admin
December 21, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಧಾರವಾಡದ ನವಲೂರಿನಲ್ಲಿರುವ ಆದಿತ್ಯ ಮಯೂರ ರೆಸಾರ್ಟ್ ನಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ೨೦೨೦-೨೧ ನೇ ಸಾಲಿನ ಎಸ್.ಎಸ್.ಎಲ್. ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ೮೦% ಮತ್ತು ೮೦% ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆಯಾದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ಕೋಶಾಧ್ಯಕ್ಷರಾದ ಸುಧೀರ್ ಉಪ್ಪಾರ ತಿಳಿಸಿದರು. …
Read More »
admin
December 21, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಭೂಹಗರಣದ ಆರೋಪ ಹೊತ್ತಿರುವಂತ ಸಚಿವ ಬೈರತಿ ಬಸವರಾಜ ರಾಜೀನಾಮೆ ಒತ್ತಾಯಿಸಲಾಗಿತ್ತು. ಇದರ ನಡುವೆಯೂ ಇಂದು ರಾಜ್ಯ ಹೈಕೋರ್ಟ್ ಪ್ರಕರಣ ಸಂಬಂಧ ಸಚಿವ ಬೈರತಿ ಬಸವರಾಜ್ ಗೆ ನೀಡಿರುವಂತ ಸಮನ್ಸ್ ಗೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಭೈರತಿ ಬಸವರಾಜ್ ಗೆ ಬಿಗ್ ರಿಲೀಫ್ ನೀಡಿದೆ.
Read More »
admin
December 21, 2021
Breaking News, ಉಡುಪಿ, ಕರ್ನಾಟಕ, ವಿಶೇಷ ಸುದ್ದಿ, ಸುದ್ದಿ
ಉಡುಪಿ: ನಿನ್ನೆ ರಾತ್ರಿ ಆಕಾಶದಲ್ಲಿ ಸಾಲುಸಾಲು ಬೆಳಕಿನ ಚುಕ್ಕಿಗಳು ಕಾಣಸಿಕ್ಕಿದ್ದು ಉಡುಪಿ ಜಿಲ್ಲೆಯ ಜನರಲ್ಲಿ ಕೌತುಕ ಮೂಡಿಸಿತು.ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳನ್ನ ಜಿಲ್ಲೆಯ ಜನತೆ ಕಂಡು ಬೆರಗಾದರು. ಕುಂದಾಪುರ, ಮಲ್ಪೆ ಉಡುಪಿ ಮೊದಲಾದ ಪ್ರದೇಶದಲ್ಲಿ ಜನರು ಇದನ್ನು ವೀಕ್ಷಣೆ ಮಾಡಿದ್ದು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.ಇದು ಕೃತಕ ಉಪಗ್ರಹಗಳ ಚಲನೆ ಎಂದು ಖಗೋಳತಜ್ಞರು ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಜನತೆ ನಿರಾಳರಾದರು.ಸಂಜೆಯ ವೇಳೆ ಕರಾವಳಿ ಭಾಗದಲ್ಲಿ ಕಂಡು ಬಂದಿರುವ ಅಪರೂಪದ ವಿದ್ಯಮಾನ …
Read More »
BigTv News
December 20, 2021
Breaking News, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ದಿನಬಳಕೆ ವಸ್ತುಗಳು , ಪೆಟ್ರೋಲ್ , ಎಲ್.ಪಿ.ಜಿ . ಡಿಸೇಲ್ ಬೆಲೆ ಏರಿಕೆ , ನಿಯಂತ್ರಿಸುವದು ಹಾಗೂ ಆಟೋ ಚಾಲಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರುಈ ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಿನೇ ದಿನೇ ಕಳೆದಂತೆ ಡಿಸೇಲ್ , ಪೆಟ್ರೋಲ , ಏರುತ್ತಿರುವದರಿಂದ …
Read More »
BigTv News
December 19, 2021
Breaking News, Business, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್, ಬೈಕ್ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕೀಮ್ಸ್ …
Read More »
admin
December 18, 2021
Breaking News, ಅಪರಾಧ, ಕರ್ನಾಟಕ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಅನ್ಯ ಕೆಲಸದ ನಿಮಿತ್ತವಾಗಿ ಮನೆಗೆ ಬೀಗ ಹಾಕಿ ಹೋದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ ನಾಣ್ಯ ಕದ್ದು ಪರಾರಿಯಾಗಿರುವ ಘಟನೆ ನಗರದ ಹಳೆ ಹುಬ್ಬಳ್ಳಿಯ ಬಸವನಗರದಲ್ಲಿ ನಡೆದಿದೆ. ಎ.ಎನ್. ಪರಮೇಶ್ವರಪ್ಪ ಎಂಬುವವರ ಮನೆಯಲ್ಲಿಯೇ ಕಳ್ಳತನವಾಗಿದ್ದು, ಇವರು ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿ ಮನೆಯಲ್ಲಿದ್ದ 66 ಗ್ರಾಂ ತೂಕದ ಬಂಗಾರದ ಒಡವೆ, 3,700 ಗ್ರಾಂ …
