Breaking News

ರಾಮನಗರ

ಮೇಕೆದಾಟು ಪಾದಯಾತ್ರೆ : ಬಿಜೆಪಿಯ ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್

ರಾಮನಗರ: ಕಾವೇರಿ ನೀರು ಬಳಕೆಯ ಹಕ್ಕು ಜನರಿಗೆ ದೊರೆಯುವವರೆಗೂ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ನಾಯಕರು ಭಾನುವಾರ ಇಲ್ಲಿ ಆರಂಭಗೊಂಡ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಯಲ್ಲಿ ಘೋಷಿಸಿದರು. ಬಿಜೆಪಿಯ ‘ಡಬಲ್‌ ಎಂಜಿನ್‌’ ಸರ್ಕಾರದ ವಿರುದ್ಧ ಹರಿಹಾಯ್ದರು. ಇಲ್ಲಿನ ಟಿ.ಆರ್. ಮಿಲ್‌ ಮೈದಾನದಲ್ಲಿ ಪಾದಯಾತ್ರೆಗೆ ಮರು ಚಾಲನೆ ನೀಡಿದ ಕರ್ನಾಟಕ ಕಾಂಗ್ರೆಸ್‌ನ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ‘ಕಾವೇರಿ ನೀರಿನ ಪ್ರತಿ ಹನಿ ಮೇಲೂ ಈ ಪ್ರದೇಶದ ಜನರಿಗೆ ಹಕ್ಕು ಇದೆ. ಇದು …

Read More »

ಬರ್ಬರವಾಗಿ ಹತ್ಯೆಯಾದ ಕಾಂಗ್ರೆಸ್ ಮುಖಂಡ

ರಾಮನಗರ: ಹೊಟ್ಟೆ ಹಾಗೂ ತಲೆಗೆ ಡ್ರ್ಯಾಗನ್‍ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಘಟನೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ. ಮೃತದೇಹವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಜಮೀನು ವಿವಾದಕ್ಕೆ ಕೊಲೆ ಮಾಡಿರುವ ಶಂಕೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡುವೆ ನಡೆಸಲಾಗುತ್ತಿದೆ.

Read More »

ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಡಿ.ಕೆ. ಸುರೇಶ್

ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿರುವುದಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಕುಟುಂಬದವರು. ಅವರಿಗೆ ಇರುವಷ್ಟು ಬುದ್ಧಿ, ತಿಳಿವಳಿಕೆ ರಾಜ್ಯದಲ್ಲಿ ಯಾರಿಗೂ ಇಲ್ಲ. ರಾಜ್ಯಕ್ಕಾಗಿ, ರಾಷ್ಟ್ರಕ್ಕಾಗಿ ಕುಮಾರಸ್ವಾಮಿಯವರು ಏನು ಹೇಳುತ್ತಾರೆಯೋ ಅದನ್ನು ಕೇಳಬೇಕು. ಪ್ರಶ್ನಿಸಬಾರದು ಎಂದು ಟಾಂಗ್ ಕೊಟ್ಟಿದ್ದಾರೆ.

Read More »

ಮೇಕೆದಾಟು ಪಾದಯಾತ್ರೆ 5 ದಿನಕ್ಕೆ ಮಾತ್ರ ಸೀಮಿತ : ಡಿ.ಕೆ. ಸುರೇಶ್‌

ರಾಮನಗರ: ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಇದೇ 27ರಂದು ಬೆಳಿಗ್ಗೆ 9ಕ್ಕೆ ರಾಮನಗರದಲ್ಲಿ ಚಾಲನೆ ದೊರೆಯಲಿದ್ದು, 7 ದಿನಗಳ ಬದಲಿಗೆ 5 ದಿನಕ್ಕೆ ನಡಿಗೆಯನ್ನು ಸೀಮಿತಗೊಳಿಸಲಾಗುವುದು ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು. ಭಾನುವಾರ ಸಂಜೆ ಕೆಂಗಲ್‌ನಲ್ಲಿ ನಡೆದ ಪಾದಯಾತ್ರೆ ಪೂರ್ವಭಾವಿ ಸಭೆಯ ವೇಳೆ ಪತ್ರಕರ್ತರಿಗೆ ಅವರು ಮಾಹಿತಿ ನೀಡಿದರು. ‘ಮೊದಲು ಬೆಂಗಳೂರಿನಲ್ಲೇ ಐದು ದಿನ ಪಾದಯಾತ್ರೆಗೆ ನಿರ್ಧರಿಸಿದ್ದೆವು. ಆದರೆ ರಾಜ್ಯ ಬಜೆಟ್‌ ಇರುವ ಕಾರಣ ಅಲ್ಲಿ ಮೂರು …

Read More »

ಎಸ್ಪಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ ಕುಮಾರ ಸ್ವಾಮಿ

ರಾಮನಗರ: “ಹಳ್ಳಿಗಳಲ್ಲಿ ಹೆಚ್ಚಾಗಿರುವ ಮದ್ಯ ಮಾರಾಟವನ್ನು ತಡೆಗಟ್ಟಿ ಅವಾಗ ನಿಮ್ಮನ್ನು ಮೆಚ್ಚುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ರಾಮನಗರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಂತೋಷ್ ಬಾಬುಗೆ ಎಚ್ಚರಿಕೆ ನೀಡಿದರು. ಜಿಲ್ಲೆಯ ಹಲವು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಕುಮಾರಸ್ವಾಮಿಯನ್ನು ಭೇಟಿಮಾಡಿದ ಕಾರ್ಯಕರ್ತರ ಅಳಲಿನಿಂದ ಸಿಟ್ಟಾದ ಕುಮಾರಸ್ವಾಮಿ ಎಸ್ಪಿ ಸಂತೋಷ್ ಬಾಬುಗೆ ಕರೆ ಮಾಡಿದರು, ಪೋನಿನಲ್ಲೇ ತರಾಟೆ ತೆಗದುಕೊಂಡರು. “ನಿಮ್ಮ ಚಿಕ್ಕಮಗಳೂರಿನ ಆಟ ಇಲ್ಲಿ ಆಡಲು ಬಂದರೆ ಬಿಡಲ್ಲ ನಾನು, …

