Breaking News

ಕರ್ನಾಟಕ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ …

Read More »

ಕಿರಿಕ್‌ ಕೀರ್ತಿ ಮೇಲೆ ಬಿಯರ್‌ ಬಾಟಲಿಯಿಂದ ಹಲ್ಲೇ!

ಬೆಂಗಳುರು ; ಸ್ನೇಹಿತರ ಜತೆ ಗುರುವಾರ (ಡಿ.2) ರಾತ್ರಿ ಪಬ್‌ಗೆ ತೆರಳಿದ್ದ ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಲಾಗಿದೆ. ಅದಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ! ಹೌದು, ಬೆಂಗಳೂರಿನ ಸದಾಶಿವನಗರದ ಪಬ್‌ವೊಂದರಲ್ಲಿ ಮಾರಾಮಾರಿ ನಡೆದಿದೆ. ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಕೀರ್ತಿ ಅವರ ಫೋಟೋ ಕ್ಲಿಕ್ಕಿಸಿದ್ದರು. ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದರು. ಫೋಟೋ ತೆಗೆದ ವ್ಯಕ್ತಿಗೆ ಬಾಯಿಗೆ ಬಂದಂತೆ ಬೈಯ್ದಿದ್ದೂ ಅಲ್ಲದೇ ಮೊಬೈಲ್​ ಕಸಿದುಕೊಳ್ಳಲು ಮುಂದಾದರು. ಆ …

Read More »

ನೈರುತ್ಯ ರೈಲ್ವೆಯಿಂದ ಸರಕು ಸಾಗಣಿಕೆಯ ಆದಾಯದಲ್ಲಿ ದಾಖಲೆಯ ಗಳಿಕೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯ ನವೆಂಬರ್ 2021ರಲ್ಲಿ ರೂ.10.42 ಕೋಟಿ ಪಾರ್ಸಲ್ ಆದಾಯವನ್ನು ದಾಖಲಿಸಿದ್ದು ಕಳೆದ ವರ್ಷದ ಇದೇ ಅವಧಿಯಲ್ಲಿ ಗಳಿಸಿದ ಆದಾಯ(ರೂ.6.63 ಕೋಟಿ)ಕ್ಕಿಂತ ಶೇ. 57.1 ರಷ್ಟು ಹೆಚ್ಚಾಗಿದೆ. ಏಪ್ರಿಲ್ 2021 ರಿಂದ ನವೆಂಬರ್ 2001ರವರೆಗೆ ಒಟ್ಟು ಆದಾಯ ರೂ. 79.68 ಕೋಟಿಯಾಗಿದ್ದು ಇದು ಕಳೆದ ವರ್ಷದ ಇದೇ ಅವಧಿಯ ಆದಾಯ(ರೂ.31.97ಕೋಟಿ) ಕ್ಕಿಂತ ಶೇ.149.26 ರಷ್ಟು ಹೆಚ್ಚಾಗಿದೆ. ಹೌದು.ಕ್ಯಾತ್ಸಂದ್ರ ದಿಂದ ಮರಿಯಾನಿ ಮತ್ತು ಬಾಯ್ ಹಾಟ್ ನಿಲ್ದಾಣಗಳಿಗೆ 0.556 ಟನ್ …

Read More »

ನರೇಗಾ ಕೂಲಿ ಹಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ಧಾರವಾಡ: ತಾಲೂಕಿನ ತೇಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಬಾಕಿ ಕೂಲಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ತೇಗೂರು ಹಾಗೂ ಗುಳೇದಕೊಪ್ಪದ ಗ್ರಾಮಸ್ಥರು ಬೀದಿಗೆ ಇಳಿದು ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಭನದ ಮುಂಭಾಗದಲ್ಲಿ ರೈತ ಕೃಷಿಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ, ಗ್ರಾಮಸ್ಥರು ತೇಗೂರು ಗ್ರಾಮ ಪಂಚಾಯತಿ ಅಧಿಕಾರಿ ಹಾಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಅಧಿಕಾರಿಗಳ ವಿರುದ್ಧ ಧಿಕ್ಕಾರ …

Read More »

