BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಸ್ವಾಧೀನಪಡಿಸಿಕೊಳ್ಳುವ ಜಮೀನಿನ ಪರಿಹಾರವನ್ನು ಸಂಬಂಧಪಟ್ಟ ಖಾತೆದಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆರ್.ಟಿ.ಜಿ. ಎಸ್ ಮುಖಾಂತರ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ.ಪಾಟೀಲ್ ತಿಳಿಸಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯ ಸರ್ಕಾರವು ಕೈಗಾರಿಕಾ ಪ್ರದೇಶಗಳ …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಅನುದಾನದ ಕೊರತೆಯಾಗುತ್ತಿದೆ ಎಂದು ಹಲವಾರು ಶಾಸಕರು ಆರೋಪ ಮಾಡುತ್ತಿದ್ದರು. ಅದರಲ್ಲೂ ಕಾಂಗ್ರೆಸ್ ಶಾಸಕರು ಕೂಡ ಆರೋಪಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಎಲ್ಲರಿಗೂ ವಾಗ್ದಾನ ನೀಡಿದ್ದಾರೆ. ಕಾಂಗ್ರೆಸ್ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದು, ಪ್ರತಿಯೊಂದು ಕ್ಷೇತ್ರಕ್ಕೆ 26 ಕೋಟಿ ರೂ.ಅನುದಾನ ನೀಡಲು ಮುಂದಾಗಿದ್ದಾರೆ. ಕಾಂಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ರೀತಿಯಾಗಿ ಘೋಷಿಸಿದ್ದಾರೆ. ಅನುದಾನ ಕೊರತೆ ನೀಗಿಸಲು …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ಯಾವುದೇ ಭಾಗದಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ ಅದನ್ನು ತೆರವುಗೊಳಿಸುವ ಸಂಪೂರ್ಣ ಅಧಿಕಾರವನ್ನು ತಹಶೀಲ್ದಾರರಿಗೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ‘ಕರ್ನಾಟಕ ಭೂಕಂದಾಯ 3ನೇ ತಿದ್ದುಪಡಿ ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿದೆ. ಈ ಮಸೂದೆಯಲ್ಲಿ ಒಟ್ಟು 4 ತಿದ್ದುಪಡಿಗಳಿಗೆ ಒಪ್ಪಿಗೆ ನೀಡಲಾಯಿತು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಸೂದೆ ಮಂಡಿಸಿದರು. ಈ ಕುರಿತು ವಿವರಣೆ ನೀಡಿದ ಕೃಷ್ಣಬೈರೇಗೌಡ, ಕರ್ನಾಟಕ ಭೂಕಂದಾಯ ಸೆಕ್ಷನ್ 104 ಅನ್ನು ಈ …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಕರ್ನಾಟಕ ಸರ್ಕಾರವು ರಾಜ್ಯದ ಭೂ ಕಂದಾಯ ಕಾಯ್ದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳನ್ನು ‘ತಿದ್ದುಪಡಿ’ ಎಂದು ಕರೆಯಲಾಗುತ್ತದೆ. ಈ ತಿದ್ದುಪಡಿಗಳ ಮುಖ್ಯ ಉದ್ದೇಶಗಳು ಸರ್ಕಾರಿ ಜಮೀನುಗಳನ್ನು ಕಾಪಾಡುವುದು ಮತ್ತು ಸಣ್ಣ ಉದ್ದಿಮೆಗಳಿಗೆ ಸುಲಭವಾಗಿ ಕೆಲಸ ಮಾಡಲು ಅನುವು ಮಾಡಿಕೊಡುವುದು. ಸರ್ಕಾರಿ ಜಮೀನುಗಳ ರಕ್ಷಣೆ: ಈ ಹಿಂದೆ ಕೆಲವರು ಸರ್ಕಾರಿ ಜಮೀನುಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ತಿದ್ದುಪಡಿಯಿಂದ ಇದು ಸುಲಭವಾಗಿ ಸಾಧ್ಯವಾಗುವುದಿಲ್ಲ. ಸಣ್ಣ ಉದ್ದಿಮೆಗಳಿಗೆ ಸುಲಭ: …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ರೈತರು ಕೈಗಾರಿಕಾ ಉದ್ದೇಶಗಳಿಗೆ ಜಮೀನು ನೀಡುವಾಗ ಭೂ ಪರಿಹಾರ ಬೇಡ ಎಂದರೆ ಅಂಥವರಿಗೆ ಅಭಿವೃದ್ಧಿಪಡಿಸಿದ 10781 ಚದರ ಅಡಿ ಜಮೀನನ್ನು ಸರ್ಕಾರ ನೀಡುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ವಿಧಾನಪರಿಷತ್ನಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಭೂ ಸ್ವಾಧೀನ ಪ್ರಕ್ರಿಯೆ ವೇಳೆ ರೈತರಿಗೆ ಮಾರುಕಟ್ಟೆ ದರದಂತೆ ಪರಿಹಾರ ನೀಡಲಾಗುತ್ತದೆ. ಒಂದು ವೇಳೆ ಯಾರಾದರೂ ನಮಗೆ ಪರಿಹಾರ ಬೇಡ ಎಂದರೆ ನಮ ಇಲಾಖೆ …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಸರಕಾರ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಯಶಸ್ಸಾಗಿದೆ. ಹಲವು ಜನ ಫಲಾನುಭವಿಗಳು ಸರಕಾರವನ್ನು ಹರಸುತ್ತಿದ್ದಾರೆ. ನಾಳೆ (ಬುಧವಾರ) 100 ಜನ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಸುವರ್ಣಸೌಧಕ್ಕೆ ಬರುತ್ತಿದ್ದಾರೆ. ಅವರೊಂದಿಗೆ ಸಮಯ ಕಳೆಯುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಳಿಗೆ ಊಟವನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮಾಡಿಸಲಾಗುವುದು. ಬೋರವೆಲ್, ಗಿರಣಿ ಸೇರಿದಂತೆ ಹಲವು ಉದ್ಯೋಗಿನಿ ಮಹಿಳೆಯರಿಗೆ …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಹೊಸದಾಗಿ ಸರ್ಕಾರಿ ಇಲ್ಲವೇ ಖಾಸಗಿ ಬಡಾವಣೆ ನಿರ್ಮಿಸುವಾಗ ಮೂಲ ಸೌಕರ್ಯ ಕಲ್ಪಿಸುವ ಕುರಿತ ಹೊಸ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಕರ್ನಾಟಕ ವಿಧಾನ ಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಶಿಫಾರಸ್ಸು ಮಾಡಿದೆ. ಕರ್ನಾಟಕ ವಿಧಾನಮಂಡಲದ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರು, ತಮ …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು 2024ನೇ ಸಾಲಿನ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ವಿಧಾನ ಸಭೆಯಲ್ಲಿ ಪರ್ಯಾಲೋಚನೆ ಮಂಡಿಸಿ, ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ ಬಸವನ ಬಾಗೇವಾಡಿ ಅಭಿವೃದ್ಧಿಯನ್ನು ಸದ್ಯ ಕೈಗೊಳ್ಳಲಾಗುತ್ತಿತ್ತು. ಆದರೆ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ಪರಿಚಯಿಸುವ ಹಾಗೂ …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರವಾಗಿ, ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ, ನಿರ್ಮಿತಿ ಕೇಂದ್ರ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ …
Read More »