Breaking News

ಬೆಳಗಾವಿ

ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಆಧುನಿಕ ಸೌಲಭ್ಯ ಒಳಗೊಂಡ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ರಾಮತೀರ್ಥ ನಗರದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಆವರಣ ಗೋಡೆ ನಿರ್ಮಾಣ, ನೆಲ ಸಮತಟ್ಟುಗೊಳಿಸುವುದು ಸೇರಿದಂತೆ ಮೊದಲ ಹಂತದ ಕಾಮಗಾರಿಗಳು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿವೆ ಎಂದರು. ಸದ್ಯ ಇರುವ ಜಿಲ್ಲಾ ಕ್ರೀಡಾಂಗಣದ ಲೀಸ್‌ …

Read More »

ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಿ: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು …

Read More »

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಬೆಳಗಾವಿಯಲ್ಲಿ 145 ಕಿ. ಮೀ. ಮಾನವ ಸರಪಳಿ

ಬೆಳಗಾವಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗಿತ್ತು. ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಯರಗಟ್ಟಿ, ಹಲಕಿ ಕ್ರಾಸ್, ನೇಸರಗಿ, ಸಾಂಬ್ರಾ, ಬೆಳಗಾವಿ, ಹಿರೇಬಾಗೇವಾಡಿ, ಎಂ‌.ಕೆ.ಹುಬ್ಬಳ್ಳಿ ಮಾರ್ಗವಾಗಿ ಚನ್ನಮ್ಮನ ಕಿತ್ತೂರಿನವರೆಗೆ ಮಾನವ ಸರಪಳಿ ರಚಿಸಲಾಗಿತ್ತು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

Read More »

ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಸಿದ್ಧತೆ: ಜಗದೀಶ ಶೆಟ್ಟರ್‌

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯ ಸಿದ್ಧಪಡಿಸಲಾಗುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು. ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ಕುರಿತಾಗಿ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಭಾರತೀಯ ವಾಯುಪಡೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಕಾಮಗಾರಿ …

Read More »

ಸುವರ್ಣ ಸೌಧದ ವಾರ್ಷಿಕ ನಿರ್ವಹಣೆ 2.5 ಕೋಟಿ ರೂ: ಬೆಳಗಾವಿ ಡಿಸಿ

ಬೆಳಗಾವಿ: ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂಬರುವ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಸಕಾಲಕ್ಕೆ ಸಿದ್ಧವಾಗಲಿದೆ. ಸೌಧದ ವಾರ್ಷಿಕ ನಿರ್ವಹಣೆಗೆ ಕನಿಷ್ಠ 2.5 ಕೋಟಿ ರೂಪಾಯಿ ನಿಧಿಯ ಅಗತ್ಯವಿದ್ದು, ಸರ್ಕಾರ ಇಷ್ಟು ವರ್ಷ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುವರ್ಣ ಸೌಧವನ್ನು ಅಧಿವೇಶನಕ್ಕೆ ಸಜ್ಜುಗೊಳಿಸಲು ಅಗತ್ಯವಿರುವ …

Read More »

ನೀರು ಸರಬರಾಜು ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ವಿಶ್ವಬ್ಯಾಂಕ್ ಪ್ರತಿನಿಧಿಗಳು

ಬೆಳಗಾವಿ: ನಗರ ಮಹಾನಗರ ಪಾಲಿಕೆ ಮತ್ತು ಕೆಯುಐಡಿಎಫ್‌ಸಿ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿಯನ್ನು ವಿಶ್ವಬ್ಯಾಂಕ್ ತಂಡದ ಹಿರಿಯ ಸಾಮಾಜಿಕ ಅಭಿವೃದ್ಧಿ ಪರಿಣಿತರಾದ ಆರ್. ಆರ್. ಮೋಹನ್‌ರವರು ಬೆಳಗಾವಿ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶಿಲಿಸಿ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆದರು. ಮುತ್ಯಾನಟ್ಟಿಯಲ್ಲಿ ಪಾಲಿಕೆಯಿಂದ ನೀರು ಸರಬರಾಜು ವ್ಯತ್ಯಯವಾಗಿದ್ದರಿಂದ ಅದರ ಬದಲಾಗಿ ಇಂಡಾಲ್ ಕಂಪನಿಯು ತನ್ನ ಸಾಮಾಜಿಕ ಜವಾಬ್ದಾರಿಯಿಂದ ಸರಬರಾಜು ಮಾಡುತ್ತಿದೆ. ಹೊಸ …

