Breaking News

ಕರ್ನಾಟಕ

ಅವಳಿ ನಗರದಲ್ಲಿ 1 ರಿಂದ 8ನೇ ತರಗತಿಗಳು ಬಂದ್

ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು …

Read More »

ರಾಜ್ಯದಲ್ಲಿ 21,390 ಕೋವಿಡ್ ಪ್ರಕರಣಗಳು ದಾಖಲು

ಬೆಂಗಳೂರು : ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617 ಹೊಸ ಪ್ರಕರಣ ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 10.96ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,541 ಜನರು ಡಿಸ್ಚಾರ್ಜ್ ಆಗಿದ್ದಾರೆ, 10 ಜನರು ಸಾವನ್ನಪ್ಪಿದ್ದಾರೆ.

Read More »

ಶೂಟಿಂಗ್ ವೇಳೆ ನಟಿ ಉಮಾಶ್ರಿಗೆ ಗಾಯ

ಬೆಂಗಳೂರು: ನಟಿ ಉಮಾಶ್ರಿಗೆ  ಅವರುಪುಟ್ಟಕ್ಕನ ಮಕ್ಕಳು ಧಾರವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಬಿಸಿ ನೀರು ಕಾಲಿಗೆ ಬಿದ್ದಿದ್ದರಿಂದಬೆಂಗಳೂರಿನ ತಲಘಟ್ಟಪುರದ ಶಂಕರ್ ಸ್ಟೆಷ್ಟಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶೂಟಿಂಗ್ ವೇಳೆ ಕಾಲಿಗೆ ಗಾಯವಾದ ಘಟನೆ ನಡೆದಿದೆ.  ಹೀಗಾಗಿ ಗಾಯಕ್ಕೆ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಪಾದಯಾತ್ರೆಯಲ್ಲಿ ಉಮಾಶ್ರೀ ಭಾಗಿಯಾಗಿದ್ದು, ಸದ್ಯ ಕಾಲಿಗೆ ಗಾಯವಾದ ಕಾರಣ ಪಾದಯಾತ್ರೆಗೂ ಸಹ ಗೈರಾಗಿದ್ದಾರೆ.

Read More »

ಕೊರೋನಾ ಏರಿಕೆ : ಶಾಲೆ ಬಂದ್ ಮಾಡಲು ಜಿಲ್ಲಾಧಿಕಾರಿಗಳ ನಿರ್ಧಾರ

: ಬೆಂಗಳೂರು: ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.   1 ರಿಂದ 9ನೇ ತರಗತಿ ಬಂದ್ ಆಗಿರುವುದರಿಂದ ಮಕ್ಕಳಿಗೆ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಚಂದನವಾಹಿನಿಯಲ್ಲಿ ನಾಳೆಯಿಂದ ವಿಡಿಯೋ ಪಾಠ ಪ್ರಸಾರ ಮಾಡಲಾಗುತ್ತದೆ.

Read More »

ಸಂಕ್ರಾಂತಿ ಹಬ್ಬಕ್ಕೆ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ ಎಂದು  ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು. ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Read More »

ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ

ರಾಮನಗರ: ಒಂದು ವೇಳೆ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ.  ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕಾನೂನು ಎತ್ತಿ ಹಿಡಿಯಬೇಕಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ …

Read More »

ಅಮ್ಮಿನಬಾವಿ ಗ್ರಾಮದ 11 ವಿದ್ಯಾರ್ಥಿಗಳಿಗೆ ಕೋವಿಡ್​​ ದೃಢ

ಧಾರವಾಡ: ಜಿಲ್ಲೆಯಲ್ಲಿ ಮಹಾಮಾರಿಯ ಕಾಟಾ ದಿನೇ  ದಿನೆ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಎಡಬಿಡದೆ ಕಾಡುತ್ತಿದೆ. ಈಗಷ್ಟೇ ಚೇತರಿಸಿಕೊಂಡಿದ್ದ ಜನರು ಮತ್ತೆ ಗೋಳಾಡುವಂತಾಗಿದೆ.  ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್​​ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ.ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು  ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.

Read More »

ವಂದೇ ಭಾರತ್ ರೈಲು ಪ್ರಾರಂಭಿಸುವಂತೆ ಜೋಶಿ ಮನವಿ

ಹುಬ್ಬಳ್ಳಿ: ಬೆಂಗಳೂರು-ನವದೆಹಲಿಗೆ ಹುಬ್ಬಳ್ಳಿ-ಧಾರವಾಡ ಮೂಲಕ ರಾಜಧಾನಿ ಎಕ್ಸ್‌ಪ್ರೆಸ್‌, ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್’ ರೈಲು ಪ್ರಾರಂಭಿಸುವಂತೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವಿ ಅವರು ಸ್ಪಂದಿಸಿದ್ದು, ಶೀಘ್ರವೇ ರೈಲುಗಳು ಮಂಜೂರಾಗಲಿವೆ . ಕುಸಗಲ್‌-ಅಮರಗೋಳ ಹೊಸ ರೈಲ್ವೆ ಬೈಪಾಸ್‍ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು.ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ   ರೈಲ್ವೆ ಲೈನ್‌ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗ ಅನುಕೂಲ ಆಗಲಿದೆ …

Read More »

ಮತ್ತೆ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು, ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ

ಬೆಂಗಳೂರು: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ.. ಮತ್ತೆ ಕಂಪ್ಲೀಟ್ ಲಾಕ್ ಡೌನ್  ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, …

Read More »