Breaking News

ಬೆಳಗಾವಿ

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ದೇಶದಾದ್ಯಂತ ನಂದಿನಿ ತುಪ್ಪಕ್ಕೆ ಭಾರೀ ಬೇಡಿಕೆ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಸಿ.ಎಂ ಎನ್‌.ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ತಯಾರಿಸಿದ ನಂದಿನಿ ತುಪ್ಪಕ್ಕೆ ದೇಶದಾದ್ಯಂತ ಜನರು ಮತ್ತು ದೇವಾಲಯಗಳಿಂದ ಭಾರಿ ಬೇಡಿಕೆ ಬಂದಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ (ಬೆಮುಲ್‌) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆಎಂಎಫ್ ಅಧ್ಯಕ್ಷನಿದ್ದಾಗ, ತಿರುಮಲ ತಿರುಪತಿ ದೇವಸ್ಥಾನಕ್ಕೆ ಲಡ್ಡು …

Read More »

2 ಎ ಮೀಸಲಾತಿ: ಅ.15 ರಂದು ಸಿಎಂ ಲಿಂಗಾಯತ ಮುಖಂಡರೊಂದಿಗೆ ಸಭೆ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಮುಖಂಡರೊಂದಿಗೆ ಅಕ್ಟೋಬರ್ 15ರಂದು ಸಭೆ ನಡೆಸಿ, ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಳಂಬವಾಗುತ್ತಿರುವ ಕುರಿತು ಚರ್ಚಿಸಲು ಬೆಳಗಾವಿಯಲ್ಲಿ ಲಿಂಗಾಯತ ವಕೀಲರ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಮಾತನಾಡಿದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, , ಸರ್ಕಾರದಲ್ಲಿ ಯಾರಿದ್ದಾರೆಂದು ನೋಡಿಕೊಂಡು ನಾವು ಪ್ರತಿಭಟನೆ ಮಾಡುವುದಿಲ್ಲ. ರಾಜಕೀಯ ಹೋರಾಟವನ್ನು ನಿಮ್ಮ ಮನೆಯಲ್ಲಿ …

Read More »

ಬೆಳಗಾವಿ ಪ್ರವಾಸೋದ್ಯಮಕ್ಕೆ ಮೂಲಸೌಕರ್ಯದ ಕೊರತೆ

ಬೆಳಗಾವಿ: ಪ್ರಾಕೃತಿಕ, ಧಾರ್ಮಿಕ, ಐತಿಹಾಸಿಕ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಗಡಿಜಿಲ್ಲೆ ಬೆಳಗಾವಿಯಲ್ಲಿ ಇರುವ ಪ್ರವಾಸಿ ತಾಣಗಳು ಸಾಕಷ್ಟು. ಆದರೆ, ಪ್ರಚಾರದ ಕೊರತೆ, ಮೂಲಸೌಕರ್ಯ ಅಭಾವ, ಆಡಳಿತ ಯಂತ್ರದ ತಾತ್ಸಾರ ನಿಲುವಿನಿಂದ ಇಲ್ಲಿ ಪ್ರವಾಸೋದ್ಯಮ ಸೊರಗಿದೆ. ಸವದತ್ತಿಯ ಯಲ್ಲಮ್ಮನಗುಡ್ಡ, ಗೋಕಾಕ ಜಲಪಾತ, ಗೊಡಚಿನಮಲ್ಕಿ ಜಲಪಾತ, ಧೂಪದಾಳ ಪಕ್ಷಿಧಾಮ, ಚನ್ನಮ್ಮನ ಕಿತ್ತೂರು ಕೋಟೆ, ಖಾನಾಪುರ ತಾಲ್ಲೂಕಿನ ಹಲಸಿ ಸೇರಿದಂತೆ ಜಿಲ್ಲೆಯಲ್ಲಿ 98 ಪ್ರವಾಸಿ ತಾಣಗಳನ್ನು ಪ್ರವಾಸೋದ್ಯಮ ಇಲಾಖೆ ಗುರುತಿಸಿದೆ. ಸವದತ್ತಿಯ ಯಲ್ಲಮ್ಮ ದೇವಸ್ಥಾನ …

Read More »

ಮಲಪ್ರಭಾ ಸಕ್ಕರೆ ಕಾರ್ಖಾನೆ ಅವ್ಯವಹಾರ: ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರೈತ ಸಂಘಗಳ ಆಗ್ರಹ

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕಾರ್ಖಾನೆ ಆವರಣದಲ್ಲಿ ರೈತ ಸಂಘಗಳ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. ಅವ್ಯವಹಾರದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಸೆ.25ರಂದು ನಡೆಯಲಿರುವ ಕಾರ್ಖಾನೆ ವಾರ್ಷಿಕ ಮಹಾಸಭೆಯಲ್ಲಿ ಠರಾವು ಪಾಸ ಮಾಡಬೇಕೆಂದು ಆಗ್ರಹಿಸಿದರು, ತನಿಖೆ ನಡೆಸಲು ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ರೈತರು, ಲೆಕ್ಕ …

