Breaking News

ಹಾವೇರಿ

ವಿವಿಧ ಕಾಮಗಾರಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹40 ಲಕ್ಷ ದುರುಪಯೋಗ: ಪಿಡಿಒ ಅಮಾನತು

ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕುರುಬರಮಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಒಟ್ಟು ₹ 40 ಲಕ್ಷ ದುರುಪಯೋಗವಾಗಿದ್ದು ಈ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಪಿಡಿಒ ಅನ್ನಪೂರ್ಣ ಸಿಂಪಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ₹ 40 ಲಕ್ಷ ಅಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷರೂ ಶಾಮೀಲಾಗಿರುವ ಆರೋಪವಿರುವುದರಿಂದ, ಅವರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ್ ಶ್ರೀಧರ್ ಅವರು …

Read More »

ವಿಜಯಪುರ-ಮಂಗಳೂರು ಎಕ್ಸ್ ಪ್ರೆಸ್ ರೈಲು ಯಲವಿಗಿಯಲ್ಲಿ ನಿಲುಗಡೆಗೆ ಅವಕಾಶ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬಸವರಾಜ ಬೊಮ್ಮಾಯಿ ರೈಲ್ವೆ ಇಲಾಖೆಗೆ ಧನ್ಯವಾದವನ್ನು ತಿಳಿಸಿದ್ದಾರೆ. ವಿಜಯಪುರ ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು …

Read More »

ಹಾವೇರಿ: ಕೆಪಿಎಸ್‌ಸಿ ಯಿಂದ ನಾಳೆ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆ, ನಾಲ್ಕು ಕೇಂದ್ರದಲ್ಲಿ ಭದ್ರತೆ

ಹಾವೇರಿ: ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) 2023-24ನೇ ಸಾಲಿನ 374 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಡಿ. 29ರಂದು ಹಾವೇರಿಯ 4 ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಇದು ಮರು ಪರೀಕ್ಷೆಯಾಗಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಲ್.ನಾಗರಾಜ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ’ಯ ಅಧ್ಯಕ್ಷತೆ ವಹಿಸಿ …

Read More »

ಶಿಗ್ಗಾವಿ ಉಪಚುನಾವಣೆಯ ಖರ್ಚು-ವೆಚ್ಚಗಳ ಮಾಹಿತಿ ಸಂಗ್ರಹ: ಕಾಂಗ್ರೆಸ್ ಅಭ್ಯರ್ಥಿಯಿಂದ ₹32.69 ಲಕ್ಷ ಖರ್ಚು

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಗಳ ಖರ್ಚು- ವೆಚ್ಚಗಳ ಬಗ್ಗೆ ದಾಖಲೆ ಸಮೇತ ಮಾಹಿತಿ ಸಂಗ್ರಹಿಸಿರುವ ಅಧಿಕಾರಿಗಳು, ಅದೇ ಮಾಹಿತಿಯನ್ನು ಸದ್ಯದಲ್ಲೇ ಚುನಾವಣಾ ಆಯೋಗಕ್ಕೆ ಸಲ್ಲಿಸಲು ತಯಾರಿ ನಡೆಸಿದ್ದಾರೆ. ನೂತನ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಅವರು ಚುನಾವಣೆ ಆರಂಭದಿಂದ ಅಂತ್ಯದವರೆಗೆ ₹ 32.69 ಲಕ್ಷ ಖರ್ಚು ಮಾಡಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ₹ 18.38 ಲಕ್ಷ …

Read More »

ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್‌ ನಿಲ್ದಾಣ ಸಹ ವಕ್ಫ್ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹಾವೇರಿ: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ರೈತ ರುದ್ರಪ್ಪ ಅವರ ಹಾನಗಲ್ ತಾಲ್ಲೂಕಿನ ಹರನಗಿರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ ಎಂದರು. ಬೆಂಗಳೂರಿನ …

Read More »

ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದ್ದೆ ನಾನು: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ : ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದವನೇ ನಾನು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಅವರು ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ತಿಮ್ಮಾಪುರ, ಹಿರೇಬೆಂಡಿಗೇರಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶಿಗ್ಗಾವಿಯಲ್ಲಿ ಬೊಮ್ಮಾಯಿಯವರು ಯಾವುದಾದರು ಒಂದು ಯೋಜನೆ ತಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ‌. ಅವರಿಗೆ ತಿಳಿಸಲು ಬಯಸುತ್ತೇನೆ. ಇಡಿ ರಾಜ್ಯದಲ್ಲಿ ಕೆರೆ ತುಂಬಿಸುವ …

Read More »

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ: ಸಚಿವ ತಿಮ್ಮಾಪುರ

ಹಾವೇರಿ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಇದು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಶಿಗ್ಗಾಂವಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬಂದಿರುವ ಆರೋಪ ರಾಜಕೀಯ ಷಡ್ಯಂತ್ರ. ನಮ್ಮ ಇಲಾಖೆಯಲ್ಲಿ ಈ ರೀತಿಯ ಯಾವುದೇ ಅವ್ಯವಹಾರ ನಡೆದಿಲ್ಲ. ಯಾವುದೇ ನೇಮಕಾತಿ ನಡೆದಿಲ್ಲ, ಯಾವುದೇ ವರ್ಗಾವಣೆ ನಡೆದಿಲ್ಲ ಯಾವುದೇ …

Read More »

ಶಿಗ್ಗಾಂವಿಯಲ್ಲಿ ಸಾಮಾನ್ಯ ಕುಟುಂಬದ ಪಠಾಣ್ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಶಿಗ್ಗಾಂವಿ: ಇಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಮನವಿ ಮಾಡುತ್ತೇನೆ. ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರು …

Read More »

ವಕ್ಫ್ ವಿಷಯ ಬಳಸಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ: ವಿನಯ್ ಕುಲಕರ್ಣಿ

ಹಾವೇರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೇಹಾ ಹತ್ಯೆ ಕೇಸ್ ಬಳಸಿಕೊಂಡರು ಈಗ ವಕ್ಫ್‌ ವಿಷಯ ಬಳಿಸಿಕೊಂಡು ಚುನಾವಣೆ ಎದುರಿಸ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿ ಕಾರಿದ್ದಾರೆ. ಇಂದು(ಭಾನುವಾರ) ಜಿಲ್ಲೆಯ ಶಿಗ್ಗಾವಿ ತಾಲೂಕಿನ‌ ಬಂಕಾಪುರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ವಕ್ಫ್‌ ವಿವಾದ ಚುನಾವಣೆ ಮೇಲೆ ಪರಿಣಾಮ ಬೀರೋಕೆ ಸಾಧ್ಯವಿಲ್ಲ. ನೋಟಿಸ್ಹಿಂ ಪಡೆಯುವ ಕೆಲಸ ಈಗಾಗಲೇ ಆಗಿದೆ ನಾವೂ ರೈತರೇ, ರೈತರಿಗೆ …

Read More »

ವಲ್ಫ್ ಆಸ್ತಿ ದಾಖಲೆಗಾಗಿ ಘರ್ಷಣೆ: 32 ಜನ‌ ಬಂಧನ

ಹಾವೇರಿ: ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ವಲ್ಫ್ ಆಸ್ತಿ ದಾಖಲೆಗಾಗಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 32 ಜನರನ್ನು ವಶಕ್ಕೆ ಪಡೆದಿದ್ದಾರೆ. ಆಸ್ತಿ ದಾಖಲೆಗಳಲ್ಲಿ ಕೆಲವು ಆಸ್ತಿಗಳನ್ನು ವಕ್ಸ್ ಸ್ವತ್ತುಗಳು ಎಂದು ಲೇಬಲ್ ಮಾಡಲಾಗುತ್ತಿದೆ ಎಂಬ ಆತಂಕದ ಬಗ್ಗೆ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಭುಗಿಲೆದ್ದಾಗ ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ. ವಿವಾದವು ಉಲ್ಬಣಗೊಂಡಿತು, ಉದ್ರಿಕ್ತ ಗುಂಪು ಇತರ ಗುಂಪಿನ ನಾಯಕರ ಮನೆಗಳ ಮೇಲೆ ದಾಳಿ ನಡೆಸಿ, ಕಲ್ಲುಗಳನ್ನು …

Read More »