BigTv News
September 12, 2024
Breaking News, ರಾಮನಗರ
ರಾಮನಗರ: 20 ವರ್ಷದ ಬಳಿಕ ನಿರ್ಮಾಣಕ್ಕೆ ಸಜ್ಜಾಗಿರುವ ಸ್ಯಾಟಲೈಟ್ ಸಿಟಿ ರಿಂಗ್ ರೋಡ್(ಎಸ್ ಟಿಆರ್ಆರ್) ಜಿಲ್ಲೆಯಲ್ಲಿ ಸುಮಾರು 70 ಕಿಮೀ ದೂರು ಹಾಯ್ದು ಹೋಗಲಿದೆ. ಇದರಿಂದಾಗಿ ಜಿಲ್ಲೆಯ ನಾಲ್ಕೂ ತಾಲೂಕುಗಳ ಸಂಪರ್ಕ ಮತ್ತಷ್ಟು ಸುಗಮ ಗೊಳ್ಳಲಿದೆ. ಹೌದು, ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರ ಸ್ಯಾಟ್ ಲೈಟ್ ರಿಂಗ್ ರಸ್ತೆ 144 ಕಿಮೀ ನಿರ್ಮಾಣಕ್ಕೆ 4750 ಕೋಟಿ ರೂ.ಅಂದಾಜು ವೆಚ್ಚದಲ್ಲಿ 5 ಪ್ಯಾಕೇಜ್ಗಳಲ್ಲಿ ಟೆಂಡರ್ ಕರೆದಿದೆ. ಇದರಲ್ಲಿ ಮೂರು ಪ್ಯಾಕೇಜ್ಗಳು ರಾಮನಗರ ಜಿಲ್ಲೆಯಲ್ಲಿ …
Read More »
BigTv News
September 8, 2023
ಕರ್ನಾಟಕ, ರಾಮನಗರ, ಸುದ್ದಿ
ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರುಜೋಡಣೆ ಮಾಡುವ ಸಲುವಾಗಿ ನಡೆದ ‘ಭಾರತ್ ಜೋಡೋ ಯಾತ್ರೆ’ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ 5 ಕಿ.ಮೀ ಪಾದಯಾತ್ರೆಯಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಬಳಿಕ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು. …
Read More »
BigTv News
September 8, 2023
ಕರ್ನಾಟಕ, ರಾಮನಗರ, ಸುದ್ದಿ
ರಾಮನಗರ: ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ ವಿರೋಧಿಸಿ ಇಂದು ಕರೆ ನೀಡಿದ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಂದ್ಗೆ ಕರೆ ನೀಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಮನಗರ ಜನತೆ ಸ್ವಯಂಪ್ರೇರಣೆಯಿಂದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ, ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ನಮಗೆ ಬೇಕು ಎನ್ನುವ …
Read More »
BigTv News
December 12, 2022
Breaking News, ರಾಮನಗರ
ರಾಮನಗರ: ರಾಜ್ಯದ ಅಭಿವೃದ್ಧಿ ಹಾಗೂ ಜಿಲ್ಲೆಯ ಸಮಸ್ತ ಜನತೆಗೆ ಒಳಿತಾಗಲಿ ಎಂಬ ಕಾರಣಕ್ಕೆ ಡಿ.16ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಶ್ರೀನಿವಾಸ ಕಲ್ಯಾಣ ಆಯೋಜಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವ ಐತಿಹಾಸಿಕ ಕಾರ್ಯಕ್ರಮವಾಗಿದೆ. ಅಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವೂ ಆಗಿದೆ. ಕಾರ್ಯಕ್ರಮ ಪಕ್ಷಾತೀತವಾಗಿರಲಿದ್ದು, ಎಲ್ಲರನ್ನೂ ಆಹ್ವಾನಿಸಲಿದ್ದೇವೆ. ಅತಿಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು ರಾಮನಗರ ಸೇರಿ ಪಕ್ಕದ ಮಂಡ್ಯ, ಮೈಸೂರು, ತುಮಕೂರು, …
Read More »
BigTv News
November 3, 2022
Breaking News, ರಾಮನಗರ
ರಾಮನಗರ : ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಶ್ರೀಗಳ ಆತ್ಮಹತ್ಯೆ ಹಿಂದೆ ಮತ್ತೊಬ್ಬ ಪ್ರತಿಷ್ಠಿತ ಮಠವೊಂದರ ಪ್ರಭಾವಿ ಸ್ವಾಮೀಜಿಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬಂಡೆ ಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಡೆತ್ನೋಟ್ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ …
Read More »
admin
