Breaking News

ಹಾವೇರಿ


ಬಸ್  ಕಾರಿನ ನಡುವೆ ಅಪಘಾತ : ದಂಪತಿ ಸಾವು

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ (62) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಕಾರಿನಲ್ಲಿ …

Read More »

ರೈತ ಸಮುದಾಯಕ್ಕೆ ಸಿಎಂ ಮತ್ತೊಂದು ಸಿಹಿಸುದ್ದಿ

ಹಾವೇರಿ : ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತ ಶಕ್ತಿ ಡೀಸೆಲ್ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಮೂಲಕ …

Read More »

ಹಾವೇರಿಯಲ್ಲಿ ಬಿಜೆಪಿಯ ನೂತನ ಜಿಲ್ಲಾ ಕಾರ್ಯಾಲಯದ ಉದ್ಘಾಟನೆ

ಹಾವೇರಿ: ಬಿಜೆಪಿಯ ನೂತನ ಜಿಲ್ಲಾ ಕಾರ್ಯಾಲಯದ ಉದ್ಘಾಟನೆ  ನಡೆಯಿತು. ಮುಂಜಾನೆ ಗೋ ಪೂಜೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ದಂಪತಿ ನೆರವೇರಿಸಿದರು. ತದನಂತರ ನವಗ್ರಹ ಪೂಜೆ ಸಾಂಗವಾಗಿ ನೆರವೇರಿತು ಹಾಗೂ ಶಾಂತಿ ಹೋಮ ಮಾಡಲಾಯಿತು.ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ವಿಧಾನ ಪರಿಷತ್‌ ಸದಸ್ಯರಾದ ಆರ್. ಶಂಕರ್‌, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಸುರೇಶಗೌಡ ಪಾಟೀಲ ಅವರು ಭವನದ ವಿವಿಧ ಕೊಠಡಿಗಳನ್ನು ಉದ್ಘಾಟಿಸಿದರು. ರಾಜ್ಯ ಶಿಸ್ತು …

Read More »

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದೂ ಅಸಾಧ್ಯವಲ್ಲ. ಎಲ್ಲವೂ ಸಾಧ್ಯ : ಸಿಎಂ

ಹಾವೇರಿ: ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದೂ ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಅಂದಲಗಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 150ನೇ ವರ್ಷ ಸಂಭ್ರಮದ ಪ್ರಯುಕ್ತ ಶತಮಾನೋತ್ತರ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದು ಸಂಸ್ಥೆಗೆ …

Read More »

ಬೆಂಬಿಲಿಗರು , ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಬಿಜೆಪಿಗೆ ರಾಜೀನಾಮೆ : ಯು ಬಿ ಬಣಕಾರ

ಹಾವೇರಿ: ನಮ್ಮ ಬೆಂಬಿಲಿಗರು ಹಾಗೂ ಕಾರ್ಯಕರ್ತರ ಕಡೆಗಣನೆಯಿಂದ ಬೇಸತ್ತು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಆಪ್ತರಾಗಿರುವ ಮಾಜಿ ಶಾಸಕ ಯು ಬಿ ಬಣಕಾರ ಹೇಳಿದರು. ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವು ತಿಂಗಳುಗಳಿಂದ ಬೆಂಬಲಿಗರ ಒತ್ತಡವಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇನೆ ಎಂದರು. ಇನ್ನು, ಮುಂದಿನ ಬಾರಿಯ ಚುನಾವಣೆಗೆ ಸ್ಪರ್ಧೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧಿಸಿದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು …

Read More »

ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌’ ಅಡಿ ಹಲವು ಅಭಿವೃದ್ಧಿ ಕಾರ್ಯಕ್ರಮ : ಬಸವರಾಜ ಬೊಮ್ಮಾಯಿ

‘ಬ್ಯಾಡಗಿ (ಹಾವೇರಿ): ‘ಸಬ್‌ ಕಾ ಸಾತ್‌ ಸಬ್‌ ಕಾ ವಿಕಾಸ್‌’ ಎನ್ನುವ ತತ್ವದಡಿ ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಜನ ಸಂಕಲ್ಪ ತೊಟ್ಟಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬ್ಯಾಡಗಿ ಪಟ್ಟಣದಲ್ಲಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ‘ಭಾರತ್‌ ಜೋಡೋ’ ಎಂಬ …

