admin
March 13, 2022
Breaking News, ದಾವಣಗೆರೆ
ದಾಮಾ. 13ರಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ .ಐತಿಹಾಸಿಕ ಪ್ರಸಿದ್ಧ ನಗರದೇವತೆ ಶ್ರೀ ದುಗ್ಗಮ್ಮ ದೇವಿ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನದ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದರು. ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಜಾತ್ರೆ ಕುರಿತು ಅವರು ಮಾಹಿತಿ ನೀಡಿದರು. ಮಾ. 13ರಿಂದ ಜಾತ್ರಾ ಮಹೋತ್ಸವ ಆರಂಭವಾಗಲಿದ್ದು, ಮೊದಲ ದಿನ ಬೆಳಿಗ್ಗೆ ದೇವಿಗೆ ಪಂಚಾಮೃತ ಅಭಿಷೇಕ, ಕಂಕಣಧಾರಣೆ ನಂತರ ರಾತ್ರಿ ಸಾರು ಹಾಕುವ ಕಾರ್ಯಕ್ರಮ ನಡೆಯಲಿದೆ ಎಂದರು.
Read More »
admin
March 12, 2022
Breaking News, ದಾವಣಗೆರೆ
ದಾವಣಗೆರೆ : ಮಾ.13 ರಿಂದ ಮಾ.16 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ಜಾತ್ರೆಯು ಜರುಗಲಿದೆ ಹಾಗೂ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಹಾಗೂ ಈ ಸಂದರ್ಭದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದನ್ನು ನಡೆದಯಕೊಳ್ಳಬಾರದು ಎಂದು ಡಿಸಿ ಆದೇಶಿಸಿದ್ದಾರೆ. ಶ್ರೀ ದುಗಾರ್ಂಬಿಕಾದೇವಿ ಹಾಗೂ ವಿನೋಬನಗರ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ನೀಡುವುದನ್ನು ಎಂದು ಕಂಡುಬಂದಿರುವ ಹಿನ್ನಲೆಯಲ್ಲಿ …
Read More »
admin
March 7, 2022
Breaking News, ದಾವಣಗೆರೆ
ದಾವಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ 26 ಮತ್ತು 27ರಂದು ಎಲೆಬೇತೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಜಿ.ಎಸ್. ಸುಶೀಲಾದೇವಿ ಆರ್. ರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ. ಮಾರ್ಚ್ ಅಂತ್ಯದ ಒಳಗೆ ಈ ಬಾರಿಯ ಜಿಲ್ಲಾ ಸಮ್ಮೇಳನಗಳನ್ನು ಮುಗಿಸಬೇಕು ಎಂದು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ …
Read More »
admin
February 21, 2022
Breaking News, ಜಿಲ್ಲೆ, ದಾವಣಗೆರೆ
ದಾವಣಗೆರೆ: ಕೋವಿಡ್‌ನಿಂದ ಆರ್ಥಿಕ ಹಿಂಜರಿತ ಹೆಚ್ಚಾಗಿದೆ. ಇತಿಮಿತಿಯಲ್ಲಿ, ಆರ್ಥಿಕ ಚೌಕಟ್ಟಿನಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಡಿಕೆ ಈಡೇರಿಸಲು ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ದಾವಣಗೆರೆ ಜಿಲ್ಲೆಯ ಬೇಡಿಕೆಗಳ ಪಟ್ಟಿ ನೀಡಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ ಕುರಿತು ಬಜೆಟ್ ಮಂಡನೆ ದಿನವೇ ಹೇಳುವುದಾಗಿ ಗೌಪ್ಯತೆ ಕಾಪಾಡಿಕೊಂಡರು.
