admin
November 23, 2021
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ: ಬಿಜೆಪಿ ಮೆರವಣಿಗೆ ತಡೆಯಲು ಯತ್ನಿಸಿದ ಮಾರ್ಕೆಟ್ ಎಸಿಪಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತರಾಟೆ ತೆಗೆದುಕೊಂಡ ಘಟನೆ ನಗರದ ಡಿಸಿ ಕಚೇರಿ ಎದುರು ನಡೆಯಿತು. ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಇಲ್ಲಿನ ಸಾಹಿತ್ಯ ಭವನದಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಮಾರ್ಗಮಧ್ಯದಲ್ಲಿ ಮೆರವಣಿಗೆ ತಡೆಯಲು ಬಂದ ಎಸಿಪಿಗೆ ರಮೇಶ್ ಜಾರಕಿಹೊಳಿ ತರಾಟೆ ತೆಗೆದುಕೊಂಡರು.ಜನಪ್ರತಿನಿಧಿಗಳಿದ್ದಾರೆ ಡಿಸಿ ಕಚೇರಿಯವರೆಗೆ ಬರಲಿ ಬಿಡಿ ಎಂದು ರಮೇಶ್ ಹೇಳಿದರು. …
Read More »
admin
November 23, 2021
Breaking News, ಕರ್ನಾಟಕ, ಬೆಂಗಳೂರು, ರಾಮನಗರ
ಬೆಂಗಳೂರು: ನಗರದಲ್ಲಿ ರಾಜಕಾಲುವೆ ಒತ್ತುವರಿಗಳನ್ನು ಮುಲಾಜಿಲ್ಲದೇ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಶ್ರೀಮಂತರು ಮಾಡಿರುವ ಒತ್ತುವರಿಗಳನ್ನು ಮೊದಲ ಹಂತದಲ್ಲಿ ತೆರವುಗೊಳಿಸಲಾಗುತ್ತದೆ. ಒತ್ತುವರಿ ಮಾಡಿರುವ ಬಡವರಿಗೆ ನಿವೇಶನಗಳನ್ನು ಒದಗಿಸಿ ನಂತರ ತೆರವು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಳೆಯಿಂದ ಪ್ರವಾಹ ಉಂಟಾಗಿರುವ ಯಲಹಂಕ ಹಾಗೂ ಜಕ್ಕೂರು ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೀಸಲು ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿರುವ …
Read More »
admin
November 23, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗುಡ್ ನ್ಯೂಸ್ ಕಾಲೇಜ್‌ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಕಲಘಟಗಿ: ಪಟ್ಟಣದ ಗುಡ್ ನ್ಯೂಸ್ ಕಾಲೇಜ್‌ಗೆ ಬೀಗ ಜಡಿದಿದ್ದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆಯಿತು.ಕಾಲೇಜ್‌ನ ಜಾಗದ ವಿಷಯಕ್ಕೆ ಸಂಭಂದಿಸಿದಂತೆ ಪಟ್ಟಣದ ನಾಸ್ತಿಕ ಎಂಬುವವರು, ಕಾಲೇಜ್‌ಗೆ ಬೀಗ ಜಡೆದಿದ್ದರು. ಹಲವು ವರ್ಷಗಳ ಹಿಂದೆಯೇ ಕಾಲೇಜ್ ನಿರ್ಮಾಣಕ್ಕೆ ಜಾಗೆ ನೀಡಿದ್ದ ನಾಸ್ತಿಕ ಎಂಬುವರು ಇದೀಗ ಮತ್ತೆ ಜಾಗ ಮರಳಿಸುವಂತೆ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ …
Read More »
admin
November 23, 2021
