Breaking News

ಬೆಳಗಾವಿ

ಉತ್ತರ ಕರ್ನಾಟಕ ಅಭಿವೃದ್ದಿಗೆ ಗೋವಿಂದರಾವ್ ವರದಿ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ| ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜ ನೆಯ ಮೂರನೇ ಹಂತಕ್ಕೆ ಒಂದೇ ಹಂತ ದಲ್ಲಿ 73 ಸಾವಿರ ಎಕರೆ ಭೂಮಿ ಭೂ ಸ್ವಾಧೀನಕ್ಕೆ ಕ್ರಮ, ಮಹದಾಯಿ ಯೋಜ ನೆ ಒಪ್ಪಿಗೆ ನೀಡುವಂತೆ ಕೇಂದ್ರ ರಾಷ್ಟ್ರೀಯ ವನ್ನಜೀವಿ ಮಂಡಳಿ ಮೇಲೆ ಒತ್ತಡ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಉತ್ತರ ಕರ್ನಾಟಕ …

Read More »

ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ: ಸಿಟಿ ರವಿ ಪ್ರಕರಣಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಬೆಳಗಾವಿ: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ …

Read More »

ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ವಿಷಯ ಪ್ರಸ್ತಾಪಿಸಿ, ಗ್ರಾಮೀಣ ಆರೋಗ್ಯ ವ್ಯವಸ್ಥೆಯಲ್ಲಿ ಎನ್.ಹೆಚ್.ಎಂ. ನೌಕರರ ಅವಲಂಬನೆ ಹೆಚ್ಚಾಗಿದ್ದು, ಅವರ ಸೇವೆ ಕಾಯಂ ಮಾಡುವಂತೆ ಹೋರಾಟ ನಡೆಸಿದ್ದಾರೆ. ಅವರ ಬೇಡಿಕೆ ಈಡೇರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. …

Read More »

ಡಿ.21 ರಂದು ಸಭೆ ಕರೆದ ಸಿಎಂ: ಲಿಂಗಾಯತ ಪಂಚಮಸಾಲಿ ಹೋರಾಟ ತಾತ್ಕಾಲಿಕ ಅಂತ್ಯ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಮತ್ತು ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆರಂಭಿಸಲಾಗಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೆಳಗಾವಿಯ ಅಂಬೇಡ್ಕರ್ ಗಾರ್ಡನ್‌ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ‌.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್‌ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಸಕ ವಿಜಯಾನಂದ …

Read More »

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು: ಡಿಸಿಎಂ ಡಿಕೆಶಿ

ಬೆಳಗಾವಿ : ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರವು ನೀಡಿರುವ ಆಡಳಿತಾತ್ಮಕ ಅನುಮೋದನೆ ಮೇರೆಗೆ, ಅನುದಾನ ಲಭ್ಯತೆ ಅನುಸಾರ ಸೂಕ್ತ ಅನುದಾನ ಒದಗಿಸಿ, ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಿವರಣೆ ನೀಡಿದ ಡಿಕೆಶಿ ಅವರು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರ ಯೋಜನೆಯನ್ನು ಪೂರ್ಣಗೊಳಿಸಲಾಗಿದ್ದು, ಹಂತ-3ರ …

Read More »

ಲೋಕೋಪಯೋಗಿ ಇಲಾಖೆಗೆ ₹6000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್‌(ಇ) ಅಡಿ ₹4,000 ಕೋಟಿ ಮತ್ತು ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಘೋಷಿಸಿದರು. ಗಮನ ಸೆಳೆಯುವ ಸೂಚನೆಯಡಿ ಬಿಜೆಪಿಯ ವಿ.ಸುನಿಲ್ ಕುಮಾರ್ ಮತ್ತು ಇತರ ಶಾಸಕರ ಚರ್ಚೆಗೆ ಉತ್ತರ ನೀಡಿದ ಅವರು, ‘ಎಲ್ಲ ಪಕ್ಷಗಳ ಶಾಸಕರಿಗೂ ಅನುದಾನ ನೀಡುತ್ತೇವೆ’ ಎಂದು ಭರವಸೆ ನೀಡಿದರು. ಬೆಂಗಳೂರು ನಗರಕ್ಕೂ ವಿಶೇಷ ಅನುದಾನ ನೀಡುತ್ತೇವೆ’ ಎಂದು ಹೇಳಿದ ಅವರು ಎಷ್ಟು ಮೊತ್ತ …

Read More »

