BigTv News
December 26, 2024
Breaking News, ಬೆಳಗಾವಿ
ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. …
Read More »
BigTv News
December 25, 2024
Breaking News, ಬೆಳಗಾವಿ
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಅದ್ಧೂರಿ ಶತಮಾನೊತ್ಸವ ಕಾರ್ಯಕ್ರಮ ನಡೆಯಲಿದೆ. ವಿವಿಧೆಡೆ ಕಾಂಗ್ರೆಸ್ ಸಮಾವೇಶಗಳು ನಡೆಯುತ್ತಿವೆ. ಇತ್ತ ಬೆಳಗಾವಿಯ ಸುವರ್ಣಸೌಧದಲ್ಲಿ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳ್ಳಲಿದೆ. ಸುವರ್ಣಸೌಧದಲ್ಲಿ ಶುಕ್ರವಾರ ಡಿಸೆಂಬರ್ 27 ಗಾಂಧಿ ಪ್ರತಿಮೆ ಅನಾವರಣ ಮಾಡಲು ಸರ್ಕಾರ ಯೋಜಿಸಿದೆ. ಈ ಸಂಬಂಧ ಬುಧವಾರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪ್ರವಾಸೊದ್ಯಮ ಇಲಾಖೆ ಸಚಿವರಾದ …
Read More »
BigTv News
December 25, 2024
Breaking News, ಬೆಳಗಾವಿ
ಬೆಳಗಾವಿ: ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೆ ಗೊತ್ತಿದೆ. ನಮಗಿಂತ ಚೆನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ. ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಬಂದರೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಡಿ.26ರಂದು ಬೆಳಗಾವಿ ಚಲೋ’ ಹಮ್ಮಿಕೊಳ್ಳುತ್ತೇವೆ ಎಂದು ಬಿಜೆಪಿಯವರು ಹೇಳಿದ್ದಾರೆ. ನಾನು ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವವನಲ್ಲ. ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂಭ್ರಮದಲ್ಲಿದ್ದೇವೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ …
Read More »
BigTv News
December 24, 2024
Breaking News, ಬೆಳಗಾವಿ
ಬೆಳಗಾವಿ: ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, ‘ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ …
Read More »
BigTv News
December 23, 2024
Breaking News, ಬೆಳಗಾವಿ
ಬೆಳಗಾವಿ: ವಿಧಾನಪರಿಷತ್ ನಲ್ಲಿ ನಡೆದಿದ್ದ ಸಿಟಿ ರವಿಯವರ ನಿಂದನಾತ್ಮಕ ಪದ ಬಳಕೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಟಿ ರವಿ ಆ ಪದ ಬಳಕೆ ಮಾಡಿದ್ದು ನಿಜ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಇಂದು ವಿಡಿಯೋ ಬಿಡುಗಡೆ ಮಾಡಿ ಸಾಕ್ಷ್ಯ ತೋರಿಸಿದ್ದಾರೆ. ಇದನ್ನು ಮೋದಿಯವರಿಗೂ ತೋರಿಸಿ ನ್ಯಾಯ ಕೇಳುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇನ್ನು, ನನ್ನ ಗಂಡ ಅಂತಹ ಪದ ಬಳಕೆ ಮಾಡುವವರಲ್ಲ, ಅವರನ್ನು …
Read More »
BigTv News
December 22, 2024
Breaking News, ಬೆಳಗಾವಿ
ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ ವಹಿಸಿ, ದೇಶದ …
Read More »
Shaikh BigTv
December 21, 2024
Breaking News, Crime, Dharwad, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಸದನದಲ್ಲಿಯೇ ಸಚಿವೆಗೆ ಅಶ್ಲೀಲ ಪದಗಳನ್ನು ಬಳಿಸಿದ ಆರೋಪದ ಮೇಲೆ ಬಂಧಿತನಾಗಿರುವ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಕರೆದುಕೊಂಡು ಬರುತ್ತಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಪ್ರಾಸ್ಟಿಟ್ಯೂಟ್ ಪದ ಬಳಿಸಿದ ಆರೋಪದ ಮೇಲೆ ಹಿರೇಬಾಗೇವಾಡಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಬೆಳಗಾವಿಯಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಬಂಧಿತ ಸಿಟಿ ರವಿ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಬಿ ವೈ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕರಾದ ಆರ್ …
Read More »
BigTv News
December 20, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ. ಪರ್ಯಾಯವಾಗಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೆ.ಗೋಪಾಲಯ್ಯ ಪರವಾಗಿ ಸದಸ್ಯ ಭೈರತಿ ಬಸವರಾಜು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 46,755 ಶಾಲೆಗಳಿದ್ದು, 1,65,618 ಶಿಕ್ಷಕರ ಹುದ್ದೆಗಳಿವೆ. …
Read More »
BigTv News
December 20, 2024
Breaking News, ಬೆಳಗಾವಿ
ಬೆಳಗಾವಿ: ನನ್ನನ್ನು ರಾತ್ರಿಯಡಿ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದಾರೆ ಯಾವುದೇ ನೋಟೀಸ್ ನೀಡಿಲ್ಲ ಎಂದು ಬೆಳಗಾವಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಇಂದು (ಡಿ.20) ಬೆಳಗಾವಿ ಐದನೇ ಜೆಎಂಎಫ್ ಸಿ ನ್ಯಾಯಾಲಯದ ಹೊರಗಡೆ ಬರುವ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ.ರವಿ, ಅಕ್ರಮವಾಗಿ ಬಂಧನ ಮಾಡಿ ರಾತ್ರಿಯಿಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ ಸರ್ವಾಧಿಕಾರಿ ಧೋರಣೆ ಮೆರೆದು ಹಲ್ಲೆ ಮಾಡಿದ್ದಾರೆ. ಎಲ್ಲದಕ್ಕೂ ಒಂದು ಪೂರ್ಣ ವಿರಾಮ ಇರುತ್ತದೆ. ಇದರಲ್ಲೂ ಪೂರ್ಣ ವಿರಾಮ ಬೀಳುತ್ತದೆ ಎಂದು ಕಿಡಿಕಾರಿದರು. …
Read More »
BigTv News
December 20, 2024
Breaking News, ಬೆಳಗಾವಿ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. Transit warrant ನೀಡುವ ಮೂಲಕ ಆದೇಶ ನೀಡಲಾಗಿದೆ. ಘನತೆ, ಗೌರವದಿಂದ ಆರೋಪಿಯನ್ನು ಕರೆದುಕೊಂಡು ಹೋಗಬೇಕು. 24 …
Read More »