Breaking News, ಆರೋಗ್ಯ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ(ಧಾರವಾಡ): ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ 32 ವರ್ಷದ ಯುವಕನೊಬ್ಬನಿಗೆ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಟಾಯ್ಲೆಟ್ ಜೆಟ್ ಸ್ಪ್ರೇಯನ್ನು ಹೊರ ತೆಗೆದಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಯುವಕ ಬೈರಿದೇವರಕೊಪ್ಪ ಪ್ರದೇಶದ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ. ನವೆಂಬರ್ 20ರ ಶನಿವಾರ ಬೆಳಗ್ಗೆ ತೀವ್ರ ಅಸ್ವಸ್ಥಗೊಂಡಿದ್ದ ಸ್ಥಿತಿಯಲ್ಲಿದ್ದ ಈತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು …
Read More »
BigTv News
November 23, 2021
ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮೊಬೈಲ್‍ಗಳನ್ನು ಕಳವು ಮಾಡಿ ಆಟೋರಿಕ್ಷಾದಲ್ಲಿ ಬರುತ್ತಿದ್ದ 5 ಜನ ಆರೋಪಿಗಳನ್ನು ಬೆಂಡಿಗೇರಿ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ನ.20 ರಂದು ಹಳೇಮಂಟೂರ ರೋಡನಲ್ಲಿ ಐದು ಜನರು ಎಲ್ಲಿಂದಲೋ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಆಟೋರಿಕ್ಷಾದಲ್ಲಿ ಬರುತ್ತಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ಬೆಂಡಿಗೇರಿ ಪೋಲಿಸ ಠಾಣೆಯ ಪಿಐ ಶ್ಯಾಂರಾಜ ಸಜ್ಜನ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಐದು ಜನರನ್ನು ಬಂಧಿಸಿ ಅವರಿಂದ 1.80 ಲಕ್ಷ ಮೌಲ್ಯದ 14 ಮೊಬೈಲ್ ಮತ್ತು …
Read More »
BigTv News
November 22, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಿನ್ನೆಲೆಯಲ್ಲಿ ನೇರಪೀಡಿತ ಪ್ರದೇಶಕ್ಕೆ ಸಕ್ಕರೆ, ಜವಳಿ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಕುಂದಗೋಳ ತಾಲೂಕಿನ ಯರಿನಾರಾಯಪುರ ಗ್ರಾಮಕ್ಕೆ ಭೇಟಿ ನೀಡಿ ಬೆಣ್ಣೆ ಹಳ್ಳಿ ಪ್ರವಾಹಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ಗ್ರಾಮದ ರೈತರಿಂದ ಅಹವಾಲು ಸ್ವೀಕರಿಸಿದರು.ನಂತರ ಮಾತನಾಡಿದ ಅವರು ಈ ಬಾರಿ ಅನಿರೀಕ್ಷಿತ ಮಳೆಯಿಂದ ತೀವ್ರ ತೊಂದರೆಯಾಗಿದೆ.ಸರಾಸರಿಗಿಂತ ನಾಲ್ಕೈದು ಪಟ್ಟು ಮಳೆಯಾಗಿದೆ. ಹಿಗಾಗಿ ಅಪಾರ ಪ್ರಮಾಣದ ಮಳೆಯಾಗಿದೆ.ಕೂಡಲೇ …
Read More »
admin
November 22, 2021
Breaking News, ಕರ್ನಾಟಕ, ತಂತ್ರಜ್ಞಾನ, ದಕ್ಷಿಣ ಕನ್ನಡ, ವಿಶೇಷ ಸುದ್ದಿ
