Breaking News

ಕರ್ನಾಟಕ

ಬೈಕ್‌ನಲ್ಲಿ ಅಡಗಿ ಕುಳಿತಿದ್ದ ಬುಸ್‌ ಬುಸ್‌ ನಾಗಪ್ಪ!

ಧಾರವಾಡ: ಬೈಕ್‌ ಒಂದರಲ್ಲಿ ಅಡಗಿ ಕುಳಿತಿದ್ದ ಆಭರಣದ ಹಾವನ್ನು ಉರಗ ತಜ್ಞ ತಿಪ್ಪಣ್ಣ ರಕ್ಷಿಸಿದ್ದಾರೆ.ಧಾರವಾಡದ ಹೊಸಯಲ್ಲಾಪುರದ ಬೈಕ್‌ ಒಂದರಲ್ಲಿ ಈ ಹಾವು ಅಡಗಿ ಕುಳಿತಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಉರಗ ತಜ್ಞ ತಿಪ್ಪಣ್ಣ ಅವರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ತಿಪ್ಪಣ್ಣ ಆ ಹಾವನ್ನು ಹೊರ ತೆಗೆದು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.

Read More »

ತವರು ಮನೆಯಿಂದ ಹೆಂಡತಿ ವಾಪಸ್‌ ಕಳಿಸದಿದ್ದಕ್ಕೆ ಅತ್ತೆಯ ಕುತ್ತಿಗೆಗೆ ಬ್ಲೇಡ್‌ ಹಾಕಿದ ಗಲಾಟೆ ಅಳಿಯ

ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ತವರು ಮನೆ ಸೇರಿರುವ ಹೆಂಡತಿಯನ್ನು ವಾಪಸ್ ಕಳುಹಿಸಲಿಲ್ಲ ಎಂಬ ಆಕ್ರೋಶದಿಂದ, ಅಳಿಯನೊಬ್ಬ ಅತ್ತೆಗೆ ಬ್ಲೇಡ್ ನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರದ ನಿವಾಸಿ ಸೋಮವ್ವ ಮಲ್ಲಾಡ ಹಲ್ಲೆಗೀಡಾದವರು. ಪಡದಯ್ಯನ ಹಕ್ಕಲದ ರಮೇಶ ದೊಡ್ಡಮನಿ ಎಂಬ ಅಳಿಯನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ನಾಲೈದು ವರ್ಷಗಳ ಹಿಂದೆ ಪತಿ ರಮೇಶನೊಂದಿಗೆ ಜಗಳವಾಡಿ ಪತ್ನಿ ತವರು ಸೇರಿದ್ದರು. ಡಿ .7 ರಂದು ಪತ್ನಿ ಜೊತೆ ರಮೇಶ ಜಗಳ …

Read More »

ವಿಧಾನ ಪರಿಷತ್ ಚುನಾವಣೆ: ಮತ ಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಮತಚಲಾಯಿಸಿದ ಶಾಸಕ ಪ್ರಸಾದ ಅಬ್ಬಯ್ಯ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಜನಪ್ರತಿನಿಧಿಗಳು ಹಾಗೂ ಚುನಾಯಿತ ಸದಸ್ಯರು ಉತ್ಸುಕತೆಯಿಂದ ಮತದಾನ ಮಾಡುವ ಮೂಲಕ ತಮ್ಮ ತಮ್ಮ ನೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ.

Read More »

ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಧಾರವಾಡ: ಕಳೆದ 20 ದಿನಗಳಿಂದ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರುಇಂದು ಆಯಾ ತಹಶೀಲ್ದಾರ ಕಚೇರಿಲ್ಲಿ ಮಸ್ಟರಿಂಗ್ ಕಾರ್ಯ ನಾಳೆ ಮುಂಜಾನೆ 8 ರಿಂದ ಸಂಜೆ 4 ರ ವರೆಗೆ ನಡೆಯಲಿರೋ ಮತದಾನಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿ ಬರಲಿರೊ ಮೂರು ಜಿಲ್ಲೆಗಳು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿರೋ ಮತದಾನ ಮತಪೆಟ್ಟಿಗೆಗಳನ್ನು ಪಡೆದುಕೊಂಡು ಮತದಾನ ಕೇಂದ್ರಗಳತ್ತ ಸಾಗಿದ ಸಿಬ್ಬಂದಿಕಚೇರಿಗಳಿಗೆ ತೆರಳುತ್ತಿದ್ದಾರೆ. ಪ್ರತಿ ಬೂತ್‌ಗೆ …

Read More »