ತವರಿನಲ್ಲಿ ಕೈ ಜಾರಿದ್ದ ಸ್ಥಾನವನ್ನು ದಕ್ಕಿಸಿಕೊಳ್ಳೊಕೆ ಪರಿಷತ್‌ ಚುನಾವಣಾ ಮೂಲಕ ಬಿಎಸ್‌ ವೈ ರಣತಂತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಜಿಲ್ಲೆ ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯಾಗಿದೆ. ಕಾಂಗ್ರೆಸ್ ತೆಕ್ಕೆಯಿಂದ ಮರಳಿ ಸ್ಥಾನವನ್ನು ದಕ್ಕಿಸಿಕೊಳ್ಳುವ ಮೂಲಕ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಮುಂದಾಗಿದ್ದಾರೆ. ಉಪ ಸಮರದಲ್ಲಿ ಸಿಎಂ ತವರಿನ ಸೋಲು ಪರಿಷತ್ ಚುನಾವಣೆಯಲ್ಲಿ ಮಾಜಿ ಸಿಎಂ ತವರಿನಲ್ಲಿ ಅಗಬಾರದು ಎನ್ನುವ ಕಾರಣಕ್ಕೆ ಆದ್ಯತೆ ಮೇಲೆ ಬಿಎಸ್​ವೈ ಪ್ರಚಾರದ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಪರಿಷತ್​​ ಚುನಾವಣಾ ಪ್ರಚಾರ : ಇತ್ತೀಚಿನ ವರ್ಷಗಳಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೂ ಕೊಡದಷ್ಟು ಸಮಯ …

Read More »

ಮೊದಲ ಮತ ಲಖನ್​ಗೋ? ಕವಟಗಿಮಠಗೋ? ರಮೇಶ ಜಾರಕಿಹೊಳಿ ಸಸ್ಪೇನ್ಸ್

ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್​ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್​ಗೋ? …

Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಅರೆಸ್ಟ್‌

ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ. ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಮಂಗಳೂರಿನ ಕೆ.ಸಿ ರೋಡ್​​​ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ …

Read More »

ವಿದ್ಯಾರ್ಥಿಗೆ ಸೋಂಕು-ಶಾಲಾ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ಆರಂಭ

ಹುಬ್ಬಳ್ಳಿ : ಕೋವಿಡ್ ಸೋಂಕು ಕಡಿಮೆಯಾಯ್ತು, ಅನ್ನುವಷ್ಟರಲ್ಲಿ ಎಸ್.ಡಿ. ಎಂ ಕಾಲೇಜಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ನಗರದ ಆದರ್ಶ ನಗರದ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನಿಗೆ ದೃಢಪಟ್ಟಿದ್ದು ಮತ್ತಷ್ಟು ಆತಂಕ ಮನೆ ಮಾಡಿದ ಹಿನ್ನಲೆಯಲ್ಲಿ ಶಾಲೆಯಲ್ಲಿ ಕೋವಿಡ್ ಟೆಸ್ಟ್ ತ್ವರಿತವಾಗಿ ನಡೆಸಲಾಗುತ್ತಿದೆ. ನಿನ್ನೆ ಮಧ್ಯಾಹ್ನದ ವೇಳೆಗೆ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿತ್ತು. ಅಲ್ಲದೇ ಸೋಮವಾರದವರೆಗೆ ರಜ ಘೋಷಣೆ ಸಹ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಭೀತಿ ಮತ್ತಷ್ಟು …

Read More »

ಟಿಪ್ಪರ್-ಬಸ್‌ ಮುಖಾಮುಖಿ ಡಿಕ್ಕಿ-6 ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ …

Read More »

ಅಪ್ಪು ಕುಟುಂಬಕ್ಕೆ ಆದಿಚುಂಚನಗಿರಿ ಶ್ರೀಗಳಿಂದ ಸಾಂತ್ವನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಕುಟುಂಬವನ್ನು ಭೇಟಿಯಾಗಿ ಆದಿಚುಂಚನಗಿರಿ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಆಗಮಿಸಿದ ಆದಿಚುಂಚನಗಿರಿ ಶ್ರೀಗಳು ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಕನ್ನಡ ಕಲಾ ಕ್ಷೇತ್ರಕ್ಕೆ ಪುನೀತ್ ರಾಜ್‍ಕುಮಾರ್ ಅವರು ನೀಡಿದ ಕೊಡುಗೆ ಅಪಾರ. ಮೊದೊಲಿನಿಂದಲೂ ರಾಜ್‍ಕುಮಾರ್ ಕುಟುಂಬಕ್ಕೆ ಮತ್ತು ಮಠಕ್ಕೆ ಅವಿನಾಭಾವ ಸಂಬಂಧ ಇದೆ ಎಂದರು. ರಾಜ್‍ಕುಮಾರ್ ಕುಟುಂಬದ ಕುಡಿ …

Read More »