BigTv News
October 19, 2024
Breaking News, ಬೆಳಗಾವಿ
ಬೆಳಗಾವಿ: ದಾಖಲೆಗಳಿಲ್ಲದೇ ಸರಕು ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ₹2.73 ಕೋಟಿ ಹಣವನ್ನು ಬೆಳಗಾವಿ ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನೂ ಬಂಧಿಸಿದ್ದಾರೆ. ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಡ್ಸ್ ವಾಹನದಲ್ಲಿ ಈ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ದೊರೆತಿತ್ತು. ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮಾರ್ಗದರ್ಶನದಲ್ಲಿ, ಸಿಸಿಬಿ ಇನ್‌ಸ್ಪೆಕ್ಟರ್ ನಂದೀಶ್ವರ ಕುಂಬಾರ ನೇತೃತ್ವದಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾದು …
Read More »
BigTv News
October 17, 2024
Breaking News, ಬೆಳಗಾವಿ
ಬೆಳಗಾವಿ: ನಗರದಲ್ಲಿ ಕಿತ್ತೂರು ಉತ್ಸವನ್ನು ಅದ್ಧೂರಿಯಾಗಿ ನಡೆಸಲು ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲಿ ಬೃಹತ್ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ರಾಷ್ಟ್ರೀಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಈ ಬಾರಿಯ ಕಿತ್ತೂರು ಉತ್ಸವದ ಹಿಂದಿನ ದಿನವಾದ ಅಕ್ಟೋಬರ್ 22 ರಂದು …
Read More »
BigTv News
October 17, 2024
Breaking News, ಬೆಳಗಾವಿ
ಬೆಳಗಾವಿ: ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ರಾಜ್ಯದ ಎಲ್ಲಾ ಡ್ಯಾಂಗಳು ಭರ್ತಿಯಾಗಿವೆ. ಬೆಳಗಾವಿಯಲ್ಲಿರುವ ನವಿಲುತೀರ್ಥ ಅಣೆಕಟ್ಟು ಭರ್ತಿಯಾಗಿದ್ದು, ಜಲಾಶಯದಿಂದ ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ನೀರು ಲಭ್ಯವಾಗಲಿದೆ. ಆದ್ದರಿಂದ ರೈತರು ಸಂತಸಗೊಂಡಿದ್ದಾರೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಜಲಾಶಯಕ್ಕೆ ಗಂಗೆ ಪೂಜೆ ಮಾಡಿ, ಬಾಗಿನ ಅರ್ಪಿಸಲಾಗಿದೆ. ಮಲಪ್ರಭಾ ನೀರಾವರಿ ಸಲಹಾ ಸಮಿತಿ ನವಿಲುತೀರ್ಥ ಡ್ಯಾಂನಲ್ಲಿ ಗಂಗೆ ಪೂಜೆ, ಬಾಗಿನ ಅರ್ಪಣೆ ಕಾರ್ಯಕ್ರಮ ಆಯೋಜಿಸಿತ್ತು. ಮಹಿಳಾ ಮತ್ತು …
Read More »
BigTv News
October 16, 2024
Breaking News, ಬೆಳಗಾವಿ
ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಸಂಸ್ಥಾನ, ರಾಣಿ ಚನ್ನಮ್ಮನ ಶೌರ್ಯ, ಸಾಹಸ, ಜೀವನ ಶೈಲಿ, ರಾಣಿ ಮತ್ತು ಸೇನಾನಿಗಳ ಹೋರಾಟದ ಕಥನವನ್ನು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಿತ್ತರಿಸುವ ಥೀಮ್ ಪಾರ್ಕ್ ಶೀಘ್ರ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ಕೋಟೆ ಆವರಣದೊಳಗಿರುವ ಸುಮಾರು ಏಳು ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಈಗಿನ ಯುಗದ ಪೀಳಿಗೆ ಅರಿಯುವ ಹಾಗೆ ಆಧುನಿಕ ತಂತ್ರಜ್ಞಾನದ ಈ ಥೀಮ್ ಪಾರ್ಕ್ ಯೋಜನೆ ಜಾರಿ ದೇಶದಲ್ಲಿಯೇ ಪ್ರಥಮ …
Read More »
BigTv News
October 15, 2024
Breaking News, ಬೆಳಗಾವಿ
ಸವದತ್ತಿ : ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು. ಈ ವೇಳೆ ಶಾಸಕರಾದ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.