Read More »
admin
February 15, 2022
Breaking News, ದಾವಣಗೆರೆ
ದಾವಣಗೆರೆ: ಹಿಜಾಬ್ ಜತೆ ಇದೀಗ ಮತ್ತೊಂದು ಹೊಸ ವಿವಾದ ಶುರುವಾಗಿದೆ.ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆ ವಿಭಾಗದಲ್ಲಿ ಹೊಸದೊಂದು ಘಟನೆ ನಡೆದಿದೆ. ತಲೆಗೆ ಬಿಳಿ ಟೊಪ್ಪಿಗೆ (ತಖೀಯಾ) ಧರಿಸಿ ಮುಸ್ಲಿಂ ವಿದ್ಯಾರ್ಥಿಗಳು ಶಾಲೆಗೆ ಬಂದಿದ್ದಾರೆ. ನಮಾಜ್ ಸಂದರ್ಭದಲ್ಲಿ ಮುಸ್ಲಿಮರು ಧರಿಸುವ ಬಿಳಿ ಟೊಪ್ಪಿಗೆ ಧರಿಸಿ ಬಂದಿದ್ದಾರೆ. ಟೊಪ್ಪಿಗೆ ಧರಿಸಿಯೇ ವಿದ್ಯಾರ್ಥಿಗಳು ತರಗತಿ ಪ್ರವೇಶಿಸಿದ್ದಾರೆ. ಹೊಸ ಬಗೆಯ ಸಂಘರ್ಷಕ್ಕೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆ …
Read More »
admin
February 14, 2022
Breaking News, ದಾವಣಗೆರೆ
ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ ಎಂದು ಕೆಪಿಸಿಸಿ ಕಾರ್‍ಯಾಧ್ಯಕ್ಷ ಸತೀಶ್ ಜಾರಕಿಹೊಳಿಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ. ಆ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ರಾಜಕೀಯ ಅಂದರೆ ಇದೆಲ್ಲ ಮಾಮೂಲು. ಅಲ್ಲಿದ್ದವರು ಇಲ್ಲಿ ಇರುತ್ತಾರೆ. ಇಲ್ಲಿ ಇದ್ದವರು ಅಲ್ಲಿ ಇರುತ್ತಾರೆ ಎಂದರು. ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಮತ್ತೆ …
Read More »
admin
February 10, 2022
Breaking News, ದಾವಣಗೆರೆ
ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲೆಯ ಹರಿಹರ ತಾಲೂಕಿನ ಮಲೇಬೆನ್ನೂರು ಎಂಬಲ್ಲಿ 23 ವರ್ಷದ ಯುವಕನಿಗೆ ಮೊಳೆಯಿಂದ ಇರಿದು ಘಾಸಿಗೊಳಿಸಲಾಗಿದೆ. ಅಲ್ಲದೆ, ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ …
Read More »
admin
January 30, 2022
Breaking News, ದಾವಣಗೆರೆ
ದಾವಣಗೆರೆ: ಫೆಬ್ರುವರಿ 27ರಿಂದ ಮಾರ್ಚ್ 2ರವರೆಗೆ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ನಡೆದ ಪೋಲಿಯೊ ಲಸಿಕಾ ಅಭಿಯಾನದ ಪೂರ್ವ ಸಿದ್ಧತಾ ಸಭೆ ಹಾಗೂ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
Read More »
admin
January 30, 2022
Breaking News, ದಾವಣಗೆರೆ
ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56131 ಕ್ಕೆ ಏರಿಕೆಯಾಗಿದೆ.ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.
Read More »
admin
January 17, 2022
Breaking News, ಕರ್ನಾಟಕ, ದಾವಣಗೆರೆ
ದಾವಣಗೆರೆ: ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಭಾನುವಾರ ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದರೂ, ಜಗಳೂರಿನ ಬಿಜೆಪಿ ಶಾಸಕ ಎಸ್‌ವಿ ರಾಮಚಂದ್ರ ಅವರು ನಿಯಮಗಳ ಉಲ್ಲಂಘಿಸಿ ಇಲ್ಲಿನ ತಮ್ಮ ನಿವಾಸದ ಎದುರು ಹುಟ್ಟುಹಬ್ಬ ಆಚರಿಸಿಕೊಂಡರು. ದಾವಣಗೆರೆ ಕೆ.ಬಿ. ಬಡಾವಣೆಯಲ್ಲಿರುವ ಶಾಸಕರ ಮನೆಯ ಮುಂದೆ ಶಾಮಿಯಾನ, ವೇದಿಕೆ, ಕುರ್ಚಿಗಳನ್ನು ಹಾಕಲಾಗಿತ್ತು. ಅಭಿಮಾನಿಗಳು, ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು, ಪೊಲೀಸರು ಭಾಗವಹಿಸಿ ಶಾಸಕರಿಗೆ ಶುಭಕೋರಿದರು. ಕೋವಿಡ್ ನಿಯಮ ಪಾಲನೆ ಮಾಡದೆಯೇ ಜನುಮದಿನದ ಆಚರಣೆ ನಡೆಯಿತು. …
Read More »