May 2, 2022
Breaking News, ರಾಮನಗರ
ರಾಮನಗರ : ರಸ್ತೆ ಅಪಘಾತದಲ್ಲಿ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ. ರಾಮನಗರ ತಾಲೂಕಿನ ತಿಮ್ಮೇಗೌಡನ ದೊಡ್ಡಿ ಗ್ರಾಮದ ಚಂದ್ರಶೇಕರ್ ಮೃತಪಟ್ಟಿದ್ದಾರೆ . ಇವರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು . ಭಾನುವಾರ ಸಂಜೆ ಬೈಕ್ ನಲ್ಲಿ ರಾಮನಗರಕ್ಕೆ ವಾಪಸಾಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ . ಇನ್ನು ಎರಡು ದಿನಗಳಲ್ಲಿ ಅವರ …
Read More »
admin
March 12, 2022
Breaking News, ರಾಮನಗರ
ರಾಮನಗರ: ಈಗಲ್ಟನ್ ರೆಸಾರ್ಟ್ ವಿವಾದದ ಬಗ್ಗೆ ಸದನದಲ್ಲಿ ಕುಮಾರಸ್ವಾಮಿ-ಸಿದ್ದರಾಮಯ್ಯ ನಡುವಿನ ವಾಗ್ವಾದ ಕುರಿತು ಶುಕ್ರವಾರ ಇಲ್ಲಿ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದ ಸಂಸದ ಡಿ.ಕೆ. ಸುರೇಶ್, ‘ಈಗಲ್ಟನ್ ಪರವಾಗಿ ಮಾತನಾಡುವ ಮೂಲಕ ಎಚ್.ಡಿ. ಕುಮಾರಸ್ವಾಮಿ ಅವರ ನಿಜವಾದ ಬಣ್ಣ ಬಯಲಾಗಿದೆ’ ಎಂದು ಲೇವಡಿ ಮಾಡಿದರು. ‘ದಂಡ ಹೆಚ್ಚಾಗಿ ಹಾಕಿರುವುದಕ್ಕೆ ಅವರಿಗೆ ಏನು ತೊಂದರೆ ಆಗಿದೆಯೋ ಗೊತ್ತಿಲ್ಲ. ಸರ್ಕಾರ ಹಾಗೂ ಜಿಲ್ಲಾಧಿಕಾರಿ ಸೇರಿ ಕಾನೂನಿನ ಪ್ರಕಾರ ದಂಡ ನಿಗದಿ ಮಾಡಿದ್ದಾರೆ. ರೆಸಾರ್ಟ್ನವರು …
Read More »
admin
March 7, 2022
Breaking News, ರಾಮನಗರ
ರಾಮನಗರ : ಪೊಲೀಸರಿಗೆ 500 ರೂಪಾಯಿ ವ್ಯಾಲ್ಯೂ ಗೊತ್ತಿರುವುದಿಲ್ಲ. ಆದರೆ ರೈತನಿಗೆ ಪ್ರತಿ ರೂಪಾಯಿಯೂ ಮುಖ್ಯವಾಗಿರುತ್ತೆ. ಇದೇ ರೀತಿ ದಂಡ ವಿಧಿಸುತ್ತಿದ್ದರೆ ಪ್ರತಿಭಟನೆ ಮಾಡುತ್ತೇನೆ. ಎಸ್ಪಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ. ಇಲ್ಲಿ ಪೊಲೀಸರು ದಂಡ ವಿಧಿಸುವುದು ಹೆಚ್ಚಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರಿಂದ ಕುಮಾರಸ್ವಾಮಿಗೆ ದೂರು ನೀಡಲಾಗಿದೆ. ಈ ವೇಳೆ ಪೊಲೀಸರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ …
Read More »
admin
February 28, 2022
Breaking News, ರಾಮನಗರ
ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಎ1 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎ2 ವಿಪಕ್ಷ ನಾಯಕ ಸಿದ್ದರಾಮಯ್ಯ, ಎ3 ಡಿ.ಕೆ. ಸುರೇಶ್, ಎ4 ಎಂಎಲ್ಸಿ ಎಸ್. ರವಿ ಸೇರಿ ಪಾದಯಾತ್ರೆ ನಡೆಸುತ್ತಿರುವ 37 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
Read More »
admin
February 28, 2022
Breaking News, ರಾಮನಗರ
ರಾಮನಗರ : ಮೊದಲ ದಿನದ ಮೇಕೆದಾಟು ಪಾದಯಾತ್ರೆ ರೇಷ್ಮೆ ನಗರಿ ರಾಮನಗರದಿಂದ ಆರಂಭವಾಗಿ 16 ಕಿ.ಮಿ. ಸಂಚರಿಸಿ ಬಿಡದಿ ನಗರ ತಲುಪಿದೆ. ಮೊದಲ ದಿನದ ಮೇಕೆದಾಟು ಪಾದಯಾತ್ರೆ ಯಶಸ್ವಿಮೊದಲ ದಿನದಲ್ಲಿ ಹೊರಟ ಪಾದಯಾತ್ರೆಯು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿತು. ಜಾನಪದ ಕಲಾ ತಂಡಗಳು ಕೂಡ ಪಾದಯಾತ್ರೆಗೆ ಸಾಥ್ ನೀಡಿದ್ದವು. ನಂತರ ಮಧ್ಯಾಹ್ನ ಮಾಯಗನಹಳ್ಳಿಯಲ್ಲಿ ಭೋಜನ ಮುಗಿಸಿದ ಮುಖಂಡರು, ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಪಾದಯಾತ್ರೆ ಮುಂದುವರೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ …
Read More »