Read More »

ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ

ರಾಮನಗರ: ಬೆಟ್ಟದ ಕೊಳಕ್ಕೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದ ಬಳಿ ನಡೆದಿದೆ. ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಿತ್ ತಡರಾತ್ರಿ ಮನೆಯಿಂದ ಹೋಗಿದ್ದ. ಪೋಷಕರು ನಾಪತ್ತೆ ದೂರಿನ ಹಿನ್ನೆಲೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಟವರ್ ಲೊಕೇಷನ್ ಆಧಾರದ ಮೇಲೆ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಸದ್ಯ ಈ ಪ್ರಕರಣ ಎಮ್ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More »

ಎಲ್ ಕೆಜಿ, ಯುಕೆಜಿ ಪ್ರಾರಂಭ ಕುರಿತು ಚಿಂತನೆ : ಹಾಲಪ್ಪ ಅಚಾರ್

ರಾಮನಗರ : ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ ಅಧಾರ ಮೇಲೆ ತೀರ್ಮಾನ ಮಾಡಲಾಗುವುದು ಎಂದುಸಚಿವ ಹಾಲಪ್ಪ ಅಚಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ಪ್ರಾರಂಭ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಲ್ ಕೆಜಿ, ಯುಕೆಜಿ ಆರಂಭದ ಬಗ್ಗೆ ಸರ್ಕಾರ ಹಂತದಲ್ಲಿ ಮಾತುಕತೆ ನಡೆದಿದೆ ಎಂದರು.

Read More »

ಗಂಡನ‌ ಕಿರುಕುಳ : ಆತ್ಮಹತ್ಯೆ ಶರಣಾದ ಗರ್ಭಿಣಿ

ರಾಮನಗರ: ಗಂಡನ‌ ಕಿರುಕುಳ ತಾಳಲಾರದೆ ತನ್ನ ತವರು ಮನೆಯಲ್ಲೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ.ಪತಿಯು ತೊಂದರೆ ಕೊಡುತ್ತಿದ್ದರು ಈ ಕಾರಣ ಎಂಬ ಆರೋಪ ಕೇಳಿಬಂದಿದೆ. ಗರ್ಭಿಣಿ ಆಗಿರುವ  ಜಾನ್ಹವಿ (23) ಆತ್ಮಹತ್ಯೆಗೆ ಶರಣಾದ ಮುಗ್ಧ ಹೆಣ್ಣು ಮಗಳು. ಕಳೆದ 9 ತಿಂಗಳ ಹಿಂದೆ ಕರ್ಣ ಎಂಬುವನ ಜೊತೆ ವಿವಾಹವಾಗಿತ್ತು. ಕರ್ಣ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದವನಾಗಿದ್ದು, ಕಳೆದ ಹಲವು ತಿಂಗಳಿಂದ ತಮ್ಮ ಮಗಳಿಗೆ …

Read More »

ರಾಮನಗರದ ನೂತನ ಎಸ್ಪಿಯಾಗಿ ಸಂತೋಷ್‌ ಬಾಬು ನೇಮಕ

ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಎಸ್‌. ಗಿರೀಶ್ ಅವರನ್ನು ಬುಧವಾರ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಂತೋಷ್‌ ಬಾಬು ಅವರನ್ನು ನೇಮಿಸಿದೆ.ಸಂತೋಷ್ ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನವರೇ ಆಗಿರುವುದು ವಿಶೇಷ. ಗಿರೀಶ್ ಬೆಂಗಳೂರಿನ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿಯಾಗಿ ತೆರಳಲಿದ್ದು, ಬೆಂಗಳೂರಿನಲ್ಲಿ ಗುಪ್ತಚರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ್‌ ರಾಮನಗರ ಎಸ್ಪಿಯಾಗಿ ಬರಲಿದ್ದಾರೆ.

Read More »

ರಾಮನಗರಕ್ಕೆ ನಿಮ್ಮ ಕೊಡುಗೆ ಏನು?: ಡಿಕೆ ಸಹೋದರರಿಗೆ ಅಶ್ವತ್ಥನಾರಾಯಣ ಪ್ರಶ್ನೆ

ಬೆಳಗಾವಿ: ರಾಮನಗರದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳೇನು ಎನ್ನುವ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸವಾಲು ಹಾಕಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಇದುವರೆಗೂ ಮನಬಂದಂತೆ ಮತ್ತು ಏನು ಮಾಡಿದರೂ ಜಯಿಸಿಕೊಳ್ಳುತ್ತೇವೆ ಎನ್ನುವಂತೆ ಅವರು ನಡೆದುಕೊಂಡು ಬಂದಿದ್ದಾರೆ. ನಮ್ಮ ತಾಳ್ಮೆಯ ಮಿತಿ ಮೀರುವಂತೆ ಮಾಡಿದ್ದಾರೆ. ಆದ್ದರಿಂದ ಬಹಳ ಸ್ಪಷ್ಟವಾಗಿ ಅವರಿಗೆ ಸಂದೇಶ ಕೊಡಬೇಕಾಗಿತ್ತು, …

Read More »