ಹೆಲಿಕಾಪ್ಟರ್‌ ದುರಂತ-ಬಿಪಿನ್‌ ರಾವತ್‌ ನಿಧನಕ್ಕೆ ಸಂತಾಪ ಸೂಚಿಸಿದ ಟಿಬೇಟ್‌ ಗುರು ದಲೈಲಾಮಾ

ಟಿಬೆಟ್: ಮಾರಣಾಂತಿಕ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರರ ನಿಧನಕ್ಕೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಗುರುವಾರ ಸಂತಾಪ ಸೂಚಿಸಿದ್ದಾರೆ. ‘ನಾನು ಜನರಲ್ ಬಿಪಿನ್ ರಾವತ್ ಮತ್ತು ಅವರ ಸಹಚರರಿಗಾಗಿ ಪ್ರಾರ್ಥಿಸುತ್ತೇನೆ ಮತ್ತು ಈ ದುರದೃಷ್ಟಕರ ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲ ಕುಟುಂಬಗಳ ಸದಸ್ಯರಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ. ರಾಷ್ಟ್ರದ ಸೇವೆಯಲ್ಲಿ ಜನರಲ್ ರಾವತ್ ಅವರ ದೀರ್ಘಕಾಲದ ಕೊಡುಗೆಯನ್ನು ನಾನು ವಂದಿಸುತ್ತೇನೆ’ …

Read More »

ಉಪ್ಪಿನ ಬೆಟಗೇರಿಯಲ್ಲಿ ನೇಣಿಗೆ ಕೊರಳೊಡ್ಡಿದ ಗೃಹಿಣಿ

ಧಾರವಾಡ: ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ನಿರ್ಮಲಾ ಕೋಟೂರ (40) ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡವರು. ವಿವಾಹವಾಗಿದ್ದ ನಿರ್ಮಲಾ, ಮಾನಸಿಕವಾಗಿ ಅಸ್ವಸ್ಥಗೊಂಡ ನಂತರ ಗಂಡನ ಮನೆಯಾದ ಅಮ್ಮಿನಬಾವಿ ಗ್ರಾಮದಿಂದ ತನ್ನ ತವರು ಮನೆ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಬಂದಿದ್ದರು. ಇಂದು ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ …

Read More »

ರಾಜ್ಯದಲ್ಲಿ ಸದ್ಯಕ್ಕಿಲ್ಲ ನೈಟ್‌ ಕರ್ಪ್ಯೂ-ವಾರದ ಬಳಿಕ ನಿರ್ಧಾರ-ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಕುರಿತು ಯಾರೂ ಕೂಡಾ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ಒಂದು ವಾರದ ಬಳಿಕ ಈ ಕುರಿತು ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ​ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ, ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ …

Read More »

5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು …

Read More »

ಸಂಪುಟ ವಿಸ್ತರಣೆ- ನಾನಾಗಿಯೇ ಸಚಿವ ಸ್ಥಾನ ಕೇಳೊದಿಲ್ಲ,ಶಾಸಕನಾಗಿಯೇ ಇರ್ತೆನೆ-ಅರವಿಂದ ಬೆಲ್ಲದ

ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗುವ ಆಸೆ ಇದ್ದೆ ಇರುತ್ತದೆ. ಆದರೆ ನಾನಾಗಲೇ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ. ಬದಲಾಗಿ ಪಕ್ಷ ಗುರುತಿಸಿ ಜವಾಬ್ದಾರಿ ನೀಡಿದರೆ ಸ್ವೀಕರಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆ ಕುರಿತು ನನಗೆ ಮಾಹಿತಿ ಇಲ್ಲ. ಹಾಗೇನಾದರೂ ಸಂಪುಟ ವಿಸ್ತರಣೆ ಆದರೆ ನಾನು ಸಚಿವ ಸ್ಥಾನ ಕೇಳುವುದಿಲ್ಲ. ಈಗಾಗಲೇ ನಾನು ಶಾಸಕನಾಗಿ, ಜಿಲ್ಲಾಧ್ಯಕ್ಷನಾಗಿ ನೆಮ್ಮದಿಯಿಂದ ಇರುವೆ. …

Read More »

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಒಡೆಯುವುದು ಸರ್ಕಾರದ ಹೊಟ್ಟೆ: ದಯಾನಂದ ಸ್ವಾಮೀಜಿ

ಹುಬ್ಬಳ್ಳಿ: ಶಾಲೆ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳ ಪೌಷ್ಟಿಕಾಂಶ ನೀಡುವ ಹಿನ್ನಲೆಯಲ್ಲಿ ಮೊಟ್ಟೆ ವಿತರಣೆ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೆ ಸಸ್ಯಹಾರಿ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಹಾಗೂ ಅಂಗನವಾಡಿ ತೆರೆಯಬೇಕು ಎಂದು ಆಗ್ರಹಿಸಿ ಇದೇ 20ರಂದು ಸಂತ ಸಮಾವೇಶ ಮತ್ತು ವಿಧಾನಸೌಧ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಯಾನಂದ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರ ಮಕ್ಕಳಿಗೆ ಪೋಷಕಾಂಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸಸ್ಯಹಾರಿ ಸಮುದಾಯವನ್ನು ಶಾಖಾಹಾರಿ ಹಾಗೂ ಮಾಂಸಹಾರಿಗಳನ್ನಾಗಿ …

Read More »