admin
January 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಜನರಲ್ಲಿ ಮತ್ತೇ ಆತಂಕ ಹೆಚ್ಚುತ್ತಿದೆ. ಇದೀಗ ಸ್ವಲ್ಪಮಟ್ಟಿಗೆ ಏರಿಕೆಯನ್ನು ಜೀವನದಲ್ಲಿ ಕಂಡಂತಹ ಜನರಿಗೆ ಮತ್ತೇ ತಲೆ ನೋವು ಉಂಟಾಗಿದೆ. ಇಂದಿನ ಕೊರೋನಾ ಮಾಹಿತಿ ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ …
Read More »
admin
January 6, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ : ನಗರದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಲ್ಲಿ ಧಾರವಾಡ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಾ ಮೃತ್ಯಂಜಯ ಮಂತ್ರ ಪಠಣ ಕಾರ್ಯಕ್ರಮ ನಡೆಯಿತು. ಪ್ರಧಾನ ಮಂತ್ರಿ ಗಳಾದ ನರೇಂದ್ರ ಮೋದಿ ಯವರ ದೀರ್ಘಾಯುಷ್ಯಕ್ಕಾಗಿ ಈ ಪಠಣ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಎಲ್ಲ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಮಹಾ ಮೃತ್ಯುಂಜಯ ಮಂತ್ರ ಪಠಣ ಮಾಡಿ ನರೇಂದ್ರ ಮೋದಿ ಯವರಿಗೆ ದೇವರು ದೀರ್ಘಾಯುಷ್ಯ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
Read More »
admin
January 6, 2022
Breaking News, ಕರ್ನಾಟಕ, ಸಿನಿಮಾ
ಡಾಲಿ ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಯಶಸ್ಸು ಪಡೆದಿದ್ದಾರೆ. ಅವರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.ಧನಂಜಯಗೆ ಸಿಕ್ಕ ಈ ಗೆಲುವು ಅವರ ವೃತ್ತಿ ಜೀವನದ ದೃಷ್ಟಿಯಿಂದ ಬಹಳ ಮಹತ್ವ ಪಡೆದುಕೊಂಡಿದೆ. ಈ ಚಿತ್ರ ಒಟ್ಟೂ ಮಾಡಿದ ಗಳಿಕೆ ಎಷ್ಟು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ‘ಬಡವ ರಾಸ್ಕಲ್’ 15 ಕೋಟಿ ಕಲೆಕ್ಷನ್ ಮಾಡಿದೆ ಎನ್ನುವ ಸುದ್ದಿ ಗಾಂಧಿ ನಗರದ ಅಂಗಳದಲ್ಲಿ ಹರಿದಾಡಿತ್ತು. ಹಾಸನ, ಬಳ್ಳಾರಿ ಮೊದಲಾದ ಜಿಲ್ಲೆಗಳಿಗೆ ತೆರಳಿ ಅಭಿಮಾನಿಗಳಿಗೆ ಧನ್ಯವಾದ …
Read More »
admin
January 6, 2022
Breaking News, ಕರ್ನಾಟಕ, ಮಂಗಳೂರು
ಮಂಗಳೂರು; ಕರ್ನಾಟಕದಲ್ಲಿ ಜನಸಂದಣಿ ಸೇರುವನ್ನು ತಡೆಯಲು ಅನೇಕ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹೊಸ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದಾಗಿ ಈ ನಿಯಮಗಳ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ. ದೇವಸ್ಥಾನಗಳಲ್ಲೂ ಕೇವಲ ದರ್ಶನ ಮಾತ್ರ ಎಂಬ ನಿಯಮ ತಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಜನವರಿ 16ರವರೆಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಈ ಬಗ್ಗೆ ದೇವಸ್ಥಾನದ …
Read More »
admin
January 6, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ : ಮಹಾರಾಷ್ಟ್ರದಲ್ಲಿ ಪೊಲೀಸರು ಪ್ರತಿ ವಾಹನವನ್ನೂ ತಪಾಸಣೆಗೆ ಒಳಪಡಿಸಿದ ನಂತರವೇ ರಾಜ್ಯ ಪ್ರವೇಶಿಸಲು ಅನುವು ಮಾಡಿಕೊಡುತ್ತಿದ್ದಾರೆ.ಕೋವಿಡ್ ಪ್ರಕರಣಗಳು ಹೆಚ್ಚಳಗೊಂಡಿದ್ದು ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಪರಿಸ್ಥಿತಿ ಇದೆ. ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ತಾಲೂಕಿನ ಬಾಚಿ ಚೆಕ್‌ಪೋಸ್ಟ್, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ, ಕಾಗವಾಡ ಹಾಗೂ ಅಥಣಿ ತಾಲೂಕಿನಲ್ಲಿ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.