Read More »
BigTv News
October 15, 2024
Breaking News, ಬೆಳಗಾವಿ
ಸವದತ್ತಿ: ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಜಲಾಶಯಗಳು, ಕೆರೆಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ ಮಲಪ್ರಭಾ ಜಲಾಶಯದಲ್ಲಿ ರೈತರ ಅಗತ್ಯಕ್ಕೆ ತಕಷ್ಟು ನೀರು ಲಭ್ಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ …
Read More »
BigTv News
October 14, 2024
Breaking News, ಬೆಳಗಾವಿ
ಬೆಳಗಾವಿ: ತಿರುಪತಿ ಮಾದರಿ ಅಧ್ಯಯನ ಮಾಡಿ ಅದೇ ಮಾದರಿಯಲ್ಲಿ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸವದತ್ತಿಯಲ್ಲಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಅಧ್ಯಕತೆ ವಹಿಸಿ ಅವರು ಮಾತನಾಡಿದರು. ₹45 ಕೋಟಿ ಬ್ಯಾಂಕಿನಲ್ಲಿದ್ದು, ವಾರ್ಷಿಕ ಅಂದಾಜು ₹5 ಕೋಟಿ ಆದಾಯ ಬರುತ್ತಿದೆ. ಉತ್ತಮ ಸೌಲಭ್ಯ ಒದಗಿಸುವ …
Read More »
BigTv News
October 13, 2024
Breaking News, ಬೆಳಗಾವಿ
ಬೆಳಗಾವಿ : ಭಾಷೆ, ಗಡಿಗಳನ್ನು ಮೀರಿ ನಿಂತಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಕೊರಗು ನಮ್ಮೆಲ್ಲರಲ್ಲಿದೆ. ಆದರೆ ಈ ಕಾಯುವಿಕೆಗೆ ಈಗ ಅಂತ್ಯಕಾಲ ಬಂದಿದೆ ಅಭಿವೃದ್ಧಿಯ ಪರ್ವಕಾಲ ಈಗ ಆರಂಭವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸವದತ್ತಿಯಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನವರ ಚಿಂತನೆ ಅಳವಡಿಸಿಕೊಂಡಿದ್ದಾರೆ, …
Read More »
BigTv News
October 13, 2024
Breaking News, ಬೆಳಗಾವಿ
ಸವದತ್ತಿ: ತಾಲ್ಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ ವಿವಿಧ ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಯಲ್ಲಮ್ಮನಗುಡ್ಡಕ್ಕೆ ಆಗಮಿಸುತ್ತಿದ್ದು, ಶನಿವಾರ ತಾಲ್ಲೂಕು ಆಡಳಿತ ಭರದ ಸಿದ್ಧತೆ ನಡೆಸಿತು. ವಸತಿ ಸಂಕೀರ್ಣ, ತಂಗುದಾಣ, ಶೌಚಾಲಯ ಸೇರಿದಂತೆ ವಿವಿಧ ಕಟ್ಟಡಗಳ ಲೋಕಾರ್ಪಣೆ ನಡೆಯಲಿದೆ. ಯಲ್ಲಮ್ಮನಗುಡ್ಡದ ಬಸ್ ನಿಲ್ದಾಣದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗಿದೆ. ದೇವಿಯ ದರ್ಶನಕ್ಕೆ ಆಗಮಿಸುವ ಸಿದ್ದರಾಮಯ್ಯ ಅವರನ್ನು ಮಂಗಳವಾದ್ಯ ಹಾಗೂ ವೇದಘೋಷಗಳ ಮೂಲಕ ಸ್ವಾಗತಿಸಲಾಗುವುದು. ನಂತರ …
Read More »
BigTv News
October 9, 2024
Breaking News, ಬೆಳಗಾವಿ
ಬೆಳಗಾವಿ: ಪಕ್ಷದ ವೇದಿಕೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇರೆ ಯಾರಾದರೂ ಪ್ರಯತ್ನ ನಡೆಸಿದ್ದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಶಾಸಕರು ಹಾಗೂ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಲ ನಾಯಕರು ಭೇಟಿಯಾಗಿದ್ದಾರೆ. ಅವರವರ ಪ್ರಯತ್ನ, ಆಸೆ …
Read More »