BigTv News
December 17, 2024
Breaking News, ಬೆಳಗಾವಿ
ಬೆಳಗಾವಿ : ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಪ್ರಸಕ್ತ ಸಾಲಿಗೆ 3.46 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದ ರಾಜ್ಯ ಸರಕಾರ ಸೋಮವಾರ ವಿಧಾನಸಭೆಯಲ್ಲಿ ಪೂರಕ ಅಂದಾಜುಗಳ ಎರಡನೇ ಕಂತನ್ನು ಮಂಡಿಸಿದ್ದು, ಹೆಚ್ಚುವರಿಯಾಗಿ 5,317.83 ಕೋಟಿ ರೂ. ಬಳಕೆಗೆ ಅವಕಾಶ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತನ್ನು ಮಂಡಿಸಿದರು. ಇದರಲ್ಲಿ ಸಂಚಿತ ನಿಧಿಯಿಂದ 3,012.88 ಕೋಟಿ ರೂ. ಹಾಗೂ ಕೇಂದ್ರ ಸಹಾಯಕ್ಕೆ ಸಂಬಂಧಿಸಿದ 1,199.94 …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚಿಸಬೇಕು ಎನ್ನುವ ಬೇಡಿಕೆ ನ್ಯಾಯಯುತವಾಗಿದ್ದು, ಸೂಕ್ತ ಸಂದರ್ಭದಲ್ಲಿ ಸರ್ಕಾರ ಈ ಬಗ್ಗೆ ನಿರ್ಣಯ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಸುವರ್ಣ ಸೌಧ ಜರುಗುತ್ತಿರುವ ಅಧಿವೇಶನದ ವಿಧಾನಸಭೆಯಲ್ಲಿ ಜರುಗಿದ ಪ್ರಶ್ನೋತ್ತರ ಕಲಾಪವೇಳೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರು ಉತ್ತರ ನೀಡಿದರು. ಶಾಸಕಿ …
Read More »
BigTv News
December 16, 2024
Breaking News, ಬೆಳಗಾವಿ
ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ ಮಾಡುವುದನ್ನು ಜನ ಸಹಿಸುವುದಿಲ್ಲ. ಉತ್ತರ ಕರ್ನಾಟಕಕ್ಕೆ ತಾರತಮ್ಯ ಮುಂದುವರೆದರೆ ಪ್ರತ್ಯೇಕ ರಾಜ್ಯದ ಕೂಗು ಏಳಲಿದೆ ಎಂದು ತೆರದಾಳು ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧದಲ್ಲಿಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರಕರ್ನಾಟಕದ ಪ್ರಮುಖ ಸಮಸ್ಯೆ ಎಂದರೆ ಅದು ಕೃಷ್ಣಾ ಮೇಲ್ದಂಡೆ ಯೋಜನೆಯಾಗಿದೆ. ಆಲಮಟ್ಟಿ ಎತ್ತರದ ಕುರಿತು ಪದೇಪದೇ ಚರ್ಚೆಗಳಾಗುತ್ತಿವೆ. 1964 ರಲ್ಲಿ …
Read More »
BigTv News
December 16, 2024
Breaking News, ಬೆಳಗಾವಿ
ಬೆಳಗಾವಿ: ಸಮಗ್ರ ಉತ್ತರ ಕರ್ನಾಟಕ ಭಾಗದ ಅಭಿವೃದ್ದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು. ಕಳೆದ ಬಾರಿ ಕೊಟ್ಟಂತಹ ಭರವಸೆಗಳು ಯಾವೂ ಈಡೇರಿಲ್ಲ. ಈಕುರಿತು ಇಂದು ಅಧಿವೇಶನದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ನಮ್ಮ ಮುಖಂಡರ ಜೊತೆ ಸಭೆ ಮಾಡಿದ್ದೇನೆ. ಅನೇಕ ಇಲಾಖೆಗಳ ಕುರಿತು ಚರ್ಚೆ ಮಾಡುವ ಹಿನ್ನೆಲೆ ತಯಾರಿ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ …
Read More »
BigTv News
December 16, 2024
Breaking News, ಬೆಳಗಾವಿ
ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದಲ್ಲಿ ಇಂದು ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತಿನ ಬೇಡಿಕೆಗಳನ್ನು ಮಂಡಿಸಿದರು. ಧನ ವಿನಯೋಗ ಅಧಿನಿಯಮದ ಆಧಾರದಲ್ಲಿ, ಹೊಸ ಸೇವೆಗಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರಕ ಅಥವಾ ಹೆಚ್ಚಿನ ವೆಚ್ಚದ ಅವಶ್ಯಕತೆ ಉಂಟಾದರೆ, ಅಂದಾಜು ಮಾಡಿದ ವೆಚ್ಚದ ಮೊಬಲಗನ್ನು ತೋರಿಸುವ ಮತ್ತೊಂದು ವಿವರಣೆಯನ್ನು ರಾಜ್ಯ …
Read More »
BigTv News
December 15, 2024
Breaking News, ಬೆಳಗಾವಿ
ಬೆಳಗಾವಿ: ನಾಳೆಯಿಂದ ವಿಧಾನಸಭೆಯ ಅಧಿವೇಶನದಲ್ಲಿ ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಮೊದಲ ದಿನ ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಈಗಾಗಲೇ ಪ್ರಕಟಿಸಿದ್ದಾರೆ. ಮಂಗಳವಾರ ಎಲ್ಲಾ ಶಾಸಕರು ಚರ್ಚೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಿದ್ದು ಬುಧವಾರ ವಿಶೇಷ ಚರ್ಚೆಯಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ಉತ್ತರ ನೀಡಲಿದೆ. ಈಗಾಗಲೇ ಮೇಲನೆಯಲ್ಲಿ ಉತ್ತರ …
Read More »
BigTv News
December 15, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರವನ್ನು ಮೈಸೂರು ದಸರಾ ಮಾದರಿಯಲ್ಲಿ ವಿಜೃಂಭಿಸುವಂತೆ ಮಾಡಲಾಗುತ್ತದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಐತಿಹಾಸಿಕ ಸ್ಥಳವಾಗಿರುವ ವೀರಸೌಧದಿಂದ 2028ರ ಚುನಾವಣಾ ರಣಕಹಳೆ ಮೊಳಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದರು. ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, …
Read More »