Breaking News

ಬೆಳಗಾವಿ

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದೆ. ಕರ್ನಾಟಕದಲ್ಲಿಯೂ ಹಲವು ಕಡೆ ಗಣೇಶೋತ್ಸವ ಆಚರಣೆ ಮಾಡುವ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿವೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಬೆಳಗಾವಿಯಲ್ಲಿಯೂ ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಕಛೇರಿಯಲ್ಲಿ ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಅವರು ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ‌ ದೇವಸ್ಥಾನದಲ್ಲಿ …

Read More »

ನಾನು ಸಿಎಂ ಆಗುವ ಅಗತ್ಯ ತಯಾರಿ ನಡೆಸಿದ್ದು, ಅದು ಇಗಲ್ಲ, ಬದಲಾಗಿ 2028 ಕ್ಕೆ: ಸತೀಶ ಜಾರಕಿಹೊಳಿ

ಬೆಳಗಾವಿ : ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದು ಅದು ಈಗ ಆಗಲು ಅಲ್ಲ, ಬದಲಾಗಿ 2028ಕ್ಕೆ ಎಂದು ಸಚಿವ ಸತೀಶ್​​ ಜಾರಕಿಹೊಳಿ ಹೇಳಿದ್ದು, ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ರೇಸ್​​​ನಲ್ಲಿದ್ದಾರೆ ಎಂಬ ಚರ್ಚೆ ಮುನ್ನೆಲೆ ಬರುತ್ತಿರುವುದರಿಂದ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ …

Read More »

ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹರಿದ ಬಸ್: ಓರ್ವ ವಿದ್ಯಾರ್ಥಿ ಸಾವು

ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು. ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ ಓರ್ವ ಬಾಲಕ …

Read More »

ವಸ್ತುಗಳ ದರ ದುಪ್ಪಟ್ಟು ಏರಿಕೆ: ಮಾರುಕಟ್ಟೆಯಲ್ಲಿ ಭರ್ಜರಿ ಖರೀದಿ

ಬೆಳಗಾವಿ: ನಗರದ ಎಲ್ಲ ಮಾರುಕಟ್ಟೆಗಳಲ್ಲೂ ಶುಕ್ರವಾರ ಇಡೀ ದಿನ ಜನವೋ ಜನ ಚತುರ್ಥಿ ಸಿದ್ಧತೆಗಾಗಿ, ಪೂಜಾ ಸಾಮಗ್ರಿಗಳ ಖರೀದಿಗಾಗಿ ಜನ ಸಾಗರೋಪಾದಿಯಲ್ಲಿ ಮಾರುಕಟ್ಟೆಗೆ ಧಾವಿಸಿದರು. ಇದರಿಂದ ಎಲ್ಲ ವಸ್ತುಗಳ ದರವೂ ದುಪ್ಪಟ್ಟು ಏರಿಕೆಯಾಗಿದ್ದು ಕಂಡುಬಂತು. ಇಲ್ಲಿನ ಕಾಕತಿವೇಸ್‌, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ರವಿವಾರ ಪೇಟೆ, ಮಾರ್ಕೆಟ್‌, ಕಿರ್ಲೊಸ್ಕರ್‌ ರಸ್ತೆ, ಖಡೇಬಜಾರ್‌, ರಾಮಲಿಂಗಖಿಂಡ ಗಲ್ಲಿ, ಕಂಬಳಿಕೂಟ ಸೇರಿದಂತೆ ಎಲ್ಲ ಕಡೆ ಜನಜಂಗುಳಿ ಕಂಡುಬಂತು ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹೈರಾಣಾದರು. ಪರಿಣಾಮ …

Read More »

ಶಿಕ್ಷಣ ಮತ್ತು ಶಿಕ್ಷಕರಿಗೆ ಆದ್ಯತೆ ನೀಡಿದರೆ ಅಭಿವೃದ್ಧಿ ಸಾಧ್ಯ

ಬೆಳಗಾವಿ: ಶಿಕ್ಷಣ ಅಭಿವೃದ್ಧಿಯ ಸಂಕೇತವಾಗಿದ್ದು ಯಾವ ರಾಜ್ಯದವರು ಶಿಕ್ಷಣ ಮತ್ತು ಶಿಕ್ಷಕರಿಗೆ ಆದ್ಯತೆ ಕೊಟ್ಟಿದ್ದಾರೆಯೋ, ಅವರು ಅಭಿವೃದ್ಧಿಯತ್ತ ಸಾಗಿದ್ದಾರೆ ಎಂದು ಶಾಸಕ ಆಸೀಫ್‌ ಸೇಠ್‌ ಹೇಳಿದರು. ಇಲ್ಲಿನ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣವು ನಮ್ಮನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯುತ್ತದೆ ಸಮಾಜದಲ್ಲಿ ಜಾಗೃತಿ ಮೂಡಿಸುತ್ತದೆ …

