Breaking News

ಹಾವೇರಿ

ಚರ್ಮ ಗಂಟಿನಿಂದ ಸಾವುನಪ್ಪಿದ ರೈತರ ನೆರವು : ಸಿಎಂ

ಹಾವೇರಿ: ಕೆಲ ಸಮಯದಿಂದ ಚರ್ಮ ಗಂಟು(ಲಂಪಿ ಸ್ಕಿನ್‌) ಕಾಯಿಲೆಯಿಂದ ಸಂಭವಿಸುತ್ತಿರುವ ಜಾನುವಾರುಗಳ ಸಾಲು ಸಾಲು ಸಾವಿನಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರ ನೆರವಿಗೆ ಇದೀಗ ಸರ್ಕಾರ ಧಾವಿಸಿದೆ. ಚರ್ಮಗಂಟು ಕಾಯಿಲೆಯಿಂದ ಸಾವಿಗೀಡಾಗುವ ಹಸುವಿಗೆ 20 ಸಾವಿರ, ಎತ್ತಿಗೆ 30 ಸಾವಿರ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದಲ್ಲಿ ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಮೆಗಾ ಡೈರಿ ನಿರ್ಮಾಣಕ್ಕೆ ಗುರುವಾರ …

Read More »

ಕಾಮಗಾರಿಗೆ ಇರಿಸಿದ್ದ ಪೈಪ್ ಬಡಿದು 6 ವರ್ಷದ ಬಾಲಕ ಸಾವು

ಹಾವೇರಿ: ನೀರು ಸರಬರಾಜು ಕಾಮಗಾರಿಗೆ ಇರಿಸಿದ್ದ ಪೈಪ್ ಬಡಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.‌ಮೃತ ಬಾಲಕನನ್ನು ಮಹ್ಮದ್ ಎಂದು ಗುರುತಿಸಲಾಗಿದೆ. ಯೂಸೂಫ್​ ತಮ್ಮ ಮಗ ಮಹ್ಮದ್‌ನನ್ನು ಕರೆದುಕೊಂಡು ಬೈಕ್​ನಲ್ಲಿ ಪಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಎದುರಿಗೆ ಬರುತ್ತಿದ್ದ ಟಿಪ್ಪರ್ ಲಾರಿ ಗಮನಿಸಿ ರಸ್ತೆ ಪಕ್ಕದಲ್ಲಿ ನಿಂತಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ರಸ್ತೆ ಬದಿ ಇರಿಸಿದ್ದ ಪೈಪ್‌ಗೆ …

Read More »

ಪೌರಕಾರ್ಮಿಕ ಸಾವು ಹಿನ್ನಲೆ ಬಿ.ಸಿ ಪಾಟೀಲ ಸಹಾಯಧನ ವಿತರಣೆ

ಹಾವೇರಿ: ರಟ್ಟೀಹಳ್ಳಿ ಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ₹50 ಸಾವಿರ ಸಹಾಯಧನವನ್ನು ಮೃತರ ಕುಟುಂಬಸ್ಥರಿಗೆ ನೀಡಿದರು. ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು. ಪೌರಕಾರ್ಮಿಕ ನಾಗರಾಜ್ ಯಡಚಿ ಕೆಲಸ ಮಾಡುವ ಸಂಧರ್ಭದಲ್ಲಿ ವಿಷಜಂತುವೊಂದು …

Read More »

ಮಾಜಿ ಸಿಎಂ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಇಂದು ರಾಣೆಬೆನ್ನೂರು ಬಂದ್

ಹಾವೇರಿ : ಕೊಡಗು ಜಿಲ್ಲೆ ಪ್ರವಾಸದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಇಂದು ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕುರುಬ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ನೆರೆಹಾನಿ ವೀಕ್ಷಣೆಗೆ ಕೊಡಗಿಗೆ ತೆರಳಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯವನ್ನು ಖಂಡಿಸಿ ಸೋಮವಾರ ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ ಎಂದು …

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ : ಸಿಎಂ

ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು ಮುಂದಿನ …

Read More »

