Breaking News

ಕರ್ನಾಟಕ

ನರೇಂದ್ರ ಮೋದಿ ಸರ್ಕಾರ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ- ಮಾಜಿ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ …

Read More »

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ..!

ನವದೆಹಲಿ: ಕ್ರಿಮಿನಲ್​ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್​ನ ಜಿಲ್ಲಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಇಂದು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇಂದು ಬೆಳಗ್ಗೆ ಲೋಕಸಭೆ ಅಧಿವೇಶನಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ವಯನಾಡ್ ಸಂಸದ ರಾಹುಲ್​ ಗಾಂಧಿ ಅವರನ್ನು ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

Read More »

ಆತ್ಮ ನಿರ್ಬರವಾಗಿ ಬದುಕಬೇಕು- ಲೂಸಿ ಸಾಲ್ದಾನಾ

ಧಾರವಾಡ: ಮಹಿಳೆ ಅಬಲೆ ಎಂದುಕೊಳ್ಳದೇ ಬಲಯುಳ್ಳ ಸಬಲೆಯೆಂದು ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸ್ವಾವಲಂಬಿಯಾಗಿ ಜೀವನ ನಡೆಸಬೇಕೆಂದು ಲೂಸಿ ಸಾಲ್ದಾನಾ ಅಕ್ಷರದ ಅವ್ವ ಹೇಳಿದರು. ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಅಭ್ಯುದಯ ಫೌಂಡೇಶನ್, ಆಸ್ಥಾ ಮಹಿಳಾ ವೇದಿಕೆಯಿಂದ ಆಚರಿಸಲಾದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜೀವನದಲ್ಲಿ ಎಷ್ಟೇ ನೋವು ಕಷ್ಟಗಳು ಬಂದರು ಎದೆಗುಂದದೇ ಮಹಿಳೆಯರು ದಿಟ್ಟತನದಿಂದ ಮುಂದೆ ಸಾಗಬೇಕೆಂದು ತಿಳಿಸಿದರು. ಅತಿಥಿಯಾಗಿ ಆಗಮಿಸಿದ ಉದ್ಯಮಿ ಸುಮಿತ್ರ ನವಲಗುಂದ ಮಾತನಾಡಿ, ನಾವು …

Read More »

ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಜಿಟಿಂಗ್ ಕಾರ್ಡ್: ಸಿಎಂ ಕಿಡಿ..!

ಹುಬ್ಬಳ್ಳಿ: ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ನಿಂದ ಬಂದಿದ್ದರು, ಮರಳಿ ಅಲ್ಲಿಗೇ ಹೋಗ್ತಿದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯ ತಮ್ಮ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ಮಾರ್ಚ್ 24 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಮಾರ್ಚ್ 25 ಕ್ಕೆ ಪ್ರಧಾನಿ ಮೋದಿ ಬರುತ್ತಾರೆ. ಮಾರ್ಚ್ …

Read More »

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಗುಡೆನಕಟ್ಟಿ ಗ್ರಾಮದ ಸಮಗ್ರ ಅಭಿವೃದ್ಧಿ-ಶಾಸಕಿ ಶಿವಳ್ಳಿ

ಕುಂದಗೋಳ: ಮುಂಬರುವ ಚುನಾವಣೆ ಯಲ್ಲಿ ನಮ್ಮ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಗುಡೆನಕಟ್ಟಿ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡುವದಾಗಿ ಶಾಸಕಿ ಕುಸುಮಾವತಿ ಶಿವಳ್ಳಿ ಯವರು ಹೇಳಿದರು.ಅವರು ತಾಲ್ಲೂಕಿನ ಗುಡೆನಕಟ್ಟಿ ಗ್ರಾಮದಲ್ಲಿ 80 ಲಕ್ಷ ರೂ ಗಳ ವಿವಿಧ ಕಾಮಗಾರಿ ಹಾಗೂ ಗುಡೆನಕಟ್ಟಿ ಅಲ್ಲಾಪೂರ ರಸ್ತೆಗೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಯಾದ 50 ಲಕ್ಷ ರೂ ಗಳ ಅನುದಾನದ ಗುದ್ದಲಿ ಪೂಜೆ ನೇರವೆರಿಸಿ ಮಾತನಾಡಿದರು. ಇದಕ್ಕೂ ಮೊದಲು ಮಾರುತಿ ದೇವಸ್ಥಾನ …

Read More »

ಆಮ್ ಆದ್ಮ ಅಭ್ಯರ್ಥಿ ಪಟ್ಟಿ ಬಿಡುಗಡೆ

ಹುಬ್ಬಳ್ಳಿ: ಮುಂದಿನ ವಿಧಾನಸಭಾ ಚುನಾವಣೆಗೆ ಆಮ್ ಆತ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಧಾರವಾಡ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಎಪಿ ಪಕ್ಷದ ಮುಖಂಡ ಅನಂತಕುಮಾರ್ ಬುಗಡಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ವಿಕಾಸ ಸೊಪ್ಪಿನ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರಕ್ಕೆ ಬಸವರಾಜ ತೆರದಾಳ, ಕಲಘಟಗಿ ಕ್ಷೇತ್ರಕ್ಕೆ ಮಂಜುನಾಥ ಜಕ್ಕಣ್ಣನವರ ಅವರನ್ನು ಆಯ್ಕೆ …

Read More »

ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರಿಗೆ ಕ್ಷೇತ್ರ ಸಿಗುತ್ತಿಲ್ಲ- ಸಿದ್ಧರಾಮಯ್ಯನವರ ವಿರುದ್ಧ ನಿರಾಣಿ ವ್ಯಂಗ್ಯ

