BigTv News
April 2, 2025
Breaking News, ಚಿತ್ರದುರ್ಗ
ಬೆಂಗಳೂರು ಕಡೆಯಿಂದ ರಾಂಪುರ ಕಡೆ ತೆರಳುತ್ತಿದ್ದ ಕಾರ್ ಪಲ್ಟಿಯಾಗಿದೆ. ಪಕ್ಕದ ಹೈವೇಗೆ ಬಿದ್ದು, ಸರ್ವೀಸ್ ರಸ್ತೆಗೆ ಕಾರು ಉರುಳಿಬಿದ್ದಿದೆ. ಹೆದ್ದಾರಿಯಲ್ಲಿ ಕಾರ್ ಭೀಕರವಾಗಿ ಪಲ್ಟಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಕಾರು ಚಲಾಯಿಸುತ್ತಿದ್ದ ಮೌಲಾ ಅಬ್ದುಲ್ ಮತ್ತು ಅವರ ಇಬ್ಬರು ಪುತ್ರರಾದ ರೆಹಮಾನ್ ಮತ್ತು ಸಮೀರ್ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೌಲಾ ಅವರ ಪತ್ನಿ ಸಲೀಮಾ ಬೇಗಂ, ಅವರ ತಾಯಿ ಫಾತಿಮಾ ಮತ್ತು ಮತ್ತೊಬ್ಬ ಪುತ್ರ ಹುಸೇನ್ ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರು ಅವರನ್ನು ಬಳ್ಳಾರಿ …
Read More »
BigTv News
March 19, 2025
Breaking News, Crime, ಚಿತ್ರದುರ್ಗ
ಹಾಡಹಗಲೇ ಹೈವೆ ಪಕ್ಕ ಐರನ್ ಸ್ಮಗ್ಲಿಂಗ್ ದಂಧೆ ನಡೆಸುತ್ತಿದ್ದ ವೇಳೆ ದಾವಣಗೆರೆ ಐಜಿ ಸ್ಕ್ವಾಡ್ ದಾಳಿ ನಡೆಸಿ ಆರು ಜನರನ್ನು ಬಂಧಿಸಿದ್ದು, 12 ಲಕ್ಷ ಮೌಲ್ಯದ ಕಬ್ಬಿಣ ರಾಡ್ ವಶಕ್ಕೆ ಪಡೆದಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಬೈರಾಪುರ ಗ್ರಾಮದ ಬಳಿ ಘಟನೆ ಬೆಳಕಿಗೆ ಬಂದಿದೆ
Read More »
BigTv News
March 16, 2025
Breaking News, ಚಿತ್ರದುರ್ಗ
ಲಕ್ಷ್ಮಮ್ಮ ಬಡಾವಣೆಯ ನಿವಾಸಿ ದೇವಿರಮ್ಮನಗರದ ವಿವಿ ಸಾಗರ ಬಲನಾಲೆಗೆ ಕಾಲು ತೊಳೆಯಲೆಂದು ದೇವಿರಮ್ಮ ಇಳಿದಿದ್ದಾರೆ.ದಂಡೆಯಲ್ಲಿ ಪಾಚಿಕಟ್ಟಿದ್ದರಿಂದ ಕಾಲು ಜಾರಿ ನಾಲೆಗೆ ಬಿದ್ದು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ.ನಾಲೆಗೆ ಬಿದ್ದ ದೇವಿರಮ್ಮ ದೇಹವು ಪಟ್ರೇಹಳ್ಳಿವರೆಗೆ ಕೊಚ್ಚಿಕೊಂಡು ಹೋಗಿ ಪತ್ತೆಯಾಗಿದೆ. ಹಿರಿಯೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
Read More »
BigTv News
March 16, 2025
Breaking News, Crime, ಚಿತ್ರದುರ್ಗ
ತುರುವನೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ ಹನುಮಂತೇಗೌಡ ಹಾಗೂ ಬೆಂಬಲಿಗರು ತಡರಾತ್ರಿ ಗುಂಪಾಗಿ ನಿಂತಿದ್ದರು.ನಗರ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗಾದಿಲಿಂಗ ಗೌಡರ್ ಹಾಗೂ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ನಡುವೆ ಶುಕ್ರವಾರ ತಡರಾತ್ರಿ ನಗರದ ಖಾಸಗಿ ಹೋಟೆಲ್ ಬಳಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಿದೆ.ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಪ್ರತ್ಯೇಕವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು …
Read More »
BigTv News
March 15, 2025
Crime, ಚಿತ್ರದುರ್ಗ
ಐಸ್ ಕ್ರೀಮ್ ಕೊಡಿಸುವ ಆಸೆ ತೋರಿಸುವ ವೃದ್ಧನೊಬ್ಬ 9 ವರ್ಷದ ಬಾಲಿಕೆ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆ ದವರು ನಿನ್ನೆ ಬಂದಿದ್ದಾರೆ. ಬಂದಿಸಿದ ವ್ಯಕ್ತಿ ಅಗಸರ ಹಳ್ಳಿಯ ಸಾಧಿಕ್ ಎಂದು ಗುರುತಿಸಲಾಗಿದೆ. ಐಸ್ ಕ್ರೀಮ್ ಆಸೆ ತೋರಿಸಿ ಗುಡ್ಡಕ್ಕೆ ಕರೆದು ಬಾಲಕಿ ಮೇಲೆ ವೃದ್ಧ ಅತ್ಯಾಚಾರ ಎಂದು ಹೇಳಲಾಗಿದೆ. ಸದ್ಯ ಬಾಲಕಿಗೆ ಸರಕಾರಿ ಆಸ್ಪತ್ರೆಯಲ್ಲಿ …
Read More »
BigTv News
March 14, 2025
