Breaking News

ಬೆಳಗಾವಿ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ

ಬೆಳಗಾವಿ: ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿವೇಶನವನ್ನು ಪರಿಣಾಮಕಾರಿಯಾಗಿ ನಡೆಸುವ ಬಗ್ಗೆ ಚರ್ಚಿಸಿದರು. ಪಾಟೀಲ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಹಾರ, ಸಾರಿಗೆ, ಆರೋಗ್ಯ ಮತ್ತು ಇತರ ಸೌಲಭ್ಯಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು. ಅಧಿವೇಶನ …

Read More »


ಜೆಡಿಎಸ್ ಗೆ ಸೇರ್ಪಡೆ : ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರವುಳಿದಿದ್ದು, ಪಕ್ಷ ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಇದೀಗ ಸ್ವತಃ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಬೆಳಗುಂದಿ ಗ್ರಾಮದಲ್ಲಿ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ. ಆದರೆ …

Read More »

ಸರ್ಕಾರ ಗೌರವಗಳೊಂದಿಗೆ ಅಂತ್ಯಕ್ರಿಯೆಯಾದ ಆನಂದ ಮಾಮನಿ

ಬೆಳಗಾವಿ; ಸವದತ್ತಿ ಮತಕ್ಷೇತ್ರ ಶಾಸಕ ಹಾಗೂ ವಿಧಾನ ಸಭೆಯ ಉಪ ಸಭಾಪತಿ ಆನಂದ ಮಾಮನಿ ವಿಧಿವಶರಾಗಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರು, ಶಾಸಕರು ಸೇರಿದಂತೆ ಸಾವಿರಾರು ಬೆಂಬಲಿಗರು ಆಪ್ತರು ಅಂತಿಮ ದರ್ಶನ ಪಡೆದರು. ಕ್ಷೇತ್ರದ ಬೆಂಬಲಿಗರು ಆಪ್ತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದ್ದು ಪತ್ನಿ ಹಾಗೂ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಸವದತ್ತಿ ಮತಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದ ಆನಂದ ಉರ್ಫ್ ವಿಶ್ವನಾಥ ಚಂದ್ರಶೇಖರ ಮಾಮನ …

Read More »

ಜೈಲಿನಲ್ಲಿ ವಿಚಾರಣಾದೀನ ಕೈದಿ ಆತ್ಮಹತ್ಯೆ

ಬೆಳಗಾವಿ: ಜಿಲ್ಲೆಯ ಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಿಡಲಗಾ ಜೈಲಿನಲ್ಲಿ ಇದ್ದ ವಿಚಾರಣಾದೀನ ಕೈದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ‌ ಕೈದಿ. ಮೂರು ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಮಂಜುನಾಥ, ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್‌ಶೀಟ್​ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More »

ಗಣಪತಿ ಮೆರವಣಿಗೆಯಲ್ಲಿ ಯುವಕನ ಬರ್ಬರವಾಗಿ ಹತ್ಯೆ

ಬೆಳಗಾವಿ: ಗಣಪತಿ ಮೆರವಣಿಗೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನಗೌಡ ಪಾಟೀಲ(20) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅರ್ಜುನಗೌಡ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರಗೋಡ ಪೊಲೀಸ್ ಠಾಣೆ …

Read More »

ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

ಬೆಳಗಾವಿ: ಮಾನಸಿಕ ನೊಂದ ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿ ಮಠಕೆ ನೇಣು ಹಾಕಿಕೊಂಡ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳದಲ್ಲಿ ಬೆಳಕಿಗೆ ಬಂದಿದೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಿಡಿ ಹೊರ ಬರುತ್ತೆ ಎಂದು ಹೆದರಿಕೊಂಡು ಬೈಲಹೊಂಗಲ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಸಾವಿಗೆ ಕೊರಳೊಡ್ಡಿದ್ದಾರೆ. ಇಬ್ಬರು ಮಹಿಳೆಯರ ವೈರಲ್​ ಆಡಿಯೋದಲ್ಲಿ ಸ್ವಾಮೀಜಿ ಹೆಸರು ಕೇಳಿ ಬಂದಿತ್ತು. ಮುರುಘಾಶ್ರೀ …