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ, ಸಚಿವ ಮುರಗೇಶ ನಿರಾಣಿ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ 30 ಸಾವಿರ ಮತಗಳ ಅಂತರದಿಂದ ಸೋತರು. ಅಲ್ಲಿಂದ ಜಾತಿ ಕಾರಣಕ್ಕೆ ಬಾಗಲಕೋಟೆ ಜಿಲ್ಲೆಯ ಬದಾಮಿಗೆ ಬಂದಿದ್ದರು. ಬದಾಮಿಯಲ್ಲಿ ಮತ್ತೆ ಸೋಲುತ್ತೇನೆ ಎನ್ನುವ ಕಾರಣದಿಂದ ಕೋಲಾರಗೆ ಹೋಗುವ ಪ್ರಯತ್ನ ಮಾಡಿದರು. ಕೋಲಾರದಲ್ಲಿ ಸರ್ವೆ ಮಾಡಿಸಿದ ನಂತರ ಅತೀ ಹೆಚ್ಚು ಮತಗಳ ಅಂತದಿಂದ ಸೋಲ್ತಾರೆ ಅನ್ನೋದು ಗೊತ್ತಾಗಿದೆ. ಇವತ್ತು ಹೆಸರಿಗೆ ಮಾತ್ರ ವರುಣಾ ಆದ್ರೆ ಬೇರೆ ಬೇರೆ ಕ್ಷೇತ್ರ …

Read More »

ಮಹಿಳಾ ಸಮಾವೇಶಕ್ಕೆ ನಟಿ ತಾರಾ, ಸಚಿವೆ ಶೋಭಾ ಕರಂದ್ಲಾಜೆ ಆಗಮನ

ಧಾರವಾಡ: ಕಡಪಾ ಮೈದಾನದಲ್ಲಿ ಮಹಿಳಾ ಮೋರ್ಚಾದಿಂದ ಮಹಿಳಾ ಸಮಾವೇಶ. ಮಹಿಳಾ ಯೋಜನೆಗಳನ್ನು ತಿಳಿಸಲು ಈ ಸಮಾವೇಶ ಹಮ್ಮಿಕೊಂಡಿದ್ದು , ಸಮಾವೇಶಕ್ಕೆ ನಟಿ ತಾರಾ, ಸಚಿವೆ ಶೋಭಾ ಕರಂದ್ಲಾಜೆ ಭಾಗಿಯಾಗಲಿದ್ದಾರೆ. ಮಹಿಳಾ ಮತಗಳನ್ನು ಸೆಳೆಯಲು ಬಿಜೆಪಿಯಿಂದ ಪ್ಲ್ಯಾನ್ ಮಾಡಿದ್ದು, ಸಮಾವೇಶಕ್ಕೆ ಸಾವಿರಾರು ಮಹಿಳೆಯರು ಭಾಗಿಯಾಗುವ ಸಾಧ್ಯತೆ ಇದೆ.

Read More »

ಮದುವೆಯಾಗುವ ರೈತರ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಚುನಾವಣೆಯಲ್ಲಿ ರೈತರ ಪ್ರಣಾಳಿಕೆಯನ್ನು ಬಹಿರಂಗವಾಗಿ ಒಪ್ಪುವ ಪಕ್ಷಗಳಿಗೆ ರೈತರ ಬೆಂಬಲ ನೀಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹೇಳಿದ್ದಾರೆ.ಕುರಿತು ನಗರದಲ್ಲಿ ಸೋಮವಾರ ಪ್ರಸಕ್ತ ವಿಧಾನಸಭಾ ಚುನಾವಣೆಗೆ ರೈತರ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರೈತರ ಮಕ್ಕಳ ಮದುವೆ ಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು ಎನ್ನುವ …

Read More »

ಗುಂಡಿ ,‌ಧೂಳು ಮುಕ್ತ ನಗರವೆಂಬ ಹಣೆ ಪಟ್ಟಿಯನ್ನು ಕಳಚಿದ್ದೇವೆ-ನಗರಸಾಭಾಧ್ಯಕ್ಷೆ ಉಷಾ ದಾಸರ

ಗದಗ: ಬೆಟಗೇರಿ 13ನೇ ವಾರ್ಡಿನ ಸದಸ್ಯರಾದ ಮುತ್ತಣ್ಣ ಮುಶಿಗೇರಿ ಅವರ ಸಮ್ಮುಖದಲ್ಲಿ 5.60 ಲಕ್ಷ ರೂ. ವೆಚ್ಚದ ಚರಂಡಿ ಕಾಮಗಾರಿಗೆ ನಗರಸಭಾಧ್ಯಕ್ಷೆ ಉಷಾ ದಾಸರ ಶನಿವಾರ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ, ಜನರ ಜೀವನದ ಗುಣಮಟ್ಟ ಸುಧಾರಿಸಬೇಕೆಂದರೆ. ಮೂಲ ಭೂತ ಸೌಕರ್ಯಗಳು ಅತ್ಯವಶ್ಯಕ. ಅಲ್ಲದೇ, ಮೂಲಭೂತ ಸೌಲಭ್ಯಗ ಳು ಅಭಿವೃದ್ಧಿಯ ಮೊದಲ ಹೆಜ್ಜೆಯಾಗಿದೆ. ಈ ನಿಟ್ಟಿನಲ್ಲಿ ಡಬಲ್ ಇಂಜಿನ್ ಸರ್ಕಾರ ಗಳಂತೆ, ಬಿಜೆಪಿಯ ಲೋಕಲ್ ಸರ್ಕಾರವೂ ಜನರಿಗೆ ಮೂಲಭೂತ ಸೌಲಭ್ಯ …

Read More »