BigTv News
January 14, 2025
Breaking News, ಬೆಳಗಾವಿ
ಬೆಳಗಾವಿ: ಏಪ್ರಿಲ್, ಮೇ ತಿಂಗಳಿನಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಡೆಸುವ ಸಾಧ್ಯತೆಯಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಚರ್ಚೆ ನಡೆಯುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಂಗ್ರೇಶಿ, ಜಿಲ್ಲಾ ಪುನರ್ ವಿಂಗಡಣಾ ವರದಿ ಪಡೆಯುವುದು ಸೇರಿದಂತೆ ವಿವಿಧ ಕಾರಣಕ್ಕಾಗಿ ಚುನಾವಣೆ ವಿಳಂಬವಾಗಿದೆ. ಹಾಗಾಗಿ ಏಪ್ರಿಲ್, ಮೇ ತಿಂಗಳಲ್ಲಿ ಚುನಾವಣೆ ಬಹುತೇಕ ಖಚಿತವಾಗಿದೆ ಎಂದರು. …
Read More »
BigTv News
January 11, 2025
Breaking News, ಬೆಳಗಾವಿ
ಬೆಳಗಾವಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಭೇಟಿ ಮಾಡಿದ್ದು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆಯಂಡ್ ಮ್ಯಾನೇಜ್ ಮೆಂಟ್ ಸ್ಥಾಪನೆಗೆ ಮನವಿ ಮಾಡಿದರು. ಇದಕ್ಕೂ ಮುನ್ನ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವರಾದ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿ, ಅವರಿಗೂ ಮನವಿ ಸಲ್ಲಿಸಿದರು. ಈ ಪ್ರಸ್ತಾವನೆ ಅನುಮೋದನೆ, ಅಗತ್ಯ ಅನುದಾನ ಮಂಜೂರಾತಿಗಾಗಿ ಕೇಂದ್ರ ಹಣಕಾಸು …
Read More »
BigTv News
January 11, 2025
Breaking News, ಬೆಳಗಾವಿ
ಬೆಳಗಾವಿ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಮಾಡಿ ಆದೇಶ ಹೊರಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸರ್ವೇಯರ್ ಮೇಲ್ವಿಚಾರಕ ಆರ್.ಸಿ.ಪತ್ತಾರ್, ಸರ್ವೇಯರ್ ಎಂ.ಐ ಮುತ್ತಗಿ ಸೇರಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಖಾನಾಪುರ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂಮಾಪನ ಇಲಾಖೆ ಆಯುಕ್ತ ಜೆ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಹುಳಗುಂದ ಗ್ರಾಮದಲ್ಲಿ ಸರ್ವೆ ನಂಬರ್ 3ರಲ್ಲಿರುವ 508 ಎಕರೆ 20 ಗುಂಟೆ ಜಮೀನಿನ ಅಳತೆ ಭೂಮಿಯ 11ಎ ನಕ್ಷೆ …
Read More »
BigTv News
January 10, 2025
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸನ್ 2024-25ನೇ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿ ಯೋಜನೆಯಡಿ ಸಣ್ಣ ಉದ್ದಿಮೆದಾರರಿಗೆ ಸಹಾಯಧನ ಕಾರ್ಯಕ್ರಮ, ಶಿಕ್ಷಣ-ಲ್ಯಾಪ್‌ಟಾಪ್, ಇತರೇ ಬಡ ವಿಧ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಸಹಾಯಧನ ಒದಗಿಸುವುದು, ಶಸ್ತ್ರ ಚಿಕಿತ್ಸೆಗೆ ಧನ ಸಹಾಯ ನೀಡುವ ಕಾರ್ಯಕ್ರಮ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗಹಿಸುವ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಸ್ಪರ್ಧಾತ್ಮಕ ಪರೀಕ್ಷೆ ನೋಂದಾಯಿತ ತರಬೇತಿ ಸಂಸ್ಥೆಗಳ ಮೂಲಕ ಅನುದಾನ ಒದಗಿಸುವ ಕುರಿತು, ವೈಯಕ್ತಿಕ ಶೌಚಾಲಯ …
Read More »
BigTv News
December 28, 2024
Breaking News, ಬೆಳಗಾವಿ
ಬೆಂಗಳೂರು: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊಂಡಾಡಿದರು. ಸಮಕಾಲೀನ ಸಮಾಜಕ್ಕೆ ಗಾಂಧೀ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವಿದೆ. ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಕನಸಿನ ಭಾರತವನ್ನು ನನಸು ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ, ಸರ್ವೋದಯ ಸಮಾಜ ರಚನೆಯ ಹರಿಕಾರ …
Read More »
BigTv News
December 27, 2024
Breaking News, ಬೆಳಗಾವಿ
ಬೆಳಗಾವಿ: ದೇಶದ ಬೆಳವಣಿಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ರಚಿಸಿದ ಸುಧಾರಣೆಗಳ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಕಲಿಯಲು ನೆರವಾಗುವಂತೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನೆ ಮತ್ತು ಅಧ್ಯಯನ ಕೇಂದ್ರವನ್ನು ಪ್ರಾರಂಭಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಎಂದಿಗೂ ಬದಲಾಯಿಸಲು ಸಾಧ್ಯವಿಲ್ಲ ಎಂದರು. ಹಣೆಬರಹ ನಮ್ಮ ಕೈಯಲ್ಲಿಲ್ಲ. ಆದರೆ, ಮನಮೋಹನ್ ಸಿಂಗ್ ಅವರು ಇನ್ನಿಲ್ಲವಾದರೂ ಅವರು …
Read More »
BigTv News
December 27, 2024
Breaking News, ಬೆಳಗಾವಿ
ಬೆಳಗಾವಿ: ಡಿಸೆಂಬರ್ 26 ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಯ ಮೇಲೆ ‘ದೊಡ್ಡ ಛಾಪು’ ಮೂಡಿಸಿದ್ದಾರೆ. ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿರುವ ಸಿಂಗ್, ಸರಳ, ಸಜ್ಜನ ಮತ್ತು ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹೇಳಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿದೆ. ಸಿಂಗ್ ಅವರ ಜೀವನವು ಒಂದು ರೀತಿಯಲ್ಲಿ …
Read More »
BigTv News
December 27, 2024
Breaking News, ಬೆಳಗಾವಿ
ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ …
Read More »
BigTv News
December 26, 2024
Breaking News, ಬೆಳಗಾವಿ
ಬೆಳಗಾವಿ: ಮಹಾತ್ಮ ಗಾಂಧಿ ಅಧ್ಯಕ್ಷತೆಯ ಐತಿಹಾಸಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯಲ್ಲಿ ʼಗಾಂಧಿ ಭಾರತʼ ಕಾರ್ಯಕ್ರಮಗಳು ಇಂದು ಆರಂಭವಾಗಿವೆ. ಡಿ.26 ಮತ್ತು 27ರಂದು ಎರಡು ದಿನಗಳ ಕಾರ್ಯಕ್ರಮದ ಮೊದಲ ದಿನದ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆ ಇಂದು ಮಧ್ಯಾಹ್ನ ಆರಂಭವಾಯಿತು. ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಶುರವಾಗಿದ್ದು, ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. …
Read More »
BigTv News
December 26, 2024
Breaking News, ಬೆಳಗಾವಿ
ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಇಂದು (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. …
Read More »