BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ. 11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ದಾವೆ ಎಂದರು. ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಅವರು ಮಾತನಾಡಿ, ಗ್ರಾಪಂಗಳ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಡದ ಎಲ್ಲಾ ಜಮೀನು, ಕಟ್ಟಡಗಳ ಸಾಕ್ಷಾತ್ ಸಮೀಕ್ಷೆಯ ನಂತರ ಆಸ್ತಿಗಳನ್ನು ಪಂಚತಂತ್ರ 2.0 ತಂತ್ರಾಂಶದಲ್ಲಿ ದಾಖಲೀಕರಣ ಮಾಡಲಾಗುತ್ತಿದೆ ಎಂದು ಮಾಹಿತಿ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ವಿಕಲಚೇತನರ ಹಿರಿಯ ನಾಗರಿಕರ ಹಿತಕಾಯುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಎಂಆರ್‌ಡಬ್ಲ್ಯು (ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು), ವಿಆರ್‌ಡಬ್ಲ್ಯು(ಗ್ರಾಮೀಣ ಪುನವರ್ಸತಿ ಕಾರ್ಯಕರ್ತರು) ಹಾಗೂ ಯುಆರ್‌ಡಬ್ಲ್ಯು(ನಗರ ಪುನರ್ವಸತಿ ಕಾರ್ಯಕರ್ತರ) ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಸುವರ್ಣವಿಧಾನಸೌಧದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವಕರ್ನಾಟಕ, ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು. …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ : ರಾಜ್ಯದಲ್ಲಿ 50ಕ್ಕೂ ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯಿ ಹಾಗೂ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ದಿನಕರ್ ಶೆಟ್ಟಿ ಕೇಳಿದ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಉತ್ತರ ನೀಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಗೋಕರ್ಣದ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮಗಳ ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ. ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ಕಳೆದ ವರ್ಷ ರಾಜ್ಯ ಬರಕ್ಕೆ ತುತ್ತಾಗಿದ್ದರೆ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ಕಳೆದ ವರ್ಷ ರೂ.4200 ಕೋಟಿ ಹಣವನ್ನು ರೈತರಿಗೆ ಪರಿಹಾರದ ರೂಪದಲ್ಲಿ ನೀಡಿದರೆ, ಮಳೆಹಾನಿಗೆ ಈ ವರ್ಷ ರೂ.297 ಕೋಟಿ ಹಣವನ್ನು ಪರಿಹಾರವಾಗಿ ರೈತರಿಗೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಶುಕ್ರವಾರ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾದ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು, ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಕಿತ್ತೂರು ಕರ್ನಾಟಕಕ್ಕೂ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಬಿಜೆಪಿಯ ಕೆ.ಎಸ್. ಸುನೀಲ್, ಪಿ.ಎಚ್. ಪೂಜಾರ್, ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿ, ಜೆಡಿಎಸ್‌ನ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದರು. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಕುರಿತು ವಿಧಾನಪರಿಷತ್‌ನಲ್ಲಿ ಚರ್ಚಿಸಿದ ಅವರು, ಕೃಷ್ಣ ಮೇಲ್ದಂಡೆ, ಕಳಸಾ-ಬಂಡೂರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಪಕ್ಷಾತೀತವಾಗಿ ಕೇಂದ್ರದ ಮೇಲೆ ಒತ್ತಡ ತರಬೇಕು. ರಾಜ್ಯದ ಹಿತಾಸಕ್ತಿಗೆ …
Read More »
BigTv News
December 14, 2024
Breaking News, ಬೆಳಗಾವಿ
ಬೆಳಗಾವಿ (ಸುವರ್ಣ ವಿಧಾನಸೌಧ): ಕಲ್ಯಾಣ ಮತ್ತು ಕಿತ್ತೂರು ಪ್ರದೇಶ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ದಿಗಾಗಿ ₹3,740 ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಆರಂಭವಾಗಿದೆ. ಶುಕ್ರವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ. ನ್ಯಾಯಾಲಯಗಳಲ್ಲಿ ಸಿವಿಲ್ ಪ್ರಕರಣ ವಿಚಾರಣೆಗೆ ಕೈಗೆತ್ತಿಕೊಂಡ ದಿನವೇ ತೀರ್ಪಿನ …
Read More »