BigTv News
October 9, 2024
Breaking News, ಬೆಳಗಾವಿ
ಬೆಳಗಾವಿ: ಸಾಮಾಜಿಕ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವ ಮೂಲಕ ಧರ್ಮಸ್ಥಳದ ಧರ್ಮಾಧ್ಯಕ್ಷರಾದ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಿಲಜಿ ಗ್ರಾಮ ಪಂಚಾಯಿತಿ, ಶಿಂದೊಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಪುನಃಶ್ಚೇತನಗೊಳಿಸಿದ ಶಿಂದೊಳ್ಳಿ ಸರ್ಕಾರಿ ಕೆರೆ ಹಸ್ತಾಂತರ ಮತ್ತು ಬಾಗಿನ ಅರ್ಪಣೆ ಮಾಡಿ ಮಾತನಾಡಿದರು. ಧರ್ಮಸ್ಥಳ ಯೋಜನೆಯವರು ಜಿಲ್ಲೆಯಲ್ಲಿ ಸುಮಾರು 48 ಕೆರೆಗಳನ್ನು ಹೂಳೆತ್ತಿದ್ದಾರೆ. …
Read More »
BigTv News
October 9, 2024
Breaking News, ಬೆಳಗಾವಿ
ಚನ್ನಮ್ಮನ ಕಿತ್ತೂರು: ಕಿತ್ತೂರು ಸಂಸ್ಥಾನದ ಇತಿಹಾಸ, ಪರಂಪರೆ ಉಳಿಸಲು ಮತ್ತು ಭವಿಷ್ಯದ ಪೀಳಿಗೆಗೆ ತಿಳಿಸಲು ನೆರವಾಗುವ ಕಾಮಗಾರಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹58 ಕೋಟಿ ಅನುದಾನ ನೀಡಿದ್ದಾರೆ ಎಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಇಲ್ಲಿಯ ಕೋಟೆ ಆವರಣದಲ್ಲಿ ವಿವಿಧ ಕಾಮಗಾರಿಗಳ ಚಾಲನೆ ನೀಡಿ ಅವರು ಮಾತನಾಡಿದರು. ಕಿತ್ತೂರಿಗಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರ ಮಾಹಿತಿಯನ್ನು ಈಗಿನ ಪೀಳಿಗೆಗೆ ತಿಳಿಯುವ …
Read More »
BigTv News
October 8, 2024
Breaking News, ಬೆಳಗಾವಿ
ಬೆಳಗಾವಿ: ನಗರದಲ್ಲಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ತೀರ್ಮಾನವನ್ನು ಇಲ್ಲಿ ಮಂಗಳವಾರ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೈಗೊಳ್ಳಲಾಯಿತು. ಈ ಬಾರಿ ದೀಪಾವಳಿ ಹಬ್ಬವೂ ನ.1ರಂದೇ ಇದೆ ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನ.3ರಂದು ಮೆರವಣಿಗೆ ಆಯೋಜಿಸಬೇಕು ಎಂದು ಯುವಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರಾದ ಅಶೋಕ ಚಂದರಗಿ, ರಮೇಶ ಸೊಂಟಕ್ಕಿ ಮತ್ತಿತರರು, ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. …
Read More »
BigTv News
October 5, 2024
Breaking News, ಬೆಳಗಾವಿ
ಬೆಳಗಾವಿ: ಕರ್ನಾಟಕದಲ್ಲಿ ಬಳ್ಳಾರಿ ಜಿಲ್ಲೆಯು ವಿಭಜನೆಗೊಂಡು ಹೊಸ ಜಿಲ್ಲೆಯಾದ ವಿಜಯನಗರ ಮೂರು ವರ್ಷಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿದೆ. ಇದರ ಬೆನ್ನಲ್ಲೆ ಮೊನ್ನೆಯಷ್ಟೇ ರಾಜ್ಯದ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜಿಸಬೇಕು ಎಂಬ ಮಾತು ಕೇಳಿ ಬಂದಿತ್ತು. ಇದೀಗ ರಾಜ್ಯದ ದೊಡ್ಡ ದೊಡ್ಡ ಜಿಲ್ಲೆಗಳು, ತಾಲೂಕುಗಳನ್ನು ವಿಂಗಡಣೆ ಮಾಡಬೇಕು ಎಂಬ ಮಾತು ಬಿಜೆಪಿ ಸಂಸದರಿಂದಲೇ ಕೇಳಿ ಬಂದಿದೆ. ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು, ಬೆಳಗಾವಿ ಜಿಲ್ಲೆಯ …
Read More »
BigTv News
October 3, 2024
Breaking News, ಬೆಳಗಾವಿ
ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ …
Read More »
BigTv News
October 1, 2024
Breaking News, ಬೆಳಗಾವಿ
ಗೋಕಾಕ: ಜತ್ತ- ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್ …
Read More »
BigTv News
September 29, 2024
Breaking News, ಬೆಳಗಾವಿ
ಬೆಳಗಾವಿ: ಸರ್ಕಾರಿ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಲೀಡ್ ಬ್ಯಾಂಕುಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣರಿಗೆ ಬ್ಯಾಂಕಿಂಗ್ ವ್ಯವಹಾರಗಳ ಅರಿವು ಮೂಡಿಸಬೇಕು.ಈ ಬಗ್ಗೆ ಮುಂದಿನ ಸಭೆಯಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಬ್ಯಾಂಕುಗಳಲ್ಲಿ ಬಹುದಿನದಿಂದ …
Read More »
BigTv News
September 28, 2024
Breaking News, ಬೆಳಗಾವಿ
ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು …
Read More »
BigTv News
September 28, 2024
Breaking News, ಬೆಳಗಾವಿ
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ …
Read More »
BigTv News
September 24, 2024
Breaking News, ಬೆಳಗಾವಿ
ಚಿಕ್ಕೋಡಿ: ರಾಜ್ಯದ ಕೆಲವೆಡೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪ್ಯಾಲಿಸ್ತೇನ್ ಧ್ವಜ ಹಾರಿಸಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿದ್ದರು. ಪಾಕಿಸ್ತಾನ, ಇರಾನ್ ಧ್ವಜವನ್ನೂ ಹಾರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಪ್ಯಾಲಿಸ್ತೇನ್ ಧ್ವಜ ಹಾರಾಟದ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ವಿರೋಧಿ ದೇಶದ ಧ್ವಜ ಹಾರಾಡಿದ್ರೆ ಕ್ರಮ ಕೈಗೊಳ್ಳಬಹುದು. ಆದರೆ ಎಲ್ಲಾ ಮುಸ್ಲಿಂ ಕಂಟ್ರಿಗಳೂ ಭಾರತ ದೇಶದ ವಿರೋಧಿಗಳಲ್ಲ. ಭಾರತದ ಜೊತೆಗೆ ಕೆಲವು ಮುಸ್ಲಿಂ ದೇಶಗಳು ಸ್ನೇಹ …
Read More »