Read More »

ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ಕಾಣೆ : ದೂರು ದಾಖಲು

ಹಾವೇರಿ: ತಹಶೀಲ್ದಾರ್ ಗಿರೀಶ್ ಸ್ವಾದಿ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಿರೀಶ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಅ. 31 ರಂದು ರಾತ್ರಿ 9:30ಕ್ಕೆ ಗಿರೀಶ್ ಪತ್ನಿ ಭಾಗ್ಯಶ್ರೀ ಅವರಿಗೆ ಕೊನೆಯ ಬಾರಿ ಕರೆ ಮಾಡಿದ್ದಾರೆ. ಪರಿಚಯಸ್ಥರಾದ ಬೆಳಗಾವಿಯ ಜಹೂರ ಅಂಗಡಿ ಅವರ ಮೊಬೈಲ್ ನಿಂದ ಕರೆ ಮಾಡಿದ್ದ ಗಿರೀಶ್ ರಾತ್ರಿ ಮನೆಗೆ ಬರುವುದಿಲ್ಲ. ನ. …

Read More »

ಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿ ನೇಣಿಗೆ ಶರಣು

ಹಾವೇರಿ : ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದೆ. ಮಂಜಪ್ಪ ಲಮಾಣಿ (50) ಮೃತ ವ್ಯಕ್ತಿ. ಮಠದ ಟ್ರಸ್ಟ್ ಮತ್ತು ಮಂಜಪ್ಪ ಲಮಾಣಿ ನಡುವೆ ಜಾಗದ ವಿಚಾರವಾಗಿ ಹಲವು ವರ್ಷಗಳಿಂದ ತಗಾದೆ ಇತ್ತು. ಸಿದ್ಧಾರೂಢ ಮಠದ ಟ್ರಸ್ಟ್‌ನವರು ಮಂಜಪ್ಪ ಅವರ ಭೂಮಿಯನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪವಿತ್ತು. ಈ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ …

Read More »

ಬಸನಗೌಡ ಪಾಟೀಲ ಯತ್ನಾಳ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅರುಣ್‌ಸಿಂಗ್

‌ಹಾವೇರಿ: ‘ಕೆಲವರು ಹೀಗೂ ಇರುತ್ತಾರೆ, ಮಾತಾಡೋದೇ ಅವರ ಕೆಲಸ. ಇದು ಅವರ ಹವ್ಯಾಸ. ಪಕ್ಷದಿಂದ ಈಗಾಗಲೇ ಬಸನಗೌಡ ಪಾಟೀಲ ಯತ್ನಾಳ್‌ ಅವರಿಗೆ ನೋಟಿಸ್ ಜಾರಿಯಾಗಿದೆ. ಆದ್ರೆ ಕಲಿಯುವುದಿಲ್ಲ, ತಿಳಿದುಕೊಳ್ಳಲ್ಲ ಅಂದ್ರೆ ಏನು ಮಾಡೋದು? ಬಿಜೆಪಿ ಕಾರ್ಯಕರ್ತರು ಇದನ್ನ ಇಷ್ಟಪಡಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌ ಅಸಮಾಧಾನ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರನ್ನ ಎಲ್ಲ ಪಕ್ಷಗಳು ಗೌರವಿಸುತ್ತವೆ. ಬಿಜೆಪಿ ಸರ್ಕಾರ ಬಡವರ ಪರವಾಗಿ ಕೆಲಸ ಮಾಡುತ್ತಿದೆ. ಇದು ಅವರಿಗೆ ಕಾಣುತ್ತಿಲ್ವಾ? ನಮ್ಮ …

Read More »

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ : ಅರುಣ್ ಸಿಂಗ್

ಹಾವೇರಿ: ದೇಶದೆಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಇದೆ. ಪಂಚ ರಾಜ್ಯ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ರಾಜ್ಯದಲ್ಲೂ 2023 ರ ಚುನಾವಣೆ ತಯಾರಿ ಬಹಳ ಚೆನ್ನಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾದಗ ಮಾಸೂರಿನಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ …

Read More »