Breaking News

ಕರ್ನಾಟಕ

ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಈ ಘಟನೆ ಹೊಸದುರ್ಗ ತಾಲೂಕಿನ ನೀರಗುಂದ ಪೀಲಾಪುರ ಗೇಟ್ ಹತ್ತಿರ ನಡೆದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ತರೀಕೆರೆ ತಾಲೂಕಿನ ತೀರು ಮುರುಡಿ ದೇವಸ್ಥಾನಕ್ಕೆ ತೆರಳಿ, ಜವಳ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಬರುತ್ತಿತ್ತು. ಈ ಸಂದರ್ಭದಲ್ಲಿಯೇ ಆಟೋಗೆ ಡಿಕ್ಕಿ ಹೊಡೆದಿದೆ. …

Read More »

ಒಮಿಕ್ರಾನ್ ಹೆಚ್ಚಳವಾದರೂ ಅಂತರರಾಜ್ಯ ಗಡಿ ಬಂದ್ ಇಲ್ಲ: ಸಚಿವ ಡಾ.ಅಶ್ವತ್ಥನಾರಾಯಣ

ಬೆಳಗಾವಿ: ಕೊರೊನ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ …

Read More »

ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ, ನಾವು ಜನರನ್ನು ಉಳಿಸುವ ಕೆಲಸ ಮಾಡುತ್ತೇವೆ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ನಾವು ಜನರನ್ನ ಉಳಿಸುವ ಕೆಲಸವನ್ನೂ‌ ಮಾಡ್ತೇವೆ. ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಸ್ಯಾನಿಟೈಸ್ ಮಾಡಿಕೊಳ್ಳಬೇಕು, ಅಂತರ ಕಾಯ್ದುಕೊಳ್ಳಬೇಕು ಎಂಬ ಕೊರೋನಾ ನಿಯಮ ಪಾಲಿಸುತ್ತೇವೆ ಎಂದರು. ವೀಕೆಂಡ್ ಲಾಕ್ ಡೌನ್ ಇದ್ದರೂ ಜನವರಿ 9ರಿಂದ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ, ಇದರಲ್ಲಿ ಯಾವುದೇ ಬದಲಾವಣೆ …

Read More »

ವಾರಾಂತ್ಯ ಕರ್ಫ್ಯೂ : ಏನೆಲ್ಲ ಇರುತ್ತೆ ? ಇರುವುದಿಲ್ಲ?

ಬೆಂಗಳೂರು: ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಶುಕ್ರವಾರದಿಂದ (ಜ.7) ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಏನೆಲ್ಲ ಇರುತ್ತೆ… * ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ.* ದಿನಸಿ ಅಂಗಡಿ, ಹಾಲು, ತರಕಾರಿ, ಔಷಧ, ಪೆಟ್ರೋಲ್ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ* ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರುತ್ತದೆ* ಐಟಿ ಹಾಗೂ ಇತರೆ ಉದ್ಯಮ ಸಂಸ್ಥೆಗಳ ಸಿಬ್ಬಂದಿ ಗುರುತಿನ ಚೀಟಿಯೊಂದಿಗೆ ಸಂಚಾರಕ್ಕೆ ಅನುಮತಿ*ಇ-ಕಾಮರ್ಸ್‌ ಸೇವೆಗೆ ಅವಕಾಶ* …

Read More »

ಪ್ರತಾಪಚಂದ್ರ ಶೆಟ್ಟಿ ರಾಜಕೀಯದಿಂದ ನಿವೃತ್ತಿ

ಕುಂದಾಪುರ: ನಾಲ್ಕು ಬಾರಿ ವಿಧಾನಸಭೆ ಸದಸ್ಯರಾಗಿ, ಮೂರು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ 36 ವರ್ಷಗಳ ಸುದೀರ್ಘ‌ ಶಾಸಕತ್ವ ಅವಧಿ ಹೊಂದಿದ್ದ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಶಾಸಕತ್ವ ಜ. 5ರಂದು ಕೊನೆಯಾಗಲಿದೆ. ಪ್ರಸ್ತುತ ಚುನಾವಣಾ ರಾಜಕೀಯದಿಂದ ದೂರ ಇರುವ ಅವರು ಎಐಸಿಸಿ ಸದಸ್ಯರಾಗಿದ್ದುಕೊಂಡು ಪಕ್ಷ ಹಾಗೂ ರೈತ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳಲಿದ್ದಾರೆ.

Read More »

ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಆರಂಭ

ಬೆಂಗಳೂರು: ಇದು ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಬಂದಿದೆ ಎಂಬುದನ್ನು ಖಚಿತಪಡಿಸುತ್ತದೆ. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ . ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಕಳೆದ ಆರು ತಿಂಗಳುಗಳಿಂದ ಶೇ.1ರೊಳಗೆ ಇದ್ದದ್ದು, ಇದೀಗ ಶೇ.2.59ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾವೀಗ ಮೂರನೇ ಅಲೆಯ ಆರಂಭದಲ್ಲಿದ್ದೇವೆ. ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಮೊದಲು …

Read More »

ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ ಸರ್ಕಾರದ ಹೊಸ ಮಾರ್ಗ ಸೂಚಿ

ಬೆಂಗಳೂರು: ಕೊರೋನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದೆ. ರಾಜ್ಯದಲ್ಲಿ ಯಾವುದೇ ಸಭೆ, ಸಮಾರಂಭ, ಜಾತ್ರೆ, ರ್ಯಾಲಿ, ಪ್ರತಿಭಟನೆ ನಡೆಸದಂತೆ ನಿರ್ಬಂಧ ಹೇರಲಾಗಿದೆ.

Read More »

ಬೆಂಗಳೂರುನಲ್ಲಿ 2 ವಾರ ಶಾಲೆ, ಕಾಲೇಜು ಬಂದ್

ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ,ವಾರಾಂತ್ರ ಕರ್ಪ್ಯೂ ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಇಂದಿನ ಸಿಎಂ ಸಭೆಯ …

Read More »

‘ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆ ಜ. 7 ರಂದು ಉದ್ಘಾಟನೆ

ಕೋಲಾರ: ‘ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಕಟ್ಟಡವನ್ನು ವಿಸ್ತರಿಸಿ ₹ 7 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುತ್ತದೆ. ಕಾಮಗಾರಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಜ.7ರಂದು ಚಾಲನೆ ನೀಡುತ್ತಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.

Read More »

ನಿರದ್ಯೋಗಿಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದರು. ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ.

Read More »