ನನ್ನನ್ನು ಗಟ್ಟಿಗಿತ್ತಿ ಎನ್ನುತ್ತಿದ್ದರು..ತುಂಬಾ ನೋವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಗಳನ್ನ ಬಳಸಿದ್ದಾರೆ ಎಂಬ ಆರೋಪದ ಮೇಲೆ ಸದ್ಯಕ್ಕೆ ಬೆಳಗಾವಿ ಪೊಲೀಸರು ಸಿಟಿ ರವಿ ಅವರನ್ನ ಬಂಧಿಸಿದ್ದಾರೆ. ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ನನ್ನನ್ನ ಗಟ್ಟಿಗಿತ್ತಿ ಎನ್ನುತ್ತಿದ್ದರು. ಆದರೆ ಈ ಮಾತು ತುಂಬಾ ನೋವು ಕೊಟ್ಟಿದೆ ಎಂದಿದ್ದಾರೆ. ನಿಜವಾಗಲೂ ಬಹಳ ನೋವಾಗಿದೆ‌. ಬಹಳ ಗಟ್ಟಿಗಿತ್ತಿ ಎನ್ನುತ್ತಿದ್ದರು. ಕಿತ್ತೂರು ರಾಣಿ ಚನ್ನಮ್ಮರಿಗೆ ಹೋಲಿಕೆ ಮಾಡಿದ್ದರು. ಆದರೆ ಇವತ್ತು ನನಗೆ ತುಂಬಾ …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಸಿ.ಟಿ.ರವಿ ಬದುಕಿದ್ದೇ ಪುಣ್ಯ: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ : ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಸಿಟಿ ರವಿ ಬದುಕಿದ್ದೇ ಪುಣ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೊಳಕು ಬಾಯಿ ಇದೇನು ಹೊಸದಲ್ಲ, ಸಿಎಂ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ನಿಂದಿಸಿದ್ದಾರೆ. ಬೇರೆಯವರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸಿಟಿ ರವಿ ಬದುಕಿದ್ದೇ ಹೆಚ್ಚು. ಪುಣ್ಯ ನಮ್ಮ ಕಾರ್ಯಕರ್ತರು ಸಮಾಧಾನವಾಗಿ ನಡೆದುಕೊಂಡಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು. ಈ ವಿಚಾರದಲ್ಲಿ ಸಭಾಪತಿಗಳ ನಡೆ …

Read More »

ಉತ್ತರದ ಸಮಗ್ರ ಅಭಿವೃದ್ಧಿಗಾಗಿ ಪಂಚ ತೀರ್ಮಾನ: ಮೂಲಸೌಕರ್ಯಕ್ಕೆ ₹4 ಸಾವಿರ ಕೋಟಿ ಘೋಷಣೆ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ನಡೆದ ಮೂರು ದಿನಗಳ ಚರ್ಚೆ ಬೆನ್ನಲ್ಲೇ ರಾಜ್ಯ ಸರ್ಕಾರ ಉತ್ತರದ ಸಮಗ್ರ ಅಭಿವೃದ್ಧಿಗಾಗಿ ಪಂಚ ತೀರ್ಮಾನ ಪ್ರಕಟಿಸಿದೆ. ‘ನಮ್ಮ ಬದ್ಧತೆ ಪ್ರಶ್ನಾತೀತ, ನಮ್ಮ ಗುರಿ ಜನಕಲ್ಯಾಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಗುರುವಾರ ಸಿಎಂ ಈ ಸಿಹಿ ಸುದ್ದಿ ಪ್ರಕಟಿಸಿದರು. ಮುಖ್ಯವಾಗಿ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಲೋಕೋಪಯೋಗಿ ಇಲಾಖೆಯಲ್ಲಿ ಅಪೆಂಡಿಕ್ಸ್- ಇ …

Read More »

ಬೆಳಗಾವಿ: ಬೈಲಹೊಂಗಲವನ್ನು ಜಿಲ್ಲೆಯನ್ನಾಗಿ ರಚಿಸಬೇಕೆಂದು ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಮುಖಂಡರು

ಬೆಳಗಾವಿ: ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆ ರಚನೆ ಮಾಡುವದಾದರೆ ಬೈಲಹೊಂಗಲ ಉಪವಿಭಾಗವನ್ನು ಜಿಲ್ಲೆಯನ್ನಾಗಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೈಲಹೊಂಗಲ ಜಿಲ್ಲಾ ಹೊರಾಟ ಸಮಿತಿ ಅಧ್ಯಕ್ಷ ಶಿವರಂಜನ ಬೋಳಣ್ಣವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ವೇಳೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಮಹಾಂತೇಶ ತುರಮರಿ, ರಾಜು ಜನ್ಮಟ್ಟಿ, ಎಫ್.ಎಸ್.ಸಿದ್ದನಗೌಡರ, ಸಿ.ಕೆ.ಮೆಕ್ಕೆದ, ಮಡಿವಾಳಪ್ಪ ಹೋಟಿ, ಗುರು ಮೆಟಗುಡ್, ಮಹಾಂತೇಶ ಮತ್ತಿಕೊಪ್ಪ, ಮಹೇಶ ಬೆಲ್ಲದ, ವಿ.ಎಸ್. ಕೋರಿಮಠ, ಬಿ.ಬಿ.ಗಣಾಚಾರಿ, ವಿಠಲ ದಾಸೋಗ, ಸುಭಾಷ ತುರಮರಿ ಸೇರಿದಂತೆ …

Read More »