Breaking News

ಬೆಳಗಾವಿ

ಟೊಮೆಟೊ ಕಳ್ಳನ ಬಂದನ…

ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …

Read More »

ಪತ್ನಿ ಎದುರೇ ಪತಿಯ ಮೇಲೆ ಹಲ್ಲೆ: ದುಸ್ಕರ್ಮಿಗಳ ಹೀನಾಯ ಕೃತ್ಯ.

ಬೆಳಗಾವಿ: ಪತ್ನಿಯ ಕಣ್ಣೆದುರೇ ಪತಿಯ ಮೇಲೆ‌ ಮಚ್ಚು, ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದ ದುಷ್ಕರ್ಮಿಗಳು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಂಕರ್ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕ ಜೊತೆಗೆ ಆಗಮಿಸಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಕಳೆದ ಮುರು ತಿಂಗಳ ಹಿಂದಷ್ಟೇ …

Read More »

ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ:12 ಗಂಟೆಯೊಳಗೆ ಆರೋಪಿಯನ್ನು ಬಂಧಿಸವಲ್ಲಿ ಪೊಲೀಸರು ಯಶಸ್ವಿ.

ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಾದ 12 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿಯ ಮಾರುತಿ ನಗರದ ಗಜಾನನ ಪಾಟೀಲ್ (40) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿಯು ಟ್ಯೂಷನ್‌ಗೆ ಹೋಗುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿಯನ್ನು ಎತ್ತಿಕೊಂಡು ಹೋಗಿ ಅಪಹರಿಸಲು ಯತ್ನಿಸಿದ್ದ ಈ ವೇಳೆ ಬಾಲಕಿ ಕಿರುಚಿದ್ದರಿಂದ ಆರೋಪಿ ಓಡಿ ಹೋಗಿದ್ದಾನೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ …

Read More »

ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಗಲಾಟೆ ವೇಳೆ ಪೋಲಿಸ್‌ ಅಧಿಕಾರಿಗೆ ಗಾಯ

ಬೆಳಗಾವಿ; ಜಿಲ್ಲೆಯ ರಾಮದರ್ಗ ತಾಲ್ಲೂಕಿನ ಕಾಲೇಜ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ, ಕ್ಷುಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಈ ಗಲಾಟೆ ನಡದಿದೆ , ಈ ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್‌ ಇಲಾಖೆಯ ಎಸ್.ಐ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ, ಕಾಲೇಜು ಆವರಣದಲ್ಲಿ ಮೊದಲು ಪ್ರಾರಂಭವಾದ ಜಗಳವನ್ನು ಬಗೆಹರಿಸಿದ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿ ಹೇಳಿ ಮನೆಗೆ ಹೋಗುವಂತೆ ಹೇಳಿದ್ದಾರೆ , ತದನಂತರದಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿಗಳು …

Read More »

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೋಲಿಸ್‌ರ ದಾಳಿ: ವಾಹನಗಳನ್ನು ವಶಕ್ಕೆ ಪಡೆದ ಪೋಲಿಸರು.

ಬೆಳಗಾವಿ: ಅಥಣಿ ತಾಲೂಕಿನ ಮಹಿಷವಾಡಗಿಯಲ್ಲಿ ಅಕ್ರಮವಾಗಿ ಮರುಳು ತುಂಬುತ್ತಿದ್ದ 30 ಕ್ಕೂ ಅಧಿಕ ವಾಹನಗಳನ್ನು ಅಥಣಿ ಪೋಲಿಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಸಧ್ಯ 26 ಟ್ರ್ಯಾಕ್ಟರ್, 4 ಜೆಸಿಪಿ, 2 ಹೈವಾ (ಟಿಪ್ಪರ್)ಗಳನ್ನು ವಶ ಪಡಿಸಿಕೊಂಡು ಅಥಣಿ ಡಿವೈಎಸ್ಪಿ ಕಛೇರಿ ಆವರಣದಲ್ಲಿ ವಾಹನಗಳನ್ನು ಇರಿಸಿದ್ದಾರೆ.ಈ ದಾಳಿಯಲ್ಲಿ ಸಿಪಿಐ ರವೀಂದ್ರ ನಾಯಕೋಡಿ, ಪಿಎಸ್ಐ ಶಿವಶಂಕರ ಮುಖರಿ , ರಾಕೇಶ ಬಗಲಿ, ಚಂದ್ರಕಾಂತ ಸಾಗನೂರ, ಸಿಬ್ಬಂದಿಗಳಾದ ರಮೇಶ ಹಾದಿಮನಿ, ಜಿ ಎಚ್ …

Read More »