Read More »

2 ಎ ಮೀಸಲಾತಿ ಕುರಿತು ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ …

Read More »

ಬ್ಯಾಂಕ್ ಠೇವಣಿದಾರರ ಹಣ ಮರಳಿಸಲು ಯತ್ನ: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ಮಹಾಲಕ್ಷ್ಮಿ ಅರ್ಬನ್‌ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ಮೋಸಹೋದವರಿಗೆ ಹಣ ಮರಳಿ ಕೊಡಿಸುವ ಯತ್ನ ಮಾಡಲಾಗುವುದು. ಆರ್.ಬಿ.ಐ. ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಭರವಸೆ ನೀಡಿದರು. ₹74.87 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ ಠೇವಣಿದಾರರ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು …

Read More »

ಅಧಿಕಾರಿಗಳ ಎಡವಟ್ಟು: ಬೆಳಗಾವಿ ನಗರ ಪಾಲಿಕೆಗೆ 9 ಕೋಟಿ ರೂ. ನಷ್ಟ

ಬೆಳಗಾವಿ: ಬೆಳಗಾವಿ ನಗರದ ಓಲ್ಡ್ ಪಿಬಿ ರಸ್ತೆಯಿಂದ ಖಾನಾಪುರ ಸಂಪರ್ಕಿಸುವ ರಸ್ತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಡಾಂಬರ್ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಸವಾರರು ಕೂಡ ನೆಮ್ಮದಿಯಾಗಿ ಓಡಾಡುತ್ತಿದ್ದರು. ಆದರೆ, ಹಾಗೆ ರಸ್ತೆ ನಿರ್ಮಾಣವಾದ ಮೂರು ವರ್ಷದ ಬಳಿಕ ಇದೀಗ ಬಂದ್ ಆಗಿದೆ, ಮಾಲೀಕನ ಅನುಮತಿ ಪಡೆಯದೇ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರಿಂದ ರಸ್ತೆ ಮತ್ತೆ ಮಾಲೀಕನ ಪಾಲಾಗಿದೆ. ಅಧಿಕಾರಿಗಳ ಅವಾಂತರದಿಂದ ಪಾಲಿಕೆಗೆ 9 ಕೋಟಿ ರೂ. ನಷ್ಟವಾಗಿದೆ. ಸದ್ಯ 9 ಕೋಟಿ …

Read More »

ಶಿವಸಾಗರ ಸಕ್ಕರೆ ಕಾರ್ಖಾನೆಯಿಂದ ಅನ್ಯಾಯ: ರೈತರಿಂದ ಪ್ರತಿಭಟನೆ

ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …

Read More »

ಕಿತ್ತೂರು ಉತ್ಸವದಲ್ಲಿ ಮಹಿಳಾ ಕಲಿಗಳ ಕಾದಾಟ

ಬೆಳಗಾವಿ: ಮ್ಯಾಟ್‌ ಕುಸ್ತಿಯೇ ಜನಪ್ರಿಯವಾಗುತ್ತಿರುವ ಈ ಕಾಲಘಟ್ಟದಲ್ಲೂ, ಸಾಂಪ್ರದಾಯಿಕವಾಗಿ ಮಣ್ಣಿನ ಕಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ಕುಸ್ತಿ ಪಂದ್ಯಾವಳಿ ಆಯೋಜನೆಗೆ ತಯಾರಿ ನಡೆದಿದೆ. ಈ ಬಾರಿ ಕಿತ್ತೂರು ಉತ್ಸವದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ವಿದೇಶದ ಮಹಿಳಾ ಕಲಿಗಳು ಕಾದಾಟ ನಡೆಸಲಿದ್ದಾರೆ. ಪ್ರತಿವರ್ಷ ಅಕ್ಟೋಬರ್‌ 23 ರಿಂದ 25 ರವರೆಗೆ ಕಿತ್ತೂರು ಉತ್ಸವ ವೈಭವದಿಂದ ನೆರವೇರುತ್ತದೆ, ಕೊನೆಯ ದಿನದಂದು ರಾಷ್ಟ್ರಮಟ್ಟದ ಪುರುಷರು ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ನಡೆಯುತ್ತಿತ್ತು. ಕಳೆದ ವರ್ಷ ಮೊದಲ ಬಾರಿ …

Read More »

ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ ನೀಡಿ, ವಸತಿ ನಿಲಯಗಳ ಸುತ್ತಲಿನ ಪರಿಸರ, ಅಡುಗೆ ಕೋಣೆ, ಡೈನಿಂಗ್‌ಹಾಲ್, ವಿಶ್ರಾಂತಿ …

Read More »