Breaking News

ಬೆಳಗಾವಿ

ಬೆಳಗಾವಿ: ರೈತರು ಹೆಚ್ಚಿನ ಸಿರಿಧಾನ್ಯ ಬೆಳೆಯಲು ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಧುಮೇಹ ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿ. ಈ ದೃಷ್ಟಿಯಿಂದ ಹೆಚ್ಚಿನ ರೈತರು ಸಿರಿಧಾನ್ಯಗಳನ್ನು ಬೆಳೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುವರ್ಣ ವಿಧಾನಸೌಧದಲ್ಲಿ ಇಂದು ‘ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಿರಿಧಾನ ಉತ್ಪಾದನೆಯಲ್ಲಿ ನಮ್ಮ ರಾಜ್ಯ ಮೂರನೇ ಸ್ಥಾನದಲ್ಲಿದೆ. 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್‌ ಸಿರಿಧಾನ್ಯ ಬೆಳೆಯಲಾಗುತ್ತಿದೆ’ …

Read More »

ರಾಜ್ಯದ ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಕುರಿತು ಸಿಎಂ ಜೊತೆ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ : ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ …

Read More »

ಮಳೆಹಾನಿಗೆ ಈ ವರ್ಷ 297 ಕೋಟಿ ರೂ. ಹಣವನ್ನು ರೈತರಿಗೆ ಪರಿಹಾರವಾಗಿ ನೀಡಲಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ಕಳೆದ ವರ್ಷ ರಾಜ್ಯ ಬರಕ್ಕೆ ತುತ್ತಾಗಿದ್ದರೆ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ಕಳೆದ ವರ್ಷ ರೂ.4200 ಕೋಟಿ ಹಣವನ್ನು ರೈತರಿಗೆ ಪರಿಹಾರದ ರೂಪದಲ್ಲಿ ನೀಡಿದರೆ, ಮಳೆಹಾನಿಗೆ ಈ ವರ್ಷ ರೂ.297 ಕೋಟಿ ಹಣವನ್ನು ಪರಿಹಾರವಾಗಿ ರೈತರಿಗೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಇಂದು ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ …

Read More »

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ …

Read More »

ಸದನದಲ್ಲಿ ಹೆಚ್ಚು ಸಮಯ ಇದ್ದವರು ಹೆಚ್ಚು ಬಾರಿ ಗೆಲುವು ಸಾಧಿಸುವರು: ಸಭಾಧ್ಯಕ್ಷ ಯು.ಟಿ.ಖಾದರ್

ಬೆಳಗಾವಿ: ಸದನದಲ್ಲಿ ಹೆಚ್ಚು ಸಮಯ ಇದ್ದವರು ಹೆಚ್ಚು ಬಾರಿ ಗೆಲುವು ಸಾಧಿಸುತ್ತಾರೆ ಹಾಗೂ ಉತ್ತಮ ರಾಜಕಾರಣಿಯಾಗಲು ಸಹಕಾರಿಯಾಗಲಿದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ವಿಧಾನಸಭೆಯಲ್ಲಿಂದು ತಿಳಿಸಿದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ನಿನ್ನೆ ಸಕಾಲಕ್ಕೆ ಆಗಮಿಸಿದ ಶಾಸಕರು ಹಾಗೂ ರಾತ್ರಿ 10 ಗಂಟೆವರೆಗೂ ಸದನದಲ್ಲಿ ಹಾಜರಿದ್ದ ಶಾಸಕರ,ಸಚಿವರ ಹೆಸರುಗಳನ್ನು ವಾಚಿಸಿದರು. ಸದನದಲ್ಲಿ ಗಮನಸೆಳೆಯುವ ಸೂಚನೆ ಮುಗಿದ ಕೂಡಲೇ ಶಾಸಕರು ಹೊರಹೋಗುವುದು ಸರಿಯಲ್ಲ. ಸದನದಲ್ಲಿ ಹೆಚ್ಚು ಕಾಲ ಇದ್ದು ಕಾರ್ಯ ಕಲಾಪಗಳಲ್ಲಿ ಭಾಗಿಯಾದರೆ …

Read More »

ಬಿಪಿಎಲ್ ಪಡಿತರ ಚೀಟಿ ರದ್ದು ಮಾನದಂಡ ಸರಿಯಿಲ್ಲ: ಡಾ.ಭರತ್ ಶೆಟ್ಟಿ

ಬೆಳಗಾವಿ: ಬಿಪಿಎಲ್‌ ಪಡಿತರ ಚೀಟಿ ರದ್ದು ಮಾನದಂಡ ಸಂಬಂಧ ಶಾಸಕರಾದ ಡಾ| ಭರತ್‌ ಶೆಟ್ಟಿ ವೈ. ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಪಿಎಲ್‌ ಪಡಿತರ ಫ‌ಲಾನುಭವಿಗಳು ಯಾವುದೋ ಕಾರಣಕ್ಕೆ ಒಂದೆರಡು ತಿಂಗಳು ಪಡಿತರ ಪಡೆದುಕೊಳ್ಳದಿದ್ದಲ್ಲಿ ಕಾರ್ಡ್‌ ರದ್ದಾಗುತ್ತಿದೆ. ಕೆಲವೊಂದು ಸಾಲ ಸೌಲಭ್ಯಕ್ಕಾಗಿ ಕೇವಲ ಆದಾಯ ರಿಟರ್ನ್ ಮಾಡಿದವರ ಕಾರ್ಡ್‌ ರದ್ದಾಗುತ್ತಿದೆ. ಆಯುಷ್ಮಾನ್‌ ಜತೆ ಬಿಪಿಎಲ್‌ ಪಡಿತರ ಲಿಂಕ್‌ ಇರುವುದರಿಂದ ಮತ್ತೆ ಕಾರ್ಡ್‌ ಪಡೆಯಲು ಫ‌ಲಾನುಭವಿಯ ಫೈಲ್‌ ಜಿಲ್ಲಾ ಮಟ್ಟದಲ್ಲಿ ವಿಲೇವಾರಿ …

Read More »

ಪಿಎಸ್ಐ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಳಗಾವಿ: ಬಿಜೆಪಿ ಸರ್ಕಾರದಲ್ಲಿ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಅದನ್ನು ನಮ್ಮ ಸರ್ಕಾರ ಬಂದ ಬಳಿಕ ಬಗೆಹರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಗರಣ ಮಾಡಿ ಹೊಗಿದ್ದರು. ಆದರೆ ಅದನ್ನೆಲ್ಲ ನಾವು ಸ್ವಚ್ಚಗೊಳಿಸಿ ಹೈಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಿದ್ದೇವೆ ಎಂದು ತಿಳಿಸಿದರು. ಪ್ರಸ್ತುತ ನಡೆದಿರುವ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆಯನ್ನು ಸರ್ಕಾರ ಅಂತಿಮ …

Read More »

ಗ್ರಾಮ ಪಂಚಾಯತ್ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ …

Read More »

50 ಗ್ರಾಮಪಂಚಾಯ್ತಿಗಳನ್ನು ಪುರಸಭೆಯಾಗಿ ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು

ಬೆಳಗಾವಿ: ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳನ್ನು, ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್‌‍.ಸುರೇಶ್‌ ವಿಧಾನಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದಿನಕರ್‌ ಕೇಶವ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್‌ ಖಾನ್‌ ಅವರು ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅವರು 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದು ನಿಜ. ಗೋಕರ್ಣದ ಬಗ್ಗೆ …

Read More »

ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ದಿ ಕಾರ್ಯ ಕುಂಠಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ. ರಾಜ್ಯ …

Read More »