Breaking News

ಬೆಳಗಾವಿ

ಧಾರವಾಡ: 89 ವರ್ಷದ ಅಜ್ಜನಿಗೆ ಪಿಎಚ್‌.ಡಿ ಪದವಿ..

ಧಾರವಾಡ ಬರೋಬ್ಬರಿ 89 ವರ್ಷದ ದೊಡಮನಿ ಮಾರ್ಕಂಡೇಯ ಯಲ್ಲಪ್ಪ ಮಂಡಿಸಿದ ‘ಶಿವಶರಣ ಡೋಹರ ಕಕ್ಕಯ್ಯ: ಒಂದು ಅಧ್ಯಯನ’ ಮಹಾಪ್ರಬಂಧ‌ಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್‌.ಡಿ ಪದವಿಗೆ ಅಂಗೀಕರಿಸಿದೆ. ಇಳಿ ವಯಸ್ಸಿನಲ್ಲಿ ಅವರು 18 ವರ್ಷ ಅಧ್ಯಯನ ನಡೆಸಿದ್ದಾರೆ…2006 ನವೆಂಬರ್‌ನಲ್ಲಿ ಪಿಎಚ್‌.ಡಿ ಅಧ್ಯಯನಕ್ಕೆ ಮಾರ್ಕಂಡೇಯ ಅವರು ನೋಂದಣಿ ಮಾಡಿಸಿದರು. ಆದರೆ, ಮಾರ್ಗದರ್ಶಕರಾಗಿದ್ದ ಕರ್ನಾಟಕ ಕಾಲೇಜಿನ ಪ್ರೊ.ತಳವಾರ ನಿಧನರಾದರು. ನಂತರ, ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್‌.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಎನ್‌.ಹಳ್ಳಿ …

Read More »

ಸಾಲ ಪಡೆದು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು…

ಬೆಂಗಳೂರಿ. ಗೋಕಾಕ್ ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ ಫ್ಯಾಕ್ಟರಿ ಸಲುವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೋಟ್ಯಾಂತರ ರೂಪಾಯಿ ಸಾಲವನ್ನು ಪಡೆದುಕೊಂಡಿದ್ದು ಇದೀಗ ಸಾಲವನ್ನು ಮರುಪಾವತಿ ಮಾಡದೆ ಇದ್ದಿದ್ದರಿಂದ ಬೆಂಗಳೂರಿನ ವಿವಿ ಪುರಂ ಠಾಣೆಯಲ್ಲಿ ಸಾಹುಕಾರ್ ವಿರುದ್ಧ FIR ದಾಖಲಾಗಿದೆ.ಸೌಭಾಗ್ಯ ಲಕ್ಷ್ಮಿ ಮೈ ಶುಗರ್ ಕಂಪನಿ ಅಧ್ಯಕ್ಷರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಜಾರಕಿಹೊಳಿ ಈ ಒಂದು ಕಂಪನಿಯಲ್ಲಿ ವಸಂತ ಪಾವಡೆ ಹಾಗೂ ಶಂಕರ ಪಾವಡೆ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.ಚಾಮರಾಜಪೇಟೆ …

Read More »

ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ….

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …

Read More »

ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪದೇ ಪದೇ ಯತ್ನಾಳ್‌ ವಾಗ್ದಾಳಿ….

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ಸ್ಥಾನ ಕೈ ತಪ್ಪಿದ ಮೇಲೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾಗೂ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪದೇ ಪದೇ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧವೇ ಬಸವನಗೌಡ ಪಾಟೀಲ್‌ ಯತ್ನಾಳ್‌ ವಾಗ್ದಾಳಿಯನ್ನ ಮುಂದುವರೆಸಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ …

Read More »