Read More »

ಪರೀಕ್ಷೆಯಲ್ಲಿ ಅಕ್ರಮ : ಆರೋಪಿಗಳು ಬಂಧನ

ಬೆಳಗಾವಿ : ಕೆಪಿಟಿಸಿಎಲ್‌ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಭಾರೀ ಅಕ್ರಮ ನಡೆದಿರುವ ಶಂಕೆ ಮೂಡಿದೆ.ಬೆಳಗಾವಿಯಲ್ಲಿ ಸ್ಮಾರ್ಟ್‌ವಾಚ್‌ ಬಳಸಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯನ್ನು ಬಂಧಿಸಿದ ಬೆನ್ನಲ್ಲೇ, ಇದೀಗ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಅಪ್ಪ-ಮಗನನ್ನು ಬಂಧಿಸಿದ್ದಾರೆ. ಗದಗ ನಗರದ ಮುನ್ಸಿಪಲ್‌ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಆತನ ಪುತ್ರ ಬಂಧಿತ ಆರೋಪಿಗಳು. ಆ.7ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಕೆಪಿಟಿಸಿಎಲ್‌ ಕಿರಿಯ ಸಹಾಯಕ ಹುದ್ದೆ …

Read More »

ಯುಪಿಎಸ್‌ಸಿ ರಿಸಲ್ಟ್ : ಸಾಹಿತ್ಯ ರಾಜ್ಯ ಕ್ಕೆ 10ನೇ ರ್ಯಾಂಕ್

ಬೆಳಗಾವಿ: ಕೇಂದ್ರ ನಾಗರಿಕ ಸೇವಾ ಆಯೋಗ (ಯುಪಿಎಸ್‌ಸಿ) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೈಲಹೊಂಗಲ, ರಾಯಬಾಗ ತಾಲೂಕಿನ ಇಬ್ಬರು ಅಭ್ಯರ್ಥಿಗಳು ರ‌್ಯಾಂಕ್ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ 961 ಅಂಕ ಪಡೆಯುವ ಮೂಲಕ ದೇಶಕ್ಕೆ 250ನೇ ರ‌್ಯಾಂಕ್ ಪಡೆದುಕೊಂಡಿದ್ದು, ರಾಜ್ಯಕ್ಕೆ 10ನೇ ರ‌್ಯಾಂಕ್ ಪಡೆದಿದ್ದಾರೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಗಜಾನನ ಬಾಳೆ 953 ಅಂಕ …

Read More »

ಗಾಂಜಾ ಮಾರುತ್ತಿದ್ದ ನಾಲ್ವರ ಸೆರೆ

ಬೆಳಗಾವಿ: ಗೋಕಾಕ್​ನಲ್ಲಿ ಗಾಂಜಾ, ಹೆರಾಯಿನ್ ಮಾರುತ್ತಿದ್ದ ನಾಲ್ವರನ್ನು ಸೆರೆಹಿಡಿಯಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮೂವರು ಗಾಂಜಾ, ಹೆರಾಯಿನ್​​​​​​ ಮಾರಲು ಬಂದಿದ್ದರು. ಗಾಂಜಾ, ಹೆರಾಯಿನ್ ಖರೀದಿಗೆ ಬಂದಿದ್ದ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 1 ಕಾರು, ಒಂದು ದ್ವಿಚಕ್ರ ವಾಹನ, 5 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.

Read More »

ಸಂತೋಷ್ ಆತ್ಮಹತ್ಯೆ ಆಗ್ರಹಿಸಿ ಏ. 14ರಂದು ಸಿಎಂ ಮನೆ ಮುಂದೆ ಪ್ರತಿಭಟನೆ

ಬೆಳಗಾವಿ: ‘ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಏ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಲ್ಲಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಈಶ್ವರಪ್ಪ ರಾಜೀನಾಮೆ ಪಡೆಯುವುದು ಮುಖ್ಯವಲ್ಲ, …

Read More »