Breaking News

ಕರ್ನಾಟಕ

ಯಾವ ಗಲಾಟೆನೂ ಇಲ್ಲ, ಯಾರೋ ಮಿಸ್ ಗೈಡ್ ಮಾಡಿದ್ದಾರೆ: ಡಿಕೆಶಿ

ಬೆಂಗಳೂರು: ಮೊಹಮ್ಮದ್ ನಲಪಾಡ್ ವಿರುದ್ಧ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್  ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಹೇಳಿಕೆ ನೀಡಿದ್ದಾರೆ. ಯಾವ ಗಲಾಟೆನೂ ಇಲ್ಲ, ಏನು ಇಲ್ಲ. ನಾನು ಕ್ರಾಸ್ ಚೆಕ್ ಮಾಡಿದೆ. ಆ ಥರ ಏನೂ ಇಲ್ಲ. ಯಾವ ಗಲಾಟೆನೂ ಇಲ್ಲ. ಯಾರೋ ಮಿಸ್ ಗೈಡ್ ಮಾಡಿದ್ದಾರೆ. ನಾನು ಸಿದ್ದು ಹಳ್ಳೇಗೌಡರ ಜೊತೆ ಪೋನ್​ನಲ್ಲಿ ಮಾತನಾಡಿದೆ. ನನ್ನ ಪೋನ್  ತಗೊಂಡು ಯಾರೋ …

Read More »

ವಿಶ್ವದಾಖಲೆಯಲ್ಲಿ ಧಾರವಾಡಕ್ಕೆ ಮತ್ತೊಂದು ಕಿರೀಟ ತಂದ ಕೊಟ್ಟ ಕವಿತಾ ಮೇದಾರ

ಹುಬ್ಬಳ್ಳಿ:ಆಕೆ ನಿಜಕ್ಕೂ ಕಿತ್ತು ತಿನ್ನುವ ಬಡತನದಲ್ಲಿ ಹುಟ್ಟಿದ ಹೆಣ್ಣುಮಗಳು. ಈಗ ಆಕೆ ವಿಶ್ವ ದಾಖಲೆಯಲ್ಲಿ ತನ್ನ ಹೆಸರನ್ನು ಬರೆದಿದ್ದಾಳೆ. ತೊಟ್ಟಿಲನ್ನು ತೂಗುವ ಕೈ ಜಗತ್ತನೇ ಆಳಬಲ್ಲದು ಎಂಬುವಂತ ಗಾದೆಗೆ ನಿದರ್ಶನ ಎಂಬಂತೆ ಈ ಮಹಿಳೆ ಸಾಧನೆ ಮಾಡಿದ್ದಾಳೆ. ಸಾಮಾನ್ಯವಾಗಿ ದೊಡ್ಡ ದೊಡ್ಡ ಬಾರ್ ಗಳಲ್ಲಿ ಬಾರ್ ಟೆಂಡರ್ ಗಳನ್ನು ನೀವು ನೋಡಿರ್ತೀರಾ. ಅದರಲ್ಲಿ ಬಾರ್ ಟೆಂಡರ್ ಗಳ ಬಾಟಲಿ ತಿರುಗಿಸುವುದನ್ನು ನೋಡಿಯೇ ಹೌ ಹಾರಿರುತ್ತೇವೆ. ಅಂಥದ್ದರಲ್ಲಿ ಇಲ್ಲೊರ್ವ ಯುವತಿ ಗ್ರಾಮೀಣ …

Read More »

57 ಪೊಲೀಸ್ ರಿಗೆ ಕೊರೋನಾ ದೃಢ

ಬೆಳಗಾವಿ:  ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್‌ಆರ್‌ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ.ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಮಂಗಳವಾರ ಇಡೀ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ತಗುಲಿದ ಎಲ್ಲರೂ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಕೆಲವರಿಗೆ …

Read More »

ಬಿಗ್​​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬಿಗ್​​ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತ ಸಂಭವಿಸಿದ್ದು, ದಿವ್ಯಾ ಸುರೇಶ್ ಗಾಯಗೊಂಡಿದ್ದಾರೆ. ಸೋಮವಾರ ಅಪಘಾತವಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ ಕಾಲು ಮುಖಕ್ಕೆ ಗಂಭೀರ ಗಾಯಗಳಾಗಿವೆ. ಈ ವಿಚಾರವನ್ನು ದಿವ್ಯಾ ಸುರೇಶ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.

Read More »

ಲಕಮಾಪುರದಲ್ಲಿ ಬಣವೆಗಳಿಗೆ ಬೆಂಕಿ

ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಸುಟ್ಟ ಕರಕಲಾದ ಘಟನೆ ಇಂದು ಬೆಳಗಿನಜಾವ ನಡೆದಿದೆ. ಲಕಮಾಪುರ ಗ್ರಾಮದ ಅಶೋಕ ಹುಡೇದ ಎಂಬುವವರಿಗೆ ಸೇರಿದ ಒಂದು ಕಣಕಿ ಬಣವಿ ಹಾಗೂ ಒಂದು ಹೊಟ್ಟಿನ ಬಣವಿ ಬೆಂಕಿಗೆ ಆಹುತಿಯಾಗಿವೆ. ಇದರಿಂದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ಮೇವು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಿಂದೆಯೂ ಕಿಡಿಗೇಡಿಗಳು ಇದೇ ರೀತಿ ಅಶೋಕ …

Read More »

ಸರ್ಕಾರಕ್ಕೆ ಸಲಹೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 15 ರಿಂದ 20 ದಿನಗಳ ಕಾಲ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳನ್ನು ಮುಚ್ಚುವುದು ಸೂಕ್ತ . ಕೋವಿಡ್‌ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಈ ನಿಯಮವನ್ನು ಪಾಲಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಇಂತಹ ಕ್ರಮ ಕೈಗೊಳ್ಳದೇ ಇದ್ದರೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕುವ ಅಪಾಯ ಇದೆ ಎಂದು ಹೇಳಿದರು.