ವಿಷಾಹಾರ ಸೇವಿಸಿದ್ದ ಐದು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ವಿಷಾಹಾರ ಸೇವಿಸಿ ಐದು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಐದು ವಿದ್ಯಾರ್ಥಿಗಳನ್ನು ಅಲ್ಪಸಂಖ್ಯಾತ ‌ಮೋರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ಪಲಾವ್ ಸೇವಿಸಿದ್ದರಿಂದ 50 ಜನರ ಪೈಕಿ 5 ಜ‌ನ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ಗೊತ್ತಾಗಬೇಕಿದೆ

Read More »

ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ…

ಬೆಳಗಾವಿ: ನಗರದಲ್ಲಿ ನವೆಂಬರ್‌ 1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಬಾರಿಯ ಕನ್ನಡ ಹಬ್ಬದ ಮೆರವಣಿಗೆಯಲ್ಲಿ 5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಡೀ ರಾಜ್ಯದಲ್ಲಿ ಬೆಳಗಾವಿಯಲ್ಲೇ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸಲಾಗುತ್ತದೆ. ಮೆರವಣಿಗೆಯಲ್ಲಿ ಭಾಗವಹಿಸುವವರಿಗೆ ಶುದ್ಧ ಕುಡಿಯುವ ನೀರು, ಮೊಬೈಲ್‌ ಟಾಯ್ಲೆಟ್‌ ಮತ್ತಿತರ ಮೂಲಸೌಕರ್ಯ ಒದಗಿಸಲಾಗುವುದು. ರಾಣಿ ಚನ್ನಮ್ಮನ ವೃತ್ತದಲ್ಲಿ …

Read More »

ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖಾ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ,ಕಾರ್ಮಿಕ ವಲಯದ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಸಂಸ್ಥೆಗಳ ಮಾಲೀಕರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿದರು. ಕಾರ್ಮಿಕರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು. …

Read More »

ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆ…..

ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು‌ ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ನಾಗನೂರು …

Read More »

ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ…

ಬೆಳಗಾವಿ: ಜಿಲ್ಲೆಯ ಶಿವಬಸವ ನಗರದಲ್ಲಿ ನಿನ್ನೆ(ಬುಧವಾರ) ರಾತ್ರಿ 9 ಗಂಟೆ ಸುಮಾರಿಗೆ ಹಂತಕರು ಬೈಕ್​ ಮೇಲೆ ಹಿಂದಿನಿಂದ ಬಂದು ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯ ಲಭ್ಯವಾಗಿದೆ. ಬೆಳಗಾವಿಯ ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಕೊಲೆಯಾದ ಯುವಕ. ಶಿವಬಸವ ನಗರದ ರಸ್ತೆಯಲ್ಲಿ ಮೊಬೈಲ್​ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ನಾಗರಾಜನ ಕೊಲೆ ಮಾಡಲು ಬೈಕ್ ಮೇಲೆ ಬಂದ ಮೂವರು ಆರೋಪಿಗಳು …

Read More »

ಚಂದ್ರಯಾನ 3 ಯಶಸ್ಸಿನಲ್ಲಿ ಬೆಳಗಾವಿ ಕೂಡ ಪ್ರಮುಖ ಪಾತ್ರ….

ಬೆಳಗಾವಿ: ಚಂದ್ರಯಾನ 3 ಯಶಸ್ಸಿನಲ್ಲಿ ಬೆಳಗಾವಿ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದು, ಸರ್ವೋ ಕಂಟ್ರೋಲ್ಸ್ ಏರೋಸ್ಪೇಸ್ ಆಂಡ್ ಟೆಕ್ನಾಲಜಿ ಕಂಪನಿಯು ವಿಕ್ರಮ್​ ಲ್ಯಾಂಡರ್​ಗೆ ಬಿಡಿಭಾಗಗಳನ್ನು ಪೂರೈಕೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಚಂದ್ರಲೋಕಕ್ಕೂ ಹರಡುವಂತೆ ಮಾಡಿದೆ. ಇಡೀ ವಿಶ್ವವೇ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ವಿಕ್ರಮ್​ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೊಸ ಮೈಲಿಗಲ್ಲು ನಿರ್ಮಿಸಿದೆ. ಇನ್ನು ಚಂದ್ರಯಾನ …

Read More »