Read More »
admin
December 18, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ಸುದ್ದಿ
ನವದೆಹಲಿ: ಭಾರತದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ವ್ಯರ್ಥವಾಗಿದೆ. ಅದರಲ್ಲಿ ಅರ್ಧದಷ್ಟು ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳೆಂದು ಎಂದು ವರದಿಯಾಗಿದೆ. ಮಧ್ಯಪ್ರದೇಶದಲ್ಲಿ ಅತೀ ಹೆಚ್ಚು 16.48 ಲಕ್ಷ, ಉತ್ತರ ಪ್ರದೇಶದಲ್ಲಿ 12.60 ಲಕ್ಷ ಮತ್ತು ರಾಜಸ್ಥಾನದಲ್ಲಿ 6.86 ಲಕ್ಷ ಕೋವಿಡ್ ಡೋಸ್ ವ್ಯರ್ಥವಾಗಿದೆ. ಈ ಮೂರು ರಾಜ್ಯಗಳನ್ನು ತೆಗೆದುಕೊಂಡರೆ ಒಟ್ಟಾರೆಯಾಗಿ 36 ಲಕ್ಷದಷ್ಟು ನಷ್ಟವಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಖಾತೆಯ ರಾಜ್ಯ ಸಚಿವೆ ಭಾರತಿ ಪ್ರವೀಣ್ …
Read More »
admin
December 18, 2021
Breaking News, ಅಪರಾಧ, ಕರ್ನಾಟಕ, ಬೆಳಗಾವಿ
ಬೆಳಗಾವಿ: ಪೊಲೀಸರು ನಿಷೇಧಾಜ್ಞೆ ಹೇರಿ, ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿದ್ದಾರೆ. ಈ ನಡುವೆ ಬೆಳಗಾವಿಯ ಶಿವಾಜಿ ಉದ್ಯಾನವನದ ಬಳಿ ಶಿವಸೇನೆ, ಎಂಇಎಸ್ ಮುಖಂಡರು ಹೈಡ್ರಾಮಾ ನಡೆಸಿದ್ದರಿಂದ ಆರಕ್ಕೂ ಅಧಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮುಖಂಡ ಶಿವಾಜಿ ಸುಂಟ್ಕರ್, ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ್ ಶಿರೋಳಕರ ಸೇರಿ ಹಲವರು ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆ ನಡೆಸಲು ಆಗಮಿಸಿದ್ದರು. ಇಂದು ನಿಷೇಧಾಜ್ಞೆ ಜಾರಿ ಹಿನ್ನೆಲೆ ಪ್ರತಿಭಟನೆ ನಡೆಸದಂತೆ ಪೊಲೀಸರು ಹೇಳಿದರೂ ಕೂಡ ನಾವು …
Read More »
admin
December 18, 2021
Breaking News, ಕರ್ನಾಟಕ, ಬಾಗಲಕೋಟೆ, ಬೆಂಗಳೂರು
ವಿಜಯಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಜಮೀನಿನಲ್ಲಿ ಬೆಂಕಿ ತಗುಲಿ ಕಬ್ಬು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಕಡಣಿ ಗ್ರಾಮದಲ್ಲಿ ನಡೆದಿದೆ. ರೈತರಾದ ಪ್ರೇಮಾನಂದ ಗುಗ್ಗವಾಡ ಎಂಬುವವರಿಗೆ ಸೇರಿದ ಜಮೀನು ಬೆಂಕಿಗಾಹುತಿ ಆಗಿದ್ದು , ಲಕ್ಷಾಂತರ ಮೌಲ್ಯದ ಕಬ್ಬು ವಿದ್ಯುತ್ ಸ್ಪರ್ಶದಿಂದ ಹಾನಿಯಾಗಿದೆ. ಮಾಹಿತಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ, ಆಲಮೇಲ ಪೊಲೀಸ ಠಾಣಾ …
Read More »
BigTv News
December 16, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಧಾರವಾಡದ ವಿಜಯಾನಂದನಗರ ಹಾಗೂ ಭಾವಿಕಟ್ಟಿ ಪ್ಲಾಟ್‌ನಲ್ಲಿ ಮೂರು ಮನೆಗಳಿಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಭಾವಿಕಟ್ಟಿ ಪ್ಲಾಟ್‌ನ ಕಲ್ಲಪ್ಪ ಜೋಡಳ್ಳಿ, ವಿಜಯಾನಂದನಗರದ ನಿರ್ಮಲಾ ಬಂಕಾಪುರ ಹಾಗೂ ವೆಂಕಟೇಶ ಟಿಕಾನದಾರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು ಅಪಾರ ಪ್ರಮಾಣದ ಚಿನ್ನದ ವಸ್ತು ಹಾಗೂ ನಗದು ದೋಚಿಕೊಂಡು ಹೋಗಿದ್ದಾರೆ. ಈ ಮೂರೂ ಮನೆಯವರು ಊರಿಗೆ ಹೋದ ಸಂದರ್ಭವನ್ನು ಬಳಕೆ ಮಾಡಿಕೊಂಡ ಕಳ್ಳರು, ಮನೆಯ …
Read More »