ಲಿದ್ರೆ, ಕೊಳ್ಳುವವರು ಜೇಬಿಗೆ ಮಾತ್ರ ಬರೆ ಬೀಳುತ್ತಿದೆ. ಆದ್ರೆ ಧಾರವಾಡದ ರೈತ ಟೊಮೊಟೋ ಬೆಳೆದರೂ ಸಹ ಸಂಕಷ್ಟ ಎದುರಿಸುವಂತಾಗಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಪ್ರಕಾಶ ಸುಣಗಾರ ಎಂಬಾತರು ತಮ್ಮ ಒಂದೂವರೆ ಎಕರೆಯಲ್ಲಿ …

Read More »

ಹುಬ್ಬಳ್ಳಿಯಲ್ಲಿ ಪೊಲೀಸ ಪೇದೆ ನೇಣಿಗೆ ಶರಣು

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

Read More »