ಕಾವಲುಗಾರನ ಮಗಳು ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಮೊದಲನೇ ಸ್ಥಾನ

ಹಾವೇರಿ: ನಗರದ ಜಿಲ್ಲಾ ಗುರುಭವನದಲ್ಲಿ ಕಾವಲುಗಾರನಾಗಿ ಕೆಲಸ ಮಾಡುವ ಬಸವರಾಜ ಶೇತಸನದಿ ಅವರ ಮಗಳು ಮಧು ಶೇತಸನದಿ, ಕನ್ನಡ ಮಾಧ್ಯಮದಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದಿದ್ದಾಳೆ. ‘ನನ್ನ ಮಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂಬುದನ್ನು ಕೇಳಿ ತುಂಬಾ ಸಂತೋಷವಾಗಿದೆ.ಹಾಗಲು-ರಾತ್ರಿ ಕಷ್ಟಪಟ್ಟು ಓದಿ ನಮಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಮಗ ಪ್ರಶಾಂತ 7ನೇ ತರಗತಿ ಓದುತ್ತಿದ್ದಾನೆ’ ಎಂದು ಮಧು ಅವರ ತಂದೆ …

Read More »

ಸಿಡಿಲು ಬಡಿದು ಹಾವೇರಿ ಮಹಿಳೆಗೆ ಗಾಯ

ಹಾವೇರಿ: ಹಾವೇರಿ ಜಿಲ್ಲೆಯ ಹಲವೆಡೆ ಸಿಡಿಲು ಗುಡುಗಿನೊಂದಿಗೆ ಮಳೆರಾಯನ ಆರ್ಭಟ ನಡೆದಿದ್ದು, ಹಾವೇರಿ, ಸವಣೂರು ತಾಲೂಕಿನ ಹಲವೆಡೆ ಮಳೆಯಾಗಿದೆ. ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಗೆ ಗಾಯವಾಗಿದೆ. ಸಣ್ಣಮ್ಮ ಕರಕಣ್ಣವರ ಎಂಬ ಮಹಿಳೆಗೆ ಗಾಯವಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ಮಹಿಳೆ ಮಳೆ ಬರುತ್ತಿದ್ದ ವೇಳೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಗಾಯವಾಗಿತ್ತು. ಗಾಯಾಳುವಿಗೆ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Read More »

ಚಲನಚಿತ್ರ ವೀಕ್ಷಣೆ ವೇಳೆ ಹಾರಿದ ಗುಂಡು

ಹಾವೇರಿ: ಕೆಜಿಎಫ್ 2 ಚಿತ್ರ ಪ್ರದರ್ಶನದ ವೇಳೆ ವ್ಯಕ್ತಿಯೋರ್ವನ ಮೇಲೆ ಗುಂಡು ಹಾರಿಸಿದ ಘಟನೆ ಶಿಗ್ಗಾವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ನಡೆದಿದೆ.ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಎಂಬ ಯುವಕನಿಗೆ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಘಟನೆ ನಡೆದಿದ್ದು, ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿತ್ರಮಂದಿರದಲ್ಲಿ ಗುಂಡು …

Read More »

ಬಿಜೆಪಿಯಲ್ಲಿರುವ ಅನೇಕ ಸ್ನೇಹಿತರು ನನ್ನನ್ನು ಕರೆಯುತ್ತಿದ್ದಾರೆ : ಬಸವರಾಜ ಹೊರಟ್ಟಿ

ಹಾವೇರಿ: ಬಿಜೆಪಿಯಲ್ಲಿರುವ ಅನೇಕ ಸ್ನೇಹಿತರು ನನ್ನನ್ನು ಕರೆಯುತ್ತಿದ್ದಾರೆ. ಈ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಹಾಗೇನಾದರೂ ಇದ್ದರೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಮುಂಬರುವ ಚುನಾವಣೆಯಲ್ಲಿ ನಾನು ಬಿಜೆಪಿ ಸೇರುವ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಬಾರ್​ನಲ್ಲಿ ಕುಳಿತುಕೊಂಡರೆ ಅಥವಾ ಏನಾದರೂ ಕಾನೂನು ಬಾಹಿರ ಕೆಲಸ …

Read More »

ಸಿಎಂ ಜೊತೆ ಚರ್ಚೆ: ಹಾವೇರಿ ಸಾಹಿತ್ಯ ಸಮ್ಮೇಳನದ ಅಧಿಕೃತ ದಿನಾಂಕ ಪ್ರಕಟ

ಹಾವೇರಿ : ಹಾವೇರಿ ಸಾಹಿತ್ಯ ಸಮ್ಮೇಳನ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು. 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೇ 20,21,22 ರಂದು ಹಾವೇರಿಯಲ್ಲಿ ಆಯೋಜಿಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ.

Read More »