Read More »

ಸವದಿ ಅಚ್ಚರಿ ಹೇಳಿಕೆ: ಸತೀಶ ಜಾರಕಿಹೊಳಿ ಸಿಎಂ ಆದರೆ ಸ್ವಾಗತಿಸುವೆ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಆರೋಪವಿದ್ದು ಆದರೆ ಇದರಲ್ಲಿ ಸಿಎಂ ಅವರ ಯಾವುದೇ ಪಾತ್ರವಿಲ್ಲ ಮತ್ತು ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಒಂದು ವೇಳೆ ಬೆಳಗಾವಿಯಿಂದ ಯಾರೇ ಸಿಎಂ ಆದರೂ ಸ್ವಾಗತ ಮಾಡುತ್ತೇನೆ ಎಂದು ಹೇಳಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಉಸ್ತುವಾರಿ ಸಚಿವ ಸತೀಶ್ …

Read More »

ಅಪಘಾತಗಳ ಸಂಖ್ಯೆಯಲ್ಲಿ ಬೆಳಗಾವಿ 2 ನೇ ಸ್ಥಾನ : ಎಡಿಜಿಪಿ ಅಲೋಕ್ ಕುಮಾರ್

ಬೆಳಗಾವಿ: ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಬೆಳಗಾವಿ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಕಡಿಮೆ ಆಗಿವೆ. ಆದರೂ ಬೆಳಗಾವಿ ಜಿಲ್ಲೆ ಅಪಘಾತಗಳ ಸಂಖ್ಯೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿ ಇದೆ ಎಂದು ಟ್ರಾಫಿಕ್ ಎಡಿಜಿಪಿ ಅಲೋಕ್ ಕುಮಾರ್ ಅವರು ತಿಳಿಸಿದರು. ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಹಾಗೂ ಬೆಳಗಾವಿ ನಗರದಲ್ಲಿ ಟ್ರಾಫಿಕ್ ಬಗ್ಗೆ ಹಿರಿಯ ಅಧಿಕಾರಿಗಳು ಹೊಸ ವಿಧಾನಗಳು ತರಲು ಪ್ರಯತ್ತಿಸುತ್ತಿದ್ದಾರೆ. ಕಳೆದ …

Read More »

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಂಸದ ಜಗದೀಶ ಶೆಟ್ಟರ್..

ಬೆಳಗಾವಿ ಕಳಸಾ-ಬಂಡೂರಿ ಯೋಜನೆಯಡಿ ರಾಜ್ಯಕ್ಕೆ 13 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಅಧಿಸೂಚನೆಯೂ ಹೊರಬಿದ್ದಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಾಮಗಾರಿಗೆ ಅನುಮತಿಯಷ್ಟೇ ಸಿಗಬೇಕಿದೆ. ನನ್ನ ಅಧಿಕಾರವಧಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್‌ ಭರವಸೆ ನೀಡಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಕ್ಕೆ ನೀರು ಹಂಚಿಕೆಗೊಳಿಸಿ, ಮಹದಾಯಿ ನ್ಯಾಯಾಧಿಕರಣ ತೀರ್ಪು ಕೊಟ್ಟಿದೆ. …

Read More »
Featured Video Play Icon

ಚುನಾವಣೆ ಗೆದ್ದ ಬಳಿಕ ಗೆಲುವಿನ ಹರ್ಷದೊಂದಿಗೆ ಹುಬ್ಬಳ್ಳಿಗೆ ಬಂದ ಶೆಟ್ಟರ್: ಸಿದ್ಧಾರೂಢರ ದರ್ಶನ..!

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಚುನಾವಣೆ ಗೆದ್ದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿಯ ಆರಾಧ್ಯ ಧೈವ ಸದ್ಗುರು ಸಿದ್ಧಾರೂಢರ ಮಠಕ್ಕೆ ಭೇಟಿ‌‌ ನೀಡಿ ದರ್ಶನ ಪಡೆದರು.ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.ಇನ್ನೂ ಆರತಿ ಬೆಳಗಿ ಬರಮಾಡಿಕೊಂಡ ಬಿಜೆಪಿ ಕಾರ್ಯಕರ್ತರು, ಶೆಟ್ಟರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದರು. ಶ್ರೀ …

Read More »
Featured Video Play Icon

ಮಹಾರಾಷ್ಟ್ರದಲ್ಲಿ ಭಾರಿ ಗಾಳಿಗೆ ನದಿಯಲ್ಲಿ ಮಗುಚಿದ ದೋಣಿ 06 ಜನ ನೀರು ಪಾಲು..!

ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದ್ದು ಒಂದು ವರ್ಷದ ಮಗು ಸೇರಿ 06ಜನ‌ ನೀರು ಪಾಲಾಗಿರುವ ಘಟನೆ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ನಡೆದಿದೆ.ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 06ಜನರು ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(೩೦) …

Read More »