Read More »
admin
January 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ.6.45ಕ್ಕೆ ಜಿಗಿತಕಂಡು ಸಂಭಾವ್ಯ ಅನಾಹುತದ ಮುನ್ಸೂಚನೆ ನೀಡಿರುವ ಹೊರತಾಗಿಯೂ ಮೇಕೆದಾಟು ಯೋಜನೆಗಾಗಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಡೆಸಿಯೇ ಸಿದ್ಧ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಕೋವಿಡ್ ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಸಭೆ, ಸಮಾರಂಭ, ರಾಜಕೀಯ ರ್ಯಾಲಿಗಳಿಗೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕರು ಸಭೆ ನಡೆಸಿ, ಪಾದಯಾತ್ರೆ ನಿಲ್ಲಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದರು.
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅವಿನಾಶ್ ಇನ್ನಿಲ್ಲ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ವೈರಲ್ ಆಗಿತ್ತು. ಆದ್ರೇ ಇದೊಂದು ಸುಳ್ಳು ಸುದ್ದಿಯಾಗಿದೆ. ನಾನು ಅರಾಮಾಗಿದ್ದೇನೆ ಎಂಬುದಾಗಿ ನಟ ಅವಿನಾಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯಿಸಿರುವಂತ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ಸುದ್ದಿ ಸುಳ್ಳು. ನಾನು ಅರಾಮಾಗಿದ್ದೇನೆ. ಬೆಳಿಗ್ಗೆ ವರ್ಕೌಟ್ ಕೂಡ ಮಾಡಿದ್ದೇನೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ತಿಳಿಸಿದ್ದಾರೆ
Read More »
admin
January 5, 2022
Breaking News, ಕರ್ನಾಟಕ, ರಾಜಕೀಯ
ಕಲಬುರಗಿ: ಕೊರೊನಾ ಕಾರಣಕ್ಕಾಗಿ ಲಾಕ್‌ಡೌನ್ ಮಾಡುವ ಬಗ್ಗೆ ಸರ್ಕಾರ ಪುನರ್ ಪರಿಶೀಲಿಸಬೇಕು. ಒಂದೊಮ್ಮೆ ಲಾಕ್‌ಡೌನ್ ಮಾಡುವುದೇ ಅನಿವಾರ್ಯವಾದರೆ ಕಾರ್ಮಿಕರು, ರೈತರು ಸೇರಿದಂತೆ ಎಲ್ಲ ಬಗೆಯ ದುಡಿಯುವ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಲಾಕ್‌ಡೌನ್ ಘೋಷಣೆ ಮಾಡಿದ ಸಂದರ್ಭದಲ್ಲೂ ಸರ್ಕಾರ ಸೂಕ್ತ ಪ್ಯಾಕೇಜನ್ನು ಜನರಿಗೆ ತಲುಪಿಸಿಲ್ಲ. ಕಟ್ಟಡ ಕಾರ್ಮಿಕರಿಗೆ ಅವರ …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ಬಹಳ ವೇಗವಾಗಿ ಹರಡುತ್ತದೆ, ಅದೇ ರೀತಿ ಕಡಿಮೆಯಾಗುತ್ತಾ ಹೋಗುತ್ತದೆ . ಕೋವಿಡ್ ಮೂರನೆ ಅಲೆಯು ಮೊದಲ ಹಾಗೂ ಎರಡನೆ ಅಲೆ ರೀತಿ ದೀರ್ಘ ಕಾಲ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಬುಧವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ದೇಶಗಳಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಮುಂದಿನ 4-6 ವಾರಗಳ …
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ರಾಮನಗರ, ಸುದ್ದಿ
ಬೆಳಗಾವಿ: ರಾಮನಗರದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳೇನು ಎನ್ನುವ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸವಾಲು ಹಾಕಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಇದುವರೆಗೂ ಮನಬಂದಂತೆ ಮತ್ತು ಏನು ಮಾಡಿದರೂ ಜಯಿಸಿಕೊಳ್ಳುತ್ತೇವೆ ಎನ್ನುವಂತೆ ಅವರು ನಡೆದುಕೊಂಡು ಬಂದಿದ್ದಾರೆ. ನಮ್ಮ ತಾಳ್ಮೆಯ ಮಿತಿ ಮೀರುವಂತೆ ಮಾಡಿದ್ದಾರೆ. ಆದ್ದರಿಂದ ಬಹಳ ಸ್ಪಷ್ಟವಾಗಿ ಅವರಿಗೆ ಸಂದೇಶ ಕೊಡಬೇಕಾಗಿತ್ತು, …
Read More »