Read More »

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಕೈಜೋಡಿಸುವುದು ಮುಖ್ಯ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಜೊತೆಗೆ ದಾನಿಗಳು ಕೈಜೋಡಿಸಿದ್ದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಲು ಸಾಧ್ಯ ಎಂದು ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಸುವರ್ಣ ವಿಧಾನಸೌಧದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ವಿದ್ಯಾರ್ಥಿಗಳಿಂದ ಅನಾವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ …

Read More »

ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮದ ಲೋಗೊ ಅನಾವರಣಗೊಳಿಸಿದ ಸಚಿವ ಮಧು ಬಂಗಾರಪ್ಪ

ಬೆಳಗಾವಿ: ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ನಮ್ಮ‌ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ಅನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಕೆಲಸ ಬಿಟ್ಟು ಸಂಘಟನೆಯಲ್ಲಿ ತೊಡಗಿಕೊಂಡ ಶಿಕ್ಷಕರಿಗೆ ಗೇಟ್ ಪಾಸ್: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ಶಾಲೆಗೆ ವಿದ್ಯಾರ್ಥಿಗಳು ಚಕ್ಕರ್‌ ಹಾಕುವುದು ಸಹಜ, ಆದರೆ ಕೆಲವು ಕಡೆ ಶಿಕ್ಷಕರು ಶಾಲೆಗಳಿಗೆ ಬಾರದೆ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದೆ ಅಂತಹ ಶಿಕ್ಷಕರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಪಾಠ ಮಾಡಬೇಕು, ಮಕ್ಕಳಿಗೆ ಸರಿಯಾದ ದಾರಿ ತೋರಿಸಬೇಕು, ಅದನ್ನು ಬಿಟ್ಟು ಬೇರೆ ಬೇರೆ ಕೆಲಸ, ಸಂಘಟನೆಯಲ್ಲಿ ಗುರುತಿಸಿಕೊಂಡರೆ …

Read More »

ವಿವಿಧ ಸಮಸ್ಯೆಗಳ‌ ಕುರಿತು ಅಹವಾಲು ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ

ಹುಕ್ಕೇರಿ: ತಾಲ್ಲೂಕಿನ ಎಲಿಮುನ್ನೋಳಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಜನರ ಅಹವಾಲುಗಳನ್ನು ಆಲಿಸಿದರು. ಗ್ರಾಮದ ಕುರುಬ ಸಮಾಜದವರು ಕುರಿಗಳಿಗೆ ಔಷಧಿ ಅಲಭ್ಯ ಕುರಿತು, ಲಕ್ಷ್ಮಿ ದೇವಿ ಟ್ರಸ್ಟ್ ಕಮಿಟಿಯವರು ಸಮುದಾಯ ಭವನ ನಿರ್ಮಾಣದ ಬಗ್ಗೆ, ರೈತರ ಸೇವಾ ಸಂಘದ ಪತ್ತು ಬಿಡುಗಡೆ ಮಾಡುವ ಕುರಿತು, ಹಾಗೂ ಗ್ರಾಮದ ಎಲ್ಲಮ್ಮದೇವಿ ಮಂದಿರದ ಜಿರ್ಣೋದ್ಧಾರ, ಗ್ರಾಮದ ಬಾವಿಗಳಿಗೆ ತಡೆಗೋಡೆ ನಿರ್ಮಿಸುವ ಕುರಿತು ಸಲ್ಲಿಸಿದ ಮನವಿ ಸ್ವೀಕರಿಸಿದರು. …

Read More »