Read More »

ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ : ಕುಮಾರಸ್ವಾಮಿ

ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬರುವವರೆಗೆ ತಮ್ಮ ಪಕ್ಷ ಆಯೋಜಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಮಾಜಿ ಸಿಎಂ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 26ರಿಂದ ರಾಜ್ಯದ 51 ಪ್ರಮುಖ ನದಿಗಳ ನೀರು ಸಂಗ್ರಹ ಮಾಡಿ ಜಲಧಾರೆ ಕಾರ್ಯಕ್ರಮ ದ ಮೂಲಕ ತಿಳುವಳಿಕೆ ಮೂಡಿಸಲು ಕಾರ್ಯಕ್ರಮ ಆಯೋಜಿಸಿದ್ದೆವು.ಕಳಸದ ಮೂಲಕ 180 ತಾಲೂಕು ಪ್ರವಾಸ ಮಾಡಲು ಯೋಚಿಸಿದ್ದೆವು. ಆದರೆ ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಜನತಾ ಜಲಧಾರೆ …

Read More »

ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು

ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರ ಮುನ್ನೆಚ್ಚರಿಕೆ ಲಸಿಕೆ ಅಭಿಯಾನಕ್ಕೆ ನಿರೀಕ್ಷೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಮುನ್ನೆಚ್ಚರಿಕೆ ಲಸಿಕೆ ಡೋಸ್‌ ಅನ್ನು ಮುಂಚೂಣಿ ಕಾರ್ಯಕರ್ತರು ಎಲ್ಲರೂ ಪಡೆಯಬೇಕು. ಸದ್ಯ ರಾಜ್ಯದಲ್ಲಿ ಶೇ.39ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ಮುಂಚೂಣಿ ಕಾರ್ಯಕರ್ತರು ತಪ್ಪದೇ ಈ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದರು. ಮುಖ್ಯಮಂತ್ರಿಗಳು ಜಿಲ್ಲಾ​ಧಿಕಾರಿಗಳೊಂದಿಗೆ ನಡೆಸಿದ ಸಭೆ ಬಳಿಕ ಮಾತನಾಡಿದ ಅವರು,   ಮುನ್ನೆಚ್ಚರಿಕೆ ಡೋಸ್‌ ಲಸಿಕಾರಣವನ್ನು ದೊಡ್ಡ ಅಭಿಯಾನದಂತೆ ಮಾಡಲು ತೀರ್ಮಾನಿಸಲಾಗಿದ್ದು, ಅರ್ಹ …

Read More »

ಜ.26ರಂದು ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ

ಹೊಸಪೇಟೆ(ವಿಜಯನಗರ): ‘ಗಣರಾಜ್ಯೋತ್ಸವದ ದಿನ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ ಹಾಗೂ ಗುಂಡಾ ಸಸ್ಯ ಉದ್ಯಾನದಲ್ಲಿ ₹32 ಲಕ್ಷದಲ್ಲಿ ಅಭಿವೃದ್ಧಿಪಡಿಸಲಾಗಿರುವ ‘ಅಕ್ವೇರಿಯಂ’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಉದ್ಘಾಟಿಸುವರು.ಬೆಳಿಗ್ಗೆ 9ಕ್ಕೆ ನಗರದ ಕ್ರೀಡಾಂಗಣದಲ್ಲಿ ಸಚಿವರು ತ್ರಿವರ್ಣ ಧ್ವಜಾರೋಹಣ ನೆರವೇರಿಸುವರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸುವರುಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ತಿಳಿಸಿದರು. ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ …

Read More »

ಕಾಂಗ್ರೆಸ್ ಮೇಕೆದಾಟು ಯೋಜನೆ ಪಾದಯಾತ್ರೆ ಬಗ್ಗೆ ಟೀಕೆ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿಸಿದ್ದೆವು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಸುಳ್ಳು. ಕಾಂಗ್ರೆಸ್ ಅಧಿಕಾರದಲ್ಲಿ ಯಾವುದೇ ಡಿಪಿಆರ್ ಮಾಡಿಲ್ಲ.  ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ, ಅವರು ಇನ್ನು 5 ವರ್ಷ ಬೇಕಾದರೂ ಪಾದಯಾತ್ರೆ ಮಾಡಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದಾಗ ಹಲವು ನೀರಾವರಿ ಯೋಜನೆ ಜಾರಿಗೆ ತಂದಿದ್ದೆ ಎಂದರು. ಜನವರಿ 26ರಿಂದ ಜೆಡಿಎಸ್ …

Read More »