ಪುತ್ತೂರು: ತ್ಯಾಜ್ಯ ವಿಲೇವಾರಿ ಮಾಡುವುದು ದೊಡ್ಡ ಸವಾಲೇ ಸರಿ. ಕಸ ವಿಲೇವಾರಿಗೆ ಮಹಾನಗರ ಪಾಲಿಕೆಗಳೇ ಪರದಾಡುತ್ತಿರಬೇಕಾದರೆ, ಸ್ಥಳೀಯಾಡಳಿತಗಳ ಸ್ಥಿತಿಯನ್ನೊಮ್ಮೆ ಊಹಿಸಿಕೊಳ್ಳಿ. ಇದಲ್ಲದೇ, ತ್ಯಾಜ್ಯ ಸುರಿಯಲು ಸ್ಥಳದ ಸಮಸ್ಯೆ, ಇದರೊಂದಿಗೆ ಸುತ್ತಲಿನ ಜನರ ವಿರೋಧ. ಮನೆಗಳಲ್ಲಿನ ಕಸವನ್ನು ಸಂಗ್ರಹಿಸಬಹುದು, ಅದನ್ನು ವಿಲೇವಾರಿ ಮಾಡುವುದು ಹೇಗೆ? ಎಂಬ ಸಮಸ್ಯೆಗೆ ಸಿಲುಕಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕೂರು ಗ್ರಾಮ ಪಂಚಾಯಿತಿಯ ವಿನೂತನ ಪ್ರಯೋಗ ಯಶಸ್ಸು ಕಂಡಿದೆ. ಹೌದು, ಮನೆಗಳ ತ್ಯಾಜ್ಯವನ್ನು ಸಂಗ್ರಹಿಸಿ ಎಲ್ಲೆಂದರಲ್ಲಿ …
Read More »
admin
November 22, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ :ದಾಸ ಶ್ರೇಷ್ಠ ಕನಕದಾಸರ ಜಯಂತಿಯ ದಿನದಂದು ಕನಕದಾಸರ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನೆಡೆದಿದೆ. ನಾಡಿಗೆ ತಮ್ಮ ಕಿರ್ತನೆ,ಮೂಲಕ ಮತ್ತು 15 ಮತ್ತು 16 ನೇ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ತಪ್ಪಾಗಲಾರದು. ಇಂದು ಕನಕದಾಸ ಜಯಂತಿ ಪ್ರತಿವರ್ಷವೂ ಕೂಡ ಕನಕ ಜಯಂತಿಯನ್ನು ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಆಚರಿಸಬೇಕು ಮತ್ತು ಅವರ ಭಾವಚಿತ್ರವನ್ನು ಕಚೇರಿ ಒಳಗಡೆ …
Read More »
admin
November 22, 2021
Breaking News, ಕರ್ನಾಟಕ, ಗ್ರಾಮಂಚಾಯತ್ ಚುನಾವಣೆಗಳು, ಮೈಸೂರು
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಕಣದಿಂದ ಕಾಂಗ್ರೆಸ್ನ ಮತ್ತೋರ್ವ ಸದಸ್ಯ ಹಿಂದೆ ಸರಿದಿದ್ದಾರೆ. ಪ್ರಸ್ತುತ ಮೈಸೂರು-ಚಾಮರಾಜನಗರದಿಂದ ಕಾಂಗ್ರೆಸ್ ಎಂಎಲ್ಸಿಯಾಗಿದ್ದ ಆರ್.ಧರ್ಮಸೇನ ಈ ಬಾರಿ ಸ್ಪರ್ಧಿಸದಿರಲು ತೀರ್ಮಾನ ಕೈಗೊಂಡಿದ್ದಾರೆ. ಇವರ ಬದಲಿಗೆ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಾ.ಡಿ.ತಿಮ್ಮಯ್ಯ ತಾವೇ ಈ ಬಾರಿ ಪರಿಷತ್ ಚುನಾವಣೆಯ ಅಭ್ಯರ್ಥಿ ಎಂದು ಹೇಳಿಕೊಂಡಿದ್ದಾರೆ. ಇದುವರೆಗೂ 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ತಿಮ್ಮಯ್ಯ ಅವರು ಇಂದು ಬೆಂಗಳೂರಿಗೆ …
Read More »
admin
November 22, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದ ಆದ ನಷ್ಟ ಅಷ್ಟಿಷ್ಟಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾನಿಯಾದ ರಸ್ತೆ ದುರಸ್ತಿಗೆ 500 ಕೋಟಿ ರೂ. ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ತಕ್ಷಣವೇ 1 ಲಕ್ಷ ರೂ. ಬಿಡುಗಡೆ ಮಾಡಲು ಸೂಚಿಸಿದ್ದೇವೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ ಅಂತ ತಿಳಿಸಿದ್ದಾರೆ. ಬೆಳೆ ಸಮೀಕ್ಷೆ ಪರಿಹಾರ ಆ್ಯಪ್ನಲ್ಲಿ …
Read More »