Breaking News, ಚಿತ್ರದುರ್ಗ
ವಿಧಾನಸಭೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಚಿತ್ರದುರ್ಗದ ಜವಗೊಂಡನಹಳ್ಳಿಯಲ್ಲಿ ಮೂತ್ರ ವಿಸರ್ಜನೆಗೆ ಕಾರ್ಯನಿಂದ ಇಳಿದಾಗ ಬೈಕೊಂಡು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ರುದ್ರಪ್ಪ ಲಮಾಣಿ ಅವರಿಗೆ ತಲೆಗೆ ಗಾಯ ಹಿರಿಯೂರು ಆಸ್ಪತ್ರೆಯಲ್ಲಿ ಪ್ರಾರ್ಥಮಿಕ ಚಿಕಿತ್ಸೆ ನಡೆಸಲಾಯಿತು. ಬಳಿಕ ದಾವಣಗೆರೆ ಎಸ್ ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಕೂಡಲೇ ಡಿವೈಎಸ್ಪಿ ಶಿವಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ರಭಸದಿಂದ ಡಿಕ್ಕಿ ಹೊಡೆದ ಕಾರಣ ಗಂಭೀರ ಗಾಯ ವಾಗಿದೆ. ರುದ್ರಪ್ಪ ಲಮಾಣಿ ಅವರು …
Read More »
BigTv News
March 9, 2025
Breaking News, Crime, ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯ ನನ್ನಿವಾಳ ಗ್ರಾಮದಲ್ಲಿ ಯುವತಿ ಒಬ್ಬಳು ತನ್ನ ಪ್ರೇಮಿಯ ಜೊತೆ ಓಡಿಹೋಗಿದ್ದು ಮನೆಯವರು ಯುವಕನ ಮನೆಯ ಮೇಲೆ ದಾಳಿಯನ್ನು ನಡೆಸಿದ್ದಾರೆ. ಯುವತಿ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವಕನ ಮನೆಯ ಬಾಗಿಲನ್ನು ಮುರಿದು ಮನೆಯ ವಸ್ತುಗಳನ್ನೆಲ್ಲ ಧ್ವಂಸ ಮಾಡಿದ್ದಾರೆ. ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಮನೆಯವರು ತಿರಸ್ಕರಿಸಿದರಿಂದ ಯುವತಿ ಎಸ್ಕೇಪ್. ವಾರದ ಬಳಿಕ ಯುವತಿ ಯುವಕ ಪರಾರಿ ಆಗಿದ್ದರೆ. ಪೊಲೀಸ್ ಕಾರ್ಯಾಚರಣೆ ನಡೆಸಿದ್ದಾರೆ.
Read More »
BigTv News
February 4, 2025
Breaking News, ಚಿತ್ರದುರ್ಗ
ಚಿತ್ರದುರ್ಗ: ಸವಿತಾ ಸಮಾಜ ಬಾಂಧವರು ಶ್ರಮ ಹಾಗೂ ಕಾಯಕ ಜೀವಿಗಳಾಗಿದ್ದಾರೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಸುಂದರವಾಗಿ ಕಾಣುತ್ತಿದ್ದಾರೆ ಎಂದರೆ, ಇದರ ಹಿಂದೆ ಸವಿತಾ ಸಮಾಜದವರ ಶ್ರಮ ಅಡಿಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ, ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ …
Read More »
BigTv News
February 2, 2025
Breaking News, ಚಿತ್ರದುರ್ಗ
ಚಿತ್ರದುರ್ಗ : ಗ್ಯಾರಂಟಿ ಯೋಜನೆಗಳ ಪ್ರಚಾರ ಸಂದರ್ಭದಲ್ಲಿ ವಿರೋಧ ಪಕ್ಷದವರು ಗೇಲಿ ಮಾಡಿದ್ದರು. ಆದರೆ ರಾಜ್ಯದ ಜನತೆ ನಮ್ಮ ಪಕ್ಷವನ್ನು ನಂಬಿ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರು. ಅಧಿಕಾರಕ್ಕೆ ಬಂದ 3 ತಿಂಗಳ ಒಳಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. 19 ತಿಂಗಳಿಂದ ನಿರಾಂತಕವಾಗಿ ಯೋಜನೆಗಳು ಮುಂದುವರೆದಿವೆ. ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಮಾತುಗಳು ಕೇಳಿ ಬರುತ್ತಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. …
Read More »
BigTv News
January 28, 2025
Breaking News, ಚಿತ್ರದುರ್ಗ
ಚಿತ್ರದುರ್ಗ: 2024-2025ನೇ ಸಾಲಿನಲ್ಲಿ ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ರೂ.5 ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ. ತರಬೇತಿ ಹಾಗೂ ಸಹಾಯಧನಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ-06 ಮತ್ತು ಪರಿಶಿಷ್ಟ …
Read More »