ಮಳೆಗಾಗಿ ಜಾಲಿಗಿಡದಲ್ಲಿ ಪೂಜೆ,ಬೆಳಗಾವಿಯಲ್ಲಿ ಮರ ಏರಿದ ಸ್ವಾಮೀಜಿ

ಬೆಳಗಾವಿ; ರಾಜ್ಯದ ಎಲ್ಲೆಡೆ ಮಳೆಗಾಗಿ ವಿಶೇಷ ಆಚರಣೆಗಳು ನಡೆಯುತ್ತಿವೆಯಾದ್ರೂ ಈವರೆಗೂ ಪರಿಪೂರ್ಣ ಮಳೆಯ ಆಗಮನ ಆಗಿಲ್ಲ. ಹಾಗಾಗಿ ಮಳೆಗಾಗಿ ಮುಳ್ಳಿನ ಮರದ ಮೇಲೆ ( ಜಾಲಿಗಿಡ ) ಮಹಾರಾಜ ಸಾಧು ಒಬ್ಬರು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜಂಬಗಿ ಗ್ರಾಮದ ಸುರೇಶ್ ಮಹಾರಾಜರು ಅಥಣಿ ತಾಲೂಕಿನ ಕರ್ಲಟ್ಟಿ ಗ್ರಾಮದಲ್ಲಿ ಮುಳ್ಳಿನ ಮರವೇರಿ ವಿಭಿನ್ನ ರೀತಿಯಲ್ಲಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಮಳೆ ಬಾರದಿರುವ ಸಲುವಾಗಿ ಮುಳ್ಳಿನ ಮರವೇರಿ …

Read More »

ಮುಸ್ಲಿಂ ಬಾಂದವರಿಂದ ಮಳೆಗಾಗಿ ನಮಾಜ್‌ .

ಬೆಳಗಾವಿ;ರಾಜ್ಯದಲ್ಲಿ ಮುಂಗಾರು ಮಳೆ ಕುಂಠಿತವಾದ ಕಾರಣ ಮುಸ್ಲಿಂ ಬಾಂದವರು ಬೆಳಗಾವಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ಬಾರದ ಕಾರಣದಿಂದ ಬರಗಾಲದ ಭೀತಿ ಎದುರಾಗಿದೆ. ಅಲ್ಲದೆ ರೈತರು ಕಂಗಾಲಾಗಿದ್ದು, ಕೃಷಿ ಚಟುವಟಿಕೆ ನಡೆಸಲು ಹಿಂದೇಟು ಹಾಕುವಂತಾಗಿದೆ. ಇದೀಗ ವಾಡಿಕೆಯಂತೆ ಮಳೆ ಬರಲು ಈದ್ಗಾ ಮೈದಾನದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ್ದಾರೆ. ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ಮಳೆಗಾಗಿಬೆಳಗಾವಿಯ ಅಂಜುಮಾನ್ …

Read More »

ಹಲ್ಲಿಬಿದ್ದ ಆಹಾರ ಸೇವನೆ 29 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ಸಾರು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಸೋಮವಾರ (ದಿ.19) ಬೆಳಗ್ಗೆ ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಈ ವೇಳೆ ಚಪಾತಿ, ಅನ್ನ ಸಾರು ನೀಡಲಾಗಿತ್ತು. ಆದರೆ ಸಾರಿನಲ್ಲಿ ಹಲ್ಲಿ ಬಿದ್ದಿದೆ. ಅದೇ ಸಾರನ್ನು ವಿದ್ಯಾರ್ಥಿಗಳು ಸೇವಿಸಿದ್ದ ಹಿನ್ನಲೆಯಲ್ಲಿ ಕೆಲ ಸಮಯದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. …

Read More »

ಸ್ವಾಮೀಜಿಗಳ ಕಾರು ಅಪಘಾತ ; ಇಬ್ಬರ ಸಾವು

: ಬೆಳಗಾವಿ ತಾಲ್ಲೂಕಿನ ಹೊನಗಾ ಬಳಿಯ ಬೆನ್ನಾಳಿ ಬ್ರಿಜ್ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ಬೆಳಗ್ಗೆ 11 ಗಂಟೆಯ ಸುಮಾರಿಗೆ ಕ್ಯಾಂಟರ್, ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಅಪಘಾತದಲ್ಲಿ ಬೆಳಗಾವಿ ತಾಲ್ಲೂಕಿನ ಶಿವಾಪೂರ ಗ್ರಾಮದಲ್ಲಿರುವ ಶ್ರೀ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿ ಕಡೆ ಬರುತ್ತಿದ್ದ …

Read More »

ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಲು ಮುಂದಾಗಿದ್ದಾರೆ ಸಚಿವರು…

ಬೆಳಗಾವಿ: ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರಕಾರದ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಅದನ್ನು ಸಮರ್ಪಕವಾಗಿ ನಡೆಸಿ. ಇನ್ನೂ ಎಲ್ಲೆಲ್ಲಿ ಸಾಧ್ಯವಿದೆ ಎಂದು ಪರಿಶೀಲಿಸಿ ಆದ್ಯತೆಯ ಮೇಲೆ ಆರಂಭಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಬುಧವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ಆರಂಭಿಸಲಾಗಿರುವ ಆರು ಇಂದಿರಾ ಕ್ಯಾಂಟೀನ್ …

Read More »

You cannot copy content of this page