BigTv News
December 24, 2024
Breaking News, ದಾವಣಗೆರೆ
ದಾವಣಗೆರೆ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ಡಿ.24ರ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಅರೆಬೆತ್ತಲೆ ಮೆರವಣಿಗೆ ನಡೆಸಿದರು. ಅಂಬೇಡ್ಕರ್ ವೃತ್ತದಿಂದ ಉಪ ವಿಭಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು. …
Read More »
BigTv News
December 21, 2024
Breaking News, ದಾವಣಗೆರೆ
ದಾವಣಗೆರೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಂತಿದ್ದು, ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಸಿ, ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿದ ಆಕ್ಷೇಪಾರ್ಹ ಮಾತು ವಿಧಾನಸಭೆ ಹಾಗೂ ವಿಧಾನ …
Read More »
BigTv News
December 16, 2024
Breaking News, ದಾವಣಗೆರೆ
ದಾವಣಗೆರೆ: 2025ರ ಫೆಬ್ರವರಿ 27ಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ ಜನುಮದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ 20 ಲಕ್ಷ ಜನರು ಸೇರಬೇಕು ಎಂಬ ಅಪೇಕ್ಷೆ ಇದ್ದು ಈ ಐತಿಹಾಸಿಕ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕೇಂದ್ರದ ವರಿಷ್ಠರು ಹಾಗೂ ನಾಡಿನ ಮಠಾಧೀಶರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ನಗರದ ಸಾಯಿ ಇಂಟರ್ ನ್ಯಾಷನಲ್ ನಲ್ಲಿ ಸೇರಿದ್ದ ಬಿಜೆಪಿಯ 55ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಹಾಗೂ ಮುಖಂಡರ …
Read More »
BigTv News
December 12, 2024
Breaking News, ದಾವಣಗೆರೆ
ದಾವಣಗೆರೆ: ಇಲ್ಲಿನ ಎಸ್.ಎಸ್.ಹೈಟೆಕ್ ಆಸ್ಪತ್ರೆಯ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಸೇತುವೆ ಅವೈಜ್ಞಾನಿಕವಾಗಿದ್ದು, ಕೂಡಲೇ ಸರಿಪಡಿಸಬೇಕು. ಇಲ್ಲವೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು. ಸಂಸತ್ತಿನ ಚಳಿಗಾಲದ ಅಧಿವೇಶನಲ್ಲಿ ಪಾಲ್ಗೊಂಡಿರುವ ಅವರು ಈ ಕುರಿತು ಬುಧವಾರ ಸಚಿವರ ಗಮನ ಸೆಳೆದರು. ಪೊಲೀಸ್ ಮತ್ತು ಲೋಕೋಪಯೋಗಿ ಇಲಾಖೆ ಒದಗಿಸಿದ ಅಂಕಿ-ಅಂಶಗಳನ್ನು ಒಳಗೊಂಡಿರುವ ಮನವಿಯನ್ನು ಸಚಿವರಿಗೆ ನೀಡಿದರು. ಜಯನಗರದಿಂದ …
Read More »
BigTv News
November 12, 2024
Breaking News, ದಾವಣಗೆರೆ
ದಾವಣಗೆರೆ: ಹರಿಹರ ತಾಲ್ಲೂಕಿನ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ …
Read More »
BigTv News
November 5, 2024
Breaking News, ದಾವಣಗೆರೆ
ದಾವಣಗೆರೆ: ಹಳ್ಳಿಯ ಆಸ್ತಿಗಳನ್ನು ಡಿಜಿಟಲ್ ಸ್ವರೂಪಕ್ಕೆ ತರಲು ಜನವರಿ ಅಂತ್ಯಕ್ಕೆ ಪ್ರತಿ ಮನೆಗೆ ಇ-ಸ್ವತ್ತು ತಲುಪಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಾಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ದಾವಣಗೆರೆ ತಾಲ್ಲೂಕಿನ 42 ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭೂಮಿ, ನಿವೇಶನ, ಮನೆಗಳಿಗೆ ಸಂಬಂಧಿಸಿದ ಆಸ್ತಿ ಕಲಹ ಗ್ರಾಮೀಣ …
Read More »
BigTv News
November 2, 2024
Breaking News, ದಾವಣಗೆರೆ
ದಾವಣಗೆರೆ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1 ಕೋಟಿ 42 ಲಕ್ಷ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.
Read More »
BigTv News
November 2, 2024
Breaking News, ದಾವಣಗೆರೆ
ದಾವಣಗೆರೆ: ನಗರದಲ್ಲಿ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಸಂಸ್ಕರಿಸಿ ಮರುಬಳಕೆ ಮಾಡುವ ಘಟಕವನ್ನು ₹ 7 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದೆ. ಇದು ಕಾರ್ಯರೂಪಕ್ಕೆ ಬಂದರೆ ಕಟ್ಟಡದ ಭಗ್ನಾವಶೇಷಗಳಿಂದ ತಯಾರಿಸಿದ ಇಟ್ಟಿಗೆ, ಜಲ್ಲಿಕಲ್ಲು, ಎಂ-ಸ್ಯಾಂಡ್ ಮಾರುಕಟ್ಟೆಗೆ ಬರಲಿವೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಈ ಘಟಕ ನಿರ್ಮಾಣಕ್ಕೆ ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಸಮೀಪದ ಹೊಸಹಳ್ಳಿಯಲ್ಲಿ 3 ಎಕರೆ ಗುರುತಿಸಲಾಗಿದೆ. ಪ್ರತಿ ನಿತ್ಯ 50 ಟನ್ ಕಟ್ಟಡ ತ್ಯಾಜ್ಯವನ್ನು ಸಂಸ್ಕರಿಸುವ …
Read More »
BigTv News
October 31, 2024
Breaking News, ದಾವಣಗೆರೆ
ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 ರೂ. ತಲುಪಿದೆ. ಒಂದು ವಾರದ ಹಿಂದೆ ಕ್ವಿಂಟಲ್ ಅಡಿಕೆ ದರ 41,000 ದಿಂದ 45,000 ರೂ.ಆಸು ಪಾಸಿನಲ್ಲಿತ್ತು. ಬೆಳೆಗಾರರು ಅಡಿಕೆ ಮಾರಾಟ ಮಾಡಲು ಹಿಂದೇಟು ಹಾಕಿದ್ದರು. ಇದೀಗ ಅಡಿಕೆ ದರ 51,000 ರೂ. ತಲುಪುತ್ತಿದ್ದಂತೆ ಬೆಳೆಗಾರರು ಅಡಿಕೆ ಮಾರಾಟಕ್ಕೆ ಮುಂದಾಗಿದ್ದಾರೆ. ಚನ್ನಗಿರಿ …
Read More »
BigTv News
October 26, 2024
Breaking News, ದಾವಣಗೆರೆ
ದಾವಣಗೆರೆ : ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಜಗಳೂರು …
Read More »